Site icon Vistara News

Mimi Chakraborty : ಕೋಲ್ಕೊತಾ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿದ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರ ಬೆದರಿಕೆ!

Mimi Chakraborty

ಕೋಲ್ಕತಾ : ಕೋಲ್ಕತಾದ ಆರ್‌ಜಿ ಕಾರ್‌‌ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ಪೋಸ್ಟ್‌ಗಳನ್ನು ಮಾಡಿದ್ದ ಅಲ್ಲಿನ ನಟಿ ಮಿಮಿ ಚಕ್ರವರ್ತಿಗೆ (Mimi Chakraborty) ಅತ್ಯಾಚಾರ ಬೆದರಿಕೆಗಳು ಬಂದಿವೆ. ಪೋಸ್ಟ್ ಪ್ರಕಟಿಸಿದ ನಂತರ ತಮಗೆ ಅತ್ಯಾಚಾರ ಬೆದರಿಕೆಗಳು ಮತ್ತು ಅಶ್ಲೀಲ ಸ್ವರೂಪದ ಸಂದೇಶಗಳು ಬರುತ್ತಿವೆ ಎಂದು ತೃಣಮೂಲ ಕಾಂಗ್ರೆಸ್‌ನ ಮಾಜಿ ಸದಸ್ಯೆಯೂ ಆಗಿರುವ ಮಿಮಿ ಚಕ್ರವರ್ತಿ ಮಂಗಳವಾರ ಮಾಹಿತಿ ಹಂಚಿಕೊಂಡಿದ್ದಾರೆ. ಮಿಮಿ ಈ ಬಗ್ಗೆ ಕೋಲ್ಕತಾ ಪೊಲೀಸರ ಸೈಬರ್ ಸೆಲ್ ವಿಭಾಗಕ್ಕೆ ಆ ಮಾಹಿತಿಯನ್ನು ಕೊಟ್ಟಿದ್ದಾರೆ.

ನಾವು ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಬಗ್ಗೆ ಮಾತನಾಡುತ್ತೆವೆ. ಆದರೆ ಪರಿಸ್ಥಿತಿ ವಿಭಿನ್ನವಾಗಿದೆ. ಕೆಲವು ವಿಷಕಾರಿ ಪುರುಷರು ಮಹಿಳೆಯರ ಪರವಾಗಿ ಜನರ ಮಧ್ಯೆ ಹೇಳುತ್ತಾರೆ. ಆದರೆ ಮುಖವಾಡ ಧರಿಸಿಕೊಂಡರು ಅತ್ಯಾಚಾರದ ಬೆದರಿಕೆಗಳನ್ನು ಹಾಕುತ್ತಾರೆ. ಅವರಿಗೆ ಶಿಕ್ಷಣದ ಕೊರತೆ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಕೋಲ್ಕತ್ತಾದಲ್ಲಿ ಈ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನಟಿ ವೈಯಕ್ತಿಕವಾಗಿ ಭಾಗವಹಿಸಿದ್ದರು. ಮಿಮಿ ಅವರಲ್ಲದೆ, ನಟರಾದ ರಿದ್ಧಿ ಸೇನ್, ಅರಿಂದಮ್ ಸಿಲ್ ಮತ್ತು ಮಧುಮಿತಾ ಸರ್ಕಾರ್ ಕೂಡ ಆಗಸ್ಟ್ 14 ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಿಮಿ ಚಕ್ರವರ್ತಿ ಜಾದವ್ಪುರ ಲೋಕಸಭಾ ಕ್ಷೇತ್ರದಿಂದ (2019-2024) ಸಂಸತ್ ಸದಸ್ಯರಾಗಿದ್ದರು.

ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷನ ಬಂಧನ

ಮುಂಬೈ: ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ತಿಂಗಳುಗಳ ಕಾಲ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ (Physical Abuse ) ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಮತ್ತೊಂದು ಇದೇ ಮಾದರಿಯ ಘಟನೆ ವರದಿಯಾಗಿದೆ.

ಇದನ್ನೂ ಓದಿ: Lashkar-e-Taiba : ಎಲ್ಇಟಿ- ಹಮಾಸ್ ಒಂದಾಗುತ್ತಿದೆಯೇ? ಜಾಗತಿಕ ಆತಂಕ ತಂದಿಟ್ಟ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥರ ಭೇಟಿ

ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ/ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. 8 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಒಬ್ಬಾಕೆ ಮಕ್ಕಳ ಕಲ್ಯಾಣ ಕೇಂದ್ರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಳು. ಅಧಿಕಾರಿಗಳು ಶಾಲೆಗೆ ಹೋಗಿ ತನಿಖೆಯನ್ನು ನಡೆಸಿ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕರಣದ ವಿವರಗಳ ಪ್ರಕಾರ, ಶಿಕ್ಷಕ ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದ. ವಿಡಿಯೊ ತೋರಿಸುತ್ತಾ ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಆರು ವಿದ್ಯಾರ್ಥಿನಿಯರು ದೂರು ನೀಡಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಮಂಗಳವಾರ ಬೆಳಿಗ್ಗೆ ಶಾಲೆಗೆ ಭೇಟಿ ನೀಡಿ ಕೆಲವು ಬಾಲಕಿಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಆಶಾ ಮಿರ್ಗೆ ಒತ್ತಾಯಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Exit mobile version