ವಿಸ್ತಾರ ಸಂಪಾದಕೀಯ: 7ನೇ ವೇತನ ಆಯೋಗ ಬೇಡಿಕೆ: ಸರ್ಕಾರಿ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ Vistara News
Connect with us

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: 7ನೇ ವೇತನ ಆಯೋಗ ಬೇಡಿಕೆ: ಸರ್ಕಾರಿ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ

ನೌಕರರ ಬೇಡಿಕೆಗಳನ್ನು ಪರಿಗಣಿಸಿ ಇವುಗಳಲ್ಲಿ ನ್ಯಾಯಯುತವಾದುದು ಯಾವುದು ಎಂಬುದನ್ನು ಪರಿಗಣಿಸಿ, ಅವು ಲಭ್ಯವಾಗುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ. ಸಕಾಲಿಕ ವೇತನ ಪರಿಷ್ಕರಣೆ ಈ ಹಣದುಬ್ಬರದ ಕಾಲದಲ್ಲಿ ಅಗತ್ಯ ಕೂಡ.

VISTARANEWS.COM


on

Koo

ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆಗಾಗಿ ರಚಿಸಲಾಗಿರುವ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸಂಬಂಧಿಸಿದಂತೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಈ ಬಾರಿಯ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡದಿರುವುದರಿಂದ ಆಕ್ರೋಶಗೊಂಡಿರುವ ರಾಜ್ಯ ಸರ್ಕಾರಿ ನೌಕರರು ಫೆಬ್ರವರಿ 23ರಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಮೊದಲ ಹಂತದಲ್ಲಿ ಕರ್ತವ್ಯಕ್ಕೆ ಗೈರುಹಾಜರಾಗುವುದು, ಇದಕ್ಕೆ ಸರ್ಕಾರ ಮಣಿಯದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ನೌಕರರು ಉದ್ದೇಶಿಸಿದ್ದಾರೆ. ಮುಷ್ಕರ ಶುರುವಾದರೆ ಚುನಾವಣೆಯ ಹೊಸ್ತಿಲಲ್ಲಿ ಸರ್ಕಾರ ಮತ್ತೊಂದು ಇಕ್ಕಟ್ಟಿನಲ್ಲಿ ಸಿಲುಕುವ ಸಾಧ್ಯತೆಗಳಿವೆ. ಸರ್ಕಾರಿ ಯಂತ್ರ ಸ್ತಬ್ಧವಾದರೆ ಇಡೀ ರಾಜ್ಯಕ್ಕೆ ಇದರ ಪರಿಣಾಮ ತಟ್ಟಬಹುದು. ಇದನ್ನು ನಿವಾರಿಸಿಕೊಳ್ಳಲು ಸರ್ಕಾರ ನೌಕರರ ಅಹವಾಲುಗಳತ್ತ ಗಮನ ಕೊಡಬೇಕಿದೆ.

ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿತ್ತು. ಈ ಕುರಿತು ಶಿಫಾರಸುಗಳನ್ನು ಮಾಡುವ ಮುನ್ನ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ಅರಿಯುವುದಕ್ಕಾಗಿ, ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿ ವೇತನ ಆಯೋಗ ಪ್ರಶ್ನಾವಳಿಗಳನ್ನು ಬಿಡುಗಡೆಗೊಳಿಸಿ ಸರ್ಕಾರಿ ನೌಕರರ ಸಂಘದಿಂದ ಸಲಹೆಗಳನ್ನು ಕೇಳಿತ್ತು. ಅದರಂತೆ ಸಂಘವು 65 ಪುಟಗಳ ವರದಿಯನ್ನು ತಯಾರಿಸಿ ಕೊಟ್ಟಿದೆ. ಆದರೆ ಈ ಬಗ್ಗೆ ಯಾವುದೇ ಘೋಷಣೆಗಳನ್ನು ಸರ್ಕಾರವು ಆಯವ್ಯಯದಲ್ಲಿ ಪ್ರಸ್ತಾಪಿಸದೇ ಇರುವುದರಿಂದ ನೌಕರರಲ್ಲಿ ನಿರಾಶೆ ಮೂಡಿರುವುದು ಸಹಜ.

ಹಾಗಾದರೆ ನೌಕರರ ಬೇಡಿಕೆಗಳೇನು? ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವಿದ್ಯಾರ್ಹತೆ, ಜವಾಬ್ದಾರಿಯ ಗುಣಮಟ್ಟ, ಕಾರ್ಯಕ್ಷಮತೆ, ಕಾರ್ಯಕ್ಷೇತ್ರದ ವ್ಯಾಪ್ತಿ, ಜೊತೆಗೆ ನೆರೆ ರಾಜ್ಯ ಮತ್ತು ಕೇಂದ್ರ ವೇತನ ಮತ್ತು ಭತ್ಯೆಗಳ ಹೋಲಿಕೆ ಮಾಡಿ ಅದಕ್ಕನುಗುಣವಾಗಿ ವೇತನ ನಿಗದಿ ಮಾಡಬೇಕು. ಕನಿಷ್ಠ 40% ಫಿಟ್‌ಮೆಂಟ್‌ನೊಂದಿಗೆ ಹಾಗೂ ಜೀವನ ನಿರ್ವಹಣೆಯನ್ನಾಧರಿಸಿ ವೇತನ ಏರಿಕೆ ಮಾಡಬೇಕು. ವೇತನ ಪರಿಷ್ಕರಣೆಗೆ ಅನುಕೂಲವಾಗುವ ಕೇಂದ್ರ ಮತ್ತು ಕೇರಳ ರಾಜ್ಯ ನೌಕರರ ವೇತನ-ಭತ್ಯೆಗಳನ್ನು ಪರಿಗಣಿಸುವುದು. ಕಚೇರಿ ವೇಳೆಯನ್ನು ಹೆಚ್ಚಿಸಿ, ವಾರದ ಕರ್ತವ್ಯದ ದಿನಗಳನ್ನು ಕಡಿಮೆ ಮಾಡಬೇಕು. ಒಬ್ಬ ಸರ್ಕಾರಿ ನೌಕರನಿಗೆ ಸೇವಾವಧಿಯಲ್ಲಿ ಕನಿಷ್ಠ 3-4 ಮುಂಬಡ್ತಿ ಅವಕಾಶ ಲಭ್ಯವಾಗಬೇಕು. ವಿಶೇಷ ಭತ್ಯೆ ದ್ವಿಗುಣಗೊಳಿಸಬೇಕು, ತುಟ್ಟಿಭತ್ಯೆಯನ್ನು ಕೇಂದ್ರ ನೌಕರರಿಗೆ ಸರಿಸಮಾನವಾಗಿ ನೀಡಬೇಕು. ವಾರ್ಷಿಕ ವೇತನ ಬಡ್ತಿ ದರ 3.04%ರಷ್ಟು ಏರಿಸಬೇಕು. ಇನ್ನು ಪಿಂಚಣಿಗೆ ಸಂಬಂಧಿಸಿ, ಕೆಲವು ರಾಜ್ಯಗಳು ಈಗಾಗಲೇ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿರುವ ಮಾದರಿಯಂತೆ ರಾಜ್ಯದಲ್ಲೂ ಅದನ್ನು ರದ್ದುಗೊಳಿಸಿ 2006ರಿಂದಲೇ ಅನ್ವಯವಾಗುವಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು- ಎಂಬಿತ್ಯಾದಿ ಬೇಡಿಕೆಗಳು ನೌಕರರ ವತಿಯಿಂದ ಬಂದಿವೆ.

ಇದನ್ನೂ ಓದಿ: Karnataka Budget 2023 : ಬಜೆಟ್‌ನಲ್ಲಿ ಪ್ರಸ್ತಾಪವಾಗದ 7ನೇ ವೇತನ ಆಯೋಗ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಈ ಎಲ್ಲ ಬೇಡಿಕೆಗಳನ್ನು ಪರಿಗಣಿಸಿ ಇವುಗಳಲ್ಲಿ ನ್ಯಾಯಯುತವಾದುದು ಯಾವುದು ಎಂಬುದನ್ನು ಪರಿಗಣಿಸಿ ನೌಕರರಿಗೆ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಕೈಯಲ್ಲಿದೆ. ಸಕಾಲಿಕ ವೇತನ ಪರಿಷ್ಕರಣೆ ಈ ಹಣದುಬ್ಬರದ ಕಾಲದಲ್ಲಿ ಅಗತ್ಯವಾಗಿದೆ. ಮಾರುಕಟ್ಟೆಯಲ್ಲಿ ಎಲ್ಲದರ ದರಗಳೂ ಏರುತ್ತಿರುವಾಗ, ತೆರಿಗೆ ಹಾಗೂ ಸಾಲದ ಬಡ್ಡಿದರಗಳೂ ಹೆಚ್ಚುತ್ತಿರುವಾಗ, ಜೀವನವೆಚ್ಚವೂ ಹೆಚ್ಚುತ್ತದೆ ಹಾಗೂ ಅದಕ್ಕನುಗುಣವಾಗಿ ವೇತನವೂ ಹೆಚ್ಚದೇ ಗತ್ಯಂತರವಿಲ್ಲ. ಆದರೆ ರಾಜ್ಯದಲ್ಲಿ ಸುಮಾರು 5.3 ಲಕ್ಷದಷ್ಟು ಸರ್ಕಾರಿ ನೌಕರರಿದ್ದಾರೆ. ಇಷ್ಟು ಮಂದಿಗೆ ವೇತನ ಮತ್ತಿತರ ಭತ್ಯೆಗಳ ಹೆಚ್ಚಳದಿಂದ ಖಜಾನೆಗೆ ಎಷ್ಟು ಹೊರೆಯಾಗಲಿದೆ ಎಂಬುದನ್ನೂ ಪರಿಗಣಿಸಬೇಕು. ಆರ್ಥಿಕ ಹೊರೆಯನ್ನೂ ಸಮತೋಲನ ಮಾಡಿಕೊಂಡು ನೌಕರರ ಬೇಡಿಕೆ ಈಡೇರಿಸುವತ್ತ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು, ಆಡಳಿತದಲ್ಲಿ ತಂತ್ರಜ್ಞಾನವನ್ನು ಹೆಚ್ಚಿಸುವುದು, ನೌಕರರಿಗೆ ತರಬೇತಿಯ ಮೂಲಕ ದಕ್ಷತೆ ಮತ್ತು ನೈಪುಣ್ಯ ಹೆಚ್ಚಿಸುವತ್ತ ಗಮನ ಹರಿಸಬೇಕು. ನೌಕರರು ಮುಷ್ಕರದ ಹಾದಿ ಹಿಡಿದು ಆಡಳಿತ ಯಂತ್ರ ಸ್ತಬ್ಧವಾಗದಂತೆ ಸರ್ಕಾರ ಈಗಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಅಂಕಣ

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

Raja Marga Column‌ : ಟಿವಿ ವಾಹಿನಿಗಳ ಮಕ್ಕಳ ರಿಯಾಲಿಟಿ ಶೋಗಳಿಗೆ ಸ್ವಲ್ಪ ಬ್ರೇಕ್ ಬೇಕಿದೆ! ಯಾಕೆಂದರೆ ಅವು ಮಕ್ಕಳ ಬಾಲ್ಯವನ್ನು ಕಸಿಯುತ್ತಿವೆ. ದುಡ್ಡಿನ ದಂಧೆಯಾಗುತ್ತಿವೆ. ಈ ಬಗ್ಗೆ ಎಚ್ಚರವಿರಲಿ.

VISTARANEWS.COM


on

Edited by

Reality Shows neads a break
ಇಲ್ಲಿ ಬಳಸಿದ ಎಲ್ಲ ಮಕ್ಕಳ ಚಿತ್ರಗಳು ಕೇವಲ ಪ್ರಾತಿನಿಧಿಕ
Koo
RAJAMARGA

ಪ್ರಣವ್ ಧನವಾಡೇ : ಈ ಹೆಸರನ್ನು ಎಲ್ಲೋ ಕೇಳಿದ ನೆನಪು ನಿಮಗಿದೆಯಾ?
ಹೌದು! 2016ರಲ್ಲಿ ಮುಂಬೈಯ ಈ 16 ವರ್ಷದ ಹುಡುಗ (Pranav Dhanawade) ಒಂದು ಕ್ಲಾಸ್ ಒನ್ ಕ್ರಿಕೆಟ್ ಪಂದ್ಯದಲ್ಲಿ ಬರೋಬ್ಬರಿ 1000+ ರನ್ ಬಾರಿಸಿ ಮಿಂಚಿದ್ದ! ಅವನಿಗೆ ಆ ದಿನಗಳಲ್ಲಿ ಜಾಗತಿಕ ಮಟ್ಟದ ಪ್ರಚಾರ ಸಿಕ್ಕಿತ್ತು. ಸಚಿನ್ ತೆಂಡುಲ್ಕರ್ (Sachin Tendulkar) ಜೊತೆಗೆ ಆತನ ಭರ್ಜರಿ ಹೋಲಿಕೆಯು ಕೂಡ ನಡೆಯಿತು.ನೂರಾರು ಸನ್ಮಾನಗಳು ಮತ್ತು ನಗದು ಬಹುಮಾನಗಳು ಆತನಿಗೆ ದೊರೆತವು!

ಆದರೆ ಅವನು ಅದೇ ವೇಗದಲ್ಲಿ ಮುಂದೆ ಹೋಗಿರುತ್ತಿದ್ದರೆ ಅವನಿಗೆ ಈಗ 23 ವರ್ಷ ಆಗಿರಬೇಕಿತ್ತು! ಅವನು ಕನಿಷ್ಠ ಪಕ್ಷ ರಣಜಿ ಪಂದ್ಯ ಆದರೂ ಆಡಬೇಕಿತ್ತು! ಆದರೆ ಅವನು ಈಗ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎನ್ನುವುದು ನಮಗೆ ಯಾರಿಗೂ ಗೊತ್ತಿಲ್ಲ! (Raja Marga Column)

ನಮ್ಮ ಹೆಚ್ಚಿನ ಟಿವಿ ರಿಯಾಲಿಟಿ ಶೋ (Reality Show) ಹೀರೋಗಳ ಕಥೆ ಕೂಡ ಹೀಗೆಯೇ ಇದೆ!

ಖಾಸಗಿ ಟಿವಿಯ ವಾಹಿನಿಗಳಲ್ಲಿ (Private TV Channels) ಇಂದು ಪ್ರಸಾರ ಆಗುತ್ತಿರುವ ನೂರಾರು ರಿಯಾಲಿಟಿ ಶೋಗಳು ಮತ್ತು ಸ್ಪರ್ಧೆಗಳು ಹೆಚ್ಚು ಪ್ರಚಾರದಲ್ಲಿವೆ. ಅಂತ ಹಲವು ಟಿವಿ ಶೋಗಳು ಹಿಂದೆ ಕೂಡ ನಡೆದಿವೆ. ಅದರ ಎಲ್ಲ ವಿಜೇತರ ಪ್ರತಿಭೆಯ ಮೇಲೆ ಗೌರವ ಇರಿಸಿಕೊಂಡು ನಾನು ಕೇಳುವ ಒಂದೇ ಪ್ರಶ್ನೆ — ಅದರ ಸಾವಿರಾರು ವಿಜೇತರು ಮುಂದೆ ಎಲ್ಲಿಗೆ ಹೋಗುತ್ತಾರೆ? ಅವರ ಅನನ್ಯ ಪ್ರತಿಭೆಗಳನ್ನು ಅವರು ಎಷ್ಟು ಬೆಳೆಸಿದ್ದಾರೆ? ಅದರಿಂದ ನಾಡಿನ ಸಂಸ್ಕೃತಿಗೆ ಎಷ್ಟು ಲಾಭ ಆಗಿದೆ?

Pranav Dantwade
ಪ್ರಣವ್‌ ದಂತವಾಡೆ

ಶಾಲಾ ಮಟ್ಟದಲ್ಲಿ ನೂರಾರು ಸಾಂಸ್ಕೃತಿಕ ಸ್ಪರ್ಧೆಗಳು, ಪ್ರತಿಭಾ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲಿ ವಿಜೇತರ ಘೋಷಣೆ ಆಗುತ್ತದೆ. ಅದರಲ್ಲಿ ಎಷ್ಟು ಜನರು ಮುಂದೆ ಅವರ ಪ್ರತಿಭೆಯನ್ನು ತಮ್ಮ ಹೊಟ್ಟೆಪಾಡಾಗಿ ಮಾಡಿಕೊಳ್ಳುತ್ತಾರೆ? ಎಷ್ಟು ಮಂದಿ ತಮ್ಮ ಕಲೆಯನ್ನು ಪ್ರೀತಿಸುತ್ತಾರೆ? ತಮ್ಮ ಕಲೆಯಿಂದ ಸಮಾಜವನ್ನು ಬೆಳಗುತ್ತಾರೆ? ಕನಿಷ್ಠ ಪಕ್ಷ ಆತ್ಮ ಸಂತೋಷಕ್ಕಾಗಿ ಆದರೂ ಆ ಕಲೆಯನ್ನು ಮುಂದೆ ಕಲಿಯುತ್ತಾರಾ?

ಈ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತ ಹೋದಾಗ ನಮಗೆ ಹಲವು ಕಡೆ ನಿರಾಸೆಯೇ ಆಗುತ್ತದೆ ಮತ್ತು ಕಹಿ ಸತ್ಯಗಳು ಗೋಚರ ಆಗುತ್ತವೆ.

ಹಾಗಾದರೆ ಟಿವಿ ವಾಹಿನಿಗಳಿಂದ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಿಂದ ಪ್ರತಿಭಾ ಶೋಧ ಆಗ್ತಾ ಇಲ್ಲವೇ ಎನ್ನುವ ಪ್ರಶ್ನೆ ನೀವು ಕೇಳಬಹುದು. ಖಂಡಿತ ಆಗುತ್ತಿದೆ! ಆದರೆ ಅದರ ಅಡ್ಡ ಪರಿಣಾಮಗಳ ಬಗ್ಗೆ ಇದುವರೆಗೆ ಯಾರೂ ಯೋಚನೆ ಮಾಡಿದ ಹಾಗಿಲ್ಲ.

Childrens reality Shows

ಉದಾಹರಣೆಗೆ ಇಂದು ಬಾಲಿವುಡನ ಹಿನ್ನೆಲೆ ಗಾಯನ ಲೋಕದ ಸೂಪರ್ ಸ್ಟಾರ್‌ಗಳಾದ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಇವರೆಲ್ಲರೂ ಬೇರೆ ಬೇರೆ ರಿಯಾಲಿಟಿ ಶೋಗಳ ಮೂಲಕ ಬೆಳಕಿಗೆ ಬಂದವರು. ಕನ್ನಡದಲ್ಲಿಯೂ ಅಂತವರು ತುಂಬಾ ಮಂದಿ ಇದ್ದಾರೆ. ಆದರೆ ಅವರಲ್ಲಿ ಹೆಚ್ಚಿನ ಸ್ಟಾರ್‌ಗಳು ಒಳ್ಳೆಯ ನಿರ್ಣಾಯಕರ ಮೂಲಕ ಆಯ್ಕೆ ಆದವರು. ಇನ್ನೂ ವಿವರವಾಗಿ ಹೇಳಬೇಕೆಂದರೆ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಆಯ್ಕೆ ಆಗುವಾಗ ಲತಾ ಮಂಗೇಶ್ಕರ್ ಅಂತವರು ನಿರ್ಣಾಯಕರಾಗಿದ್ದರು!

ಪ್ರತಿಭೆಗಳಿಗೆ ಆಗ ಒಂದಿಷ್ಟೂ ಅನ್ಯಾಯ ಆಗುತ್ತಾ ಇರಲಿಲ್ಲ.

Shreya Ghoshal

ಅಪಾಯಕಾರಿ ಆದ ಇಂಟರ್ನೆಟ್ ವೋಟಿಂಗ್!

ಆದರೆ ಮುಂದೆ ಯಾವಾಗ ಇಂಟರ್ನೆಟ್ ಮೆಸೇಜ್‌ಗಳ ಮೂಲಕ ವೋಟಿಂಗ್ ಆರಂಭ ಆಯಿತೋ ಅಲ್ಲಿಗೆ ದುಡ್ಡು, ಪ್ರಭಾವ ಇದ್ದವರು ವೋಟುಗಳನ್ನು ಖರೀದಿ ಮಾಡುವುದು ಆರಂಭ ಆಯಿತು. ನಮಗೆ ವೋಟ್ ಮಾಡಿ ಎಂದು ಕೈ ಮುಗಿದು ಭಿಕ್ಷೆ ಬೇಡುವ ದೈನ್ಯತೆಯು ಆ ಪ್ರತಿಭೆಗಳಿಗೆ ಬರಬಾರದಿತ್ತು.

ಕನ್ನಡದಲ್ಲಿ ಕೂಡ ಆರಂಭದ ಎದೆ ತುಂಬಿ ಹಾಡುವೆನು, ಕಾಮಿಡಿ ಕಿಲಾಡಿ, ಮಜಾ ಟಾಕೀಸ್, ಡ್ರಾಮಾ ಜೂನಿಯರ್ ರಿಯಾಲಿಟಿ ಶೋನಲ್ಲಿ ಗೆದ್ದವರು ಮುಂದೆ ನೂರಾರು ಅವಕಾಶಗಳನ್ನು ಪಡೆದರು. ಅವರ ಪ್ರತಿಭೆಯನ್ನು ನಾಡು ಗುರುತಿಸಿ ಬೆಳೆಸಿತು.

Childrens reality Shows

ಆದರೆ ಇಲ್ಲಿ ಕೂಡ ಇತ್ತೀಚಿನ ವರ್ಷಗಳಲ್ಲಿ ಯಾವಾಗ ಇಂಟರ್ನೆಟ್ ವೋಟಿಂಗ್ ಆರಂಭ ಆಯಿತೋ ಅಲ್ಲಿಂದ ವೋಟ್ ಖರೀದಿಗಳು, ಪ್ರಭಾವಗಳು ಆರಂಭ ಆದವು. ಆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತು ಕೊಡುವ ಹಲವು ಶಾಲೆಗಳು ಮಹಾನಗರಗಳಲ್ಲಿ ನಾಯಿಕೊಡೆಗಳ ಹಾಗೆ ಆರಂಭ ಆದವು. ಹೆತ್ತವರು ತಮ್ಮ ಮಕ್ಕಳನ್ನು ಸೂಪರ್ ಹೀರೋ ಮಾಡುವ ಜಿದ್ದಿಗೆ ಬಿದ್ದು ಅಂತಹ ಶಾಲೆಗಳಿಗೆ ದುಡ್ಡು ಸುರಿಯಲು ತೊಡಗಿದರು.

ಆದರೆ ಇಲ್ಲಿ ಕೂಡ ಬಡವರ ಮಕ್ಕಳು, ಗ್ರಾಮಾಂತರ ಭಾಗದ ಪ್ರತಿಭೆಗಳು ನಿಜವಾಗಿಯೂ ಅವಕಾಶಗಳಿಂದ ವಂಚಿತರಾದರು!

ಒಂದು ಸಮೀಕ್ಷೆ ಮಾಡಿ ನೋಡಿ. ಇತ್ತೀಚಿನ ರಿಯಾಲಿಟಿ ಶೋಗಳಲ್ಲಿ ಗೆದ್ದವರಲ್ಲಿ ಎಷ್ಟು ಮಂದಿ ಹಳ್ಳಿಯ ಮಕ್ಕಳು ಇದ್ದಾರೆ? ಎಷ್ಟು ಮಂದಿ ಬಡವರ ಮಕ್ಕಳಿದ್ದಾರೆ? ಎಷ್ಟು ಮಂದಿ ಕನ್ನಡ ಮಾಧ್ಯಮದ ಮಕ್ಕಳಿದ್ದಾರೆ?
ಖಂಡಿತ ಇದ್ದಾರೆ. ಆದರೆ ಅವರ ಪ್ರಮಾಣ ತುಂಬಾ ಕಡಿಮೆ ಇದೆ!

ಜಗತ್ತಿನ ಪ್ರತೀ ಮಗುವೂ ಪ್ರತಿಭಾವಂತ ಮಗುವೇ!

ಈ ಜಗತ್ತಿನ ಪ್ರತೀ ಮಕ್ಕಳೂ ಪ್ರತಿಭಾವಂತರೇ ಆಗಿದ್ದಾರೆ. ಅವರಲ್ಲಿ ಒಂದಲ್ಲ ಒಂದು ಪ್ರತಿಭೆಯನ್ನು ಲೋಡ್ ಮಾಡಿ ಭಗವಂತ ಈ ಜಗತ್ತಿಗೆ ಅವರನ್ನು ಕಳುಹಿಸಿರುತ್ತಾನೆ. ನೀವು ಯಾವ ಮಕ್ಕಳನ್ನು ವಿಶೇಷ ಚೇತನ ಮಕ್ಕಳು ಎಂದು ಕರೆಯುತ್ತೀರೋ ಅವರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯ ಪೋಷಣೆಗೆ ವೇದಿಕೆ ಬೇಕು. ತರಬೇತು ಬೇಕು. ಹೆತ್ತವರ, ಶಿಕ್ಷಕರ, ಸಮಾಜದ ಪ್ರೋತ್ಸಾಹ ಬೇಕು.

Childrens reality Shows

ಅವರ ಶಾಪ ಆದರೆ ನಮ್ಮ ಮಕ್ಕಳು ಎಷ್ಟು ಪ್ರತಿಭೆ ಹೊಂದಿದ್ದಾರೆ ಎಂದರೆ ಅವರು ಸ್ಪರ್ಧೆಯ ಸೋಂಕಿಲ್ಲದೆ ಕೂಡ ತಮ್ಮ ಅಗಾಧವಾದ ಪ್ರತಿಭೆಯನ್ನು ಬೆಳೆಸುವ ಸಾಮರ್ಥ್ಯವನ್ನು ಖಂಡಿತವಾಗಿ ಹೊಂದಿರುತ್ತಾರೆ! ಅವರನ್ನು ರೇಸಿನ ಕುದುರೆ ಮಾಡಿ ರೇಸಿಗೆ ನಿಲ್ಲಿಸುವ ಅಗತ್ಯ ಖಂಡಿತ ಇಲ್ಲ!

ಸ್ಪರ್ಧೆಗಳ ಬಗ್ಗೆ ಸಾಹಿತಿ ಶಿವರಾಮ ಕಾರಂತರು ಹೇಳಿದ್ದೇನು?

ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ಕೋಟ ಶಿವರಾಮ ಕಾರಂತರು ಚಿಕ್ಕ ಮಕ್ಕಳನ್ನು ಸ್ಪರ್ಧೆಗೆ ನಿಲ್ಲಿಸಬೇಡಿ ಎಂದು ಹೇಳುತ್ತಿದ್ದರು. 12 ವರ್ಷಗಳವರೆಗೆ ಮಕ್ಕಳಿಗೆ ಯಾವ ಸ್ಪರ್ಧೆಯನ್ನು ಕೂಡ ಮಾಡಬಾರದು ಎನ್ನುವುದು ಅವರ ಖಚಿತ ಅಭಿಪ್ರಾಯ. ಸ್ಪರ್ಧೆ ಮಾಡಿದರೂ ಎಲ್ಲ ಮಕ್ಕಳಿಗೂ ಸಮಾನ ಬಹುಮಾನ ಕೊಡಿ ಎನ್ನುತ್ತಿದ್ದರು ಕಾರಂತರು.

Kota Shivarama Karant

ಆದರೆ ಇಂದು ಆಗುತ್ತಿರುವುದೆನು?

ಆದರೆ ಸ್ಪರ್ಧೆಯ ಗೆಲುವನ್ನು ತಮ್ಮ ಪ್ರತಿಷ್ಠೆಯನ್ನಾಗಿ ಮಾಡಿಕೊಂಡ ಶಿಕ್ಷಕರು ಮತ್ತು ಹೆತ್ತವರು ಮಕ್ಕಳನ್ನು ರೇಸಿನ ಕುದುರೆ ಮಾಡಿ ಈಗಾಗಲೇ ನಿಲ್ಲಿಸಿ ಆಗಿದೆ! ಈ ಸ್ಪರ್ಧೆಯಲ್ಲಿ ಸೋತವರ ಕಣ್ಣೀರನ್ನು ಮತ್ತು ಗೆದ್ದು ಬೀಗಿದವರ ಆನಂದ ಬಾಷ್ಪವನ್ನು ತಮ್ಮ ಟಿ ಆರ್ ಪಿ ಸರಕನ್ನಾಗಿ ಮಾಡಿಕೊಂಡ ಟಿವಿ ವಾಹಿನಿಗಳಿಗೆ ಈ ಸ್ಪರ್ಧೆಗಳು ಬೇಕೇ ಬೇಕು! ಮಕ್ಕಳ ಗೆಲುವನ್ನು ತಮ್ಮ ಪ್ರತಿಷ್ಠೆ ಎಂದು ಭಾವಿಸುವ ಹೆತ್ತವರು ಇರುವವರೆಗೆ ಈ ಮಕ್ಕಳ ರಿಯಾಲಿಟಿ ಶೋಗಳು ಖಂಡಿತ ನಿಲ್ಲುವುದಿಲ್ಲ. ಈ ಸ್ಪರ್ಧೆಗಳು ಮೆಗಾ ಮನರಂಜನೆಯ ಭಾಗ ಎಂದು ಪರಿಗಣಿಸುವ ವೀಕ್ಷಕರು ಕೂಡ ರಿಯಾಲಿಟಿ ಶೋ ಬೇಕು ಅಂತಾರೆ!

ತಮ್ಮ ಮಕ್ಕಳನ್ನು ಸೂಪರ್ ಹೀರೋ ಅಥವ ಸೂಪರ್ ಹೀರೋಯಿನ್ ಮಾಡಲು ಹೊರಟ ಹೆತ್ತವರು ಮಕ್ಕಳ ಬಾಲ್ಯವನ್ನು ಬರಿದು ಮಾಡುತ್ತಿದ್ದಾರೆ. ತಮ್ಮ ಮಕ್ಕಳು ಒಮ್ಮೆ ಟಿವಿಯಲ್ಲಿ ಕಂಡರೆ ಸಾಕು ಎಂದು ತೆವಲಿಗೆ ಪೋಷಕರು ಬಿದ್ದಿರುವ ಈ ದಿನಗಳಲ್ಲಿ ಅವರು ಬುದ್ಧಿ ಕಲಿಯುವುದು ಯಾವಾಗ?

Reality Shows in TV

ಇಲ್ಲೊಬ್ಬರು ತಾಯಿ ತನ್ನ ಎರಡನೇ ಕ್ಲಾಸಿನ ಮುಗ್ಧವಾದ ಮಗಳನ್ನು ದಿನವೂ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಲಘು ಸಂಗೀತ, ಕರಾಟೆ, ಚೆಸ್, ಕ್ರಿಕೆಟ್, ಯಕ್ಷಗಾನ, ಬ್ಯಾಡ್ಮಿಂಟನ್, ಸ್ವಿಮ್ಮಿಂಗ್ ಕೋಚಿಂಗ್ ಎಂದೆಲ್ಲ ಉಸಿರು ಬಿಗಿ ಹಿಡಿದು ಓಡುತ್ತಿರುವಾಗ ಆ ಮುಗ್ಧ ಮಗುವಿನ ಮೇಲಾಗುತ್ತಿರುವ ಒತ್ತಡವನ್ನು ನನಗೆ ಊಹೆ ಮಾಡಲು ಕಷ್ಟ ಆಗುತ್ತಾ ಇದೆ! ಯಾವುದೇ ಕಲಿಕೆಯು ಮಕ್ಕಳಿಗೆ ಹೊರೆ ಆಗಬಾರದು ಎಂಬ ಸಾಮಾನ್ಯ ಪ್ರಜ್ಞೆಯು ಅಂತಹ ಹೆತ್ತವರಿಗೆ ಬೇಡವಾ?

ಇದನ್ನೂ ಓದಿ: Raja Marga Column : ನೀವು ಜ್ಯೂಲಿ ನೋಡಿದ್ದೀರಾ? ಇದು KGFಗೂ ಮೊದಲು ಬಾಲಿವುಡ್‌ನ ಅಹಂ ಮುರಿದ ಸಿನಿಮಾ

ಡ್ಯಾಡಿ ನಂಬರ್ ಒನ್, ಮಮ್ಮಿ ನಂಬರ್ ಒನ್ ಮೊದಲಾದ ನಾನಸೆನ್ಸ್ ಸ್ಪರ್ಧೆಯ ಮೂಲಕ ಅಪ್ಪ, ಅಮ್ಮನ ಪ್ರೀತಿಯು ಅಳೆಯಲ್ಪಡಬೇಕಾ?

ನನ್ನ ಸಲಹೆ ಏನೆಂದರೆ ಮುಂದಿನ ಕೆಲವು ವರ್ಷಗಳ ಕಾಲ ಎಲ್ಲ ಟಿವಿ ವಾಹಿನಿಗಳ ಸ್ಪರ್ಧಾತ್ಮಕವಾದ ರಿಯಾಲಿಟಿ ಶೋಗಳನ್ನು ನಿಲ್ಲಿಸುವುದು ಒಳ್ಳೆಯದು! ಅಥವಾ ಅವುಗಳಿಗೆ ಒಂದು ಸಣ್ಣ ಬ್ರೇಕ್ ಆದರೂ ಬೇಕು. ವರ್ಷಾನುಗಟ್ಟಲೆ ಈ ಸ್ಪರ್ಧೆಗಳು ಮುಂದುವರಿದರೆ ಆ ಮಕ್ಕಳ ಶಿಕ್ಷಣದ ಮೇಲೆ ಆಗುವ ಕರಾಳತೆಯ ಬಗ್ಗೆ ಕೂಡ ನಾವು ಯೋಚನೆ ಮಾಡಬೇಕು ಅಲ್ಲವೇ?

ರಿಯಾಲಿಟಿ ಶೋಗಳ ಹಂಗಿಲ್ಲದೆ ಇಂದು ಸ್ಟಾರ್ ಆಗಿ ಮಿಂಚುತ್ತಿರುವ ನೂರಾರು ಪ್ರತಿಭೆಗಳು ನನ್ನ ಪಟ್ಟಿಯಲ್ಲಿ ಇವೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು.

Continue Reading

ಕರ್ನಾಟಕ

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.

VISTARANEWS.COM


on

Edited by

Vistara Editorial, Janata Darshan by CM must appreciated
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್‌ ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.

ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್‌; ಭಾರತದಲ್ಲಿ ರೈಲು ಕ್ರಾಂತಿ

ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಪ್ರಮುಖ ಸುದ್ದಿ

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Edited by

Dina Bhavishya
Koo

ಚಂದ್ರನು ಮಂಗಳವಾರ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ಹಾಗೂ ತುಲಾ, ವೃಶ್ಚಿಕ ರಾಶಿಯವರು ಹೂಡಿಕೆ ವ್ಯವಹಾರವನ್ನು ಮಾಡಬೇಡಿ. ಮೇಷ, ತುಲಾ, ಮೀನ ರಾಶಿಯವರು ಮಾತಿನಲ್ಲಿ ಹಿಡಿತವಿರಲಿ. ವೃಷಭ ರಾಶಿಯವರು ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ತೊಡಗಿದ್ದರೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-09-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ:
ದ್ವಾದಶಿ 25:45 ವಾರ: ಮಂಗಳವಾರ
ನಕ್ಷತ್ರ: ಶ್ರವಣ 09:40 ಯೋಗ: ಸುಕರ್ಮ 11:44
ಕರಣ: ಭವ 15:24 ಅಮೃತಕಾಲ : ರಾತ್ರಿ 09:52 ಯಿಂದ 11:18 ರವರೆಗೆ
ದಿನದ ವಿಶೇಷ : ಶ್ರವಣ ದ್ವಾದಶಿ, ವಾಮನ ಜಯಂತಿ, ಕ್ಷೀರ ವ್ರತಾರಂಭ

ಸೂರ್ಯೋದಯ : 06:13  ಸೂರ್ಯಾಸ್ತ : 06:46

ರಾಹುಕಾಲ: ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ
: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯು ನಿಮ್ಮ ಮನಸ್ಸಿಗೆ ನೋವು ತರಬಹುದು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಇದರಿಂದ ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರಬಹುದು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕವಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಜ್ಯೋತಿಷ್ಯಕ್ಕೆ ಶ್ರದ್ಧೆ, ಭಕ್ತಿ ಎಷ್ಟು ಮುಖ್ಯ

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ.ಆರೋಗ್ಯ, ಉದ್ಯೋಗದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

Continue Reading

ಕ್ರಿಕೆಟ್

Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!

Babaz Azam: ಪಾಕಿಸ್ತಾನ ಕ್ರಿಕೆಟ್ ನಾಯಕ ಅಜಮ್ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂಥ ಪ್ರಕರಣ ನಡೆದಿದೆ.

VISTARANEWS.COM


on

Edited by

Pakistan Cricket Team Skipper Babaz azam fined exceeding speed limit
Koo

ನವದೆಹಲಿ: ಕ್ರಿಕೆಟ್‌ ಜಗತ್ತಿನಲ್ಲಿ ಸದ್ಯ ಟಾಪ್ ಬ್ಯಾಟರ್‌ಗಳಲ್ಲಿ ಒಬ್ಬರಾಗಿರುವ ಹಾಗೂ ಪಾಕಿಸ್ತಾನದ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ (Pakistan Cricket Team Skipper Babar Azam) ಅತಿ ವೇಗದ ಕಾರ್ (Audi Car) ಚಾಲನೆಗಾಗಿ ದಂಡ ಕಟ್ಟಿದ್ದಾರೆ. ಟೈಮ್ಸ್ ಆಫ್ ಕರಾಚಿ ಪತ್ರಿಕೆಯ ಪ್ರಕಾರ, ಪ್ರಕಾರ ವೇಗದ ಮಿತಿಯನ್ನು ಮೀರಿದ್ದಕ್ಕಾಗಿ ಅಜಮ್ ಅವರಿಗೆ ಪಂಜಾಬ್ ಮೋಟರ್‌ವೇ ಪೊಲೀಸರು (Punjab Motarway Police) ದಂಡ ವಿಧಿಸಿದ್ದಾರೆ. ಟ್ರಾಫಿಕ್ ರೂಲ್ಸ್ ಉಲ್ಲಂಘನೆಗಾಗಿ ಬಾಬರ್ ಅಜಮ್ ದಂಡ ಕಟ್ಟುತ್ತಿರುವುದು ಇದೇ ಮೊದಲೇನಲ್ಲ!

ಪಾಕಿಸ್ತಾನದ ಕ್ರಿಕೆಟ್ ತಂಡದ ನಾಯಕರಾಗಿರುವ ಬಾಬರ್ ಅಜಮ್ ನಿಯಮ ಪಾಲನೆಯಲ್ಲಿ ಮೇಲ್ಪಂಕ್ತಿ ಹಾಕಬೇಕಿತ್ತು. ಆದರೆ, ಪೊಲೀಸರು ಬಾಬರ್ ಅಜಂ ಕಾರನ್ನು ತಡೆದು ನಿಲ್ಲಿಸಿರುವುದು ಇದೇ ಮೊದಲಲ್ಲ. ವರ್ಷದ ಆರಂಭದಲ್ಲಿ, ಸರಿಯಾದ ನಂಬರ್ ಪ್ಲೇಟ್ ಇಲ್ಲದಿದ್ದಕ್ಕಾಗಿ ಅವರು ಸಿಕ್ಕಿಬಿದ್ದರು. ಆದರೆ ಯಾವುದೇ ಮೊತ್ತವನ್ನು ದಂಡ ವಿಧಿಸಲಿಲ್ಲ. ಆದರೆ, ಈಗ ಹೆದ್ದಾರಿಯಲ್ಲಿ ಆಡಿ ಕಾರ್ ಚಾಲನೆ ಮಾಡುವಾಗ ಬಾಬರ್ ಅವರು ವೇಗದ ಮಿತಿಯನ್ನು ಮೀರಿದ್ದರು. ಅಂತಿಮವಾಗಿ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ದಂಡವನ್ನೂ ವಿಧಿಸಿದ್ದಾರೆ. ಆದರೆ ದಂಡದ ಮೊತ್ತವನ್ನು ಪೊಲೀಸರು ಬಹಿರಂಗ ಪಡಿಸಿಲ್ಲ.

ಏತನ್ಮಧ್ಯೆ, ಅದೇ ದಿನ ಪಾಕಿಸ್ತಾನ ಕ್ರಿಕೆಟಿಗರಿಗೆ ಮುಂಬರುವ ಒಂದು ದಿನದ ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ವೀಸಾ ನೀಡಲಾಗುತ್ತಿದೆ. ವಿಶ್ವಕಪ್ ಪಂದ್ಯಾವಳಿಯು ಅಭಿಯಾನವು ಅಕ್ಟೋಬರ್ 5 ರಂದು ಪ್ರಾರಂಭವಾಗಲಿದೆ. ತಂಡವು ಸೆಪ್ಟೆಂಬರ್ 27ರ ಮುಂಜಾನೆ ಮತ್ತು ಸಂಜೆ ದುಬೈಗೆ ಪ್ರಯಾಣಿಸಲಿದೆ. ಅಲ್ಲಿಂದ ಅವರು ಹೈದರಾಬಾದ್ ತಲುಪುತ್ತಾರೆ ಮತ್ತು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದ್ದಾರೆ.

ಈ ಸುದ್ದಿಯನ್ನೂ ಓದಿ: Babar Azam | ಲೀಕ್​ ಆಗಿರುವ ವಿಡಿಯೊ ನನ್ನದಲ್ಲ, ನಾನವನಲ್ಲ ಎಂದ ಪಾಕ್​ ತಂಡದ ನಾಯಕ ಬಾಬರ್​ ಅಜಮ್​

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಹಿಂದೆ ವೀಸಾ ನೀಡಿಕೆ ವಿಳಂಬವಾಗುತ್ತಿರುವ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸಿತ್ತು. ಅಲ್ಲದೇ, ಪರಿಸ್ಥಿತಿಯನ್ನು ಪರಿಹರಿಸುವ ಸಲುವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಯೊಂದಿಗೆ ನಿರಂತರ ಸಂಪರ್ಕದಲ್ಲಿತ್ತು. ಆ ನಂತರ ಅವರು ವೀಸಾಗಳನ್ನು ಪಡೆಯಲು ಸಾಧ್ಯವಾಯಿತು. ಅಂತಿಮವಾಗಿ ಭಾರತಕ್ಕೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ವಿಶೇಷ ಎಂದರೆ, ಪಾಕಿಸ್ತಾನಕ್ಕಿಂತ ಮೊದಲೇ ಆಫ್ಘಾನಿಸ್ತಾನಕ್ಕೆ ವೀಸಾ ದೊರೆತಿದೆ. ಸೆಪ್ಟೆಂಬರ್ 25ಕ್ಕಿಂತ ಮುಂಚೆಯೇ ಆಫ್ಘನ್ ಆಟಗಾರರಿಗೆ ವೀಸಾ ನೀಡಲಾಗಿದೆ.

ಕ್ರಿಕೆಟ್‌ನ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
pakistan Team
ಕ್ರಿಕೆಟ್2 mins ago

Pakistan team: ಕೊನೆಗೂ ಬಗೆಹರಿದ ಪಾಕ್ ತಂಡದ​ ವೀಸಾ ಸಮಸ್ಯೆ; ಬುಧವಾರ ಭಾರತ ಪ್ರಯಾಣ

bus auto accident
ದಕ್ಷಿಣ ಕನ್ನಡ4 mins ago

Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

home lizard
ಲೈಫ್‌ಸ್ಟೈಲ್26 mins ago

Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

healthy children food
Relationship54 mins ago

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Reality Shows neads a break
ಅಂಕಣ1 hour ago

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

bangalore bandh
Live News1 hour ago

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Vistara Editorial, Janata Darshan by CM must appreciated
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

Pakistan Cricket Team Skipper Babaz azam fined exceeding speed limit
ಕ್ರಿಕೆಟ್8 hours ago

Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!

Sara Sunny
ದೇಶ9 hours ago

Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ15 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ17 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ19 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ20 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌