Site icon Vistara News

Actor Chetan Ahimsa: ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದ ನಟ ಚೇತನ್!

Actor Chetan Ahimsa

ಕೊಡಗು: ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದಾರೆ.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎಂಬ ಕಾಂಗ್ರೆಸ್ ಆರೋಪಗಳ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ಮತ್ತೊಮ್ಮೆ ಎನ್‌ಡಿಎ ಸರ್ಕಾರ ಬರುತ್ತದೆ ಎಂದು ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ ತಿಳಿದುಬಂದಿದೆ. ಆದ್ದರಿಂದ ಎಲ್ಲರೂ ಇದನ್ನು ಒಪ್ಪಬೇಕಾಗುತ್ತದೆ. ಈ ಬಾರಿಯೂ ಮೋದಿ‌ ಸರಕಾರ ಬರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಲಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ನಟ ಚೇತನ್ ಪ್ರತಿಕ್ರಿಯಿಸಿ, ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಆಗಬೇಕು. ಸಚಿವ ನಾಗೇಂದ್ರ ಮೈನಿಂಗ್ ಮಾಫಿಯದಲ್ಲಿದ್ದವರು, ಸಚಿವರಾಗಲು ಅವರಿಗೇನು ಯೋಗ್ಯತೆ ಇದೆ? ಭ್ರಷ್ಟಾಚಾರದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಏನೂ ಕಡಿಮೆಯಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ; ಸಿಎಂ ವಿರುದ್ಧ ಕಿಡಿ

ಮೀಸಲಾತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರು ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ. ಆದರೆ, ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ. ಬೊಮ್ಮಾಯಿ ಸರ್ಕಾರದಲ್ಲಿ ಒಳಮೀಸಲಾತಿ ಸಮಿತಿ ಮಾಡಲಾಗಿತ್ತು. ಈಗಿನ ಸರ್ಕಾರ ಎಲ್ಲವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿಜನಗಣತಿ ಹೊರಗೆ ಬರಬೇಕು. ಆದರೆ, ಸಿದ್ದರಾಮಯ್ಯ ಇದರಲ್ಲಿ ಮೀನಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್‌ಸಿ- ಎಸ್‌ಟಿ ಒಳ ಮೀಸಲಾತಿಗೆ ಸಮಿತಿ ರಚನೆ ಮಾಡಬೇಕು. ಈ ಮೂಲಕ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version