ಲಕ್ನೋ: ಕೋಟ್ಯಂತರ ವಿದ್ಯಾರ್ಥಿಗಳ ಜೀವನವನ್ನು ಬೆಳಗುವ, ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳನ್ನು ದೇಗುಲಕ್ಕೆ ಹೋಲಿಸಲಾಗುತ್ತದೆ. ಇದೇ ಕಾರಣಕ್ಕೆ ಶಾಲೆ, ಕಾಲೇಜುಗಳನ್ನು ಈಗಲೂ ಅನೇಕರು ಗೌರವಿಸುತ್ತಾರೆ. ಆದರೆ ಕೆಲವರು ತಾವು ಶಿಕ್ಷಣ ಪಡೆಯಲು ಬಂದಿದ್ದೇವೆ ಎನ್ನುವುದನ್ನೂ ಮರೆತು ಕಾಲೇಜಿನಲ್ಲೇ ರೊಮ್ಯಾನ್ಸ್ ಮಾಡಲು ಮುಂದಾಗುತ್ತಾರೆ. ಸದ್ಯ ಅಂತಹದ್ದೊಂದು ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಯುವ ಜೋಡಿಯ ವರ್ತನೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ (Viral Video).
ಯುವಕ ಮತ್ತು ಯುವತಿ ಕಾಲೇಜು ಕ್ಯಾಂಪಸ್‌ನಲ್ಲಿ ಮೈ ಮರೆತು ಲಿಪ್ ಕಿಸ್ ಮಾಡುವುದರಲ್ಲಿ ಮಗ್ನವಾಗಿದೆ. ಜತೆಗೆ ಯುವಕ ಆಕೆಯ ಬಟ್ಟೆಯನ್ನು ಮೇಲೆ ಸರಿಸಿ ಎಲ್ಲೆಲ್ಲೋ ಸ್ಪರ್ಶಿಸುತ್ತಿರುವುದು ಕಂಡು ಬಂದಿದೆ. ಒಂದು ಹಂತದಲ್ಲಿ ಯುವತಿಯೇ ಮುಂದೆ ಹೋಗಿ ಯುವಕನ ತುಟಿಯನ್ನು ಚುಂಚಿಸುತ್ತಾ ಮೈಮರೆಯುತ್ತಾಳೆ. ಈ ದೃಶ್ಯವನ್ನು ಮರೆಯಲ್ಲಿ ನಿಂತು ನೋಡುತ್ತಿದ್ದ ಕೆಲವು ವಿದ್ಯಾರ್ಥಿಗಳು ಸೆರೆ ಹಿಡಿದ್ದಾರೆ.
देखिए यूनिवर्सिटी का हालत पढ़ाई की जगह अश्लीलता की मिसाल
— जनाब खान क्राइम रिपोर्टर (@janabkhan08) August 5, 2024
वायरल हो रहा है वीडियो UP के नोएडा की महंगी यूनिवर्सिटी का है!! #Noida pic.twitter.com/x8eQFYwV58
ಹಾಡಹಗಲೇ ಈ ಜೋಡಿ ರೊಮ್ಯಾನ್ಸ್ ಮಾಡುತ್ತ ಮೈಮರೆತಿರುವ ಘಟನೆ ನಡೆದಿದ್ದು ಉತ್ತರ ಪ್ರದೇಶದ ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿ. ಕಳೆದ ವರ್ಷ ನಡೆದಿದೆ ಎನ್ನಲಾದ ಈ ವಿಡಿಯೊ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಜನಬ್ ಖಾನ್ ಎನ್ನುವವರು ಈ ವಿಡಿಯೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಈಗಾಗಲೇ 1.5 ಲಕ್ಕಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ʼʼವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ವರ್ತನೆ ಗಮನಿಸಿ. ವಿದ್ಯಾರ್ಥಿಗಳು ಕಲಿಕೆಯ ಬದಲು ಅಶ್ಲೀಲತೆಯಲ್ಲಿ ತೊಡಗಿಸಿಕೊಂಡಿರುವುದನ್ನು ನೋಡಿ. ಇದು ನೋಯ್ಡಾದ ಪ್ರತಿಷ್ಠಿತ ವಿಶ್ವವಿದ್ಯಾನಿಯಲವೊಂದರಲ್ಲಿ ಕಂಡು ಬಂದ ದೃಶ್ಯʼʼ ಎಂದು ಅವರು ಬರೆದುಕೊಂಡಿದ್ದಾರೆ.
1.33 ನಿಮಿಷಗಳ ಈ ವಿಡಿಯೊ ನೋಡಿ ಹಲವರು ಈ ವಿದ್ಯಾರ್ಥಿಗಳ ವರ್ತನೆಗೆ ಅಸಹ್ಯ ಪಟ್ಟುಕೊಂಡಿದ್ದಾರೆ. ಕೆಲವರಂತೂ ಛೀಮಾರಿ ಹಾಕಿದ್ದಾರೆ. ಬಹುತೇಕರು ಕಿಡಿ ಕಾರಿದ್ದಾರೆ. ತಮ್ಮಂತೆ ಮಕ್ಕಳು ಕಷ್ಟಪಡಬಾರದು ಎನ್ನುವ ಉದ್ದೇಶದಿಂದ ಬಹುತೇಕ ಪಾಲಕರು ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ಅವರಿಗೆ ಉನ್ನತ ಶಿಕ್ಷಣ ನೀಡಲು ಮುಂದಾಗುತ್ತಾರೆ. ಕಾಲೇಜಿಗೆ ಕಳುಹಿಸುತ್ತಾರೆ. ಆದರೆ ಮಕ್ಕಳು ಕಾಲೇಜಿಗೆ ಬಂದು ಹೀಗೆ ವರ್ತಿಸುತ್ತಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂತಹ ವಿದ್ಯಾರ್ಥಿಗಳಿಗೆ ಕಠಿಣ ಸಜೆ ನೀಡಬೇಕು ಎಂದು ಇನ್ನು ಕೆಲವರು ಆಗ್ರಹಿಸಿದ್ದಾರೆ. ಅಷ್ಟು ತೀಟೆ ಇದ್ದರೆ ಲಾಡ್ಜ್‌ಗೆ ಹೋಗಲಿ ಎಂದು ಒಂದಷ್ಟು ಮಂದಿ ಬೈದಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಇಂಟರ್‌ನೆಟ್‌ನಲ್ಲಿ ಮತ್ತೊಮ್ಮೆ ಕಿಚ್ಚು ಹಚ್ಚಿದೆ.
ಇದನ್ನೂ ಓದಿ: Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ
ವಾಕಿಂಗ್ ಮಾಡುತ್ತಿದ್ದ ಮಹಿಳೆಗೆ ಕಿಸ್ ಕೊಟ್ಟ ಕಾಮುಕ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್, ಪರ್ಸ್ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.