Site icon Vistara News

Road Accident : ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಮಂದಿಗೆ ಗಾಯ

Road Accident

ಅಂಬಾಲಾ: ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ (Road Accident) ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೈಷ್ಣೋದೇವಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಚಾಲಕ ಕುಡಿದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಪಘಾತದಲ್ಲಿ ಬದುಕುಳಿದವರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಒಂದೇ ಕುಟುಂಬಕ್ಕೆ ಸೇರಿದವರು ಮತ್ತು ಘಟನೆ ನಡೆದಾಗ ಅವರೆಲ್ಲರೂ ನಿದ್ರೆಯಲ್ಲಿದ್ದರು ಎಂದು ಅವರು ಹೇಳಿದ್ದಾರೆ.

ಸೇತುವೆಯಿಂದ ಪಲ್ಟಿ ಹೊಡೆದ ಕಾರು, ತಿರುಪತಿಗೆ ಹೋಗುತ್ತಿದ್ದ 4 ಮಂದಿ ದುರ್ಮರಣ

ಹಾವೇರಿ: ಹಾವೇರಿ ಜಿಲ್ಲೆಯ (Haveri news) ರಾಣೇಬೆನ್ನೂರಿನಲ್ಲಿ ಭೀಕರ ಆಪಘಾತವೊಂದು (Road Accident) ಸಂಭವಿಸಿದ್ದು, ತಿರುಪತಿಗೆ (Tirupati) ಯಾತ್ರಾರ್ಥಿಗಳಾಗಿ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: Bomb Threat : ಶಾಲೆಗೆ ಬಾಂಬ್​ ಬೆದರಿಕೆ ಮೇಲ್ ಕಳುಹಿಸಿದ ವಿದ್ಯಾರ್ಥಿಗಳು!

ಹಾವೇರಿಯಿಂದ ತಿರುಪತಿ ದೇವರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದ ಕುಟುಂಬ ಈ ಭೀಕರ ಅಪಘಾತಕ್ಕೀಡಾಗಿದೆ. ರಾಣೆಬೇನ್ನೂರಿನ ಹಲಗೇರಿ ಬೈಪಾಸ್ ಬಳಿ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪಲ್ಟಿ ಹೊಡೆದಿದೆ. ಎನ್ಎಚ್ 4 ಪಿಬಿ ರಸ್ತೆಯಿಂದ ಹಾರಿ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದೆ.

ಮೃತಪಟ್ಟವರನ್ನು ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22), ಚೇತನಾ ಪ್ರಭುರಾಜ ಸಮಗಂಡಿ (7), ಪವಿತ್ರಾ ಪ್ರಭುರಾಜ ಸಮಗಂಡಿ‌ (28) ಎಂದು ಗುರುತಿಸಲಾಗಿದೆ. ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version