Site icon Vistara News

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Haryana Government

ನವದೆಹಲಿ: ಹರಿಯಾಣದಲ್ಲಿ ರಾಜಕೀಯ ಬಿಕ್ಕಟ್ಟಲು ತಲೆತೋರಿದೆ. ಅಲ್ಲಿನ ನಯಾಬ್​ ಸೈನಿ (Nayab Saini) ನೇತೃತ್ವದ ಬಿಜೆಪಿ ಸರ್ಕಾರಕ್ಕೆ (Haryana Government) ನೀಡಿದ್ದ ಬೆಂಬಲವನ್ನು ಮೂವರು ಪಕ್ಷೇತರ ಶಾಸಕರು (independent MLA) ಹಿಂತೆಗೆದುಕೊಂಡಿದ್ದಾರೆ. ಹೀಗಾಗಿ ಸರ್ಕಾರ ಅತಂತ್ರವಾಗಿದೆ. ಅವರೆಲ್ಲರೂ ಪ್ರತಿಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಪುಂಡ್ರಿ ಕ್ಷೇತ್ರದ ರಣಧೀರ್ ಗೋಲನ್, ನಿಲೋಖೇರಿಯ ಧರಂಪಾಲ್ ಗೊಂಡರ್ ಮತ್ತು ದಾದ್ರಿಯ ಸೋಮ್ಬೀರ್ ಸಿಂಗ್ ಸಾಂಗ್ವಾನ್ ಬೆಂಬಲ ವಾಪಸ್ ಪಡೆದ ಶಾಸಕರು. ರೋಹ್ಟಕ್​ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರೆಲ್ಲರೂ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಬಾದ್​ಶಾಪುರ ಕ್ಷೇತ್ರದ ರಾಕೇಶ್ ದೌಲ್ತಾಬಾದ್ ಕೂಡ ಅವರೊಂದಿಗೆ ಸೇರುವ ನಿರೀಕ್ಷೆಯಿದೆ ಆದರೆ ಸಮಯಕ್ಕೆ ಸರಿಯಾಗಿ ಸ್ಥಳವನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಸಂಗ್ವಾನ್ ಹೇಳಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಧರಂ ಪಾಲ್ ಗೊಂಡರ್​, ಬಿಜೆಪಿ ಸರ್ಕಾರವು ರಾಜ್ಯದ ನಾನಾ ಸಮಸ್ಯೆಗಳನ್ನು ನಿಭಾಯಿಸಿದ ರೀತಿ ಸರಿಯಲ್ಲ ಎಂದು ಹೇಳಿದ್ದಾರೆ.

ಸರ್ಕಾರ ರಚಿಸಲು ಅವರಿಗೆ ನಮ್ಮ ಬೆಂಬಲ ಅಗತ್ಯವಿರುವ ಸಮಯದಲ್ಲಿ ನಮ್ಮನ್ನು ಕರೆದಿದ್ದರು. ಮನೋಹರ್ ಲಾಲ್ ಖಟ್ಟರ್ ಅಧಿಕಾರದಲ್ಲಿ ಇರುವವರೆಗೂ ನಾವು ಬೆಂಬಲಿಸುತ್ತೇವೆ ಎಂದು ನಾವು ನಿರ್ಧರಿಸಿದ್ದೆವು. ಅವರು ಇನ್ನು ಮುಂದೆ ಅಧಿಕಾರದಲ್ಲಿಲ್ಲ . ರೈತರ ಹಿತದೃಷ್ಟಿಯಿಂದ ನಾವು ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತುಗಳನ್ನಾಡಿದಿ ಗೋಲನ್, ಹರಿಯಾಣದಲ್ಲಿ ಬಿಜೆಪಿಯ ಅಧಿಕಾರಾವಧಿಯಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಹಣದುಬ್ಬರವು ಬೆಂಬಲವನ್ನು ಹಿಂತೆಗೆದುಕೊಳ್ಳುವ ನಿರ್ಧಾರದಲ್ಲಿ ಪ್ರಮುಖ ಅಂಶ ಎಂದು ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಿಂದ ನಾವು ಬಿಜೆಪಿಗೆ ಬೆಂಬಲ ನೀಡಿದ್ದೇವೆ. ಇಂದು ನಿರುದ್ಯೋಗ ಮತ್ತು ಹಣದುಬ್ಬರವು ಗರಿಷ್ಠ ಮಟ್ಟದಲ್ಲಿದೆ. ಇದನ್ನು ನೋಡಿ, ನಾವು ನಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರದ ಮೇಲಿನ ಜನರ ವಿಶ್ವಾಸದ ಕೊರತೆ ಮತ್ತು ಕಾಂಗ್ರೆಸ್​​ಗೆ ಹೆಚ್ಚುತ್ತಿರುವ ಬೆಂಬಲದ ಪ್ರತೀಕ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election : ರಾಜಕೀಯಕ್ಕಾಗಿ ದ್ವೇಷ ಸೃಷ್ಟಿ; ಬಿಜೆಪಿ ವಿರುದ್ಧ ವಿಡಿಯೊ ಮೂಲಕ ಟೀಕೆ ಮಾಡಿದ ಸೋನಿಯಾ ಗಾಂಧಿ

“ಪಕ್ಷೇತರರ ನಿರ್ಧಾರ ಸರಿಯಾಗಿದೆ. ಸರಿಯಾದ ಸಮಯದಲ್ಲಿ ತೆಗೆದುಕೊಂಡ ಸೂಕ್ತ ನಿರ್ಧಾರ ಇದಾಗಿದೆ. ಇದು ಜನರ ಹಿತದೃಷ್ಟಿಯಿಂದ ಉತ್ತಮ. ರಾಜ್ಯದ ಕಾಂಗ್ರೆಸ್ ನ ಅಲೆ ಇದೆ. ನಾನು ಅವರನ್ನು ಸ್ವಾಗತಿಸುತ್ತೇನೆ” ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಉದಯ್ ಭಾನ್, “ಮೂವರು ಸ್ವತಂತ್ರ ಶಾಸಕರಾದ ಸೋಮ್​ಬಿರ್ ಸಾಂಗ್ವಾನ್, ರಣಧೀರ್ ಸಿಂಗ್ ಗೊಲ್ಲನ್ ಮತ್ತು ಧರಂಪಾಲ್ ಗೊಂಡರ್ ಅವರು ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಕಾಂಗ್ರೆಸ್​​ಗೆ ಬೆಂಬಲ ನೀಡಿದ್ದಾರೆ” ಎಂದು ಹೇಳಿದರು.

90 ಸದಸ್ಯರ ಹರಿಯಾಣ ವಿಧಾನಸಭೆಯ ಪ್ರಸ್ತುತ ಬಲ 88. ಅದರಲ್ಲಿ ಬಿಜೆಪಿ 40 ಸದಸ್ಯರನ್ನು ಹೊಂದಿದೆ ಬಿಜೆಪಿ ಸರ್ಕಾರಕ್ಕೆ ಸ್ವತಂತ್ರರ ಬೆಂಬಲವಿತ್ತು. ಇದರಿಂದಾಗಿ ನಯಾಬ್ ಸಿಂಗ್ ಸೈನಿ ಸರ್ಕಾರ ಈಗ ಸಂಖ್ಯಾ ಬಲವಿಲ್ಲದ ಸರ್ಕಾರವಾಗಿದೆ

Exit mobile version