Viral Video | ಹಿಮದ ಮುಂದೆ ಘೋಡೆ ಪೇ ಸವಾರ್ ಹಾಡಿಗೆ ಡ್ಯಾನ್ಸ್; ವೈರಲ್‌ ಆಯ್ತು ಈ ಜೋಡಿಯ ನೃತ್ಯ - Vistara News

ವೈರಲ್ ನ್ಯೂಸ್

Viral Video | ಹಿಮದ ಮುಂದೆ ಘೋಡೆ ಪೇ ಸವಾರ್ ಹಾಡಿಗೆ ಡ್ಯಾನ್ಸ್; ವೈರಲ್‌ ಆಯ್ತು ಈ ಜೋಡಿಯ ನೃತ್ಯ

“ಘೋಡೆ ಪೆ ಸವಾರ್‌” ಹಾಡು ಇದೀಗ ಸಾಮಾಜಿಕ ಜಾಲತಾಣಗಳ ಟ್ರೆಂಡಿಂಗ್‌ ಪಟ್ಟಿಯಲ್ಲಿದೆ. ಈ ಹಾಡಿಗೆ ಲಡಾಖ್‌ನ ಇಬ್ಬರು ಯುವತಿಯರು ಮಾಡಿರುವ ನೃತ್ಯ ವೈರಲ್‌ (Viral Video) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಶ್ರೀನಗರ: ಸಾಮಾಜಿಕ ಜಾಲತಾಣಗಳಲ್ಲಿ ಹಲವು ಹಾಡುಗಳು ಟ್ರೆಂಡ್‌ ಆಗುತ್ತಿರುತ್ತವೆ. ಅದೇ ರೀತಿ ಇತ್ತೀಚೆಗೆ ಟ್ರೆಂಡ್‌ ಆದ ಗೀತೆಯೆಂದರೆ ಅದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಸಿನಿಮಾ ʼಕಲಾʼದ ಹಾಡು ʼಘೋಡೆ ಪೆ ಸವಾರ್‌ʼ. ಈ ಹಾಡಿಗೆ ಹಲವರು ನೃತ್ಯ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಆದರೆ ಈ ವಿಡಿಯೊ ಎಲ್ಲದಕ್ಕಿಂತಲೂ (Viral Video) ವಿಶೇಷ.

ಇದನ್ನೂ ಓದಿ: Viral news | ದಿನವೂ ಸಮುದ್ರತೀರದಲ್ಲಿ ಸ್ಪೂರ್ತಿದಾಯಕ ವಾಕ್ಯ ಬರೆಯಲು ಕೆಲಸ ಬಿಟ್ಟಳು!

ಪ್ರಸಿದ್ಧ ಪ್ರವಾಸಿ ತಾಣವಾದ ಲಡಾಖ್‌ನ ಪುಂಟ್ಸೊಕ್ ವಾಂಗ್ಮೊ ಮತ್ತು ಪದ್ಮ ಲಾಮೊ ಹೆಸರಿನ ಯುವತಿಯರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಲಡಾಖ್‌ನ ಸಾಂಪ್ರದಾಯಿಕ ಉಡುಗೆ ತೊಟ್ಟ ಜೋಡಿಯು ಹಿಮಾವೃತ ಪರ್ವತದ ಮುಂದಿರುವ ರಸ್ತೆಯ ಮೇಲೆ ನಿಂತು ನೃತ್ಯ ಮಾಡಿದೆ. ಅದನ್ನು ಸುಂದರವಾಗಿ ಚಿತ್ರೀಕರಿಸಿ, ಎಡಿಟಿಂಗ್‌ ಮಾಡಲಾಗಿದೆ. ಈ ವಿಡಿಯೊವನ್ನು ಜಿಗ್ಮತ್‌ ಲಡಕಿ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಭಾನುವಾರ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಾಕಲಾಗಿದ್ದು, ಒಂದೇ ದಿನದಲ್ಲಿ ಸಾವಿರಾರು ಮಂದಿ ವಿಡಿಯೊ ವೀಕ್ಷಿಸಿದ್ದಾರೆ. ಈ ಜೋಡಿಯ ನೃತ್ಯಕ್ಕೆ ಎಲ್ಲರೂ ಸೈ ಎನ್ನಲಾರಂಭಿಸಿದ್ದಾರೆ. ಸಾವಿರಾರು ಮಂದಿ ವಿಡಿಯೊಗೆ ಲೈಕ್‌ ಒತ್ತಿದ್ದು, ಶೇರ್‌ ಮಾಡಿಕೊಳ್ಳಲಾರಂಭಿಸಿದ್ದಾರೆ. “ಈ ಹಾಡಿಗೂ, ಆ ಜಾಗಕ್ಕೂ ಮತ್ತು ಅವರಿಬ್ದರ ಮುಗ್ಧ ನೃತ್ಯಕ್ಕೂ ಎಲ್ಲಿಲ್ಲದ ಜೋಡಿಯಾಗಿದೆ. ನಿಜವಾಗಿಯೂ ಸುಂದರ ಅನುಭವ ತಂದುಕೊಡುತ್ತಿದೆ” ಎಂದು ಹಲವರು ಹೇಳಿದರೆ, “ಈ ವಿಡಿಯೊ ನೋಡಿದ ಮೇಲೆ ಲಡಾಖ್‌ಗೆ ಹೋಗುವ ಆಸೆ ಇನ್ನಷ್ಟು ಹೆಚ್ಚಿದೆ” ಎಂದು ಕೆಲವರು ಕಾಮೆಂಟ್‌ಗಳ ಮೂಲಕ ತಿಳಿಸಲಾರಂಭಿಸಿದ್ದಾರೆ.

ಇದನ್ನೂ ಓದಿ: Viral News | ಬ್ರಿಟಿಷ್ ಕೌನ್ಸಿಲ್ ಜಾಬ್ ಬಿಟ್ಟು ಟೀ ಸ್ಟಾಲ್ ತೆರೆದ ಇಂಗ್ಲಿಷ್ ಎಂಎ ಪದವೀಧರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕೊಡಗು

Murder Case : ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

Murder Case : ತೆಲಂಗಾಣ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಸ್ಥಳ ಮಹಜರು ವೇಳೆ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

Murder Case

ಬೆಂಗಳೂರು: ಕೊಲೆ ಆರೋಪಿಯನ್ನು (Murder Case) ಮಹಜರು ನಡೆಸಲು ಕರೆದೊಯ್ಯುವ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿರುವ ಘಟನೆ ತೆಲಂಗಾಣ ರಾಜ್ಯದ ಉಪ್ಪಳ್‌ನಲ್ಲಿ ನಡೆದಿದೆ. ತೆಲಂಗಾಣದಲ್ಲಿ ಉದ್ಯಮಿಯನ್ನು ಹತ್ಯೆ ನಡೆಸಿ ಬಳಿಕ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಪನ್ಯದ ಎಸ್ಟೇಟ್‌ನಲ್ಲಿ ಸುಟ್ಟುಹಾಕಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದರು.

ಓರ್ವ ನ್ಯಾಯಾಂಗ ಬಂಧನವಾಗಿದ್ದು, ಉಳಿದ ಇಬ್ಬರು ಆರೋಪಿಗಳ ಪೈಕಿ ಅಂಕುರ್ ರಾಣಾ ಠಾಕೂರ್‌ನನ್ನು ಎರಡು ದಿನಗಳ ಹಿಂದೆ ತೆಲಂಗಾಣಕ್ಕೆ ಮಹಜರು ನಡೆಸಲು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಸದ್ಯ ಆರೋಪಿ ಪರಾರಿ ಸಂಬಂಧ ತೆಲಂಗಾಣ ಉಪ್ಪಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚುವರಿಯಾಗಿ ಕೊಡಗಿನ ಎರಡು ಎಕ್ಸ್ ಪರ್ಟ್ ಟೀಮ್ ಕೂಡ ತೆಲಂಗಾಣಕ್ಕೆ ತೆರಳಿದ್ದು ಹುಟುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಕೊಡಗು: ಅಕ್ಟೋಬರ್ 8ರಂದು ಕೊಡಗಿನ ಸುಂಟಿಕೊಪ್ಪ ಸಮೀಪ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ (Murder case) ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ತೆಲಂಗಾಣ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ನಿಹಾರಿಕ (29), ಪಶು ವೈದ್ಯ ನಿಖಿಲ್ ಹಾಗೂ ಹರಿಯಾಣದ ಅಂಕುರ್ ಎಂಬುವವರು ಬಂಧಿತರು.

ಈ ಮೂವರು ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ (54) ಎಂಬಾತನನ್ನು ತೆಲಂಗಾಣದಲ್ಲಿ ಕೊಲೆ ಮಾಡಿ, ಕೊಡಗಿನಲ್ಲಿ ಸುಟ್ಟು ಹಾಕಿ ಕಾಲ್ಕಿತ್ತಿದ್ದರು. ಆಸ್ತಿಗಾಗಿ ನಿಹಾರಿಕ ಪ್ರಿಯಕರರ ಜತೆ ಸೇರಿ ತನ್ನ ಪತಿಯನ್ನೇ ಹತ್ಯೆ ಮಾಡಿದ್ದಳು. ಹತ್ಯೆ ಮಾಡಿ ನಂತರ ಕೊಡಗಿನ ಸುಂಟಿಕೊಪ್ಪದಲ್ಲಿ ಸುಟ್ಟು ಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಸಿಸಿ ಕ್ಯಾಮೆರಾ ಸುಳಿವು ಆಧಾರಿಸಿ, ರೆಡ್ ಕಲರ್ ಬೆಂಜ್ ಕಾರಿನ ಹಿಂದೆ ಬಿದ್ದಿದ್ದರು. ಕಾರುಪತ್ತೆ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು.

Murder Case
ಬಂಧಿತ ಆರೋಪಿಗಳು

ನಿಹಾರಿಕ ತಾನು 10ನೇ ತರಗತಿಯಲ್ಲಿ ಇರುವಾಗಲೇ ಮದುವೆಯಾಗಿದ್ದಳು. ಎರಡು ಮಕ್ಕಳಾದ ಮೇಲೆ ಪತಿಗೆ ಡಿವೋಸ್‌ ಕೊಟ್ಟು ದೂರವಾಗಿದ್ದಳು. ಬಳಿಕ ಜೈಲಿನಲ್ಲಿದ್ದ ಅಂಕುರ್ ಎಂಬಾತನ ಪರಿಚಯವಾಗಿತ್ತು. ಈ ಅಂಕುರ್‌ ಮೂಲಕ ರಮೇಶ್‌ನ ಪರಿಚಯವಾಗಿ ಮದುವೆಯಾಗಿದ್ದಳು. ರಮೇಶ್‌ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡುತ್ತಿದ್ದರು. ಈ ನಡುವೆ ನಿಹಾರಿಕ, ನಿಖಿಲ್‌ ಜತೆಗೂ ಲಿವಿಂಗ್ ರಿಲೇಶನ್ ಶಿಪ್‌ನಲ್ಲಿ ಇದ್ದಳು.

ನಿಹಾರಿಕ ಅಂಕುರ್‌ನೊಂದಿಗೆ ಸೇರಿ ಆಸ್ತಿ ನೀಡುವಂತೆ ರಮೇಶ್‌ನಿಗೆ ಕಿರುಕುಳ ನೀಡುತ್ತಿದ್ದರು. ಆಸ್ತಿ ನೀಡದೇ ಇದ್ದದ್ದಕ್ಕೆ ಹೈದರಾಬಾದ್ ಸಮೀಪ ಹಗ್ಗದಿಂದ ಬಿಗಿದು ರಮೇಶ್‌ನ ಕೊಲೆ ಮಾಡಿದ್ದರು. ಕೊಲೆ ಮಾಡಿ ಬಳಿಕ ರಮೇಶ್‌ನ ಕಾರಿನಲ್ಲೇ ಆತನ ಅಪಾರ್ಟ್ಮೆಂಟ್‌ಗೆ ಹೋಗಿ ಹಣ, ಆಸ್ತಿ ದಾಖಲೆ ದೋಚಿದ್ದರು. ನಂತರ ಬೆಂಗಳೂರಿಗೆ ಬಂದು ಪೆಟ್ರೋಲ್ ಖರೀದಿಸಿ, ಕೊಡಗಿಗೆ ತಂದು ರಮೇಶ್‌ ಬಾಡಿಯನ್ನು ಸುಟ್ಟು ಹಾಕಿದ್ದರು. ಕೊಲೆ ಬಳಿಕ ಅಂಕುರ್ ದೆಹಲಿ, ಹರಿಯಾಣ ಅಂತ ಸುತ್ತಾಡಿದ್ದ.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

Doctors at Fortis Hospital remove fish bone from man's stomach for 5 years

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

VISTARANEWS.COM


on

ಬೆಂಗಳೂರು: ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿಯ ಕಾಟಕ್ಕೆ ಬೇಸತ್ತ ಪತ್ನಿ ಪೊಲೀಸ್‌ ಠಾಣೆ (Assault Case) ಮೆಟ್ಟಿಲೇರಿದ್ದಾಳೆ. ಮಗುವನ್ನು ಬಲಿ ಕೊಡೋಣ, ಬಲಿ ಕೊಟ್ರೆ ನಿಧಿ ಸಿಗುತ್ತೆ. ಕುಟುಂಬದ ಸಮೃದ್ಧಿ ಹೆಚ್ಚಾಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ. ಪತಿ ವಿರುದ್ಧ ಸಿಡಿದೆದ್ದ ಪತ್ನಿಯಿಂದ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಸದ್ದಾಂ ವಿರುದ್ಧ ಪತ್ನಿಯೇ ದೂರು ನೀಡಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಾನೊಬ್ಬ ಹಿಂದು ಯುವಕಮ ನನ್ನ ಹೆಸರು ಆದಿಈಶ್ವರ್ ಎಂದು ಸುಳ್ಳು ಹೇಳಿ ಸದ್ದಾಂ ಹಿಂದು ಧರ್ಮದ ಯುವತಿಯನ್ನು ಮದುವೆಯಾಗಿದ್ದ.

Assault case A psychopathic husband in Bangalore Wife harassed for sacrificing her child for treasure

ಮದುವೆಯಾಗಿ ಪತ್ನಿ ಗರ್ಭಿಣಿಯಾದಾಗ ತಾನೊಬ್ಬ ಮುಸಲ್ಮಾನ್ ತನ್ನ ಹೆಸರು ಸದ್ದಾಂ ಎಂದು ಹೇಳಿಕೊಂಡಿದ್ದ.
ನೀನು ಮುಸಲ್ಮಾನ್ ಧರ್ಮಕ್ಕೆ ಮತಾಂತರವಾಗಬೇಕೆಂದು ಪತ್ನಿಯನ್ನು ಮತಾಂತರಿಸಿದ್ದ. ಅಲ್ಲದೇ ಪತ್ನಿಯ ಹೆಸರನ್ನು ಬದಲಾಯಿಸಿದ್ದ. ಪ್ರೀತಿಸಿ ಮದುವೆಯಾದವನು ಧರ್ಮ ಯಾವುದಾದರೇನು ಎಂದು ಪತ್ನಿಯೂ ಸುಮ್ಮನಾಗಿದ್ದಳು. ಆದರೆ ಇತ್ತೀಚಿಗೆ ಸೈಕೋ ರೀತಿಯಲ್ಲಿ ಸದ್ದಾಂ ವರ್ತಿಸುತ್ತಿದ್ದ.

Assault case A psychopathic husband in Bangalore Wife harassed for sacrificing her child for treasure

ಗಂಡು ಮಗು ಹುಟ್ಟಿದ ನಂತರ ಕುಟ್ಟಿ ಸೈತಾನ್ ಪೂಜೆ ಮಾಡಬೇಕು. ಕುಟ್ಟಿ ಸೈತಾನ್ ಪೂಜೆಯಲ್ಲಿ ಮಗುವನ್ನು ಬಲಿ ಕೊಡಬೇಕು. ಮಗುವನ್ನು ಬಲಿ ಕೊಟ್ರೆ ಸಮೃದ್ಧಿ ಹೆಚ್ಚಾಗತ್ತೆ, ಜತೆಗೆ ನಿಧಿ ಸಿಗತ್ತೆ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಸದ್ಯ ಸೈಕೋ ಗಂಡನಿಂದ ತಪ್ಪಿಸಿಕೊಂಡಿರುವ ಮಹಿಳೆ ತುಮಕೂರಿನ ತವರು ಮನೆ ಸೇರಿಕೊಂಡಿದ್ದಾಳೆ. ತುಮಕೂರಿಗೂ ತೆರಳಿ ಮಗುವನ್ನು ಬಲಿ ಕೊಡೋಣ ಮಗುವನ್ನು ಕೊಡು ಎಂದು ಟಾರ್ಚರ್ ಕೊಟ್ಟಿದ್ದಾನೆ. ಆರೋಪಿ ಸದ್ದಾಂ ಪತ್ನಿಯ ತಾಯಿಗೂ ಜೀವ ಬೆದರಿಕೆ ಹಾಕಿದ್ದಾನೆ.

Assault case A psychopathic husband in Bangalore Wife harassed for sacrificing her child for treasure

ಹೀಗಾಗಿ ಮಹಿಳೆ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದಾಳೆ. ಆದರೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ದಯಾನಂದ್‌ಗೆ ನೊಂದಾಕೆ ದೂರು ನೀಡಿದ್ದಾಳೆ. ತಡರಾತ್ರಿ ಎದ್ದು ಮಂತ್ರ ಪಠಿಸುತ್ತಾ ವಾಮಾಚಾರ ವಿದ್ಯೆ ಅಭ್ಯಾಸ ಮಾಡುತ್ತಿದ್ದ. ಪತಿಯ ವರ್ತನೆ ಕಂಡು ಭಯಭೀತಳಾಗಿದ್ದ ಮಹಿಳೆ, ದಿನ ಕಳೆದಂತೆ ಕುಟ್ಟಿ ಸೈತಾನ್ ಪೂಜೆಗೆ ಮಗುವನ್ನು ಬಲಿ ಕೊಡಬೇಕೆಂದು ಹಿಂಸೆ ನೀಡಲು ಶುರು ಮಾಡಿದ್ದ.

Continue Reading

ಬೆಂಗಳೂರು

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ಅಪಹರಿಸಿದ ತಮ್ಮ!

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ತಮ್ಮ ಅಪಹರಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

kidnap case

ದಾವಣಗೆರೆ/ಬೆಂಗಳೂರು: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತ ತಮ್ಮನೊಬ್ಬ ಅಕ್ಕನ ಮಗುವನ್ನೇ ಅಪಹರಿಸಿದ ಘಟನೆ (Kidnap case) ನಡೆದಿದೆ. ಬೆಂಗಳೂರಿನಿಂದ ಹೊರಟಿದ್ದ ಅಪ್ರಾಪ್ತ ಬಾಲಕನನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. 17 ವರ್ಷದ ತರುಣ್ ಎಂಬಾತ ಗೋಯಲ್ (3) ಎಂಬ ಮಗುವನ್ನು ಅಪಹರಿಸಿದ್ದ.
ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ದಾವಣಗೆರೆಗೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ತರುಣ್‌ನ ಅಕ್ಕ ಅಕ್ರಮ ಸಂಬಂಧವಿಟ್ಟುಕೊಂಡು ಬೇರೆ ವ್ಯಕ್ತಿ ಜತೆ ವಾಸಿಸುತ್ತಿದ್ದಳು. ಈ ವೇಳೆ ಅಕ್ರಮ ಸಂಬಂಧ ಬಿಡಲು ಒಪ್ಪದಿದ್ದಕ್ಕೆ ಅಕ್ಕನ ಮಗುವನ್ನು ಅಪಹರಿಸಿಕೊಂಡು ಬರುವಾಗ ದಾವಣಗೆರೆ ಆರ್‌ಪಿಎಫ್‌ (RPF) ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡು, ಬಳಿಕ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರೈನ್ ಬರುತ್ತಿದ್ದಂತೆ ತಪಾಸಣೆ ಮಾಡಿ ವಿಚಾರಿಸಿದಾಗ ಮಗು ಅಪಹರಿಸಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೆ ಇನ್ಸ್‌ಪೆಕ್ಟರ್‌ ಎಕೆ ರೆಡ್ಡಿ, ಸಿಬ್ಬಂದಿಗಳಾದ ಶಿವಾನಂದ, ಅಮಿತ್, ಬಿಂದು ಮಧುರಿ ಅವರು ಇಬ್ಬರನ್ನು ರಕ್ಷಿಸಿದ್ದಾರೆ.

Continue Reading
Advertisement
ಕರ್ನಾಟಕ13 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest16 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ17 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ18 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌