ಹೊಸದಿಲ್ಲಿ: ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ (Heart Attack) ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ, ಆಟ ಆಡುವಾಗ ಒಮ್ಮೆಲೇ ಹೃದಯ ನಿಂತು ಬಿಡುವುದು ಹೆಚ್ಚಾಗುತ್ತಲೇ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ನೋಡ ನೋಡ್ತಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪುವ ಘಟನೆಗಳು ಆಗಾಗ ವರದಿ ಆಗುತ್ತಲೇ ಇರುತ್ತವೆ. ಅಂತಹದ್ದೇ ಒಂದು ಘಟನೆ ದಿಲ್ಲಿ ವಿಮಾನ ನಿಲ್ದಾಣ(Delhi Airport)ದಲ್ಲಿ ನಡೆದಿದೆ. ಹೃದಯಾಘಾತದಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಮಹಿಳೆಯೊಬ್ಬರು ರಕ್ಷಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ (Viral Video)ಆಗುತ್ತಿದ್ದು, ಮಹಿಳೆಯ ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ದಿಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರು ತೀವ್ರ ಎದೆನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ಅಲ್ಲೇ ಇದ್ದ ಮಹಿಳೆ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಮಹಿಲೆ ಮೂಲತಃವೈದ್ಯಯಾಗಿರುವ ಕಾರಣ ತಕ್ಷಣ ಆ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿದರು. ಸುಮಾರು ಐದು ನಿಮಿಷಗಳ ಕಾಲ ಆತನ ಎದೆಗೆ ಪಂಪ್ ಮಾಡುವ ಮಾಡುವ ಪ್ರಜ್ಞೆ ತಪ್ಪಿದ್ದ ಆತನನ್ನು ಮತ್ತೆ ಪ್ರಜ್ಞೆ ಬರುವಂತೆ ಮಾಡಿದರು. ಇದಾದ ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಇನ್ನು ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
Today at T2 Delhi Airport, a gentleman in his late 60s had a heart attack in the food court area.
— Rishi Bagree (@rishibagree) July 17, 2024
This lady Doctor revived him in 5 mins.
Super proud of Indian doctors.
Please share this so that she can be acknowledged. pic.twitter.com/pLXBMbWIV4
ಎರಡು ದಿನಗಳ ಹಿಂದೆ ಬಾಂಗ್ಲಾದೇಶದ ಚೆಸ್ ಗ್ರ್ಯಾಂಡ್‌ಮಾಸ್ಟರ್ ಜಿಯಾವುರ್ ರೆಹಮಾನ್ಚೆಸ್ ಆಡುತ್ತಿರುವಾಗಲೇ ದಿಢೀರ್ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿತ್ತು. ರಾಷ್ಟ್ರೀಯ ಚಾಂಪಿಯನ್‌ಶಿಪ್ 12ನೇ ಸುತ್ತಿನ ಪಂದ್ಯದಲ್ಲಿ ಆಡುತ್ತಿದ್ದ ವೇಳೆ ಜಿಯಾವುರ್ ರೆಹಮಾನ್ ಕುಸಿದು ಬಿದ್ದು ನಿಧನರಾದರು ಎಂದು ಬಾಂಗ್ಲಾದೇಶ ಚೆಸ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾದ ಶಹಾಬ್ ಉದ್ದೀನ್ ಶಮಿಮ್ ಮಾಹಿತಿ ಹಂಚಿಕೊಂಡಿದ್ದಾರೆ.
ರೆಹಮಾನ್ ತನ್ನ ಎದುರಾಳಿ ಇನಾಮುಲ್ ಹೊಸೈನ್ ವಿರುದ್ಧ ಪಂದ್ಯವಾಡುತ್ತಿದ್ದಾಗ ದಿಢೀರ್ ಕುಸಿದುಬಿದ್ದರು. ತಕ್ಷಣವೇ ಅವರನ್ನು ಢಾಕಾದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರೊಳಗೆ ಅವರು ಸಾವನ್ನಪ್ಪಿದ್ದರು ಎಂಬುದನ್ನು ವೈದ್ಯರು ಧೃಡಪಡಿಸಿದರು ಎಂದು ಶಮಿಮ್ ಹೇಳಿದ್ದಾರೆ.
ಕಳೆದ ವಾರ ಇಂಡೋನೇಷ್ಯಾದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯೊಂದರಲ್ಲಿ ಪಂದ್ಯ ಆಡುತ್ತಿದ್ದಾಗಲೇ ಕುಸಿದುಬಿದ್ದು ಆಟಗಾರನೋರ್ವ ಮೃತಪಟ್ಟಿರುವ ದಾರುಣ ಘಟನೆ ಸಂಭಿಸಿತ್ತು. ಆಟಗಾರ ಬ್ಯಾಡ್ಮಿಂಟನ್ ಕೋರ್ಟ್ನಲ್ಲಿಯೇ ಬಿದ್ದು ನರಳಾಟ ಮಾಡಿದ ವಿಡಿಯೊ ವೈರಲ್ ಆಗಿತ್ತು. 17 ವರ್ಷದ ಚೀನ ಆಟಗಾರ ಝಾಂಕ್ ಝಿಜಿಯೆ(Zhang Zhijie) ಸಾವನ್ನಪ್ಪಿದ ಆಟಗಾರ.
ಇದನ್ನೂ ಓದಿ: Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್ ವಿಡಿಯೋ ವೈರಲ್