Site icon Vistara News

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Amith Shah

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ (Fact Check) ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಇದು ನಕಲಿ ಸೃಷ್ಟಿ ಎಂದು ಅಮಿತ್‌ ಶಾ ಸ್ಪಷ್ಪಪಡಿಸಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

ಮೂಲಗಳನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿ ಬಂಧನಗಳು ದೇಶಾದ್ಯಂತ ನಡೆಯುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ (ಐ 4 ಸಿ) ಡಿಸಿ ಸಿಂಕು ಶರಣ್ ಸಿಂಗ್ ಅವರು ಸಲ್ಲಿಸಿದ ದೂರಿನ ಪ್ರಕಾರ, “ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶದಿಂದ ಕೆಲವು ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ, ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಲಿಂಕ್​​ಗಳ ಸಂಗ್ರಹ

ಮುಂದಿನ ಕ್ರಮಕ್ಕಾಗಿ ವೀಡಿಯೊಗಳನ್ನು ಹಂಚಿಕೊಂಡ ಲಿಂಕ್​​ಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಎಕ್ಸ್ ಮತ್ತು ಫೇಸ್ಬುಕ್​​ಗೆ ಪತ್ರ ಬರೆದಿದ್ದು, ಅಮಿತ್ ಶಾ ಅವರ ನಕಲಿ ಕ್ಲಿಪ್​ನ ಮೂಲ ಮತ್ತು ವೀಡಿಯೊವನ್ನು ಮೊದಲು ಹಂಚಿಕೊಂಡ ಖಾತೆಯ ಬಗ್ಗೆ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಮಾಹಿತಿ ಕೋರಿದ್ದಾರೆ.

ಹಿಂಸಾಚಾರಕ್ಕೆ ಕಾರಣವಾಗಬಹುದು

ಗೃಹ ಸಚಿವರ ನಕಲಿ ವೀಡಿಯೊಗಳನ್ನು ಕಾಂಗ್ರೆಸ್ ಹರಡಿಸಿದೆ ಎಂಬುದಾಗಿ ಬಿಜೆಪಿ ಹೇಳಿದೆ. ಎಡಿಟ್ ಮಾಡಿದ ತುಣುಕುಗಳನ್ನು ಪ್ರಸಾರ ಮಾಡುವ ಮತ್ತು ಹಂಚಿಕೊಳ್ಳುವ ಮೂಲಕ ವಿರೋಧ ಪಕ್ಷವು ದೇಶದಲ್ಲಿ ಕೋಮು ಸಾಮರಸ್ಯವನ್ನು ಹರಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಕಾಂಗ್ರೆಸ್ ತೆಲಂಗಾಣ ಘಟಕವು ಅಮಿತ್ ಶಾ ಅವರ ನಕಲಿ ವೀಡಿಯೊವನ್ನು ಪ್ರಸಾರ ಮಾಡುತ್ತಿದೆ, ಇದು “ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ತೆಲಂಗಾಣ ಕಾಂಗ್ರೆಸ್ ಎಡಿಟ್ ಮಾಡಿದ ವೀಡಿಯೊವನ್ನು ಹರಡುತ್ತಿದೆ, ಇದು ಸಂಪೂರ್ಣವಾಗಿ ನಕಲಿ ಮತ್ತು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಮಾಳವೀಯ ಬರೆದಿದ್ದಾರೆ.

ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನೀಡಲಾಗುವ “ಅಸಂವಿಧಾನಿಕ ಮೀಸಲಾತಿ” ಪ್ರಯೋಜನಗಳನ್ನು ತೆಗೆದುಹಾಕುವ ಬಗ್ಗೆ ಮಾತ್ರ ಶಾ ಮಾತನಾಡುತ್ತಿದ್ದಾರೆ ಎಂದು ಅವರು ಗಮನಸೆಳೆದರು.

ಅನನುಕೂಲಕರ ಮೀಸಲಾತಿ

ಕಾಂಗ್ರೆಸ್ ಮತ್ತು ಅದರ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಮಿತ್ ಶಾ ತಮ್ಮ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದೆ ಅಸಂವಿಧಾನಿಕ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೀಸಲಾತಿ ಬಗ್ಗೆ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ತುಷ್ಟೀಕರಣಕ್ಕಾಗಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಮೂಲಕ ಮತ್ತು ಜಾಮಿಯಾ ಮತ್ತು ಎಎಂಯುನಂತಹ ಸಂಸ್ಥೆಗಳಲ್ಲಿ ಎಸ್ಸಿ-ಎಸ್ಟಿ ಮತ್ತು ಒಬಿಸಿಯನ್ನು ವಂಚಿತಗೊಳಿಸಲಾಗುತ್ತಿದೆ ಎಂದು” ಎಂದು ಶಾ ಆರೋಪಿಸಿದರು.

Exit mobile version