Viral Video | ಇದು ಪ್ರಪಂಚದಲ್ಲೇ ಅತ್ಯಂತ ಕಷ್ಟದ ನೃತ್ಯವಂತೆ! ಅಬ್ಬಬ್ಬಾ, ಹೇಗಿದೆ ನೋಡಿ - Vistara News

ವೈರಲ್ ನ್ಯೂಸ್

Viral Video | ಇದು ಪ್ರಪಂಚದಲ್ಲೇ ಅತ್ಯಂತ ಕಷ್ಟದ ನೃತ್ಯವಂತೆ! ಅಬ್ಬಬ್ಬಾ, ಹೇಗಿದೆ ನೋಡಿ

ಪಶ್ಚಿಮ ಆಫ್ರಿಕಾದ ಜೌಲಿ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದೆ. ನೆಟ್ಟಿಗರು ಈ ನೃತ್ಯವನ್ನು ಪ್ರಪಂಚದ ಅತ್ಯಂತ ಕಷ್ಟದ ನೃತ್ಯ ಶೈಲಿ ಎಂದು ಕರೆಯಲಾರಂಭಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಪಂಚದಲ್ಲೇ ಅತ್ಯಂತ ಕಷ್ಟದ ನೃತ್ಯ ಶೈಲಿಯೆಂದರೆ ಯಾವುದೆಂದು ನೀವು ಹೇಳುತ್ತೀರಿ. ಬೆಲ್ಲಿ, ಬ್ಯಾಲೆಟ್‌ ಎಂದು ನೀವು ಕೆಲವು ಹೆಸರನ್ನು ಹೆಸರಿಸಬಹುದು. ಆದರೆ ನೆಟ್ಟಿಗರು ಹೇಳುವ ಪ್ರಕಾರ (Viral Video) ಅತ್ಯಂತ ಕಷ್ಟದ ನೃತ್ಯ ಶೈಲಿಯೆಂದರೆ ಅದು ಜೌಲಿ ನೃತ್ಯ ಶೈಲಿಯಂತೆ. ಈ ವಿಡಿಯೊ ನೋಡಿದ ಮೇಲೆ ನೀವೂ ಕೂಡ ಇದನ್ನೇ ಅತ್ಯಂತ ಕಷ್ಟದ ನೃತ್ಯ ಶೈಲಿಯೆಂದು ಒಪ್ಪಿಕೊಂಡರೆ ಆಶ್ಚರ್ಯವೇನಿಲ್ಲ.

ಇದನ್ನೂ ಓದಿ: Viral Video | ಅಫಘಾನಿಸ್ತಾನದ ಈ ಪುಟಾಣಿಯ ನಗುವಿಗೆ ಮನಸೋಲದವರಿಲ್ಲ; ವಿಡಿಯೊ ವೈರಲ್‌

ಈ ಜೌಲಿ ನೃತ್ಯ ಪಶ್ಚಿಮ ಆಫ್ರಿಕಾದ ಐವರಿ ಕೋಸ್ಟ್‌ನ ಗುರೊ ಸಮುದಾಯದವರ ನೃತ್ಯವಾಗಿದೆ. ತಲತಲಾಂತರಗಳಿಂದಲೂ ಈ ಸಮುದಾಯ ಜೌಲಿ ನೃತ್ಯವನ್ನು ಮಾಡುತ್ತಾ ಬಂದಿದೆ. ಈ ನೃತ್ಯವೆಂದರೆ ಒಂದು ರೀತಿಯ ದೈವಿಕ ಭಾವನೆ ಅವರಿಗಿದೆ. ಹಾಗಾಗಿ ಮದುವೆ, ಅಂತ್ಯಸಂಸ್ಕಾರದಂತಹ ವಿಶೇಷ ಸಂದರ್ಭದಲ್ಲಿ ಮಾತ್ರ ಈ ನೃತ್ಯವನ್ನು ಮಾಡುತ್ತಾರೆ.


ಈ ನೃತ್ಯವನ್ನು ಗುರೊ ಸಮುದಾಯದ ಪುರುಷರು ಮಾಡುತ್ತಾರೆ. ಅದಕ್ಕೆಂದೇ ವಿಶೇಷ ವೇಷ ಭೂಷಣವೂ ಇದೆ. ನೃತ್ಯ ಮಾಡುವವರು ಮುಖಕ್ಕೆ ಮರದ ಮಾಸ್ಕ್‌, ಅದಕ್ಕೆರೆಡು ಕೊಂಬು, ಬಣ್ಣ ಬಣ್ಣದ ಉಡುಗೆ ತೊಟ್ಟಿರುತ್ತಾರೆ. ಪ್ರಾಣಿಗಳನ್ನು ಪ್ರತಿಬಿಂಬಿಸುವಂತಹ ಕೆಲವು ವಿಶೇಷ ಆಭರಣಗಳನ್ನೂ ಹಾಕಿಕೊಂಡಿರುತ್ತಾರೆ.

ಇದನ್ನೂ ಓದಿ: Viral story | ಪ್ರತ್ಯೇಕ ದಿನ, ತಿಂಗಳು, ವರ್ಷದಲ್ಲಿ ಹುಟ್ಟಿದ ಅವಳಿ ಮಕ್ಕಳು!

ಈ ಜೌಲಿ ನೃತ್ಯದ ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ಫಿಜೆನ್‌ ಹೆಸರಿನ ಟ್ವಿಟರ್‌ ಖಾತೆಯಲ್ಲಿ ಗುರುವಾರ ಈ ವಿಡಿಯೊ ಹಂಚಿಕೊಳ್ಳಲಾಗಿದ್ದು, ವಿಡಿಯೊ ಒಂದೇ ದಿನದಲ್ಲಿ 20 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. “ಅಬ್ಬಬ್ಬಾ ಇದೆಂತಾ ನೃತ್ಯ” ಎಂದು ನೆಟ್ಟಿಗರು ಕಾಮೆಂಟ್‌ ಮಾಡಲಾರಂಭಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಖೈದಿ ಜೊತೆಗೆ ಮಹಿಳಾ ಪೊಲೀಸ್‌ ಅಧಿಕಾರಿ ಲೈಂಗಿಕ ಕ್ರಿಯೆ; ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

Viral Video: ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ.

VISTARANEWS.COM


on

Viral Video
Koo

ಲಂಡನ್‌: ಜೈಲಿನ ಮಹಿಳಾ ಸಿಬ್ಬಂದಿ ಕೈದಿಯ ಜೊತೆ ಲೈಂಗಿಕ ಕ್ರಿಯೆ(Physical relationship) ನಡೆಸಿರುವ ಶಾಕಿಂಗ್‌ ಘಟನೆ ಇಂಗ್ಲೆಂಡ್‌ನ ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಆಘಾತ ವ್ಯಕ್ತಪಡಿಸಿದ್ದು, ಜೈಲಿನಲ್ಲೇ ಇಂತಹ ಸ್ಥಿತಿ ಇದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಎಕ್ಸ್‌ನಲ್ಲಿ ಭಾರೀ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಪೊಲೀಸ್‌ ಸಮವಸ್ತ್ರದಲ್ಲಿರುವ ಜೈಲಿನ ಸಿಬ್ಬಂದಿ ಅಲ್ಲಿನ ಕೈದಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದನ್ನು ನೋಡಬಹುದಾಗಿದೆ. ಇದನ್ನು ಅದೇ ಕೋಣೆಯಲ್ಲಿದ್ದ ಮತ್ತೊರ್ವ ಖೈದಿ ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿಕೊಂಡಿದ್ದಾನೆ. ಕೈಯಲ್ಲಿ ಸಿಗರೇಟ್‌ ಹಿಡಿದು ವಿಡಿಯೋ ಮಾಡುತ್ತಿರುವ ಆ ವ್ಯಕ್ತಿ ” ಹಾಯ್‌.. ನಾವು ಇವತ್ತು ಇತಿಹಾಸ ಸೃಷ್ಟಿಸಿದ್ದೇವೆ. ನಾನು ಹೇಳುತ್ತಿರುವುದು ಇದೇ ವಿಚಾರವನ್ನು ಎಂದು ಹೇಳುತ್ತಾ ಕ್ಯಾಮೆರಾವನ್ನು ತಿರುಗಿಸುತ್ತಾನೆ. ಅಲ್ಲಿ ಜೈಲಿನ ಸಿಬ್ಬಂದಿ ಮತ್ತು ಕೈದಿ ಲೈಂಗಿಕ ಚಟುವಟಿಕೆಯಲ್ಲಿ ಭಾಗಿರುವುದನ್ನು ಕಾಣಬಹುದಾಗಿದೆ. ಅದೂ ಅಲ್ಲೇ ಇದ್ದ ಬೆಡ್‌ ಮೇಲೆ ಕೈದಿಗಳ ಬಟ್ಟೆ ಬಿದ್ದಿರುವುದನ್ನು ಕಾಣಬಹುದಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಮತ್ತೊರ್ವ ಖೈದಿ ಸೆಲ್‌ ಒಳಗೆ ಬರಲು ಯತ್ನಿಸುತ್ತಾರೆ. ಆಗ ವಿಡಿಯೋ ಮಾಡುತ್ತಿದ್ದವನು “ಸ್ವಲ್ಪ ಹೊತ್ತು ಇರು” ಅಂತಾನೆ. ಆಮೇಲೆ ಕ್ಯಾಮೆರಾವನ್ನು ಸುತ್ತ ತಿರುಗಿಸುತ್ತಾ “ಇದು ವಾಂಡ್‌ವರ್ಥ್‌ ಜೈಲು” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ಘಟನೆ ಬಗ್ಗೆ ಲಂಡನ್‌ ಪೊಲೀಸರು ಪ್ರತಿಕ್ರಿಯಿಸಿದ್ದು, ಇದು ವಾಂಡ್‌ವರ್ಥ್‌ನ ಎಚ್‌ಎಂಪಿ ಜೈಲಿನಲ್ಲೆ ನಡೆದಿರುವ ಘಟನೆ ಎಂಬುದು ಸ್ಪಷ್ಟವಾಗಿದೆ. ಕೇಸ್‌ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಬಂಧನವಾಗಿಲ್ಲ. ಕಾನೂನು ಸಚಿವಾಲಯದ ಜೊತೆಗೂ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

HMP ಜೈಲು ಸೇವೆಯ ವಕ್ತಾರರು ಮಾತನಾಡಿ, ಘಟನೆಯು ಇತ್ತೀಚೆಗೆ ಸಂಭವಿಸಿದೆ ಎಂದು ಭಾವಿಸಲಾಗಿದೆ, ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಮತ್ತು ಈ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಜೈಲು ಅಧಿಕಾರಿಯ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading

Latest

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Viral Video: ಈಗ ಸೋಶಿಯಲ್ ಮೀಡಿಯಾದ್ದೇ ಹವಾ. ಕೈಲ್ಲೊಂದು ಮೊಬೈಲ್ ಇದ್ದರೆ ಜಗತ್ತೇ ಮೆರಯುವ ಯುವಜನಾಂಗ ಏನು ಮಾಡುತ್ತಿದ್ದೇವೆ? ಇದು ಸರಿನಾ… ತಪ್ಪಾ…? ಇದರ ಪರಿವೇ ಇಲ್ಲದೇ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಯಿತು!

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಲೈಕ್ಸ್ , ಕಾಮೆಂಟ್‌ ಪಡೆಯಲು ಯುವಕರು ಅನೇಕ ದುಸ್ಸಾಹಸಗಳಿಗೆ ಕೈ ಹಾಕಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಅದೇ ರೀತಿ ಇದೀಗ ಯುವಕರು ಸಿನಿಮಾವೊಂದರಲ್ಲಿ ಹೀರೊ ಲುಕ್‌ ಅನ್ನು ನಕಲು ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video) ಆಗಿದೆ.

ಉತ್ತರ ಪ್ರದೇಶದ ಬುಲಂದ್ ಶಹರ್‌ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ ಆರು ಮಂದಿ ಯುವಕರು ರಕ್ತದಂತೆ ಕಾಣುವ ಬಣ್ಣವನ್ನು ಬ್ಯಾಂಡೇಜ್‌ಗೆ ಬಳಿದುಕೊಂಡು ಅದನ್ನು ಮುಖಕ್ಕೆ ಸುತ್ತಿಕೊಂಡು ಕೈಯಲ್ಲಿ ಕೋಲುಗಳನ್ನು ಹಿಡಿದು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿಹಾಕಿದ್ದಾರೆ. ಇವರಲ್ಲಿ ಒಬ್ಬ ಶರ್ಟ್ ಧರಿಸಿದೆ ತನ್ನ ಇಡೀ ದೇಹವನ್ನು ರಕ್ತದ ಕಲೆಯಂತೆ ಕಾಣುವ ಬ್ಯಾಂಡೇಜ್‌ನಿಂದ ಮುಚ್ಚಿಕೊಂಡಿದ್ದಾನೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಗಿದೆ. ಈ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ವಿಡಿಯೊ 15 ನಿಮಿಷಗಳ ಕಾಲವಿದ್ದು, ಸಮಾಜದ ಜನತೆಗೆ ಉಪದ್ರವ ನೀಡುವಂತಹ ಈ ರೀಲ್ಸ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದಕ್ಕೆ ಶೀರ್ಷಿಕೆ ನೀಡಲಾಗಿದೆ. ಈ ಆರು ಮಂದಿ ಸ್ಥಳೀಯರನ್ನು ಹೆದರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೇ ಮುಂದೆ ಇಂತಹ ಕುಚೇಷ್ಠೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

ರೀಲ್ಸ್‌ಗಾಗಿ ಯುವಕರು ಇಂತಹ ಕುಚೇಷ್ಠೆಗಳನ್ನು ಈ ಹಿಂದೆ ಹಲವು ಬಾರಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಅನೇಕ ಬಾರಿ ಎಚ್ಚರಿಕೆ ನೀಡಿದರೂ ಕೂಡ ಇಂತಹ ಘಟನೆಗಳು ನಡೆಯುತ್ತಿರುತ್ತದೆ. ಈ ಹಿಂದೆ ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಮೇಲೆ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿ ರೈಲಿನ ಪ್ರಯಾಣಿಕರಿಂದ ಒದೆ ತಿಂದಿದ್ದಾರೆ. ಹಾಗೇ ರೀಲ್ಸ್ ಗಾಗಿ ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ಕೆಳಗಿಳಿದು ನೇತಾಡಿದ ಯುವತಿಯನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು.

Continue Reading

ಪ್ರಮುಖ ಸುದ್ದಿ

Snake: ಮಲಗಿದ್ದವನ ಚಡ್ಡಿಯೊಳಗೆ ನುಗ್ಗಿದ ನಾಗರಹಾವು; ಅದು ಹೊರಬರುವ ಮುನ್ನ ಮಾಡಿದ ಅನಾಹುತ ಏನು?

Snake: ಥಾಯ್ಲೆಂಡ್‌ನಲ್ಲಿ ಇತ್ತೀಚೆಗೆ ಯುವಕನೊಬ್ಬ ರಾತ್ರಿ ಮಲಗಿದ್ದಾನೆ. ಇಡೀ ದಿನ ಸುತ್ತಾಡಿದ ಸುಸ್ತೋ ಏನೋ, ಗಾಢವಾಗಿ ಆತನನ್ನು ನಿದ್ರಾದೇವತೆ ಆವರಿಸಿದ್ದಾಳೆ. ಇದೇ ವೇಳೆ ಎಲ್ಲಿಂದಲೋ ಮೆಲ್ಲಗೆ ಬಂದ ಹಾವು, ನಿಧಾನವಾಗಿ ಯುವಕನ ಚಡ್ಡಿಯೊಳಗೆ (ಶಾರ್ಟ್ಸ್)‌ ಪ್ರವೇಶಿಸಿದೆ. ಇಡೀ ರಾತ್ರಿ ಹಾವು ಆತನ ಚಡ್ಡಿಯೊಳಗೆ ಕಳೆದಿದ್ದು, ಯುವಕನು ಬೆಳಗ್ಗೆ ಎದ್ದು ನೋಡಿದಾಗ ಬರೀ ಆಘಾತವಲ್ಲ, ಮರ್ಮಾಘಾತವಾಗಿದೆ.

VISTARANEWS.COM


on

Snake
Koo

ನವದೆಹಲಿ: ಮಳೆಗಾಲ ಶುರುವಾಗಿದೆ. ಗ್ರಾಮೀಣ ಭಾಗಗಳಲ್ಲಿ ವಾಸಿಸುವವರು, ಬೆಟ್ಟ-ಗುಡ್ಡಗಳ ಪಕ್ಕದಲ್ಲಿ, ಜಮೀನಿನಲ್ಲಿ ಮನೆ ಮಾಡಿಕೊಂಡಿರುವವರಿಗೆ ಹಾವುಗಳು (Snake) ಕಾಣಿಸುವುದು ಮಳೆಯಷ್ಟೇ ಸಹಜವಾಗಿರುತ್ತದೆ. ಆದರೆ, ನಗರ ಪ್ರದೇಶಗಳಲ್ಲಿ ಹಾವುಗಳು ಮಳೆಗಾಲದಲ್ಲೂ ಕಾಣಿಸಿಕೊಳ್ಳುವುದು ವಿರಳ. ಆದರೂ, ಶೂನಲ್ಲೇ, ಹೆಲ್ಮೆಟ್‌ನಲ್ಲೋ, ಕಿಟಕಿಯಲ್ಲೋ ಕಾಣಿಸಿಕೊಳ್ಳುವ ಹಾವುಗಳು ಭಾರಿ ಆತಂಕ ಸೃಷ್ಟಿಸುತ್ತವೆ. ಆದರೆ, ಥಾಯ್ಲೆಂಡ್‌ನಲ್ಲಿ (Thailand) ಮಲಗಿದ್ದ ಯುವಕನೊಬ್ಬನ ಚಡ್ಡಿಯೊಳಗೇ ನಾಗರಹಾವೊಂದು ನುಗ್ಗಿದ್ದು, ಆತ ಎಚ್ಚರಗೊಂಡಾಗ ಪ್ರಾಣವು ಬಾಯಿಗೆ ಬಂದಿದ್ದಂತೂ ಸುಳ್ಳಲ್ಲ.

ಹೌದು, ಥಾಯ್ಲೆಂಡ್‌ನಲ್ಲಿ ಇತ್ತೀಚೆಗೆ ಯುವಕನೊಬ್ಬ ರಾತ್ರಿ ಮಲಗಿದ್ದಾನೆ. ಇಡೀ ದಿನ ಸುತ್ತಾಡಿದ ಸುಸ್ತೋ ಏನೋ, ಗಾಢವಾಗಿ ಆತನನ್ನು ನಿದ್ರಾದೇವತೆ ಆವರಿಸಿದ್ದಾಳೆ. ಇದೇ ವೇಳೆ ಎಲ್ಲಿಂದಲೋ ಮೆಲ್ಲಗೆ ಬಂದ ಹಾವು, ನಿಧಾನವಾಗಿ ಯುವಕನ ಚಡ್ಡಿಯೊಳಗೆ (ಶಾರ್ಟ್ಸ್)‌ ಪ್ರವೇಶಿಸಿದೆ. ಇಡೀ ರಾತ್ರಿ ಹಾವು ಯುವಕನ ಚಡ್ಡಿಯೊಳಗೆ ಬೆಚ್ಚಗೆ ಮಲಗಿದೆ. ಯುವಕನೂ ಮಲಗಿದ್ದಾನೆ. ಆದರೆ, ಬೆಳಗ್ಗೆ ಏಳುತ್ತಲೇ ಯುವಕನಿಗೆ ತನ್ನ ಚಡ್ಡಿಯೊಳಗೆ ಏನೂ ನುಸುಳಿದ, ಅಲುಗಾಡಿದ ಅನುಭವವಾಗಿದೆ.

ಅಪಾಯದ ಮುನ್ಸೂಚನೆ ಅರಿತ ಯುವಕನು ಅಲುಗಾಡದೆ ಚಡ್ಡಿಯೊಳಗೆ ಏನಿದೆ ಎಂಬುದನ್ನು ನೋಡಿದ್ದಾನೆ. ಆಗ ನಾಗರಹಾವು ಕಂಡ ಆತನಿಗೆ ಆಘಾತವಾಗಿದೆ. ಸ್ವಲ್ಪ ಅಲುಗಾಡಿದರೂ ಹಾವು ಕಚ್ಚುತ್ತದೆ ಎಂಬುದನ್ನು ಅರಿತ ಆತನು ಗೆಳೆಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಸುದ್ದಿ ತಿಳಿದ ಗೆಳೆಯರು ಕೂಡ ಆಘಾತಕ್ಕೊಳಗಾಗಿದ್ದು, ಕೂಡಲೇ ಸ್ಥಳೀಯ ಉರಗ ತಜ್ಞರನ್ನು ಕರೆದುಕೊಂಡು ಮನೆಗೆ ಹೋಗಿದ್ದಾರೆ.

ಯುವಕನ ಮನೆಗೆ ಬಂದ ಉರಗ ತಜ್ಞನು ಯುವಕನ ಚಡ್ಡಿಯಿಂದ ನಿಧಾನವಾಗಿ ಹಾವನ್ನು ಹೊರತೆಗೆದಿದ್ದಾರೆ. ಹಾವು ನೋಡಿದ ಕ್ಷಣದಿಂದ, ಗೆಳೆಯರಿಗೆ ಕರೆ ಮಾಡಿ, ಅವರು ಉರಗ ತಜ್ಞನನ್ನು ಕರೆದುಕೊಂಡು ಬಂದು, ಆತ ಹಾವನ್ನು ಹೊರಗೆ ತೆಗೆಯುವವರೆಗೂ ಯುವಕನು ಸ್ವಲ್ಪವೂ ಅಲುಗಾಡದೆ ಇದ್ದಿದ್ದು, ಹಾವು ಕೂಡ ಕೋಪದಲ್ಲಿ ಈತನಿಗೆ ಕಚ್ಚದೆ ಇದ್ದಿದ್ದು ಆತನ ಅದೃಷ್ಟವೇ ಸರಿ. ಇನ್ನು, ಯುವಕನ ಚಡ್ಡಿಯಿಂದ ಹಾವನ್ನು ತೆಗೆದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಇನ್ನು ಯುವಕನು ಮಲಗುವ ಮುನ್ನ ಹಾಗೂ ಎದ್ದ ನಂತರ ಚಡ್ಡಿಯನ್ನು ನೋಡಿಕೊಳ್ಳುವುದೇ ಕೆಲಸವಾಗಿದೆ. ಅವನಿಗೆ ಅಷ್ಟು ಆಘಾತವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral Video: ನಾಗರಹಾವು ಟಾಯ್ಲೆಟ್ ಕಮೋಡ್ ನೊಳಗೂ ಇರಬಹುದು, ಹುಷಾರ್! ಈ ವಿಡಿಯೊ ನೋಡಿ

Continue Reading

Latest

Viral Video: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

Viral Video: ಕೆಲವೊಮ್ಮೆ ನಾವು ಮಾಡುವ ತಮಾಷೆ ನಮ್ಮ ಪಾಲಿಗೆ ಹೇಗೆ ಉಲ್ಟಾ ಹೊಡೆಯುತ್ತೆ ಎಂಬುದಕ್ಕೆ ಇಲ್ಲೊಂದು ಘಟನೆ ನಿದರ್ಶನವಾಗಿದೆ. ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ಕಠಿಣ ಮಾರ್ಗವನ್ನು ಅನುಸರಿಸಿದ್ದಾರೆ. ಚಲಿಸುವ ರೈಲು ಮಧ್ಯದಲ್ಲಿ ಎಲ್ಲೂ ನಿಲ್ಲುವುದಿಲ್ಲ ಎಂದು ಭಾವಿಸಿದ ಯುವಕರು ವೇಗವಾಗಿ ಬರುವ ರೈಲಿಗೆ ನೀರು ಚಿಮ್ಮುವಂತೆ ರೈಲು ಹಳಿ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆಗ ಬಂದ ರೈಲಿಗೆ ಆ ನೀರು ಹಾರಿದೆ. ಆದರೆ ಅವರ ತಮಾಷೆ ಅವರಿಗೆ ದುಬಾರಿಯಾಗಿದೆ. ಈ ಸುದ್ದಿ ಓದಿ.

VISTARANEWS.COM


on

Viral Video
Koo

ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕೆಂದು ಎಲ್ಲರೂ ಬಯಸುವುದು ಸಹಜ. ಅದಕ್ಕಾಗಿ ರೀಲ್ಸ್‌ಗಳನ್ನು ಮಾಡುತ್ತಾರೆ. ಆದರೆ ನೀವು ಮಾಡುವಂತಹ ರೀಲ್ಸ್ ನಿಮಗೂ ಹಾಗೂ ಬೇರೆಯರಿಗೆ ಹಾನಿ ಮಾಡುವಂತದಾಗಿರಬಾರದು. ಯಾಕೆಂದರೆ ಆಮೇಲೆ ಅದರ ಫಲವನ್ನು ನೀವೇ ಅನುಭವಿಸಬೇಕಾಗುತ್ತದೆ. ಇದಕ್ಕೆ ನಿದರ್ಶನವೆಂಬಂತೆ ಪಾಕಿಸ್ತಾನದಲ್ಲಿ ಇಂತಹದೊಂದು ಘಟನೆ ನಡೆದಿದೆ, ರೀಲ್ ಮಾಡಲು ಹೋಗಿ ಯುವಕರ ಗುಂಪೊಂದು ರಿಯಲ್ ಆಗಿ ಸಾರ್ವಜನಿಕರಿಂದ ಒದೆ ತಿಂದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ಪಾಕಿಸ್ತಾನದಲ್ಲಿ ಯುವಕರು ಗುಂಪೊಂದು ತಮಾಷೆ ರೀಲ್ ಮಾಡಲು ಕಠಿಣ ಮಾರ್ಗವನ್ನು ಅನುಸರಿಸಿದ್ದಾರೆ. ಚಲಿಸುವ ರೈಲು ಮಧ್ಯದಲ್ಲಿ ಎಲ್ಲೂ ನಿಲ್ಲುವುದಿಲ್ಲ ಎಂದು ಭಾವಿಸಿದ ಯುವಕರು ವೇಗವಾಗಿ ಬರುವ ರೈಲಿಗೆ ನೀರು ಚುಮ್ಮುವಂತೆ ರೈಲು ಹಳಿ ಹಾದು ಹೋಗುವ ತೊರೆಗೆ ತಮ್ಮ ಬೈಕ್ ಅನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆ. ಆಗ ಬಂದ ರೈಲಿಗೆ ಆ ನೀರು ಹಾರಿದೆ. ಅವರ ತಮಾಷೆ ಅವರಿಗೆ ದುಬಾರಿಯಾಗಿದೆ. ಯಾಕೆಂದರೆ ರೈಲು ಮಧ್ಯದಲ್ಲಿ ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಕರು ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಿದ್ದಾರೆ.

ವಿಡಿಯೊದಲ್ಲಿ ವೇಗವಾಗಿ ಬರುತ್ತಿರುವ ರೈಲಿಗೆ ಇವರು ತೊರೆಗೆ ಅಡ್ಡಲಾಗಿ ಇಟ್ಟ ಬೈಕಿಂದ ನೀರು ಚಿಮ್ಮುತ್ತಿದೆ. ಆ ವೇಳೆ ರೈಲು ಮಧ್ಯದಲ್ಲೆ ನಿಂತು ಪ್ರಯಾಣಿಕರು ಕೋಪಗೊಂಡು ಯುವಕರನ್ನು ಅಡ್ಡಾಡಿಸಿಕೊಂಡು ಹೊಡೆಯುತ್ತಿರುವುದು ಕಾಣಿಸುತ್ತಿದೆ. ಆಗ ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣ ಪೊಲೀಸರು ಮಧ್ಯ ಪ್ರವೇಶಿಸಿ ಅವರ ಬೈಕ್‌ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈವರೆಗೆ ಇದಕ್ಕೆ 2.5 ಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ಅನೇಕರು ಕಾಮೆಂಟ್ ಕೂಡ ಮಾಡಿದ್ದಾರೆ. ನೆಟ್ಟಿಗರು ಯುವಕರು ರೈಲನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತಿದ್ದಾರೆ ಎಂದು ತಮಾಷೆ ಮಾಡಿದ್ದಾರೆ.

Viral Video

ಈ ಘಟನೆ ಗಂಭೀರವಾಗಿದೆಯಾದರೂ ಇಲ್ಲಿಯವೆರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಹಾಗಾಗಿ ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕೂಡ ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ ಹಾಗೂ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:  ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

ಇನ್ನೊಬ್ಬರಿಗೆ ತಮಾಷೆ ಮಾಡುವುದು ಕೆಲವೊಮ್ಮೆ ನಮಗೆ ದುಬಾರಿಯಾಗಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪ್ರಯಾಣಿಕರನ್ನು ತಮಾಷೆ ಮಾಡಲು ಹೋದ ಯುವಕರಿಗೆ ಈ ಘಟನೆ ತಕ್ಕ ಪಾಠ ಕಲಿಸಿದೆ. ದುರುದ್ದೇಶವುಳ್ಳ ತಮಾಷೆ ಅನಗತ್ಯ ಸಮಸ್ಯೆಯನ್ನು, ಅಪಾಯವನ್ನು ತಂದೊಡ್ಡುತ್ತದೆ ಎಂಬುದು ಈ ಘಟನೆಯಿಂದ ಎಲ್ಲರಿಗೂ ತಿಳಿದಂತಾಗಿದೆ.

Continue Reading
Advertisement
Dengue Fever
ಚಿಕ್ಕಮಗಳೂರು14 mins ago

Dengue Fever : ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Aiden Markram
ಕ್ರೀಡೆ24 mins ago

Aiden Markram: ಧೋನಿಯಂತೆ ಮಾರ್ಕ್ರಮ್​ ಕೂಡ ಲಕ್ಕಿ ಕ್ಯಾಪ್ಟನ್​; ಸಾಧನೆ ಹೀಗಿದೆ

Fahadh Faasil in trouble faces Human Rights Commission action
ಮಾಲಿವುಡ್30 mins ago

Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

Viral Video
ವೈರಲ್ ನ್ಯೂಸ್31 mins ago

Viral Video: ಖೈದಿ ಜೊತೆಗೆ ಮಹಿಳಾ ಪೊಲೀಸ್‌ ಅಧಿಕಾರಿ ಲೈಂಗಿಕ ಕ್ರಿಯೆ; ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

5 Soldiers Killed
ದೇಶ34 mins ago

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

DK Shivakumar
ಕರ್ನಾಟಕ45 mins ago

DK Shivakumar: ಸಿಎಂ, ಡಿಸಿಎಂ ಚರ್ಚೆ ಇಲ್ಲ, ಬಾಯಿಗೆ ಬೀಗ ಹಾಕಿಕೊಂಡಿರಿ; ಡಿಕೆಶಿ ಖಡಕ್‌ ಎಚ್ಚರಿಕೆ

Actor Darshan Suffering From Sade Sati
ಸ್ಯಾಂಡಲ್ ವುಡ್55 mins ago

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

deepika padukone
Latest55 mins ago

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

attika babu
ಬೆಂಗಳೂರು ಗ್ರಾಮಾಂತರ56 mins ago

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Shah Rukh Khan
ಪ್ರಮುಖ ಸುದ್ದಿ58 mins ago

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ18 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌