ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯಗಳು ಎಲ್ಲೆಡೆ ಕೇಳಿಬರುತ್ತಿವೆ. ಈ ನಡುವೆ ನಟ ದರ್ಶನ್‌ಗೆ (Actor Darshan) ಜೀವಾವಧಿ ಶಿಕ್ಷೆಯಾಗಲಿ ಎಂಬ ಪೋಸ್ಟ್‌ನ ರಿ ಟ್ವೀಟ್ ಮಾಡಿದ್ದ ನಟಿ ರಮ್ಯಾ ಇದೀಗ, ಮತ್ತೊಂದು ಟ್ವೀಟ್ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕುಟುಂಬದ ಪರ ನಿಂತ ನಟಿ, ಪ್ರಕರಣದಲ್ಲೇ ಯಾರೇ ತಪ್ಪಿತಸ್ಥರಾದರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಮಂಗಳವಾರ ರಿ ಟ್ವೀಟ್ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ರಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ರೇಣುಕಾ ಸ್ವಾಮಿ ತಂದೆ ದು:ಖದಲ್ಲಿರುವ ವಿಡಿಯೊವನ್ನು ಅಕ್ಷಯ್ ಅಕ್ಕಿ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡು, ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನು ನಟಿ ರಮ್ಯಾ ರಿ ಟ್ವೀಟ್ ಮಾಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್‌ಗೆ (Actor Darshan) ಮರಣದಂಡನೆಯಾಗಲಿ ಎಂಬ ಸಂದೇಶವನ್ನು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನೆನ್ನೆ ಹಂಚಿಕೊಂಡಿದ್ದರು. ಐಪಿಸಿ ಸೆಕ್ಷನ್ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್‌ಗೆ ಕಠಿಣ ಶಿಕ್ಷೆಯಾಗಬಹುದು. ಎಂಬ ಪೋಸ್ಟ್ ಅನ್ನು ಕರ್ನಾಟಕ ಬಾಕ್ಸ್ ಆಫೀಸ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು. ಈ ಸೆಕ್ಷನ್ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇದ್ದ ಪೋಸ್ಟ್ ಅನ್ನು ರಮ್ಯಾ ರಿ ಟ್ವೀಟ್ ಮಾಡಿದ್ದರು.
ಇದನ್ನು ಓದಿ | Actor Darshan: ಡೆವಿಲ್ ಗ್ಯಾಂಗ್ ಜತೆ ಸ್ಥಳ ಮಹಜರು; ಅಮಾಯಕನಂತೆ ಕೈಕಟ್ಟಿ ನಿಂತ ದರ್ಶನ್
ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್‌ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್ ಅನ್ನು ರಮ್ಯಾ ಮರು ಪೋಸ್ಟ್ ಮಾಡಿದ್ದರು. ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್‌ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ರಿ ಟ್ವೀಟ್ ಮಾಡಿ ಪರೋಕ್ಷವಾಗಿ ದರ್ಶನ್ ವಿರುದ್ಧ ಕಠಿಣ ಕ್ರಮವಾಗಲಿ ಎಂದು ಹೇಳಿದ್ದಾರೆ.