ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್ (Rajkot) ನಗರದಲ್ಲಿರುವ ಗೇಮಿಂಗ್ ಜೋನ್ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ (Fire Accident) ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಈಗಲೂ ಅಗ್ನಿ ನಂದಿಸುವ ಕಾರ್ಯವನ್ನು ಅಗ್ನಿಶಾಮಕದ ದಳದ ಸಿಬ್ಬಂದಿಯು ಮುಂದುವರಿಸಿದ್ದಾರೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಜ್‌ಕೋಟ್ ಗೇಮಿಂಗ್ ಜೋನ್‌ಗೆ ನಿರಾಕ್ಷೇಪಣಾ ಪತ್ರವೇ (NOC) ಸಿಕ್ಕಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.
ಹೌದು, ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್ ಗೇಮಿಂಗ್ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್ ಮೇಯರ್ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್ ಸರ್ಟಿಫಿಕೇಟ್ ಇಲ್ಲದೆಯೇ ಗೇಮಿಂಗ್ ಜೋನ್ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ.
गुजरात के राजकोट में TRP Game Zone में भीषण आग लगने से 20 से अधिक लोगों सहित नन्हे बच्चो की मौत की घटना बेहद दुर्भाग्यपूर्ण व दुखद है। 😢😢#Rajkot pic.twitter.com/omCzAmxdhZ
— Nirmala Choudhary (@NirmalaChodhary) May 25, 2024
“ಟಿಆರ್‌ಪಿ ಗೇಮಿಂಗ್ ಜೋನ್‌ನಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗುತ್ತಿದೆ. ಕಾರ್ಯಾಚರಣೆಯು ಕೊನೆಯ ಹಂತಕ್ಕೆ ಬಂದಿದೆ. ಇದುವರೆಗೆ 20 ಶವಗಳು ಪತ್ತೆಯಾಗಿವೆ. ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು. ಯುವರಾಜ್ ಸಿಂಗ್ ಸೋಲಂಕಿ ಎಂಬುವವರಿಗೆ ಈ ಗೇಮಿಂಗ್ ಜೋನ್ ಸೇರಿದೆ. ನಿರ್ಲಕ್ಷ್ಯ ವಹಿಸಿದ ಕಾರಣ ಅವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ. ರಕ್ಷಣಾ ಕಾರ್ಯಾಚರಣೆ ಬಳಿಕ ಸಮಗ್ರ ತನಿಖೆ ನಡೆಸಲಾಗುವುದು” ಎಂದು ರಾಜ್‌ಕೋಟ್ ಕಮಿಷನರ್ ರಾಜು ಭಾರ್ಗವ ಮಾಹಿತಿ ನೀಡಿದ್ದಾರೆ.
#WATCH | Rajkot, Gujarat: Raju Bhargava, Police Commissioner, Rajkot, says, "Fire broke out in the TRP gaming zone in the afternoon. The rescue operations are on. The fire is under control. We are trying to retrieve as many bodies as possible. As of now, around 20 bodies have… https://t.co/Gd9N1Pd8ka pic.twitter.com/zKwIyaABHF
— ANI (@ANI) May 25, 2024
4 ಲಕ್ಷ ರೂ. ಪರಿಹಾರ
ರಾಜ್‌ಕೋಟ್ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ. ಇನ್ನು ಕಾರ್ಯಾಚರಣೆ ಕ್ಷಿಪ್ರವಾಗಿ ನಡೆಸಿ, ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Fire Accident: ಗೇಮಿಂಗ್ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 25 ಮಂದಿ ದಾರುಣ ಸಾವು