Site icon Vistara News

Viral Video: ಅಬ್ಬಾ ಎಂಥಾ ಭೀಕರ ದೃಶ್ಯ! ಸ್ಕೂಟರ್‌ನಲ್ಲಿದ್ದ ದಂಪತಿ ಮೇಲೆ ಏಕಾಏಕಿ ಬಿದ್ದ ಬೃಹತ್‌ ಮರ-ವಿಡಿಯೋ ನೋಡಿ

Viral Video

ಹೈದರಾಬಾದ್‌: ಸಾವು ಹೇಗೆ, ಎಲ್ಲಿ ಬೇಕಾದರೂ, ಯಾವ ರೂಪದಲ್ಲೂ ನಮ್ಮ ಹಿಂದೆಯೇ ಇರಬಹುದು. ಕೆಲವೊಮ್ಮೇ ಊಹಿಸಲೂ ಆಗದಂತಹ ರೀತಿಯಲ್ಲಿ ಸಾವು ಸಂಭವಿಸುತ್ತದೆ. ಹೈದರಾಬಾದ್‌ನಲ್ಲೊಂದು ಅಂತಹದ್ದೇ ಒಂದು ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ದಂಪತಿ ಮೇಲೆ ಇದ್ದಕ್ಕಿದ್ದಂತೆ ಮರ(Tree Fallen)ವೊಂದು ಉರುಳಿ ಬಿದ್ದಿದ್ದು, ಸ್ಥಳದಲ್ಲೇ ಪತಿ ಕೊನೆಯುಸಿರೆಳೆದಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಈ ವಿಡಿಯೋ ಸಿಸಿಟಿವಿ ಕ್ಯಾಮೆರಾ(CCTV)ದಲ್ಲಿ ರೆಕಾರ್ಡ್‌ ಆಗಿದ್ದು, ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ.

ವಿಡಿಯೋದಲ್ಲಿ ಏನಿದೆ?

ಹೈದರಾಬಾದ್‌ನ ಸಿಕಂದರಬಾದ್‌ನಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಗೆಂದು ದಂಪತಿ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬೊಲ್ಲಾರಾಮ್‌ ಕಂಟೋನ್ಮೆಂಟ್‌ ಆಸ್ಪತ್ರೆಗೆ ಬರುತ್ತಿದ್ದ ಸ್ಕೂಟರ್‌ನಲ್ಲಿ ದಂಪತಿ ಬರುತ್ತಿದ್ದರು. ದಂಪತಿ ಆಸ್ಪತ್ರೆ ಗೇಟ್‌ ಒಳಗೆ ಪ್ರವೇಶಿಸುತ್ತಿದ್ದಂತೆ ಪಕ್ಕದಲ್ಲೇ ಇದ್ದ ದೈತ್ಯ ಮರವೊಂದು ಸ್ಕೂಟರ್‌ ಮೇಲೆ ಉರುಳಿಬಿದ್ದಿದೆ. ಅದೃಷ್ಟವಶಾತ್‌ ಮತ್ತೊಂದು ಬೈಕ್‌ ತಕ್ಷಣ ಬ್ರೇಕ್‌ ಹಾಕಿ ನಿಲ್ಲುತ್ತೆ. ಅದರಲ್ಲಿದ್ದ ಸವಾರ ಅಪಾಯದಿಂದ ಪಾರಾಗುತ್ತಾನೆ. ಇದಾದ ತಕ್ಷಣ ಸೆಕ್ಯೂಟಿ ಗಾರ್ಡ್‌ ಹಾಗೂ ಇತರರು ಓಡಿ ಹೋಗಿ ದಂಪತಿ ರಕ್ಷಣೆಗೆ ಮುಂದಾಗುತ್ತಾರೆ. ಅಷ್ಟರಲ್ಲಿ ಪತಿ ಕೊನೆಯುಸಿರೆಳೆದಿದ್ದರು. ತಲೆಗೆ ಏಟು ಬಿದ್ದು ನರಳುತ್ತಿದ್ದಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮತ್ತೊಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಆಗಿದ್ದು, ಕೆಲವು ಜನರು ಉರುಳಿ ಬಿದ್ದ ಮರವನ್ನು ಕತ್ತರಿಸುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ದಂಪತಿಯನ್ನು ರವೀಂದರ್‌ ಹಾಗೂ ಸರಳಾ ದೇವಿ ಎಂದು ಗುರುತಿಸಲಾಗಿದೆ. ರವೀಂದರ್‌ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ವರ್ಷ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ನಾಗವಾರದ ರಿಂಗ್ ರೋಡ್‌ನ ಎಚ್‌ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಾಯಿ, ಮಗಳ ಮೇಲೆಯೇ ಉರುಳಿ ಬಿದ್ದಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರಿಬ್ಬರೂ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದರು. 

ಇದನ್ನೂ ಓದಿ:Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

Exit mobile version