ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ (Actress Hema: ) ಅವರ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು ಮತ್ತೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಅವರು ಸಿಸಿಬಿ ಅಧಿಕಾರಿಗಳು ಒಂದು ದಿನದ ಕಸ್ಟಡಿಗೆ ತೆಗೆದುಕೊಂಡಿದ್ದರು. ಗುರುವಾರ ಆ ಅವಧಿ ಮುಕ್ತಾಯಗೊಂಡ ಕಾರಣ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಹಿಂದೆ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು ನಟಿ ಹೇಮಾ ಅವರನ್ನು ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು.
ಗುರುವಾರ ಆನೇಕಲ್ ಕೋರ್ಟ್‌ಗೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಆನೇಕಲ್‌ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬುಧವಾರ ಹೇಮಾರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅದಕ್ಕೆ ಸಮ್ಮತಿ ಸಿಕ್ಕಿತ್ತು.
ಏನಿದು ಪ್ರಕರಣ
ಮೇ 19ರಂದು ಎಲೆಕ್ಟ್ರಾನಿಕ್ ಸಿಟಿಯ (Electronic city) ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.
ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.
ನಾನೇನು ತಪ್ಪು ಮಾಡಿಲ್ಲ ಎಂದ ನಟಿ
ಕೋರ್ಟ್‌ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್‌ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್‌ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್‌ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.
ಎಂಡಿಎಂಎ ಸೇವಿಸಿದ್ದ ನಟಿ
ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
ಇದನ್ನೂ ಓದಿ: Prajwal Revanna : ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ
ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾ
ಬಿಲ್ಡಪ್ ಕೊಡಲು ಹೋಗಿ ಲಾಕ್ ಆಗಿದ್ದ ತೆಲುಗು ನಟಿ ಹೇಮಾ!
ರೇವ್ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್ ಕೊಡಲು ಹೋಗಿ ಲಾಕ್ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.
ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್ ಫ್ಲಾಪ್ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.