ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.
ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.
ದರ್ಶನ್ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್
ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್ಗೆ ಇಂಡಿಯನ್ ಪಿನಲ್ ಕೋಡ್ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್ ಅನ್ನು ರಮ್ಯಾ ರೀಟ್ವೀಟ್ ಮಾಡಿದ್ದಾರೆ.
Under Section 302, Actor #Darshan is most likely to either get life imprisonment or a sentence
— Karnataka Box Office | ಕರ್ನಾಟಕ ಬಾಕ್ಸ್ ಆಫೀಸ್ (@Karnatakaa_BO) June 11, 2024
Any other outcome would be a case of money influence & mockery of Indian Law System. Hope the victim gets the justice he deserves#DarshanThoogudeepa #DBoss @dasadarshan pic.twitter.com/O0biujLp1B
ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್ ಅನ್ನು ರಮ್ಯಾ ಮರು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ
ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.