Site icon Vistara News

Lok Sabha Election : ಬಿಜೆಪಿ-ಜೆಡಿಎಸ್ ಜತೆಯಾಗಿ ಸ್ಪರ್ಧಿಸಿದರೆ ವಿಧಾನಸಭೆ ಚುನಾವಣೆಯಲ್ಲಿ 142 ಸ್ಥಾನ!

Lok Sabha Election

ಬೆಂಗಳೂರು: ಈ ಕ್ಷಣದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದರೆ ಮತ್ತು ಲೋಕಸಭಾ ಚುನಾವಣೆಯಂತೆಯೇ (Lok Sabha Election ) ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 142 ಸ್ಥಾನಗಳನ್ನು ಗೆಲ್ಲಲಿದೆ. ಈ ಮೂಲಕ ಇದು ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಪಡೆದ ಭಾರಿ ಜನಾದೇಶ ಬುಡಮೇಲಾಗಲಿದೆ. ಡೆಕ್ಕಲ್​ ಹೆರಾಲ್ಡ್​ ಪತ್ರಿಕೆಯು ಈ ಬಗ್ಗೆ ವರದಿಯೊಂದನ್ನು ಮಾಡಿದ್ದು ಜೆಡಿಎಸ್​, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ವರದಿ ಮಾಡಿದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿಭಿನ್ನವಾಗಿ ಮತ ಚಲಾಯಿಸುವ ಸುದೀರ್ಘ ಇತಿಹಾಸವನ್ನು ಕರ್ನಾಟಕದ ಮತದಾರರು ಹೊಂದಿದ್ದಾರೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು 28 ಸ್ಥಾನಗಳ ಪೈಕಿ ಬಿಜೆಪಿಗೆ 17 ಸೀಟ್ ಕೊಟ್ಟಿದ್ದಾರೆ. ಜೆಡಿಎಸ್ ಸ್ಪರ್ಧಿಸಿರುವ 3ರಲ್ಲಿ 2 ಮತ್ತು ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದುಕೊಂಡಿದೆ. 2019ರಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದ ಕಾಂಗ್ರೆಸ್ 14ರಿಂ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಅದು ಕೆಲಸ ಮಾಡಿಲ್ಲ.

ರಾಜ್ಯ ಸರ್ಕಾರದ 18 ಮಂತ್ರಿಗಳು ತಮ್ಮ ಸ್ವಂತ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಮುನ್ನಡೆ ಕೊಡಿಸಲು ವಿಫಲರಾಗಿದ್ದರು. ಇದು ಕಾಂಗ್ರೆಸ್​ ಪಾಲಿಗೆ ಕಟು ಸತ್ಯವಾಗಿದೆ. ಉದಾಹರಣೆಗೆ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಬಿಟಿಎಂ ಲೇಔಟ್ ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಅವರಿಗೆ 9,000 ಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿತ್ತು. ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ರೀತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರ ಪುತ್ರ ಮೃಣಾಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಅಲ್ಲಿ ಬಿಜೆಪಿ 50,000 ಮತಗಳ ಮುನ್ನಡೆ ಸಾಧಿಸಿದೆ.

ಮೈತ್ರಿ ಯಶಸ್ಸು

ಚುನಾವಣಾ ಬಳಿಕದ ಅಂಕಿ ಅಂಶಗಳ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿ ಕೆಲಸ ಮಾಡಿದೆ. ಏಕೆಂದರೆ ಎರಡೂ ಪಕ್ಷಗಳು ಪರಸ್ಪರ ತಮ್ಮ ಮತಗಳನ್ನು ಹಂಚಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಇದು ಸಂಭವಿಸುವುದಿಲ್ಲ ಎಂದು ಕಾಂಗ್ರೆಸ್ ಭಾವಿಸಿತ್ತು. ಅವರ ನಿರೀಕ್ಷೆ ಸುಳ್ಳಾಗಿದೆ. ತುಮಕೂರು ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ ಎಂಬುದೇ ಇದಕ್ಕೆ ಸಾಕ್ಷಿ. ಅದೇ ರೀತಿ ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೊಂಚವೂ ಮುನ್ನಡೆ ಸಿಕ್ಕಿಲ್ಲ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

ವ್ಯತರಿಕ್ತ ಫಲಿತಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು. ಬೀದರ್, ರಾಯಚೂರು ಮತ್ತು ಬಳ್ಳಾರಿಯಲ್ಲಿ ಇದು ಬಹುತೇಕ ಮೇಲುಗೈ ಸಾಧಿಸಿದೆ.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್ ಮತ್ತು ಫೈರ್ ಬ್ರಾಂಡ್ ಹಿಂದುತ್ವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಜಾಪುರ ನಗರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ವಿಶೇಷ.

ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸಿಗುವ ಗಣನೀಯ ಮುನ್ನಡೆ ಇಡೀ ಫಲಿತಾಂಶವನ್ನು ಹೇಗೆ ತಿರುಗಿಸುತ್ತದೆ ಎಂಬುದಕ್ಕೂ ಉದಾಹರಣೆಯಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್ ಅವರು ಮಹದೇವಪುರ ಕ್ಷೇತ್ರ ಒಂದರಲ್ಲಿಯೇ 1.14 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದರು. ಇದು ಫಲಿತಾಂಶವನ್ನೇ ಬದಲಾಯಿಸಿ ಗೆಲುವು ತಂದುಕೊಟ್ಟಿತು. ಮಹದೇವಪುರದ ಮತದಾರರ ಸಂಖ್ಯೆ 3 ವಿಧಾನಸಭಾ ಕ್ಷೇತ್ರಗಳಿಗೆ ಸಮನಾಗಿದೆ. ರಾಜಾಜಿನಗರ ಮತ್ತು ಇತರ ಸ್ಥಳಗಳಲ್ಲಿ ನನಗೆ ದೊರೆತ ಮುನ್ನಡೆ ಇಲ್ಲದಿದ್ದರೆ, ಮಹದೇವಪುರ ಮಾತ್ರ ಸಾಕಾಗುತ್ತಿರಲಿಲ್ಲ ಎಂದು ಮೋಹನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆಯನ್ನು ಪಕ್ಷ ರಾಜಕೀಯಗೊಳಿಸದಿದ್ದರೆ ಬಿಜೆಪಿಗೆ ಇಷ್ಟೊಂದು ಸೀಟು ಸಿಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದರು. ಯಾಕೆಂದರೆ 2019ಕ್ಕೆ ಹೋಲಿಸಿದರೆ ಕಾಂಗ್ರೆಸ್ ಮತ ಹಂಚಿಕೆ ಶೇ.13ರಷ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಮೂಲ ಗೊತ್ತಾಗಿದೆ.

Exit mobile version