Site icon Vistara News

Vistara Top 10 News : ಬಿಜೆಪಿಗರನ್ನು ಪರೋಕ್ಷವಾಗಿ ಸಂವಿಧಾನ ವಿರೋಧಿಗಳು ಎಂದ ಸಿಎಂ, ನೀರು ಬಂದ್ ಮಾಡಿ ಪಾಕ್​ಗೆ ಪಾಠ ಕಲಿಸಿದ ಭಾರತ ಇತ್ಯಾದಿ ಪ್ರಮುಖ ಸುದ್ದಿಗಳು

Top 10 news

1. ಸಂವಿಧಾನ ಬದಲಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಿರಿ: ಸಿದ್ದರಾಮಯ್ಯ ಕರೆ
ಬೆಂಗಳೂರು: ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ. ಹೀಗಾಗಿ ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : Constitution and National Unity: ಸಂವಿಧಾನಕ್ಕೆ ಧಕ್ಕೆಯಾದ್ರೆ ದೇಶದಲ್ಲಿ ಸರ್ವಾಧಿಕಾರಿ ಆಡಳಿತ: ಮಲ್ಲಿಕಾರ್ಜುನ ಖರ್ಗೆ

2. ರಾವಿ ನದಿ ನೀರು ನಿಲ್ಲಿಸಿ ಪಾಕಿಸ್ತಾನಕ್ಕೆ ಪೆಟ್ಟು ಕೊಟ್ಟ ಕೇಂದ್ರ; ರೈತರಿಗೆ ಗುಡ್‌ ನ್ಯೂಸ್‌
ಶ್ರೀನಗರ: ಸುಮಾರು ಮೂರು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಡ್ಯಾಮ್‌ ಕಟ್ಟುವ ಮೂಲಕ ಕೇಂದ್ರ ಸರ್ಕಾರವು (Central Government) ಪಾಕಿಸ್ತಾನಕ್ಕೆ (Pakistan) ಪೆಟ್ಟು ಕೊಟ್ಟಿದೆ. 1995ರಿಂದಲೂ ನನೆಗುದಿಗೆ ಬಿದ್ದಿದ್ದ ಶಾಹ್‌ಪುರ ಕಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ರಾವಿ ನದಿಯಿಂದ (Ravi River Water) ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರಿಂದ ಪಾಕಿಸ್ತಾನದ ಕೃಷಿಗೆ ಭಾರಿ ಪೆಟ್ಟು ಬೀಳುವ ಜತೆಗೆ ಭಾರತದ ಲಕ್ಷಾಂತರ ರೈತರಿಗೆ ಈ ನದಿಯ ನೀರಿನಿಂದ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

3. ದ್ವಾರಕಾದಲ್ಲಿ ಸ್ಕೂಬಾ ಡೈವಿಂಗ್‌ ಮೂಲಕ ಮಿಂಚು ಹರಿಸಿದ ಮೋದಿ; ಇಲ್ಲಿದೆ ಫೋಟೊ ಗ್ಯಾಲರಿ
ಗಾಂಧಿನಗರ: ಗುಜರಾತ್‌ನ ದ್ವಾರಕಾದಲ್ಲಿ ಇಂದು (ಫೆಬ್ರವರಿ 25) ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಉದ್ಘಾಟಿಸಿದರು. ‘ಸುದರ್ಶನ ಸೇತು’ (Sudarshan Setu) ಎಂದು ಕರೆಯಲ್ಪಡುವ ಇದು ಓಖಾ ಮತ್ತು ಬೇತ್ ದ್ವಾರಕಾ (Okha and Beyt Dwarka) ದ್ವೀಪವನ್ನು ಸಂಪರ್ಕಿಸುತ್ತದೆ. 2017ರ ಅಕ್ಟೋಬರ್‌ನಲ್ಲಿ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಈ ಸೇತುವೆಯ ಅದ್ಭುತ ಚಿತ್ರಗಳು ಇಲ್ಲಿವೆ. ಇದೇ ವೇಳೆ ಮೋದಿ ಅವರು ದ್ವಾರಕಾದಲ್ಲಿ ಸ್ಕೂಬಾ ಡೈವಿಂಗ್‌ ಮಾಡಿ ಗಮನ ಸೆಳೆದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

4. ಏಕಾಏಕಿ ಮನ್‌ ಕೀ ಕಾರ್ಯಕ್ರಮ ಸ್ಥಗಿತಗೊಳಿಸಿದ ಮೋದಿ; ಕಾರಣ ಏನು?
ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನಿರಂತರವಾಗಿ ಮನ್‌ ಕೀ ಬಾತ್‌ (Mann Ki Baat) ರೇಡಿಯೋ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ರೇಡಿಯೋ ಕಾರ್ಯಕ್ರಮದ ಮೂಲಕ ಅವರು ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಹಾಗಾಗಿ, ಮನ್‌ ಕೀ ಬಾತ್‌ ರೇಡಿಯೋ ಸರಣಿಯು 110 ಕಾರ್ಯಕ್ರಮಗಳನ್ನು ಪೂರೈಸಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್‌ ಕೀ ಬಾತ್‌ ಕಾರ್ಯಕ್ರಮಕ್ಕೆ ಮೂರು ತಿಂಗಳು ವಿರಾಮ ನೀಡಿದ್ದಾರೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮೋದಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಯನ್ನೂ ಓದಿ : ಮನ್‌ ಕೀ ಬಾತ್‌ನಲ್ಲಿ ಬಾಗಲಕೋಟೆಯ ವೆಂಕಪ್ಪಗೆ ಮೋದಿ ಮೆಚ್ಚುಗೆ; ಇವರ ಕೊಡುಗೆ ಏನು?

5. 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.?
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ (Ram Mandir) ಬಾಲಕ ರಾಮ (Balak Ram) ವಿಗ್ರಹದ ಪ್ರಾಣ ಪ್ರತಿಷ್ಠೆ (Pran Prathistha) ನೆರವೇರಿದೆ. ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಈ ಸಮಾರಂಭ ನಡೆದಿದೆ. ಅದಾದ ಬಳಿಕ ಜನವರಿ 23ರಿಂದ ಈ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಮಾಡುತ್ತಿದ್ದಾರೆ. ರಾಮ ಮಂದಿರ ಸಾವರ್ಜನಿಕ ಭೇಟಿಗೆ ಮುಕ್ತವಾಗಿ ಇದೀಗ ಸುಮಾರು ಇಂದು ತಿಂಗಳು ಕಳೆದಿದ್ದು ಕೋಟ್ಯಂತರ ರೂ. ಮೌಲ್ಯದ ಕಾಣಿಕೆ ಸಂದಾಯವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಈ ಸುದ್ದಿಗಳನ್ನೂ ಓದಿ : Arun Yogiraj : ರಾಮ್‌ ಲಲ್ಲಾನ ಎಂದೂ ನೋಡದ ಚಿತ್ರ ತೋರಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌; ಎಷ್ಟು ಮುದ್ದಾಗಿದೆ ನೋಡಿ…

6. ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ನಿಗೂಢ ನಾಪತ್ತೆ; ಯಾರು ಈ ಶಾರುಖ್‌ ಶೇಖ್‌?
ಪುತ್ತೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವಿಶ್ವವಿದ್ಯಾಲಯಲ್ಲಿ (Private University) ಪಿಎಚ್‌ಡಿ ಅಧ್ಯಯನ (PhD Study) ನಡೆಸುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ಯುವತಿ ಚೈತ್ರಾ ಹೆಬ್ಬಾರ್‌ (Chaithra Hebbar Missing Case) ನಾಪತ್ತೆಯಾಗಿ ಫೆ. 25ಕ್ಕೆ ಒಂಬತ್ತು ದಿನಗಳು ಕಳೆದಿವೆ. ಫೆ. 17ರಿಂದ ನಾಪತ್ತೆಯಾಗಿರುವ ಈಕೆಯ ಬಗ್ಗೆ ಹಲವಾರು ಕಥೆಗಳು ಹರಡಿಕೊಂಡಿದ್ದು, ಪೊಲೀಸರಿಗೆ ಆಕೆಯನ್ನು ಹುಡುಕುವುದೇ ಒಂದು ಸಾಹಸವಾಗಿದೆ. ಆಕೆ ನಾಪತ್ತೆಯಾದ ದಿನದಿಂದ ಆಕೆಯೊಂದಿಗೆ ಆತ್ಮೀಯತೆಯಿಂದ ಇದ್ದ ಶಾರುಖ್‌ ಶೇಖ್‌ (Sharukh Shekh) ಎಂಬಾತ ಕೂಡಾ ನಾಪತ್ತೆಯಾಗಿದ್ದಾನೆ. ಹೀಗಾಗಿ ಇದು ಹಿಂದು-ಮುಸ್ಲಿಂ ಜೋಡಿ (Hindu Muslim) ಪಲಾಯನ, ಲವ್‌ ಜಿಹಾದ್‌ (Love Jihad) ಎಂಬಿತ್ಯಾದಿ ವ್ಯಾಖ್ಯಾನಗಳಿಗೂ ಕಾರಣವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

7. ಅನಿಲ್ ಕುಂಬ್ಳೆ ದಾಖಲೆ ಮುರಿದ ಆರ್ ಅಶ್ವಿನ್; ಏನದು ದಾಖಲೆ?
ರಾಂಚಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ದಂತಕಥೆ ರವಿಚಂದ್ರನ್ ಅಶ್ವಿನ್ (R Ashwin) ಅವರು ಅನಿಲ್ ಕುಂಬ್ಳೆ (Anil Kumble) ಅವರ ದೀರ್ಘಕಾಲದ ದಾಖಲೆಯನ್ನು ಮುರಿದು ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್​ನಲ್ಲಿ 500 ಟೆಸ್ಟ್ ವಿಕೆಟ್​​ಗಳ ಮೈಲಿಗಲ್ಲನ್ನು ದಾಟಿದ ಅಶ್ವಿನ್ ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

8. ಸಿನಿಮಾ ನಿರ್ಮಾಪಕನಿಂದ 2 ಸಾವಿರ ಕೋಟಿ ರೂ. ಡ್ರಗ್ಸ್‌ ದಂಧೆ; ಇದು ರೀಲ್‌ ಅಲ್ಲ ರಿಯಲ್‌ ಕತೆ!
ನವದೆಹಲಿ: ಮಾದಕವಸ್ತು ನಿಯಂತ್ರಣ ಬ್ಯೂರೋ (NCB) ಹಾಗೂ ದೆಹಲಿ ಪೊಲೀಸರು (Delhi Police) ಬೃಹತ್‌ ಡ್ರಗ್ಸ್‌ ಜಾಲವೊಂದನ್ನು ಭೇದಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿ ಮೌಲ್ಯದ 3,500 ಕೆ.ಜಿ ಸ್ಯೂಡೋಫೆಡ್ರಿನ್‌ (Pseudoephedrine) ಮಾದಕವಸ್ತುವನ್ನು ಅಕ್ರಮವಾಗಿ ಸಾಗಿಸಿದ ಜಾಲವೊಂದನ್ನು ಭೇದಿಸಿದ್ದು, ತಮಿಳು ಸಿನಿಮಾ ನಿರ್ಮಾಪಕನೇ (Tamil Film Producer) ಇದರ ಪ್ರಮುಖ ಪಿತೂರಿದಾರ ಎಂದು ಎನ್‌ಸಿಬಿ ಮಾಹಿತಿ ನೀಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

9. ಸಿಗ್ನಲ್‌ ಜಂಪ್‌ ಮಾಡಿದ್ರೆ ನಿಮ್ಮ ಗಾಡಿ ಗುಜರಿಗೆ ಹಾಕ್ತಾರೆ ಹುಷಾರ್‌!
ಬೆಂಗಳೂರು: ರೋಡ್‌ನಲ್ಲಿ ಟ್ರಾಫಿಕ್‌ ಪೊಲೀಸರು ನಿಂತಿಲ್ಲ ಎಂದು ಸಿಗ್ನಲ್ ಜಂಪ್ ಮಾಡುವುದು, ಹೆಲ್ಮೆಟ್ ಹಾಕದೆ ಬೈಕ್‌ ಓಡಿಸುವುದು, ಸೀಟ್‌ ಬೆಲ್ಟ್‌ ಹಾಕದೇ ಕಾರು ಚಲಾಯಿಸುವುದು ಸೇರಿದಂತೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದರೆ ಇನ್ನು ಮುಂದೆ ಕಂಟಕ (Traffic violation) ಕಾದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.

10. ಅಂಬಾನಿ ಮಗನ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಸಿದ್ಧವಾಗಿದೆ ಭೂ ಲೋಕದ ಸ್ವರ್ಗ!
ಗಾಂಧೀನಗರ (ಗುಜರಾತ್): ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿಯ ಮಗ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ (Anant and Radhika Wedding) ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ. ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್‌ನ ಜಾಮ್ ನಗರದಲ್ಲಿ (Jamnagar) ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, ಮನಮೋಹಕವಾದ ಶಿಲ್ಪಗಳು, ವಾಸ್ತುಶಿಲ್ಪದಿಂದ ಪ್ರೇರಿತವಾದ ಪಾರಂಪರಿಕ ಚಿತ್ರಗಳನ್ನು ಇಲ್ಲಿ ಕಾಣಬಹುದಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್​ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Exit mobile version