Site icon Vistara News

Bus Accident : ಶಾಲಾ ಬಸ್​ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ

Bus Accident

ನವದೆಹಲಿ: ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಸ್ ಒಂದು ಪಲ್ಟಿಯಾದ ಪರಿಣಾಮ (Bus Accident ) ಹಲವಾರು ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ಪಿಂಜೋರ್ ಪಟ್ಟಣದ ನೌಲತಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಮಕ್ಕಳ ನಿಖರ ಸಂಖ್ಯೆಯನ್ನು ಇನ್ನೂ ಗುರುತಿಸಲಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪಂಚಕುಲದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಗಾಯಗೊಂಡ ಹಲವಾರು ಶಾಲಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಪೊಲೀಸರ ಪ್ರಕಾರ, ಬಸ್ ಚಾಲಕನ ಅತಿಯಾದ ವೇಗದಿಂದಾಗಿ ಅಪಘಾತ ಸಂಭವಿಸಿದೆ. ಇದರೊಂದಿಗೆ, ಬಸ್ ತನ್ನ ಸಾಮರ್ಥ್ಯವನ್ನು ಮೀರಿ ಪ್ರಯಾಣಿಕರಿಂದ ತುಂಬಿಕೊಂಡಿತ್ತು ಎನ್ನಲಾಗಿದೆ. ಓವರ್​ಲೋಡ್ ಮತ್ತು ಕಳಪೆ ರಸ್ತೆ ಪರಿಸ್ಥಿತಿಗಳು ಸಹ ಅಪಘಾತಕ್ಕೆ ಹೆಚ್ಚುವರಿ ಕಾರಣಗಳಾಗಿವೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಮಾಧ್ಯಮ ವರದಿಗಳ ಪ್ರಕಾರ, ಗಂಭೀರ ಗಾಯಗೊಂಡ ಮಹಿಳೆಯರೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐ ಚಂಡೀಗಢಕ್ಕೆ ಕಳುಹಿಸಲಾಗಿದೆ. ಬಸ್ ಚಾಲಕನ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಪೊಲೀಸ್ ವರದಿಗಳು ಸೂಚಿಸುತ್ತವೆ.

ಪಂಚಕುಲದ ಕಲ್ಕಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಚೌಧರಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

Exit mobile version