1. ಪರಿಷತ್‌ನಲ್ಲಿ ಹಿಂದು ಧಾರ್ಮಿಕ ವಿಧೇಯಕ ತಿರಸ್ಕಾರ; ರಾಜ್ಯ ಸರ್ಕಾರಕ್ಕೆ ಮುಖಭಂಗ
ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಹಿಂದು ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಅವರು ಶುಕ್ರವಾರ ಮಂಡನೆ (Budget Session) ಮಾಡಿದ್ದು, ವಿಧೇಯಕದಲ್ಲಿನ ಕೆಲವು ಅಂಶಗಳಿಗೆ ಬಿಜೆಪಿ ಸದಸ್ಯರು ತೀವ್ರ ಅಕ್ಷೇಪ ವ್ಯಕ್ತಪಡಿಸಿದರು. ದೇಗುಲಗಳ ನಿವ್ವಳ ಆದಾಯದಲ್ಲಿ ಶೇ.10 ನಿಧಿ ಸಂಗ್ರಹ ಮಾಡುವುದು ಸರಿಯಲ್ಲ. ಈ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಕೊನೆಗೆ ವಿಧೇಯಕ ತಿರಸ್ಕಾರವಾಗಿದ್ದರಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
2. Ram Devotees Insult: ರೈಲಿನಲ್ಲಿ ಶ್ರೀರಾಮಭಕ್ತರಿಗೆ ಅವಹೇಳನ; ಒಬ್ಬ ಆರೋಪಿ ವಶಕ್ಕೆ, ಇತರರ ಹುಡುಕಾಟ; ವಿಧಾನ ಪರಿಷತ್ತಿನಲ್ಲೂ ಗದ್ದಲ
ವಿಜಯನಗರ: ಹೊಸಪೇಟೆಯ ರೈಲು ನಿಲ್ದಾಣದಲ್ಲಿ ಅಯೋಧ್ಯೆಧಾಮ (Ayodhya Dham) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀರಾಮಭಕ್ತರನ್ನು (Sri Ram Devotees) ಅವಹೇಳನ (Ram Devotees Insult) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನೂ ಹಲವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ನಡುವೆ, ವಿಧಾನ ಪರಿಷತ್ತಿನಲ್ಲೂ (Vidhana Parishat) ಈ ವಿಚಾರ ಪ್ರಸ್ತಾಪವಾಗಿ ಗದ್ದಲ ಎದ್ದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
3. 40 percent commission: ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿಗೆ ಖುದ್ದು ಹಾಜರಾಗಲು ಸಮನ್ಸ್; ಶ್ರೀರಾಮುಲುಗೆ ಸಂಕಷ್ಟ
ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ (40 percent commission) ಆರೋಪ ಮಾಡಿದ್ದ ಕಾಂಗ್ರೆಸ್ ಕಳೆದ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ ಟಿವಿ ಸೇರಿದಂತೆ ಮಾಧ್ಯಮಗಳಲ್ಲಿ ಈ ಕುರಿತು ಜಾಹೀರಾತು ನೀಡಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ಗೆ (DK Shivakumar) ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಖುದ್ದು ಹಾಜರಾಗುವಂತೆ ಸೂಚಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
4. Congress Party: ತನಿಖಾ ಸಂಸ್ಥೆಗಳ ದಾಳಿ ಬಳಿಕ ಕಂಪನಿಗಳಿಂದ ಬಿಜೆಪಿಗೆ ದೇಣಿಗೆ! ತನಿಖೆಗೆ ಕಾಂಗ್ರೆಸ್ ಒತ್ತಾಯ
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (Congress Leader KC Venugopal) ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರಿಗೆ ಪತ್ರ ಬರೆದು, ಭಾರತೀಯ ಜನತಾ ಪಕ್ಷ (BJP Party) ಮತ್ತು ವಿವಿಧ ಕೇಂದ್ರ ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಹಲವಾರು ಕಾರ್ಪೊರೇಟ್ ದಾನಿಗಳ ನಡುವಿನ ಕೊಡು-ಕೊಳ್ಳುವಿಕೆಯ (quid-pro-quo) ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
5. Narendra Modi: ಕಾಶಿಯಲ್ಲಿ ಕೃತಕ ಬುದ್ಧಿಮತ್ತೆ ಮ್ಯಾಜಿಕ್; ಮಕ್ಕಳಿಗೆ ಮೋದಿ ಮೇಷ್ಟ್ರ ಪಾಠ
ವಾರಾಣಸಿ: ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ತಿಂಗಳು ಬಾಕಿ ಇರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಕ್ಷೇತ್ರವಾದ ವಾರಾಣಸಿಗೆ ತೆರಳಿದ್ದು, ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ ಸಂಸದ್ ಸಂಸ್ಕೃತ ಪ್ರತಿಯೋಗಿತಾ (Sansad Sanskrit Pratiyogita) ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಸ್ಕೃತ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳೊಂದಿಗೆ ಫೋಟೊ ತೆಗೆಸಿಕೊಂಡ ನರೇಂದ್ರ ಮೋದಿ ಅವರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ (Artificial Intelligence) ಮ್ಯಾಜಿಕ್ ತೋರಿಸಿದರು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
6. ಸಿಇಒ ಸ್ಥಾನದಿಂದ ಬೈಜು ರವೀಂದ್ರನ್‌ರನ್ನು ಕಿತ್ತು ಹಾಕಿದ ಷೇರುದಾರರು!
ಮುಂಬೈ: ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಬೈಜುಸ್ (BYJU’s) ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ಸ್ಥಾನದಿಂದ ಸಂಸ್ಥಾಪಕ ಬೈಜು ರವೀಂದ್ರನ್ (Byju Raveendran) ಅವರನ್ನು ಕಿತ್ತು ಹಾಕಲಾಗಿದೆ. ಈ ಕುರಿತಾದ ನಿರ್ಣಯವನ್ನು ಆಡಳಿತ ಮಂಡಳಿಯು (extraordinary general meeting) ಅಂಗೀಕರಿಸಿದೆ. ಇದರೊಂದಿಗೆ ಬೈಜುಸ್ ಕಂಪನಿಯ ನಾಯಕತ್ವದ ಬದಲಾಗಲಿದೆ. ಶುಕ್ರವಾರ ನಡೆದ ತುರ್ತು ಸಾಮಾನ್ಯ ಸಭೆಯಲ್ಲಿ ಈ ನಿರ್ಣಯಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
7. ಗುಡ್ ನ್ಯೂಸ್- ಫೆ.26 ರಿಂದ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಓಡಾಟ
ಬೆಂಗಳೂರು: ಮೆಟ್ರೋ ರೈಲಿನಲ್ಲಿ ಪೀಕ್ ಅವರ್ ಸಂಚಾರ (Namma Metro) ಎನ್ನುವುದು ನಿಜಕ್ಕೂ ದುಸ್ವಪ್ನವೇ ಆಗಿತ್ತು. ಜನದಟ್ಟಣೆಯ ಸಂದರ್ಭದಲ್ಲಿ ರೈಲನ್ನು ಏರುವುದೇ ಕಷ್ಟವಾಗಿತ್ತು. ಒಳಗೆ ಹೋದರೆ ಉಸಿರಾಡಲಾಗದ ಒತ್ತೊತ್ತಾಗಿ ನಿಲ್ಲಬೇಕಾದ ಪರಿಸ್ಥಿತಿ ಇತ್ತು. ಬಸ್ ಸ್ಟಾಂಡ್‌ಗಳ ವಾತಾವರಣವೇ ಇಲ್ಲೂ ಕಂಡುಬರುತ್ತಿತ್ತು. ಇದಕ್ಕೆ ಪರಿಹಾರವಾಗಿ, ಪೀಕ್ ಅವರ್‌ಗಳಲ್ಲಿ ಹೆಚ್ಚುವರಿ ರೈಲುಗಳನ್ನು ಬಿಡುವುದು ಒಂದೇ ಮಾರ್ಗ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
8. ಉತ್ತರ ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು (Department of Medical Education) ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಉತ್ತರ ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ (NIMHANS Hospital) ನಿರ್ಮಾಣಕ್ಕೆ ಮುಂದಾಗಲಾಗಿದೆ. 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ನಿಮ್ಹಾನ್ಸ್ ಆಸ್ಪತ್ರೆ (Multi Super Speciality NIMHANS Hospital) ನಿರ್ಮಾಣ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
9. ಮಲಾಲಾಳಂತೆ ದೇಶ ಬಿಡಲ್ಲ, ಕಾಶ್ಮೀರ ಸೇಫ್; ಬ್ರಿಟನ್ ಸಂಸತ್ತಲ್ಲಿ ಕಾಶ್ಮೀರ ಯುವತಿ ಚಾಟಿ
ಲಂಡನ್: ಜಮ್ಮು-ಕಾಶ್ಮೀರದ ವಿಷಯದಲ್ಲಿ ಆಗಾಗ ಮೂಗು ತೂರಿಸುವ ನೊಬೆಲ್ ಶಾಂತಿ ಪುರಸ್ಕೃತ ಹೋರಾಟಗಾರ್ತಿ ಮಲಾಲಾ ಯೂಸುಫ್‌ಜಾಯ್ (Malala Yousafzai) ಅವರಿಗೆ ಜಮ್ಮು-ಕಾಶ್ಮೀರದ ಯುವತಿ ಯಾನಾ ಮಿರ್ (Yana Mir) ಅವರು ಬ್ರಿಟನ್ ಸಂಸತ್ತಲ್ಲಿ ತಿರುಗೇಟು ನೀಡಿದ್ದಾರೆ. “ಜಮ್ಮು-ಕಾಶ್ಮೀರ (Jammu Kashmir) ಸುರಕ್ಷಿತವಾಗಿದೆ. ನಾನು ಮಲಾಲಾ ಯೂಸುಫ್‌ಜಾಯ್ ಅವರಂತೆ ನನ್ನ ದೇಶವನ್ನು ತೊರೆಯುವುದಿಲ್ಲ” ಎಂದು ಹೇಳುವ ಮೂಲಕ ಜಮ್ಮು-ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನ ಹಾಗೂ ಮಲಾಲಾ ಯೂಸುಫ್‌ಜಾಯ್ ಅವರ ಕುತಂತ್ರವನ್ನು ಬಯಲಿಗೆಳೆದಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
10. ದೇಶದಲ್ಲಿ ಸನ್ಯಾಸಿ ಸೇರಿ ರಾಷ್ಟ್ರೀಯ ನಾಯಕರ ಸಾವು; ಯುದ್ಧ ಭೀತಿ, ಅಣುಬಾಂಬ್ ಸ್ಫೋಟ: ಕೋಡಿಮಠ ಶ್ರೀ
ಹುಬ್ಬಳ್ಳಿ: ಈ ವರ್ಷ ಒಟ್ಟು ಮೂರು ಗಣ್ಯರ ಸಾವು ಉಂಟಾಗಲಿದೆ. ಇಬ್ಬರು ರಾಷ್ಟ್ರಮಟ್ಟದ ನಾಯಕರು ಹಾಗೂ ಧಾರ್ಮಿಕರೊಬ್ಬರು ಮೃತಪಡುತ್ತಾರೆ ಎಂದು ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ (kodi mutt swamiji) ಭವಿಷ್ಯ ನುಡಿದಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.