ಸಾರ್ವಜನಿಕ ಸ್ಥಳಗಳಲ್ಲಿ (public areas) ಇತ್ತೀಚೆಗೆ ವಿಡಿಯೋ ಮಾಡುವವರ ಹಾವಳಿ ಹೆಚ್ಚಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ (Mumbai Airport) ಮಹಿಳೆಯೊಬ್ಬರು ನೃತ್ಯ ಮಾಡಿರುವ ವಿಡಿಯೋವನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕೆಲವರು ಆಕೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮೆಟ್ರೋ ರೈಲುಗಳು, ರೈಲು ಪ್ಲಾಟ್‌ಫಾರ್ಮ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜನರು ನೃತ್ಯ ಮಾಡುವ ಪ್ರವೃತ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕಿದೆ ಎನ್ನುವ ಒತ್ತಾಯಗಳೂ ಕೇಳಿ ಬರುತ್ತಿದೆ.
ಇತರ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡುವ, ಕಿರಿಕಿರಿ ಮಾಡುವ ವಿಡಿಯೋವೊಂದನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದೆ. ಬಾಲಿವುಡ್ ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡುತ್ತಿರುವ ಈ ಹೊಸ ವಿಡಿಯೋ ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ.
ಕುರುಕ್ಷೇತ್ರದ ‘ಆಪ್ ಕಾ ಆನಾ’ ಹಾಡಿನಲ್ಲಿ ಮಹಿಳೆಯೊಬ್ಬಳು ಸಲ್ವಾರ್ ಕುರ್ತಾ ಧರಿಸಿ ನೃತ್ಯ ಮಾಡಿದ್ದಾಳೆ. ಆಕೆಯ ಕೆಲವು ಭಂಗಿಗಳು ಸಾರ್ವಜನಿಕರಿಗೆ ಮುಜುಗರ ಉಂಟು ಮಾಡಿದೆ. ಅನೇಕ ಜನರು ಅವಳನ್ನು ಕುತೂಹಲದಿಂದ ನೋಡುತ್ತಿದ್ದರೆ, ಇತರರು ನೋಡಿಯೂ ನೋಡದಂತೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
”ವೈರಸ್ ವಿಮಾನ ನಿಲ್ದಾಣವನ್ನು ತಲುಪಿದೆ” ಎಂಬ ಶೀರ್ಷಿಕೆಯಡಿ @desimojito ಎಂಬ ಹೆಸರಿನ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾನೆ.
ಇದಕ್ಕೆ ಪ್ರತಿಕ್ರಿಯಿಸಿರುವ ಅನೇಕರು ಆಕೆಯನ್ನು ಟೀಕಿಸಿದ್ದಾರೆ. ಇದೊಂದು ಸಾರ್ವಜನಿಕ ಉಪದ್ರವ ಎಂದು ಹೇಳಿದ್ದಾರೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕೆಲವರು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಹೆಚ್ಚುತ್ತಿರುವ ಈ ಪ್ರವೃತ್ತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದು ಶೀಘ್ರದಲ್ಲೇ ನಿಲ್ಲುವಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ.
ಒಬ್ಬ ಬಳಕೆದಾರನು ಹೀಗೆ ಬರೆದಿದ್ದಾನೆ, ಅಷ್ಟು ಗಟ್ಟಿಯಾಗಿ ನನ್ನ ಕರುಳನ್ನು ಗಂಟುಗೆ ತಿರುಗಿಸಿದೆ. ಇದು ಯಾವಾಗಲೂ ಭಯಾನಕ, ಅಸ್ಪಷ್ಟ 90ರ ಬಾಲಿವುಡ್ ಹಾಡು ಎಂದು ಹೇಳಿದ್ದು, ಮತ್ತೊಬ್ಬರು, ಮಾನವೀಯತೆ ಮತ್ತು ವಿವೇಕ ಎಲ್ಲಿಗೆ ಹೋಗುತ್ತಿದೆ?’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ‘ಇವರಂತಹ ಜನರಿಗೆ ಕಠಿಣ ಕಾನೂನು ಮತ್ತು ದಂಡದ ಅಗತ್ಯವಿದೆ. ಅವರು ಪ್ರತಿ ಸ್ಥಳವನ್ನು ಸರ್ಕಸ್ ಆಗಿ ಪರಿವರ್ತಿಸಿದ್ದಾರೆ ಎಂದು ತಿಳಿಸಿದ್ದಾರೆ.
The virus has reached the airports pic.twitter.com/vSG15BOAZE
— desi mojito 🇮🇳 (@desimojito) May 29, 2024
ಮತ್ತೊಬ್ಬರು ಪ್ರಧಾನಿ ಮೋದಿ ಅವರ ಮುಂದಿನ ಅವಧಿಯಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಈ ವಿದೂಷಕರನ್ನು ನಿಷೇಧಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದು, ಇನ್ನೊಬ್ಬರು ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಇಂತಹ ಪ್ರದರ್ಶನಕ್ಕೆ ಅನುಮತಿ ಇರುವುದಿಲ್ಲ. ಜನರು ಗಂಭೀರ ವ್ಯವಹಾರಕ್ಕಾಗಿ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡುವುದು. ಟೈಮ್ ಪಾಸ್ ಮತ್ತು ಮನರಂಜನೆಗಾಗಿ ಅಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Viral News: ಸರ ಕದ್ದು ಪರಾರಿಯಾಗಲು ಬೈಕ್ ಏರಿದವರಿಗೆ ಕಾದಿತ್ತು ಶಾಕ್; ವಿಡಿಯೊ ಇಲ್ಲಿದೆ
ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ.
ಈ ಹಿಂದೆ ಮುಂಬಯಿನಲ್ಲಿ ಚಲಿಸುತ್ತಿರುವ ಲೋಕಲ್ ರೈಲಿನೊಳಗೆ ಯುವತಿಯೊಬ್ಬಳು ಭೋಜ್‌ಪುರಿ ಹಾಡುಗಳಿಗೆ ಡ್ಯಾನ್ಸ್ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.