Site icon Vistara News

Congress candidate list : ಮಧ್ಯಪ್ರದೇಶದಲ್ಲಿ ಕಮಲ್​ನಾಥ್​ ಪುತ್ರ ನಕುಲ್​ಗೆ ಸಿಕ್ಕಿತು ಟಿಕೆಟ್​

Congress CEC Meeting

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ 2024 ಕ್ಕೆ ಮುಂಚಿತವಾಗಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ಮಧ್ಯಪ್ರದೇಶದ 12 ಲೋಕಸಭಾ ಸ್ಥಾನಗಳಿಗೆ ಹೆಸರುಗಳನ್ನು ಅಂತಿಮಗೊಳಿಸಿದೆ (Congress candidate list) ಎಂದು ಮೂಲಗಳು ತಿಳಿಸಿವೆ. ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರು ಚಿಂದ್ವಾರಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಸಂಜೆ, ಕಾಂಗ್ರೆಸ್​​ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಎರಡನೇ ಬಾರಿಗೆ ಸಭೆ ಸೇರಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಂಜೆ 6 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದ್ದವು. ಅಲ್ಲದೆ, ಕಾಂಗ್ರೆಸ್ ಸಂಸದೀಯ ಪಕ್ಷ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಯಲ್ಲಿ ಭಾಗವಹಿಸಿದ್ದರು.

ನಕುಲ್ ಅವರಲ್ಲದೆ, ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರನ್ನು ರಾಜಸ್ಥಾನದ ಜಲೋರ್ ನಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ. ಆದರೆ, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಇಬ್ಬರೂ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ, ಅಸ್ಸಾಂ ಮತ್ತು ಗುಜರಾತ್​ನಿ.ದ ತಲಾ 14, ಮಧ್ಯಪ್ರದೇಶದಿಂದ 16, ಉತ್ತರಾಖಂಡದಿಂದ 5, ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯುನಿಂದ ತಲಾ ಒಂದು ಸ್ಥಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ರಾಜಸ್ಥಾನದ ಚುರುವಿನಲ್ಲಿ ಸೋಮವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ರಾಹುಲ್ ಕಸ್ವಾನ್ ಸೇರಿದಂತೆ ಸುಮಾರು 10 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಜಲೋರ್ ನಿಂದ ವೈಭವ್ ಗೆಹ್ಲೋಟ್ ಮತ್ತು ಟೋಂಕ್-ಸವಾಯಿ ಮಾಧೋಪುರದಿಂದ ಹರೀಶ್ ಮೀನಾ ಟಿಕೆಟ್​ ಪಡೆದಿದ್ದಾರೆ.

ಇದನ್ನೂ ಓದಿ : Lok Sabha Election : ರಾಜ್ಯದ 22 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಅಂತಿಮ; ಯದುವೀರ್, ಸೋಮಣ್ಣ, ಡಾ. ಮಂಜುನಾಥ್​​ಗೆ ಟಿಕೆಟ್!

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಂಬಿಕಾ ಸೋನಿ, ಟಿ.ಎಸ್.ಸಿಂಗ್ದೇವ್, ಪಿ.ಎಲ್.ಪುನಿಯಾ ಮತ್ತು ಮೊಹಮ್ಮದ್ ಜಾವೇದ್ ಸೇರಿದಂತೆ ಇತರರು ಸಿಇಸಿಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ, ರಾಜಸ್ಥಾನ, ಛತ್ತೀಸ್ ಗಢ, ಹರಿಯಾಣ, ತಮಿಳುನಾಡು, ದೆಹಲಿ ಮತ್ತು ಮಧ್ಯಪ್ರದೇಶದ ಲೋಕಸಭಾ ಸ್ಥಾನಗಳ ಬಗ್ಗೆ ಚರ್ಚೆಗಳು ನಡೆಯುವ ನಿರೀಕ್ಷೆಯಿದೆ. ಮಾರ್ಚ್ 8 ರಂದು 39 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಛತ್ತೀಸ್ ಗಢ, ಕರ್ನಾಟಕ, ಕೇರಳ, ಲಕ್ಷದ್ವೀಪ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತೆಲಂಗಾಣ ಮತ್ತು ತ್ರಿಪುರಾ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೇರಳದಿಂದ 16, ಕರ್ನಾಟಕದಿಂದ 7, ಛತ್ತೀಸ್ ಗಢದಿಂದ 6, ತೆಲಂಗಾಣದಿಂದ 4 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇಘಾಲಯದಿಂದ ಇಬ್ಬರು, ನಾಗಾಲ್ಯಾಂಡ್, ತ್ರಿಪುರಾ, ಸಿಕ್ಕಿಂ ಮತ್ತು ಲಕ್ಷದ್ವೀಪದಿಂದ ತಲಾ ಒಬ್ಬರು.

Exit mobile version