Site icon Vistara News

2nd PUC Result: ಏ.10ರ ಹೊತ್ತಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

SSLC result

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1ರ ಫಲಿತಾಂಶ (2nd PUC Result) ಏಪ್ರಿಲ್ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಏ.10ರಂದು ಇದನ್ನು ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಕಳೆದ ಮಾರ್ಚ್ 1ರಿಂದ 22ರವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಿದೆ. ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.

ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮಂಡಳಿಯ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯವೂ ಪೂರ್ಣಗೊಳ್ಳಲಿದೆ.

ಹೀಗಾಗಿ ಎಲ್ಲ ಅಂದುಕೊಂಡಂತೆ ನಡೆದರೆ ಏಪ್ರಿಲ್ ಎರಡನೇ ವಾರದಲ್ಲಿ ಫಲಿತಾಂಶ ಪ್ರ ಕಟಿಸಲು ಚಿಂತನೆ ನಡೆದಿದೆ ಎಂದು ಇಲಾಖೆ ಹೇಳಿದೆ. ಏ.10 ಅಥವಾ ನಂತರದ ಒಂದೆರಡು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಮಾ.28ಕ್ಕೆ ಮುಕ್ತಾಯವಾದ 5, 8 ಮತ್ತು 9ನೇ ತರಗತಿ ಮಕ್ಕಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಕೂಡ ತಾಲೂಕು ಹಂತದಲ್ಲಿ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಮಕ್ಕಳ ಫಲಿತಾಂಶವನ್ನು ಕೂಡ ಏ.8ರಿಂದ 10ರೊಳಗೆ ಪ್ರಕಟಿಸಲು ಮಂಡಳಿ ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: What Next After PUC : ಪಿಯುಸಿ ನಂತರ ಮುಂದಿರುವ ಆಯ್ಕೆಗಳೇನು?; ಇಲ್ಲಿದೆ ಮಾಹಿತಿ

Exit mobile version