Site icon Vistara News

2nd PUC Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2ರ ವೇಳಾಪಟ್ಟಿ ಪ್ರಕಟ; ಏಪ್ರಿಲ್‌ 29ರಿಂದ ಮೇ 16ರವರೆಗೆ ಎಕ್ಸಾಂ

2nd PUC Result and 2nd Exam 2

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಪ್ರಕಟವಾಗಿದೆ. ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ. ಹೀಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಯಲಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು ನಡೆಸಲಾಗುವುದು.

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್

ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ

ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಉಡುಪಿ ಇದ್ದು, ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.

ಇದನ್ನೂ ಓದಿ: 2nd PUC Result: ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ; ಫಲಿತಾಂಶ ಇಲ್ಲಿದೆ ನೋಡಿ

ಗಣಿತದಲ್ಲಿ 6960 ಮಂದಿ, ಜೀವಶಾಸ್ತ್ರದಲ್ಲಿ 5925 ಮಂದಿ, 2570 ಮಂದಿ ಕನ್ನಡದಲ್ಲಿ , 1499 ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ 1403 ಮಂದಿ, ಗಣಕ ವಿಜ್ಞಾನದಲ್ಲಿ 2661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

Exit mobile version