1. ಹನುಮನ ಪರ ಇಡೀ ಮಂಡ್ಯ ನಿಲ್ಲುತ್ತೆ, ನಮ್ಮ ಹೋರಾಟ ನಿಲ್ಲಲ್ಲ: ಬಿಜೆಪಿ ಘೋಷಣೆ
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ (Hanuman Flag) ಹಾರಿಸುವವರೆಗೂ ಬಿಜೆಪಿ (BJP Karnataka) ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ (Congress Government) ಇನ್ನಷ್ಟು ಕೆಣಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಎಚ್ಚರಿಕೆ ನೀಡಿದರು.
ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಮಂಡ್ಯಕ್ಕೆ ಬೆಂಕಿ ಹಚ್ಚಿದ್ದು ನಾನಲ್ಲ, ಸರ್ಕಾರ; ಚಲುವರಾಯಸ್ವಾಮಿಗೆ ಎಚ್‌ಡಿಕೆ ತಿರುಗೇಟು
ಈ ಸುದ್ದಿಯನ್ನೂ ಓದಿ: ಶಿವಾಜಿನಗರದ ಬಿಬಿಎಂಪಿ ಧ್ವಜಸ್ತಂಭದಲ್ಲಿ ಹಸಿರು ಬಾವುಟ; ಏನ್ಮಾಡ್ತೀರಾ ಈಗ?
ಹನುಮ ಧ್ವಜ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
2.ರಾಮ ಭಕ್ತ ಗಾಂಧೀಜಿ ಕೊಂದ ಗೋಡ್ಸೆಯನ್ನು ಪೂಜಿಸುವವರಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ
ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು (Lord Rama) ಪೂಜಿಸುವ ಮಹಾತ್ಮ ಗಾಂಧಿಯವರನ್ನು (Mahatma Gandhi) ಮತಾಂಧನಾಗಿದ್ದ ನಾಥೂರಾಮ್ ಗೋಡ್ಸೆ (Nathuram Godse) ಹತ್ಯೆಗೈಯುತ್ತಾನೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಶಾಸಕರಿಗಾಯ್ತು ಈಗ 34 ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ; ಯಾರಿಗೆಲ್ಲ ಅವಕಾಶ?
3. Mayank Agarwal: ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್? ಐಸಿಯುನಲ್ಲಿ ಚಿಕಿತ್ಸೆ
ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ (Karnataka Ranji team captain Mayank Agarwal) ಅವರು ತೀವ್ರ ಅಸ್ವಸ್ಥರಾಗಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ರಣಜಿ ಪಂದ್ಯಕ್ಕಾಗಿ ತ್ರಿಪುರಾದಲ್ಲಿದ್ದ ಅವರು, ವಿಮಾನದಲ್ಲಿ ವಾಪಸ್ ಆಗುತ್ತಿದ್ದಾಗ ತೀವ್ರವಾಗಿ ಅಸ್ವಸ್ಥರಾದರು ಎಂದು ತಿಳಿದು ಬಂದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಲಕ್ಷ್ಮಣ್ ಸವದಿ ಫರ್ ವಾಪ್ಸಿ? ಮಾತುಕತೆ ಫೈನಲ್, ಮಹತ್ವದ ಸುಳಿವು ಕೊಟ್ಟ ಕತ್ತಿ, ಜೊಲ್ಲೆ!
ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಈಗ ದಟ್ಟವಾಗಿ ಹರಡುತ್ತಿದೆ. ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ತಂತ್ರಗಾರಿಕೆಯಲ್ಲಿ ತೊಡಗಿದ್ದು, ಘರ್ ವಾಪ್ಸಿಗೆ (Ghar Wapsi) ಚಾಲನೆ ನೀಡಿದೆ. ಇದರ ಭಾಗವಾಗಿ ಕಿತ್ತೂರು ಕರ್ನಾಟಕ (Kittur Karnataka) ಭಾಗದ ನಾಯಕರಾಗಿರುವ ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ವಾಪಸ್ ಕರೆತರಲು ಕಸರತ್ತು ತೀವ್ರಗೊಂಡಿದೆ. ಮಾಹಿತಿ ಪ್ರಕಾರ, ಅಂತಿಮ ಹಂತಕ್ಕೆ ಬಂದಿದೆ ಎಂದೇ ಹೇಳಲಾಗುತ್ತಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಬಿಜೆಪಿ ನಾಯಕನ ಹತ್ಯೆ; ಪಿಎಫ್‌ಐನ 15 ಸದಸ್ಯರಿಗೆ ಗಲ್ಲು ಶಿಕ್ಷೆ
ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ (Ranjith Sreenivas) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) 15 ಸದಸ್ಯರಿಗೆ ಕೇರಳ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಬಿಜೆಪಿ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸ್ ಹತ್ಯೆಗೈದ 15 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೇರಳದ ಆಲಪ್ಪುಳ ಜಿಲ್ಲೆಯ ಮಾವಲಿಕರ ನ್ಯಾಯಾಲಯವು ಆದೇಶ ಹೊರಡಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಚಂಡೀಗಢ ಮೇಯರ್ ಎಲೆಕ್ಷನ್ ಗೆದ್ದ ಬಿಜೆಪಿ, ಇಂಡಿಯಾ ಕೂಟಕ್ಕೆ ಸೋಲು! ಹೈಕೋರ್ಟ್ ಮೊರೆ ಹೋದ ಆಪ್
ಚಂಡೀಗಢ ಮೇಯರ್ ಎಲೆಕ್ಷನ್‌ನಲ್ಲಿ (Chandigarh Mayor Election) ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ (BJP Party Candidate) ಮನೋಜ್ ಸೋನ್ಕರ್ ಅವರು ಗೆಲವು ಸಾಧಿಸಿದ್ದಾರೆ. ಆಪ್ ಮತ್ತು ಕಾಂಗ್ರೆಸ್ ಕೂಟದ (AAP-Congress Candidate) ಅಭ್ಯರ್ಥಿಯಾಗಿದ್ದ ಆಪ್‌ನ ಕುಲ್ದೀಪ್ ಕುಮಾರ್ ಅವರು ಸೋಲುಂಡಿದ್ದಾರೆ. ಈ ಮೂಲಕ, ಇಂಡಿಯಾ ಬ್ಲಾಕ್‌ಗೆ ಮೊದಲು ಸೋಲು ಎದುರಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ರಾಮ ಮಂದಿರದ 2ನೇ ಮಹಡಿ ನಿರ್ಮಾಣ ಯಾವಾಗ? ಇಲ್ಲಿದೆ ಡೇಟ್
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಿಸಲಾಗಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ. ಇದರ ಬೆನ್ನಲ್ಲೇ, ರಾಮಮಂದಿರ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ (Ram Mandir Construction) ಫೆಬ್ರವರಿ 15ರಿಂದ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8.ಇಮ್ರಾನ್ ಖಾನ್‌ಗೆ 10 ವರ್ಷ ಜೈಲು; ಪಾಕ್ ಚುನಾವಣೆ ಮೊದಲೇ ಶಾಕ್
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ, ಮತ್ತೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಭಾರಿ ಹಿನ್ನಡೆಯಾಗಿದೆ. ಪಾಕಿಸ್ತಾನದ ಸರ್ಕಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಬಹಿರಂಗಗೊಳಿಸಿದ ಪ್ರಕರಣದಲ್ಲಿ ಅವರಿಗೆ ರಾವಲ್ಪಿಂಡಿ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9.ಎಐ ತಂತ್ರಜ್ಞಾನ ಬಳಸಿ ದಿವಂಗತ ಗಾಯಕರ ಧ್ವನಿ ಮರು ಸೃಷ್ಟಿಸಿದ ರೆಹಮಾನ್ ಹೇಳಿದ್ದೇನು?
ಸಂಗೀತ ನಿರ್ದೇಶಕ, ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ ಅವರು ರಜನಿಕಾಂತ್ ಅಭಿನಯದ ತಮಿಳು ಚಿತ್ರ ʼಲಾಲ್ ಸಲಾಂʼಗಾಗಿ ಕೃತಕ ಬುದ್ಧಿಮತ್ತೆ ಮೊರೆ ಹೋಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತೆ-ಫೋಟೊಗ್ರಾಫರ್ ಮಧ್ಯೆ ಕುರ್ಚಿ ಗಲಾಟೆ
ಕೆಪಿಸಿಸಿ ಕಚೇರಿಯಲ್ಲಿ (KPCC Office) ಮಂಗಳವಾರ ಚಿಕ್ಕ ವಿಚಾರಕ್ಕೆ ದೊಡ್ಡ ಗಲಾಟೆ ನಡೆದಿದೆ. ಅದೂ ಕಾಂಗ್ರೆಸ್ (Congress Karnataka) ಕಾರ್ಯಕರ್ತೆ ಹಾಗೂ ಕೆಪಿಸಿಸಿ ಫೋಟೋಗ್ರಾಫರ್ ನಡುವೆ ಜಟಾಪಟಿ ನಡೆದಿದ್ದು, ಕುರ್ಚಿಯ ವಿಚಾರಕ್ಕಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ