Viral Video : ಸಂಸತ್ತಿನಲ್ಲಿ ಕವನದ ಮೂಲಕವೇ ಮೋದಿಯನ್ನು ಹೊಗಳಿ, ರಾಹುಲ್‌ ಕಾಲೆಳೆದ ಸಚಿವ - Vistara News

ಬಜೆಟ್ 2023

Viral Video : ಸಂಸತ್ತಿನಲ್ಲಿ ಕವನದ ಮೂಲಕವೇ ಮೋದಿಯನ್ನು ಹೊಗಳಿ, ರಾಹುಲ್‌ ಕಾಲೆಳೆದ ಸಚಿವ

ಕೇಂದ್ರ ಸಚಿವ ರಾಮ್‌ದಾಸ್‌ ಅವರು ಇತ್ತೀಚೆಗೆ ಸಂಸತ್ತಿನಲ್ಲಿ ಮೋದಿ ಅವರ ಬಗ್ಗೆ ಕವನವನ್ನು ವಾಚಿಸಿದ್ದಾರೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭಾ ಸಂಸತ್ತು ಎಂದಾಕ್ಷಣ ಒಂದು ಗಂಭೀರ ಸಭೆಯ ಚಿತ್ರಣ ನಮ್ಮ ಕಣ್ಣ ಮುಂದೆ ಬರುತ್ತದೆ. ಆದರೆ ಅಲ್ಲೂ ಕೂಡ ಕೆಲವು ಹಾಸ್ಯಮಯ ವ್ಯಕ್ತಿಗಳಿರುತ್ತಾರೆ. ಅವರಿಂದ ಆಗಾಗ ನಗೆ ಚಟಾಕಿಗಳೂ ಕೇಳಿ ಬರುತ್ತಿರುತ್ತವೆ. ಅಂಥದ್ದೊಂದು ಹಾಸ್ಯಮಯ ಸನ್ನಿವೇಶ ಇತ್ತೀಚೆಗೆ ಕೇಂದ್ರ ಸಚಿವ ರಾಮ್‌ದಾಸ್‌ ಅಠವಳೆ ಅವರಿಂದ ಉಂಟಾಗಿದೆ. ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಕೂಡ ಆಗಿದೆ.

ಇದನ್ನೂ ಓದಿ: Viral Video : ʼಇವರೇ ನೋಡಿ ಫಾದರ್‌ ಆಫ್‌ ದಿ ಇಯರ್‌ʼ ಎನ್ನುತ್ತಿದ್ದಾರೆ ನೆಟ್ಟಿಗರು; ವೈರಲ್‌ ಆಗಿದೆ ವಿಡಿಯೊ
ಮೇಲ್ಮನೆಯಲ್ಲಿ ರಾಷ್ಟ್ರಪತಿಗಳ ಭಾಷಣವಾದ ನಂತರ ರಾಮ್‌ದಾಸ್‌ ಅವರು ಮಾತನಾಡುತ್ತಿದ್ದರು. ಆ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಒಂದು ಕವನವನ್ನೂ ವಾಚಿಸಿದ್ದಾರೆ. “ಮೋದಿ ಜಿ ಆದ್ಮಿ ಹೈ ಖಾಸ್, ಇಸ್ಲಿಯೇ ಉನಕೆ ಸಾಥ್ ಹೈ ರಾಮದಾಸ್” (ಮೋದಿ ಜೀ ವಿಶೇಷ ವ್ಯಕ್ತಿ, ಹಾಗಾಗಿ ಅವರೊಂದಿಗಿದ್ದಾರೆ ರಾಮ್‌ದಾಸ್‌) ಎಂದು ಕವನ ಹೇಳಿದ್ದಾರೆ. ಈ ಕವನ ಕೇಳುತ್ತಿದ್ದಂತೆಯೇ ಸಂಸತ್ತಿನಲ್ಲಿದ್ದ ಸದಸ್ಯರು ಜೋರಾಗಿ ನಗಲಾರಂಭಿಸಿದ್ದಾರೆ.


ಅಷ್ಟಕ್ಕೇ ನಿಲ್ಲಿಸದ ರಾಮ್‌ದಾಸ್‌ ರಾಹುಲ್‌ ಗಾಂಧಿ ಅವರು ಉದ್ದ ಗಡ್ಡ ಬಿಟ್ಟಿರುವ ಬಗ್ಗೆಯೂ ಅವರ ಕಾಲೆಳೆದಿದ್ದಾರೆ. ಕಾಂಗ್ರೆಸ್‌ ಕಾಲೆಳೆದು, ಮೋದಿಯನ್ನು ಹೊಗಳಿರುವ ರಾಮ್‌ದಾಸ್‌ ಅವರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ವೈರಲ್‌ ಆಗಿದೆ. “ಈ ರೀತಿಯ ಸದಸ್ಯರು, ಸಚಿವರು ಸಂಸತ್ತಿನಲ್ಲಿರಬೇಕು” ಎಂದು ಜನರು ನಗುತ್ತಾ ಚರ್ಚೆ ಮಾಡಿಕೊಳ್ಳಲಾರಂಭಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Congress Guarantee: ಸೋಮವಾರದಿಂದ ಅನ್ನಭಾಗ್ಯ ಚಾಲನೆ: ನೇರವಾಗಿ ಅಕೌಂಟಿಗೆ ಬಂದು ಬೀಳಲಿದೆ 170 ರೂ.!

ಕಾಂಗ್ರೆಸ್‌ ಗ್ಯಾರಂಟಿ ಅನ್ನಭಾಗ್ಯ(Congress Guarantee) ರಾಜಕೀಯ ಹಗ್ಗಜಗ್ಗಾಟ ನಡೆದಿದೆ. ಕೇಂದ್ರ ಸರ್ಕಾರವು ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಸೇರಿ ಅನೇಕರು ಆರೋಪಿಸಿದ್ದಾರೆ.

VISTARANEWS.COM


on

Annabhagya scheme
Koo

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ (Congress Guarantee) ಅನ್ನಭಾಗ್ಯಕ್ಕೆ ಸೋಮವಾರದಿಂದ ಚಾಲನೆ ಸಿಗಲಿದೆ. ರಾಜ್ಯಕ್ಕೆ ಅಗತ್ಯವಾದ 2.3 ಮೆಟ್ರಿಕ್‌ ಟನ್‌ ಅಕ್ಕಿ ದೊರಕದ ಕಾರಣ ಅಲ್ಲಿವರೆಗೆ ಫಲಾನುಭವಿಗಳ ಖಾತೆಗೆ ಮಾಸಿಕ 170 ರೂ. ಹಾಕುವ ಕಾರ್ಯಕ್ಕೆ ಸೋಮವಾರದಿಂದ ಚಾಲನೆ ನೀಡಲಾಗುತ್ತಿದೆ.

ಈಗಾಗಲೆ ಕೇಂದ್ರ ಸರ್ಕಾರ ನೀಡುತ್ತಿರುವ ತಲಾ ಐದು ಕೆ.ಜಿ. ಅಕ್ಕಿ ಜತೆಗೆ ಮತ್ತೆ ಐದು ಕೆ.ಜಿ. ಸೇರಿಸಿ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್‌ ಪಕ್ಷ ಚುನಾವಣೆಗೂ ಮುನ್ನ ಭರವಸೆ ನೀಡಿತ್ತು. ಅದರಂತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಮೊದಲ ಸಂಪುಟ ಸಭೆಯಲ್ಲೇ ಎಲ್ಲ ಐದು ಗ್ಯಾರಂಟಿಗಳನ್ನೂ ಈಡೇರಿಸುವುದಾಗಿ ತಿಳಿಸಿತ್ತು.

ಆದರೆ ಅನ್ನ ಭಾಗ್ಯ ಯೋಜನೆಗೆ 2.3 ಮೆಟ್ರಿಕ್‌ ಟನ್‌ ಅಕ್ಕಿ ಬೇಕಾಗಿದ್ದರಿಂದ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ನಿಗಮವನ್ನು (ಎಫ್‌ಸಿಐ) ರಾಜ್ಯ ಸರ್ಕಾರ ಸಂಪರ್ಕಿಸಿತ್ತು. ಮೊದಲಿಗೆ ಅಕ್ಕಿಯನ್ನು ತಲಾ 34 ರೂ.ನಂತೆ ನೀಡುವುದಾಗಿ ಎಫ್‌ಸಿಐ ಒಪ್ಪಿತ್ತು. ಆದರೆ ದೇಶದಲ್ಲಿ ಅಕ್ಕಿ ದರ ನಿಯಂತ್ರಿಸುವ ಸಲುವಾಗಿ ರಾಜ್ಯಗಳಿಗೆ ಅಕ್ಕಿ ನೀಡದಂತೆ ಕೇಂದ್ರ ಸರ್ಕಾರ ಎಫ್‌ಸಿಐಗೆ ಪತ್ರ ಬರೆದಿತ್ತು.

ಇದರ ನಂತರ ರಾಜಕೀಯ ಹಗ್ಗಜಗ್ಗಾಟ ನಡೆದಿದೆ. ಕೇಂದ್ರ ಸರ್ಕಾರವು ಕಾಂಗ್ರೆಸ್‌ ಪಕ್ಷದ ಯೋಜನೆಯ ಸಫಲತೆಯನ್ನು ತಡೆಯಲು ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಸೇರಿ ಅನೇಕರು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಯೋಜನೆಯನ್ನು ಜಾರಿ ಮಾಡಲಾಗದೆ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದೆ ಎಂದು ಬಿಜೆಪಿ ಹೇಳುತ್ತಿದೆ.

ಇದೆಲ್ಲದರ ನಡುವೆ, ಅಕ್ಕಿ ದೊರೆಯುವವರೆಗೂ ಪ್ರತಿ ಫಲಾನುಭವಿಗೆ ತಲಾ ಕೆ.ಜಿ. ಅಕ್ಕಿಗೆ ತಗಲುತ್ತಿದ್ದ 34 ರೂ.ನಂತೆ 5 ಕೆ.ಜಿ. ಅಕ್ಕಿಗೆ 170 ರೂ.ನಂತೆ ಕುಟುಂಬದ ಮುಖ್ಯಸ್ಥರ ಪಡಿತರ ಚೀಟಿಯೊಂದಿಗೆ ಸಂಪರ್ಕ ಹೊಂದಿರುವ ಖಾತೆಗೆ ಜಮಾ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಈ ಕಾರ್ಯಕ್ಕೆ ಸೋಮವಾರದಿಂದ ಚಾಲನೆ ನೀಡಲಾಗುತ್ತಿದೆ. ಮಾಸಿಕ ಅಂದಾಜು 850 ಕೋಟಿ ರೂ. ಇದಕ್ಕೆ ತಗುಲಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Congress Guarantee: ಅಕ್ಕಿಗಾಗಿ ಮತ್ತೆ ಕೇಂದ್ರಕ್ಕೆ ಮೊರೆಯಿಟ್ಟ ಕರ್ನಾಟಕ: ಫಲಿತಾಂಶ ಜೀರೊ ಎಂದ ಸಚಿವ ಮುನಿಯಪ್ಪ

ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದದಾರೆ. ಡಿಬಿಟಿ ಮೂಲಕ ಹಣ ವರ್ಗಾವಣೆಗೆ ಸರ್ಕಾರ ನಿರ್ಧಾರ ಮಾಡಲಾಗಿದ್ದು, 15 ದಿನಗಳ ಒಳಗೆ ಸಂಪೂರ್ಣ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ಸರ್ಕಾರ ನಿರ್ಧರಿಸಿದೆ. ಅಂದಾಜು1.29 ಕೋಟಿ ಬಿಪಿಎಲ್ ಕಾರ್ಡ್‌ದಾರರಿಗೆ ಹಣ ವರ್ಗಾವಣೆ ಸಾಧ್ಯತೆಯಿದೆ.

ರಾಜಕೀಯವಾಗಿಯೂ ಈ ಯೋಜನೆಯನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದ್ದು, ಲೋಕಸಭಾ ಚುನಾವಣಾ ದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯನ್ನೆ ಅಸ್ತ್ರ ಮಾಡಿಕೊಳ್ಳಬಹುದು ಎನ್ನಲಾಗುತ್ತಿದೆ.

Continue Reading

ಕರ್ನಾಟಕ

Karnataka budget 2023 : ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳಿಗೆ ಪೆಟ್ರೋಲ್‌ ಬಂಕ್‌ ನಿರ್ವಹಣೆ ಹೊಣೆ!

Karnataka budget 2023 : ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ಹಲವು ಕ್ರಮಗಳನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ಮುಂದೆ ಮಾಡುವ ಕಾರ್ಯಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ.

VISTARANEWS.COM


on

CM siddaramaiah in karnataka budget 2023
Koo

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಕಂದಾಯ ಇಲಾಖೆ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸರ್ಕಾರ ಕೆಲವು ಮಹತ್ವದ ಯೋಜನೆಗಳ ಅನುಷ್ಠಾನ ಈ ಕಂದಾಯ ಇಲಾಖೆಯಿಂದಲೇ ಆಗುತ್ತದೆ. ಇನ್ನು ಜನರಿಗೆ ಒಂದಲ್ಲಾ ಒಂದು ರೀತಿಯಲ್ಲಿ ದೈನಂದಿನ ಸೇವೆ ದೊರೆಯುತ್ತಲೇ ಇರುತ್ತದೆ. ಈಗ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ (Karnataka budget 2023) “ಉದ್ಯಮ ಶಕ್ತಿ” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಇದರ ನಿರ್ವಹಣೆ ಹೊಣೆಯನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳಿಗೆ ವಹಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ʻಉದ್ಯಮ ಶಕ್ತಿʼ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮ ವಹಿಸಲಿದೆ. ಪೆಟ್ರೋಲಿಯಂ ಕಂಪನಿಗಳು ಇದರ ನಿರ್ಮಾಣಕ್ಕೆ ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್‌ ಬಂಕ್‌ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: Karnataka budget 2023 : ಗೃಹಲಕ್ಷ್ಮಿ ಜತೆಗೆ ಸಮಾನತೆ, ಸ್ವಾವಲಂಬನೆ, ಸಬಲೀಕರಣ ಮಂತ್ರ!

ಭ್ರಷ್ಟಾಚಾರ ಮುಕ್ತ ಆಡಳಿತ ಮಂತ್ರ

ಪ್ರಸ್ತುತ ವ್ಯವಸ್ಥೆಯಲ್ಲಿ ಜನರು ಹಲವಾರು ಸವಾಲುಗಳನ್ನು, ಅಡಚಣೆಗಳನ್ನು ಎದುರಿಸುತ್ತಿದ್ದು, ತಮ್ಮ ಕಾರ್ಯಗಳನ್ನು ಪೂರೈಸಿಕೊಳ್ಳುವುದಕ್ಕಾಗಿ ಮಧ್ಯವರ್ತಿಗಳ ಸಹಾಯವನ್ನು ಪಡೆಯುವ ಅನಿವಾರ್ಯತೆಗೆ ಒಳಗಾಗುತ್ತಿದ್ದಾರೆ. ನಮ್ಮ ಸರ್ಕಾರವು ರಾಜ್ಯದ ಜನತೆಗೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ನೀಡಲು ಮತ್ತು ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯಿಂದ ನಡೆಸಲು ಕಟಿಬದ್ಧವಾಗಿದೆ. ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಸರಳವಾಗಿ, ನೇರವಾಗಿ ಮತ್ತು ಸಕಾಲದಲ್ಲಿ ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಂದಾಯ ಇಲಾಖೆ ಸುಧಾರಣಾ ಕ್ರಮ ಮತ್ತು ಅನುದಾನ

ಕರ್ನಾಟಕ ಭೂ ಕಂದಾಯ ಕಾಯಿದೆಯ ಸೆಕ್ಷನ್‌ 95ಕ್ಕೆ ತಿದ್ದುಪಡಿ ತಂದು ಜಮೀನನ್ನು ಸ್ವಯಂ ಘೋಷಣೆಯ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನನ್ನು ಪುನರ್‌ ಸ್ಥಾಪಿಸುವುದಕ್ಕಾಗಿ ಮನವಿ ಸಲ್ಲಿಸಲು ಕಾಲಮಿತಿಯನ್ನು ಕಾಯ್ದೆಯಲ್ಲಿಯೇ ನಿಗದಿಪಡಿಸಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ (PTCL), 1978ಕ್ಕೆ ಸೂಕ್ತ ತಿದ್ದುಪಡಿ ತರಲಾಗುವುದು.

ಜಿಲ್ಲಾ ಮಟ್ಟದಲ್ಲಿ ಎಲ್ಲ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ಜಿಲ್ಲಾಡಳಿತ ಕಚೇರಿ ಸಂಕೀರ್ಣ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ, ರಾಯಚೂರು, ಉತ್ತರ ಕನ್ನಡ, ಚಿತ್ರದುರ್ಗ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

ಜತೆಗೆ, ತಾಲೂಕು ಮಟ್ಟದ ಎಲ್ಲ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಗತಿಯಲ್ಲಿರುವ 25 ತಾಲ್ಲೂಕು ಆಡಳಿತ ಸೌಧ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

ಹವಾಮಾನ ವೈಪರೀತ್ಯಗಳಾದ ಪ್ರವಾಹ, ಅನಾವೃಷ್ಟಿ, ನದಿ ತೀರದ ಸವೆತದಿಂದ ಉಂಟಾಗುವ ಪರಿಣಾಮಗಳನ್ನು ಪರಿಹರಿಸಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಪ್ರಸಕ್ತ ಸಾಲಿನಲ್ಲಿ 422 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತೆಗೆದುಕೊಳ್ಳಲು ಯೋಜಿಸಲಾಗಿದೆ.

ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿಯಲ್ಲಿ (NDMF) ನಿರ್ದಿಷ್ಟ ವಿಪತ್ತು ಅಪಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ಭೂಕುಸಿತದ ಅಪಾಯ ತಗ್ಗಿಸುವಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಲವರ್ಧನೆ ಮುಂತಾದ ವಿಪತ್ತು ಪರಿಹಾರ ಕಾರ್ಯಕ್ರಮಗಳನ್ನು ಒಟ್ಟು 721 ಕೋಟಿ ರೂ.ಗಳ ವೆಚ್ಚದಲ್ಲಿ ತೆಗೆದುಕೊಳ್ಳಲು ಉದ್ದೇಶಿಸಿದೆ.

ಬೆಳೆಹಾನಿ ಪರಿಹಾರ ದರದಲ್ಲಿ ವಿಮಾ ಯೋಜನೆ ಮೊತ್ತವನ್ನು ಸಂಯೋಜಿಸಿರುವುದನ್ನು ಕೈಬಿಡುವಂತೆ ಹಾಗೂ ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ನಿಗದಿಪಡಿಸಿರುವ ಬೆಳೆಹಾನಿ ಪರಿಹಾರ ದರಗಳಂತೆ ಕೇಂದ್ರ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

ರಾಜ್ಯದಲ್ಲಿ ಭಾರಿ ಮಳೆ, ಬಲವಾದ ಗಾಳಿ, ಪ್ರವಾಹದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು Doppler Weather Radar ಕಣ್ಗಾವಲು ಯಂತ್ರವನ್ನು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

ನೋಂದಣಿಯೇತರ ದಸ್ತಾವೇಜುಗಳಾದ ಒಪ್ಪಂದಗಳು, ಬ್ಯಾಂಕ್‌ ಗ್ಯಾರಂಟಿಗಳು, ಷೇರು ಪ್ರಮಾಣ ಪತ್ರಗಳು ಹಾಗೂ ಬ್ಯಾಂಕಿಂಗ್‌ ದಾಖಲೆಗಳು ಮುಂತಾದ ವಹಿವಾಟುಗಳಿಗೆ ಇ-ಮುದ್ರಾಂಕ ಮತ್ತು ಡಿಜಿಟಲ್‌ ಸ್ಟಾಂಪಿಂಗ್‌ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವುದರ ಮೂಲಕ ಮುದ್ರಾಂಕ ರಾಜಸ್ವದಲ್ಲಿ ಪಾರದರ್ಶಕತೆ ಹಾಗೂ ನಿಖರತೆ ತರಲಾಗುವುದು.

ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿ ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ: Karnataka budget 2023 : ಬಡತನ ಮುಕ್ತ ರಾಜ್ಯಕ್ಕಾಗಿ ಎಂಪಿಐಗೆ 3000 ಕೋಟಿ ರೂ; 4,000 ʻಕೂಸಿನ ಮನೆʼ!

ಬೆಂಗಳೂರಿನಲ್ಲಿರುವ ಉಪ ನೋಂದಣಾಧಿಕಾರಿ ಕಛೇರಿಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನನುಕೂಲಗಳನ್ನು ಕಡಿಮೆ ಮಾಡಲು ಬೆಂಗಳೂರಿನ ಎಂಟು ಕಛೇರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಜನಸ್ನೇಹಿ ಕಚೇರಿಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

ಕರ್ನಾಟಕ ಬಜೆಟ್

Karnataka Budget 2023 : ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ; ಸಿಎಂ ಇದಕ್ಕೆ ಅಧ್ಯಕ್ಷರು!

ಮೈಸೂರಿನ ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ (Karnataka Budget 2023) ಪ್ರಕಟಿಸಿದ್ದಾರೆ. ಪ್ರಾಧಿಕಾರ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

chamundi hill Karnataka Budget 2023
Koo

ಬೆಂಗಳೂರು: ನಾಡದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯದ ಅಭಿವೃದ್ಧಿಯತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ನೀಡಿದ್ದು, ಸ್ಥಳೀಯರ ಬೇಡಿಕೆಯನ್ನು ಮನ್ನಿಸಿ, ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸುವ ತೀರ್ಮಾನವನ್ನು ಈ ಬಾರಿಯ ಬಜೆಟ್‌ನಲ್ಲಿ (Karnataka Budget 2023) ಪ್ರಕಟಿಸಿದ್ದಾರೆ.

ʻʻದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ದಿ ಕೈಗೊಳ್ಳುವ ದೃಷ್ಟಿಯಿಂದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದುʼʼ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ಚಾಮುಂಡಿ ಬೆಟ್ಟದ ಅಭಿವೃದ್ಧಿಯತ್ತ ಗಮನ ನೀಡಲು ʻಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರʼ ಇರುವಂತೆಯೇ ಪ್ರಾಧಿಕಾರ ರೂಪಿಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದರು. ಈ ಹಿಂದಿನ ಸರ್ಕಾರ ಈ ಕುರಿತು ಚಿಂತನೆ ಕೂಡ ನಡೆಸಿತ್ತು. ತವರು ಜಿಲ್ಲೆಯ ಜನರ ಈ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಈ ಸರ್ಕಾರದ ಮೊದಲ ಬಜೆಟ್‌ನಲ್ಲಿಯೇ ಪ್ರಾಧಿಕಾರ ರಚಿಸುವ ಘೋಷಣೆ ಮಾಡಿದ್ದಾರೆ.

ಹೇಗಿರಲಿದೆ ಪ್ರಾಧಿಕಾರ?

ಮುಖ್ಯಮಂತ್ರಿಗಳ ಅಧ್ಯಕ್ಷತೆಯಡಿಯಲ್ಲಿ ಈ ಪ್ರಾಧಿಕಾರ ರಚನೆಯಾಗಲಿದ್ದು, ಸಂಬಂಧಪಟ್ಟ ಸಚಿವರು, ಸಂಸತ್‌ ಸದಸ್ಯರು, ಶಾಸಕರು, ಸರ್ಕಾರೇತರ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಈ ಪ್ರಾಧಿಕಾರದ ಸದಸ್ಯರಾಗಲಿದ್ದಾರೆ. ಪ್ರಾಧಿಕಾರಕ್ಕೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಡಳಿತಾಧಿಕಾರಿಯಾಗಿರುವ ಕಾರ್ಯದರ್ಶಿ ನೇಮಕಗೊಳ್ಳಲಿದ್ದಾರೆ. ಇವರ ನೇತೃತ್ವದಲ್ಲಿಯೇ ಪ್ರಾಧಿಕಾರವು ಕಾರ್ಯನಿರ್ವಹಿಸಲಿದೆ. ಚಾಮುಂಡಿ ಕ್ಷೇತ್ರದ ಅಭಿವೃದ್ಧಿ ಮತ್ತು ನಿರ್ವಹಣೆ ಈ ಪಾಧಿಕಾರದ ಜವಾಬ್ದಾರಿಯಾಗಲಿದ್ದು, ವಿಶೇಷ ನಿಧಿಯ ಸ್ಥಾಪನೆಯೂ ಆಗಲಿದೆ. ಈ ಪ್ರಾಧಿಕಾರ ರೂಪಿಸಲು ಸರ್ಕಾರ ವಿಧೇಯಕ ರಚಿಸಿ, ವಿಧಾನಸಭೆಯಲ್ಲಿ ಮಂಡಿಸಬೇಕಿರುತ್ತದೆ.

ದೇವಸ್ಥಾನದ ಚರ ಮತ್ತು ಸ್ಥಿರ ಆಸ್ತಿಯನ್ನು ಸಂರಕ್ಷಿಸುವುದು, ನಿರ್ವಹಿಸುವುದು, ಕ್ಷೇತ್ರದ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸುವುದು ಹಾಗೂ ಕಾರ್ಯಗತಗೊಳಿಸುವುದು ಈ ಪ್ರಾಧಿಕಾರದ ಪ್ರಮುಖ ಕಾರ್ಯವಾಗಿರಲಿದೆ.

ಬಜೆಟ್‌ನ ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

15 ಸಾವಿರ ಸಹಾಯ ಧನ ನಿಗದಿ

ರಾಜ್ಯದಲ್ಲಿನ ಯಾವುದೇ ಗಮನಾರ್ಹ ಆದಾಯವಿಲ್ಲದ ʻಸಿʼ ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಕನಿಷ್ಠ 35 ರೂ.ಗಳಿಂದ 15,000 ರೂ.ಗಳವರೆಗೆ ನಗದು ಸಹಾಯಾನುದಾನವನ್ನು ಈಗ ನೀಡಲಾಗುತ್ತಿದೆ. ಇನ್ನು ಮುಂದೆ ಎಲ್ಲಾ ದೇವಸ್ಥಾನಗಳಿಗೆ ಸಮಾನವಾಗಿ 15,000 ರೂ.ಗಳ ಸಹಾಯಾನುದಾನವನ್ನು ನೀಡಲಾಗುವುದು ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯದ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆ, 1974 ರನ್ವಯ ನಾನ್ ಇನಾಂ ಜಮೀನುಗಳು ಸರ್ಕಾರದಲ್ಲಿ ವಿಹಿತವಾಗಿರುವುದಕ್ಕೆ ಪರಿಹಾರಾರ್ಥವಾಗಿ ಒಟ್ಟು 3,721 ಸಂಸ್ಥೆಗಳಿಗೆ ಪ್ರಸ್ತುತ ಮಂಜೂರು ಮಾಡುತ್ತಿರುವ ವರ್ಷಾಸನ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದಕ್ಕಾಗಿ ಒಟ್ಟು 22 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ದೇಗುಲಗಳ ಅಭಿವೃದ್ಧಿಗೆ ಕ್ರಮ

ಹೆಚ್ಚು ಯಾತ್ರಾರ್ಥಿಗಳು ಭೇಟಿ ನೀಡುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು. ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ : Karnataka budget 2023 : ಬಡತನ ಮುಕ್ತ ರಾಜ್ಯಕ್ಕಾಗಿ ಎಂಪಿಐಗೆ 3000 ಕೋಟಿ ರೂ; 4,000 ʻಕೂಸಿನ ಮನೆʼ!

ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಶೋ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದೂ ಸಹ ಬಜೆಟ್‌ನಲ್ಲಿ ಹೇಳಲಾಗಿದೆ.

Continue Reading

ಕರ್ನಾಟಕ

Karnataka Budget 2023 : ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಶಕ್ತಿ

ಶಕ್ತಿ ಯೋಜನೆಯಿಂದಾಗಿ ಪ್ರವಾಸಿ ತಾಣಗಳಲ್ಲಿ ಜನರ ಓಡಾಟ ಹೆಚ್ಚಾಗಿರುವ ಕಾರಣ ಅಲ್ಲಿ ಮೂಲ ಸೌಕರ್ಯ ಹೆಚ್ಚಿಸುವುದಾಗಿ ಸರಕಾರ (Karnataka Budget 2023) ಹೇಳಿದೆ.

VISTARANEWS.COM


on

Savadatti Yellamma
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪ್ರಕಟಿಸಿರುವ ರಾಜ್ಯ ಬಜೆಟ್​ನಲ್ಲಿ (Karnataka Budget 2023) ರಾಜ್ಯದ ಧಾರ್ಮಿಕ ಕೇಂದ್ರಗಳು ಹಾಗೂ ಪ್ರವಾಸಿ ತಾಣಗಳ ಮೂಲಕ ಸೌಕರ್ಯ ಅಭಿವೃದ್ಧಿ ಮಾಡುವುದಾಗಿ ಘೋಷಿಸಲಾಗಿದೆ. ಶಕ್ತಿ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳಗೊಂಡಿರುವ ಕಾರಣ ಮೂಲಕ ಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಮ್ಮ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿದೆ. ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದ

ʻಒಂದು ರಾಜ್ಯ ಹಲವು ಜಗತ್ತುʼ ಎಂಬ ಘೋಷವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದೆ. ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್‌ ಪ್ಲಾನ್‌ ಅನ್ನು ತಯಾರಿಸಲಾಗುವುದು ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಿದ್ದಾರೆ.

ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಕಡಲ ತೀರ ಪ್ರವಾಸೋದ್ಯಮ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯನ್ನು ತಯಾರಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.

ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲಾಗುವುದು. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ/ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ.

ವಸ್ತು ಸಂಗ್ರಹಾಲಯಗಳ ಅಭಿವೃದ್ಧಿ

ರಾಜ್ಯದಲ್ಲಿರುವ 16 ವಸ್ತುಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ ಎಂದು ಬಜೆಟ್​ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ : World Cup 2023 : ವಿಶ್ವ ಕಪ್​ಗೆ ಅರ್ಹತೆ ಪಡೆದ ನೆದರ್ಲೆಂಡ್ಸ್​​ ತಂಡ; ಇಲ್ಲೊಂದು ಅಚ್ಚರಿಯ ವಿಚಾರವಿದೆ !

ಮೈಸೂರಿಗೆ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ ಮಾಡಲಾಗುವುದು.

ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆಯನ್ನು ಕೈಗೊಳ್ಳಲಾಗುವುದು.

ಇನ್ನಷ್ಟು ಬಜೆಟ್‌ ಸಂಬಂಧಿತ ಸುದ್ದಿಗಳಿಗಾಗಿ ಈ ಲಿಂಕ್‌: ಬಜೆಟ್

Continue Reading
Advertisement
Dina bhavishya
ಭವಿಷ್ಯ3 mins ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Lok sabha Election
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ5 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

PM Narendra Modi will visit Sirsi on April 28
ಉತ್ತರ ಕನ್ನಡ5 hours ago

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Bus Driver attacked
ಕರ್ನಾಟಕ5 hours ago

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

IPL 2024
ಪ್ರಮುಖ ಸುದ್ದಿ6 hours ago

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

Viral News
ವೈರಲ್ ನ್ಯೂಸ್6 hours ago

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

lok sabha Election
ಪ್ರಮುಖ ಸುದ್ದಿ6 hours ago

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Car Accident
ಪ್ರಮುಖ ಸುದ್ದಿ6 hours ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Narendra Modi
ದೇಶ6 hours ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ3 mins ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ13 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ13 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ16 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202418 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌