Site icon Vistara News

Actor Darshan: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ; ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ!

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ರೇಣುಕಾಸ್ವಾಮಿ ಸಾವಿಗೆ ಸಂತಾಪ

ರೇಣುಕಾಸ್ವಾಮಿ ಸಾವಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರೇಣುಕಾಸ್ವಾಮಿ ಸಾವಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ.

ಕಳೆದ ಕೆಲವು ದಿನಗಳಿಂದ ದರ್ಶನ್, ನಾನು, ನನ್ನ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳು ದುಃಖದಲ್ಲಿದ್ದೇವೆ. ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಪ್ರಕರಣದಲ್ಲಿ ವಿವಿಧ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ಕೆಲವು ಸುಳ್ಳು ಮಾಹಿತಿ ಮತ್ತು ಅಸತ್ಯಗಳನ್ನು ಜನರು ವಿಶ್ರಾಂತಿ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ಪ್ರಕಟಿಸಲು ನಾನು ಪ್ರತಿಯೊಬ್ಬರನ್ನೂ ಕೋರುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಜಯ ಸಾಧಿಸಲಿ. ಸತ್ಯಮೇವ ಜಯತೇ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

ದರ್ಶನ್ ಬಗ್ಗೆ ಮಾತನಾಡಿದ್ದಕ್ಕೆ ಜೀವ ಬೆದರಿಕೆ; ಪೊಲೀಸರಿಗೆ ನಟ ಪ್ರಥಮ್‌ ದೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಬಂಧನದ ಬಗ್ಗೆ ಮಾತನಾಡಿದ್ದಕ್ಕೆ ನಟ, ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಥಮ್ ಜೀವ ಬೆದರಿಕೆ ಹಾಕಿರುವುದು ಕಂಡುಬಂದಿದೆ. ದರ್ಶನ್‌ ಅಭಿಮಾನಿಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜ್ಞಾನಭಾರತಿ ನಗರ ಪೊಲೀಸ್ ಠಾಣೆಗೆ ಪ್ರಥಮ್‌ (Actor Pratham) ದೂರು ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದ್ದರೂ ಅವರ ಅಭಿಮಾನಿಗಳು ಸಮರ್ಥಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ನಟ ಪ್ರಥಮ್‌ ಕಿಡಿಕಾರಿದ್ದರು. ನನಗೆ ಒಂದು ವಾರ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಲು ಅವಕಾಶ ಕೊಟ್ಟರೆ, ದರ್ಶನ್‌ ಅಂಧ ಅಭಿಮಾನಿಗಳಿಗೆ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ. ಆ ಪೊಲೀಸ್‌ ಸ್ಟೇಷನ್‌ ಬಳಿ ಇದ್ದವರಲ್ಲಿ ಒಬ್ಬನಾದರೂ ಅವರ ತಾಯಿಗೆ ಒಂದು ಹೊತ್ತು ಊಟ ಕೊಡಿಸಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಪ್ರಥಮ್‌ಗೆ ನಟ ದರ್ಶನ್ ಅಭಿಮಾನಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.

ದೂರು ನೀಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಪ್ರಥಮ್‌ ಅವರು, ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ, ನೀವು ಅತಿಯಾಗಿ ನಮ್ಮ #ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಿ. ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ. ಬದುಕು ಸುಂದರವಾದದ್ದು, ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ. ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ…; ಯಾರಿಗೋಸ್ಕರವೋ ಲೈಫ಼್ ಹಾಳುಮಾಡಿಕೊಳ್ಳಬೇಡಿ ಎಂದು ತಮಗೆ ಬೆದರಿಕೆ ಹಾಕಿರುವ ದರ್ಶನ್‌ ಅಭಿಮಾನಿಗಳಿಗೆ ಪರೋಕ್ಷವಾಗಿ ಸಲಹೆ ನೀಡಿದ್ದಾರೆ.

Exit mobile version