1. ಜ.23ರಿಂದ ಸಾರ್ವಜನಿಕರಿಗೆ ತೆರೆಯಲಿರುವ ರಾಮ ಮಂದಿರ
ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ಮಂಗಳವಾರದಿಂದ ಪ್ರಾಣ ಪ್ರತಿಷ್ಠಾಪನೆಯ ಪೂರ್ವಭಾವಿ ವಿಧಿವಿಧಾನಗಳು ಪ್ರಾರಂಭವಾಗಿವೆ. ಪ್ರಾಣ ಪ್ರತಿಷ್ಠಾ ಸಮಾರಂಭದ ಒಂದು ದಿನದ ನಂತರ ಅಂದರೆ ಜನವರಿ 23ರಿಂದ ರಾಮ ಮಂದಿರ ಸಾರ್ವಜನಿಕರಿಗೆ ತೆರೆಯಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ಬಹಿಷ್ಕಾರ; ರಾಹುಲ್ ಗಾಂಧಿ ಸಮರ್ಥನೆ ಏನು?
2. ಪೂಜಿಸಲೆಂದೇ ಹೂಗಳ ತಂದೆ ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗ ರಾಮ ನಾಮ ಜಪದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಅವರು ಕನ್ನಡದ ಸುಪ್ರಸಿದ್ಧ ಹಾಡು (Kannada Song) ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗೆ ತಲೆದೂಗಿದ್ದಾರೆ. ಅವರು ಶಿವಶ್ರೀ ಸ್ಕಂದ ಪ್ರಸಾದ್ ಎಂಬ ಗಾಯಕಿ ಹಾಡಿರುವ ಹಾಡಿನ ಯೂಟ್ಯೂಬ್ ಲಿಂಕ್ ಪೋಸ್ಟ್ ಮಾಡಿರುವ ಪ್ರಧಾನಿ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮಾತಾಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ರಾಮನನ್ನು ಸ್ವಾಗತಿಸಲು ಕಾಶ್ಮೀರಿ ಹುಡುಗಿ ಹಾಡಿದ ಹಾಡು ವೈರಲ್
ಈ ಸುದ್ದಿಯನ್ನೂ ಓದಿ: ಸಂಪೂರ್ಣ ಸಂತರಾದ ಮೋದಿ; ಬರಿ ನೆಲದಲ್ಲಿ ನಿದ್ದೆ, ಹಣ್ಣುಗಳಷ್ಟೇ ಆಹಾರ
ಈ ಸುದ್ದಿಯನ್ನೂ ಓದಿ: ಜ.19ಕ್ಕೆ ಬೆಂಗಳೂರಿಗೆ ಮೋದಿ; ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಅವಕಾಶ?
3.ಶೀಘ್ರವೇ ಸರಕಾರಿ ನೌಕರರ ವೇತನ ಪರಿಷ್ಕರಣೆ? ಸಿದ್ದರಾಮಯ್ಯ ಭರವಸೆ ಏನು?
ಏಳನೇ ವೇತನ ಆಯೋಗದ (Seventh Pay Commission) ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ (Govt Employees Pay Hike) ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಸುವರ್ಣ ಪೊಲೀಸ್ ಭವನ ಸೇರಿ ಪೊಲೀಸ್ ಇಲಾಖೆಗೆ ಹಲವು ಮಹತ್ವದ ಘೋಷಣೆ ಮಾಡಿದ ಸಿಎಂ
ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದದಲ್ಲಿ ಬಾಂಬ್ ನಿಷ್ಕ್ರೀಯ ಪತ್ತೆ ಮತ್ತು ದಳದ ಮೊಬೈಲ್ ಲ್ಯಾಬ್, ಎಫ್ಎಸ್‌ಎಲ್ ಮೊಬೈಲ್ ಲ್ಯಾಬ್ ವಾಹನ, ಕಂಟ್ರೋಲ್ ಸೆಂಟರ್ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆಗೆ ಸಿಎಂ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಮಥುರಾ ಶಾಹಿ ಈದ್ಗಾ ಮಸೀದಿಯ ಸರ್ವೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ (Mathura Krishna Janmabhoomi) ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ (Shahi Eidgah mosque) ಸಮೀಕ್ಷೆಗೆ ಅಡ್ವೊಕೇಟ್ ಕಮಿಷನರ್ ನೇಮಕ ಮಾಡಿರುವ ಅಲಹಾಬಾದ್ ಹೈಕೋರ್ಟ್ (Allahabad high court) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme court) ಮಂಗಳವಾರ ತಡೆಯಾಜ್ಞೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ವಿಮಾನ ವಿಳಂಬ ಸಮಸ್ಯೆ! ಬೆಂಗಳೂರು ಸೇರಿ 6 ಮೆಟ್ರೊ ಏರ್‌ಪೋರ್ಟ್‌ಗಳಲ್ಲಿ ವಾರ್ ರೂಮ್ಸ್ ಸ್ಥಾಪನೆ
ದಟ್ಟ ಮಂಜಿನಿಂದ ವಿಮಾನಯಾನ ಪ್ರಯಾಣಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ(Flight delay problem). ಪ್ರಯಾಣಿಕರು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಸೂಚಿಸುವುದಕ್ಕಾಗಿ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ (Aviation Minister Jyotiraditya Scindia) ಅವರು, ಬೆಂಗಳೂರು (Bengaluru) ಸೇರಿದಂತೆ ಆರು ಮೆಟ್ರೋ ವಿಮಾನ ನಿಲ್ದಾಣಗಳಲ್ಲಿ ವಾರ್ ರೂಮ್ಸ್ (War Rooms at Airports) ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ವೈ ಎಸ್ ಶರ್ಮಿಳಾ ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ; ಅಣ್ಣ-ತಂಗಿ ನಡುವೆ ಸವಾಲ್
ಆಂಧ್ರ ಪ್ರದೇಶದ ಹಾಲಿ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರ ಸಹೋದರಿಯಾಗಿರುವ ವೈ ಎಸ್ ಶರ್ಮಿಳಾ (YS Sharmila) ಅವರನ್ನು ಕಾಂಗ್ರೆಸ್ ಪಕ್ಷವು, ಆಂಧ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆಯನ್ನಾಗಿ ನೇಮಕ ಮಾಡಿದೆ. ಈ ಮೂಲಕ ಮುಂಬರುವ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಭಾರೀ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ವಿವೇಕ್ ರಾಮಸ್ವಾಮಿ
ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಗೆ (US Presidential Election 2024) ಮುಂದಾಗಿದ್ದ ಭಾರತೀಯ ಮೂಲದ ಬಯೋಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ (Vivek Ramaswamy) ಮಂಗಳವಾರ ರೇಸ್‌ನಿಂದ ಹೊರಗೆ ಬಂದಿದ್ದಾರೆ. ಅವರು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿ ಕೆ ಶಿವಕುಮಾರ್
ಬೆಂಗಳೂರಲ್ಲಿ ಆಸ್ತಿ ತೆರಿಗೆ (Property Tax) ಪಾವತಿ ಕುರಿತ ನೋಟಿಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದೆ. 30×40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ (Tax Exemption) ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 79 ವರ್ಷಗಳ ಬಳಿಕ ಕೂಚ್ ಬೆಹಾರ್ ಟ್ರೋಫಿ ಗೆದ್ದ ರಾಜ್ಯ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಇಲ್ಲಿ ನಡೆದ 19 ವರ್ಷದೊಳಗಿನವರ ಕೂಚ್ ಬೆಹಾರ್ ಟ್ರೋಫಿ(Cooch Behar Trophy) ಫೈನಲ್ ಪಂದ್ಯದಲ್ಲಿ ಕನಾರ್ಟಕ ತಂಡ ಮುಂಬೈ ತಂಡವನ್ನು ಮಣಿಸಿ 79 ವರ್ಷಗಳ ಬಳಿಕ ಮೊದಲ ಬಾರಿಗೆ ಕಪ್ ಗೆದ್ದ ಸಾಧನೆ ಮಾಡಿತ್ತು. ರಾಜ್ಯ ತಂಡದ ಈ ಸಾಧನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ