Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ? - Vistara News

ಪ್ರಮುಖ ಸುದ್ದಿ

Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

Vinesh Phogat : ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಫೈನಲ್ ಪಂದ್ಯದ ದಿನ ಬೆಳಗ್ಗೆ ಎರಡನೇ ತೂಕದ ಸಮಯದಲ್ಲಿ ವಿನೇಶ್ 100 ಗ್ರಾಂ ಅಧಿಕ ತೂಕ ಹೊಂದಿರುವುದು ಕಂಡುಬಂದಿತ್ತು. ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್) ತಾತ್ಕಾಲಿಕ ವಿಭಾಗವು ಮೇಲ್ಮನವಿ ದಾಖಲಿಸಿದೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್: ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (UWW) 2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಆಗಿರುವ ವಿವಾದದ ಬಳಿಕ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ವಿನೇಶ್ ಫೋಗಟ್ (Vinesh Phogat) ಅವರನ್ನು 100 ಗ್ರಾಮ್​ ತೂಕ ಹೆಚ್ಚಳದ ಹಿನ್ನೆಲೆಯಲ್ಲಿ ಅನರ್ಹ ಮಾಡಿರುವ ಕಾರಣ ನಿಯಮದ ಬದಲಾವಣೆ ಮಾಡುವುದಾಗಿ ಹೇಳಿದೆ ಎಂಬುದಾಗಿ ವರದಿ ಹೇಳಿದೆ. ತೂಕದ ನಿಯಮಗಳು ಸಂಪೂರ್ಣವಾಗಿ ಬದಲಾಗುವ ಸಾಧ್ಯತೆಯಿಲ್ಲವಾದರೂ, ಕ್ರೀಡಾಪಟುಗಳ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಣ್ಣ ಮಾರ್ಪಾಡುಗಳನ್ನು ಮಾಡಲಾಗುವುದು ಎಂದು ಬದಲಾವಣೆಗಳು ಶೀಘ್ರದಲ್ಲೇ ಜಾರಿಗೆ ಬರಬಹುದು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಫೈನಲ್ ಪಂದ್ಯದ ದಿನ ಬೆಳಗ್ಗೆ ಎರಡನೇ ತೂಕದ ಸಮಯದಲ್ಲಿ ವಿನೇಶ್ 100 ಗ್ರಾಂ ಅಧಿಕ ತೂಕ ಹೊಂದಿರುವುದು ಕಂಡುಬಂದಿತ್ತು. ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್) ತಾತ್ಕಾಲಿಕ ವಿಭಾಗವು ಮೇಲ್ಮನವಿ ದಾಖಲಿಸಿದೆ. ಅರ್ಜಿದಾರ ವಿನೇಶ್ ಫೋಗಟ್, ಪ್ರತಿವಾದಿಗಳಾದ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಐಒಎ ಆಸಕ್ತಿಯ ಪಕ್ಷವಾಗಿ ವಾದಗಳನ್ನು ಆಲಿಸಿದ್ದು

ಆಸ್ಟ್ರೇಲಿಯಾದ ಏಕೈಕ ಮಧ್ಯಸ್ಥಿಕೆದಾರರಾದ ಡಾ.ಅನ್ನಾಬೆಲ್ಲೆ ಬೆನೆಟ್ ಶನಿವಾರ ಮೂರು ಗಂಟೆಗಳ ಕಾಲ ವಾದಗಳನ್ನು ಆಲಿಸಿದ್ದಾರೆ. ಕ್ರೀಡಾ ನ್ಯಾಯಾಲಯದ ಸಿಎಎಸ್​​ನ ತಾತ್ಕಾಲಿಕ ವಿಭಾಗವು ಶನಿವಾರ ತೀರ್ಪನ್ನು ಪ್ರಕಟಿಸಲು ನಿರ್ಧರಿಸಿದ್ದರೂ, ಸಂಬಂಧಿತ ಪಕ್ಷಗಳಿಗೆ ಹೆಚ್ಚಿನ ಪುರಾವೆಗಳನ್ನು ಒದಗಿಸಲು ಹೆಚ್ಚುವರಿ 24 ಗಂಟೆಗಳನ್ನು ಮತ್ತು ತೀರ್ಪು ನೀಡಲು ಏಕೈಕ ಮಧ್ಯಸ್ಥಗಾರನಿಗೆ 72 ಗಂಟೆಗಳ ಸಮಯವನ್ನು ನೀಡಿತು. ವಿನೇಶ್ ಫೋಗಟ್ ಅವರ ಮೇಲ್ಮನವಿಯ ತೀರ್ಪು ಈಗ ಆಗಸ್ಟ್ 13 ರ ಮಂಗಳವಾರ ಹೊರಬೀಳುವ ನಿರೀಕ್ಷೆಯಿದೆ.

ವಿನೇಶ್ ಆರಂಭದಲ್ಲಿ ಚಿನ್ನದ ಪದಕದ ಹೋರಾಟದಲ್ಲಿ ಹೋರಾಡಲು ಅನುಮತಿ ನೀಡುವಂತೆ ವಿನಂತಿಸಿದರು. ಆದಾಗ್ಯೂ, ಒಲಿಂಪಿಕ್ ಸಂಸ್ಥೆ ಅವರನ್ನು ಅನರ್ಹಗೊಳಿಸಿತು ಮತ್ತು ಸೆಮಿಫೈನಲ್ನಲ್ಲಿ ವಿನೇಶ್ ವಿರುದ್ಧ ಸೋತ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಅವರಿಗೆ ಬುಧವಾರ ಚಿನ್ನದ ಪದಕದ ಹೋರಾಟದಲ್ಲಿ ಹೋರಾಡಲು ಅವಕಾಶ ನೀಡಿತು. ನಂತರ ವಿನೇಶ್ ಅವರಿಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : Paris Olympics 2024 : ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ಎಫ್ಐಎಚ್ ರ್ಯಾಂಕಿಂಗ್​ನಲ್ಲಿ 2 ಸ್ಥಾನ ಏರಿಕೆ

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಶ್ಪತ್ ಸಿಂಘಾನಿಯಾ ಸೇರಿದಂತೆ ವಿನೇಶ್ ಅವರ ವಕೀಲರು ವಿನೇಶ್​ ಪರ ವಾದ ಮಾಡಿದ್ದಾರೆ. ತೂಕ ಹೆಚ್ಚಳವು ದೇಹದ ನೈಸರ್ಗಿಕ ಚೇತರಿಕೆ ಪ್ರಕ್ರಿಯೆಯಿಂದಾಗಿ ಮತ್ತು ದೇಹ ನೋಡಿಕೊಳ್ಳುವುದು ಕ್ರೀಡಾಪಟುವಿನ ಮೂಲಭೂತ ಹಕ್ಕು ಎಂದು ವಾದಿಸಿದ್ದಾರೆ. ಸ್ಪರ್ಧೆಯ 1ನೇ ದಿನದಂದು ಆಕೆಯ ದೇಹದ ತೂಕವು ನಿಗದಿತ ಮಿತಿಗಿಂತ ಕಡಿಮೆಯಾಗಿತ್ತು. ಬಳಿಕ ಏಕಾಏಕಿ ಏರಿಕೆಯಾಗಿದೆ. ಅದು ವಂಚನೆಯಲ್ಲ ಎಂದು ಅವರು ವಾದಿಸಿದ್ದಾರೆ.

ತೂಕದ ನಿಯಮಗಳ ಬಗ್ಗೆ ಚರ್ಚೆ

ಯುಡಬ್ಲ್ಯೂಡಬ್ಲ್ಯೂ ವಿಶ್ವಕಪ್ ಸೇರಿದಂತೆ ಇತರ ಕೆಲವು ಪ್ರಮುಖ ಸ್ಪರ್ಧೆಗಳಲ್ಲಿ 2 ಕೆ.ಜಿ ತನಕ ತೂಕ ಏರಿಕೆಯನ್ನು ಸಹಿಸುತ್ತದೆ. ಆದರೆ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕಠಿಣ ನೀತಿ ಹೊಂದಿದೆ. ವಿನೇಶ್​ಗೆ ಬೆಂಬಲ ವ್ಯಕ್ತಪಡಿಸಿದ ಅನೇಕರಲ್ಲಿ ಅಮೆರಿಕದ ಕುಸ್ತಿ ದಿಗ್ಗಜ ಜೋರ್ಡಾನ್ ಬರ್ರೋಸ್ ಕೂಡ ಒಬ್ಬರು. ತೂಕದ ಎರಡನೇ ದಿನಕ್ಕೆ 1 ಕೆಜಿ ತನಕ ಒಪ್ಪಿಕೊಳ್ಳಬಹುದು ಬರ್ರೋಸ್ ಸಲಹೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Teachers Recruitment: ಶಿಕ್ಷಕರ ಕೊರತೆ ನೀಗಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

VISTARANEWS.COM


on

Teachers Recruitment
Koo

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ (Teachers Recruitment) ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ತಕ್ಷಣಕ್ಕೆ ಸಮಸ್ಯೆ ಪರಿಹರಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಶಿಕ್ಷಕರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ

ಶಿಕ್ಷಕರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿಕ್ಷಕರಿಂದ ಕೆಲ ಬೇಡಿಕೆಗಳಿವೆ. ನಾಲ್ಕೈದು ದಿನಗಳ ಹಿಂದೆ ಸಭೆ ಕರೆದಿದ್ದೆ. ನಾವು ಪ್ರತಿಭಟನೆ ಕರೆದುಬಿಟ್ಟಿದ್ದೀವಿ, ಹೀಗಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ. ನಾನು ಹೋಗಿ ಮನವಿ ಪಡೆದು ಬಳಿಕ ಏನು ಮಾಡಬೇಕೋ ಪರಿಶೀಲನೆ ಮಾಡುತ್ತೇನೆ. ಇದು ನನ್ನ ಅವಧಿಯಲ್ಲಿ ಆಗಿರುವ ಸಮಸ್ಯೆಯಲ್ಲ. 2017ರಲ್ಲಿ ಆಗಿರೋ ವಿಚಾರ ಇದು, ಆಗಲೇ ಇವರು ಸ್ವಲ್ಪ ಒತ್ತಡ ಹಾಕಬೇಕಿತ್ತು. ಆದರೆ ಇಲ್ಲಿಯವರೆಗೂ ಅದು ಎಳೆದುಕೊಂಡು ಬಂದಿದೆ. ಅದು ನನ್ನ ಮಟ್ಟದಲ್ಲಿ ಅನ್ನೋಕ್ಕಿಂತ, ಮುಖ್ಯಮಂತ್ರಿ ಮಟ್ಟದಲ್ಲಿ ನಿರ್ಧಾರ ಆಗೋ ವಿಚಾರ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಅವರಿಗೆ ನಿವೃತ್ತಿ ಸಮಯದಲ್ಲಿ ಪ್ರಮೋಷನ್ ಆಗೋ ಆಸೆ ಇರುತ್ತೆ. ಹೀಗಾಗಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Hindenburg Report : ಆದಾಗ್ಯೂ, ಸೆನ್ಸೆಕ್ಸ್ ಇಂಟ್ರಾ-ಡೇ ವಹಿವಾಟಿನಲ್ಲಿ 300 ಪಾಯಿಂಟ್​ಗಳ ಜಿಗಿತ ಕಂಡು ಅಲ್ವಾವಧಿಯವರೆಗೆ 80,000 ಅಂಕಗಳ ಮಟ್ಟವನ್ನು ದಾಟಿತ್ತು. ಇದು ಮಾರುಕಟ್ಟೆಯಒಟ್ಟಾರೆ ಆರ್ಥಿಕ ಬೆಳವಣಿಗೆಯಲ್ಲಿ ಭಾರತೀಯ ಹೂಡಿಕೆದಾರರ ನಂಬಿಕೆಯನ್ನು ಪ್ರತಿಬಿಂಬಿಸಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ ಕೇವಲ 57 ಪಾಯಿಂಟ್ಸ್ ಕುಸಿದು 79,648 ಕ್ಕೆ ನಿಂತಿದ್ದು. ನಿಫ್ಟಿ 20 ಪಾಯಿಂಟ್ಸ್ ಕುಸಿದು 24,347 ಕ್ಕೆ ತಲುಪಿದೆ. ಹೀಗಾಗಿ ಭಾರೀ ಕುಸಿತ ಕಾಣುತ್ತದೆ ಎಂಬ ಅಂದಾಜಿ ಸುಳ್ಳಾಗಿದೆ.

VISTARANEWS.COM


on

Hindenburg Report
Koo

ನವದೆಹಲಿ: ಭಾರತೀಯ ಷೇರು ಮಾರುಕಟ್ಟೆಗೆ (Stock Market) ಹಾನಿ ಮಾಡಬೇಕು ಎಂಬ ಉದ್ದೇಶದಿಂದ ಅಮೆರಿಕದ ಮೂಲಕ ಶಾರ್ಟ್​ ಸೆಲ್ಲಿಂಗ್​ ಸಂಸ್ಥೆ ಹಿಂಡೆನ್​ಬರ್ಗ್​​ ರೀಸರ್ಚ್​ ಎಲ್​ಎಲ್​​ಸಿ ಬಿಡುಗಡೆ ಮಾಡಿರುವ ವರದಿ (Hindenburg Report) ಠುಸ್ ಎಂದಿದೆ. ಸೋಮವಾರ ಭಾರತೀಯ ಷೇರು ಮಾರುಕಟ್ಟೆಗೆ ಯಾವುದೇ ಯಾನಿ ಉಂಟಾಗಿಲ್ಲ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ಅಧ್ಯಕ್ಷರಾದ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ವಿರುದ್ಧದ ಹಿಂಡನ್​ಬರ್ಗ್​ ಆರೋಪಗಳನ್ನು ಭಾರತೀಯ ಹೂಡಿಕೆದಾರರು ಸಾರಾಸಗಟು ತಿರಸ್ಕರಿಸಿದ್ದಾರೆ.

ಸೆಬಿ ಮುಖ್ಯಸ್ಥರ ವಿರುದ್ಧದ ಗಂಭೀರ ಆರೋಪಗಳ ಬಗ್ಗೆ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಸುವುದಾಗಿ ಪ್ರಧಾನಿ ಘೋಷಿಸಬೇಕು ಎಂದು ರಾಹುಲ್ ಗಾಂಧಿ ಭಾನುವಾರ ವೀಡಿಯೊ ಸಂದೇಶದಲ್ಲಿ ಒತ್ತಾಯಿಸಿದರು, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕದ ಸಮಗ್ರತೆಗೆ ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ ತೀವ್ರವಾಗಿ ಹಾನಿಯಾಗಿದೆ ” ಎಂದು ಹೇಳಿದರು. ಹೀಗಾಗಿ ಸೋಮವಾರ ವರದಿಯು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆ ವರದಿಯನ್ನು ಭಾರತೀಯ ಹೂಡಿಕೆದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.

ಆದಾಗ್ಯೂ, ಸೆನ್ಸೆಕ್ಸ್ ಇಂಟ್ರಾ-ಡೇ ವಹಿವಾಟಿನಲ್ಲಿ 300 ಪಾಯಿಂಟ್​ಗಳ ಜಿಗಿತ ಕಂಡು ಅಲ್ವಾವಧಿಯವರೆಗೆ 80,000 ಅಂಕಗಳ ಮಟ್ಟವನ್ನು ದಾಟಿತ್ತು. ಇದು ಮಾರುಕಟ್ಟೆಯಒಟ್ಟಾರೆ ಆರ್ಥಿಕ ಬೆಳವಣಿಗೆಯಲ್ಲಿ ಭಾರತೀಯ ಹೂಡಿಕೆದಾರರ ನಂಬಿಕೆಯನ್ನು ಪ್ರತಿಬಿಂಬಿಸಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ ಕೇವಲ 57 ಪಾಯಿಂಟ್ಸ್ ಕುಸಿದು 79,648 ಕ್ಕೆ ನಿಂತಿದ್ದು. ನಿಫ್ಟಿ 20 ಪಾಯಿಂಟ್ಸ್ ಕುಸಿದು 24,347 ಕ್ಕೆ ತಲುಪಿದೆ. ಹೀಗಾಗಿ ಭಾರೀ ಕುಸಿತ ಕಾಣುತ್ತದೆ ಎಂಬ ಅಂದಾಜಿ ಸುಳ್ಳಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ವಿರುದ್ಧ ಹಿಂಡೆನ್​​​ಬರ್ಗ್​ ಅವರ ಆರೋಪಗಳ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ದೃಢತೆಯನ್ನು ಪ್ರದರ್ಶಿಸಿದೆ, ನಕಾರಾತ್ಮಕ ವರದಿಯ ಹೊರತಾಗಿಯೂ, ದೇಶೀಯ ಷೇರು ಮಾರುಕಟ್ಟೆಗಳು ಅವರನ್ನು ತಿರಸ್ಕರಿಸಿದೆ.

ಜಾಗತಿಕ ಮಾರುಕಟ್ಟೆಗಳಿಂದ ಸಕಾರಾತ್ಮಕ ಸೂಚನೆ ಪಡೆದುಕೊಂಡು ಮಾರುಕಟ್ಟೆಯು ಹಿಂಡೆನ್ಬರ್ಗ್ ಆರೋಪಗಳಿಗೆ ಕಿಮ್ಮತ್ತು ನೀಡಲಿಲ್ಲ. ಹಿಂಡೆನ್ಬರ್ಗ್ ವರದಿಯು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಮತ್ತು ಗೂಳಿಯ ಓಟವು ಉತ್ತಮವಾಗಿದೆ ಎಂದು ಮಾರುಕಟ್ಟೆ ವೀಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

ತಪ್ಪಾದ ವರದಿ

ಹಿಂಡೆನ್​ಬರ್ಗ್​ನಂಥ ಆಧಾರವಿಲ್ಲದ ವರದಿಗಳಿಗೆ ಪ್ರತಿಕ್ರಿಯಿಸುವ ಬದಲು ಶಾಂತವಾಗಿರುವಂತೆ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಹೂಡಿಕೆದಾರರಿಗೆ ಭಾನುವಾರ ಸಲಹೆ ನೀಡಿತ್ತು. ಅಮೆರಿಕದ ಶಾರ್ಟ್​ ಸೆಲ್ಲರ್​ ಹಿಂಡೆನ್ಬರ್ಗ್ ರಿಸರ್ಚ್ ಮಾಡಿದ ಆರೋಪಗಳಿಗೆ ಸೆಬಿ ಅಧ್ಯಕ್ಷರು ಮತ್ತು ಅವರ ಪತಿ ವಿವರವಾದ ಪ್ರತಿಕ್ರಿಯೆ ನೀಡಿದ್ದಾರೆ. ಶೋಕಾಸ್ ನೋಟಿಸ್​ಗೆ ಉತ್ತರಿಸುವ ಬದಲು, ಅವರು ಸೆಬಿಯ ವಿಶ್ವಾಸಾರ್ಹತೆಯ ಮೇಲೆ ದಾಳಿ ಮಾಡಲು ಮತ್ತು ಅದರ ಅಧ್ಯಕ್ಷರ ಚಾರಿತ್ರ್ಯ ಹರಣ ಮಾಡಲು ಪ್ರಯತ್ನಿಸಲು ನಿರ್ಧರಿಸಿರುವುದು ದುರದೃಷ್ಟಕರ ಎಂದು ಹೇಳಿದರು.

ದಂಪತಿ ಎಲ್ಲಾ ಆರೋಪಗಳನ್ನು ದೃಢವಾಗಿ ವಿವರಣೆ ನೀಡಿದ್ದಾರೆ. ಸೆಬಿಯಲ್ಲಿ ಮಾಧಾಬಿ ಅವರ ಅಧಿಕಾರಾವಧಿಗೆ ಮುಂಚಿತವಾಗಿ ಹೂಡಿಕೆ ನಡೆದಿದೆ ಎಂಬುದಾಗಿ ಹೇಳಿದ್ದಾರೆ.

Continue Reading

ಕರ್ನಾಟಕ

Teachers Protest: ಶಿಕ್ಷಕರ ಪ್ರತಿಭಟನೆ; ಬಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹ

Teachers Protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದ ವಿವಿಧೆಡೆಯಿಂದ ಸಾವಿರಾರು ಶಾಲಾ ಶಿಕ್ಷಕರು ಆಗಮಿಸಿದ್ದಾರೆ.

VISTARANEWS.COM


on

Teachers Protest
Koo

ಬೆಂಗಳೂರು: ಬಡ್ತಿ, ವರ್ಗಾವಣೆ ಹಾಗೂ ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ (Teachers Protest) ನಡೆಸಲಾಗಿದೆ. ಹೋರಾಟದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಸಾವಿರಾರು ಶಿಕ್ಷಕರು ಭಾಗಿಯಾಗಿದ್ದರು.

2017ರ ನಂತರ ನೇಮಕ ಆದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಅರ್ಹತೆ ಆಧಾರದ ಮೇಲೆ ಶಿಕ್ಷಕರ ಮುಂಬಡ್ತಿ ನೀಡುವುದು, ಎಲ್ಲ ಶಿಕ್ಷಕರನ್ನು ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆ ಆಧಾರದ ಮುಂಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

1ರಿಂದ 5ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರು ಪದವೀಧರರಾಗಿದ್ದಲ್ಲಿ, ಅವರನ್ನು 6ರಿಂದ 8ನೇ ತರಗತಿವರೆಗೆ ಪಾಠ ಮಾಡುವ ಜಿಪಿಟಿ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದೆ ಇದ್ದಲ್ಲಿ ಪ್ರತಿಭಟನೆ ಮುಂದಿನ ಹಂತಕ್ಕೆ ಹೋಗಲಿದೆ. ಬೋಧನೆ ಹಾಗೂ ಇತರೆ ಚಟುವಟಿಕೆ ಬಂದ್ ಮಾಡುವುದಾಗಿ ಸರ್ಕಾರಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್‌, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಶಿಕ್ಷಕರು ಇದ್ದರು.

ಶಿಕ್ಷಕರ ಹಕ್ಕೋತ್ತಾಯಗಳು

  1. 2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜ್ಯೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು.
  2. ಉಲ್ಲೇಖ (1)ರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1-7,8ನೇ ತರಗತಿಗೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.
  3. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು.
  4. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.

ಇದನ್ನೂ ಓದಿ | DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Continue Reading

ಪ್ರಮುಖ ಸುದ್ದಿ

Marnus Labuschagne : ವಿಶ್ವ ಕಪ್​ನಲ್ಲಿ ಭಾರತವನ್ನು ಸೋಲಿಸಲು ನೆರವಾದ ಬ್ಯಾಟ್​ಗೆ ವಿದಾಯ ಹೇಳಿದ ಮರ್ನಸ್​ ಲಾಬುಶೇನ್​​

Marnus Labuschagne : ಟ್ರಾವಿಸ್ ಹೆಡ್ ಜೊತೆಗೂಡಿ 215 ಎಸೆತಗಳಲ್ಲಿ 192 ರನ್​ಗಳ ಜೊತೆಯಾಟವಾಡಿದ ಲಾಬುಶೇನ್ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರ ಪರಿಣಾಮವಾಗಿ, ಆಸ್ಟ್ರೇಲಿಯಾವು ಪಂದ್ಯವನ್ನು ಆರು ವಿಕೆಟ್ ಗಳಿಂದ ಗೆದ್ದು ಆರನೇ ಏಕದಿನ ವಿಶ್ವಕಪ್ ಅನ್ನು ಗೆದ್ದುಕೊಂಡಿತು. ಸ್ಟಾರ್ ಬ್ಯಾಟರ್​​ ಇತ್ತೀಚೆಗೆ ತಾವು ಫೈನಲ್​​ನಲ್ಲಿ ಬಳಸಿದ ಬ್ಯಾಟ್​ನ ಚಿತ್ರವನ್ನು ಹಂಚಿಕೊಂಡಿದ್ದಾರೆ, ಅದು ಹಾಳಾದ ಸ್ಥಿತಿಯಲ್ಲಿತ್ತು ಮತ್ತು ಅದನ್ನು ನಿವೃತ್ತಿಗೊಳಿಸಲು ನಿರ್ಧರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Marnus Labuschagne
Koo

ಬೆಂಗಳೂರು : 2023ರ ಏಕದಿನ ವಿಶ್ವಕಪ್ (World Cup 2023) ಫೈನಲ್ ಪಂದ್ಯದ ವೇಳೆ ಭಾರತ ವಿರುದ್ಧ ಆಡಲು ಬಳಸಿದ್ದ ಬ್ಯಾಟ್​ಗೆ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್​ ಮರ್ನಸ್ ಲಾಬುಶೇನ್ (Marnus Labuschagne) ವಿದಾಯ ಹೇಳಿದ್ದಾರೆ. ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ದೊಡ್ಡ ಪಂದ್ಯದಲ್ಲಿ ಲಾಬುಶೇನ್ 58 (110) ರನ್ ಗಳಿಸುವ ಮೂಲಕ ನಿರ್ಣಾಯಕ ಅರ್ಧಶತಕ ಗಳಿಸಿದ್ದರು. ನಿರ್ಣಾಯಕ ಹಂತದಲ್ಲಿ ಬ್ಯಾಟಿಂಗ್​ಗೆ ಇಳಿದ ಬಲಗೈ ಬ್ಯಾಟ್ಸ್ಮನ್ ಭಾರತದ ಆಸೆಗೆ ತಣ್ಣೀರು ಎರಚಿದ್ದರು. ಯಾಕೆಮದರೆ ಆಸ್ಟ್ರೇಲಿಯಾವು 7 ಓವರ್​ಗಳಲ್ಲಿ 47ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡಿದ್ದರೂ ನಂತರದಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೇ ಗೆಲುವು ಸಾಧಿಸಿತ್ತು.

ಟ್ರಾವಿಸ್ ಹೆಡ್ ಜೊತೆಗೂಡಿ 215 ಎಸೆತಗಳಲ್ಲಿ 192 ರನ್​ಗಳ ಜೊತೆಯಾಟವಾಡಿದ ಲಾಬುಶೇನ್ ಆಸ್ಟ್ರೇಲಿಯಾ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದರ ಪರಿಣಾಮವಾಗಿ, ಆಸ್ಟ್ರೇಲಿಯಾವು ಪಂದ್ಯವನ್ನು ಆರು ವಿಕೆಟ್ ಗಳಿಂದ ಗೆದ್ದು ಆರನೇ ಏಕದಿನ ವಿಶ್ವಕಪ್ ಅನ್ನು ಗೆದ್ದುಕೊಂಡಿತು. ಸ್ಟಾರ್ ಬ್ಯಾಟರ್​​ ಇತ್ತೀಚೆಗೆ ತಾವು ಫೈನಲ್​​ನಲ್ಲಿ ಬಳಸಿದ ಬ್ಯಾಟ್​ನ ಚಿತ್ರವನ್ನು ಹಂಚಿಕೊಂಡಿದ್ದಾರೆ, ಅದು ಹಾಳಾದ ಸ್ಥಿತಿಯಲ್ಲಿತ್ತು ಮತ್ತು ಅದನ್ನು ನಿವೃತ್ತಿಗೊಳಿಸಲು ನಿರ್ಧರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

“ವಿಶ್ವಕಪ್ ಫೈನಲ್ ಬ್ಯಾಟ್​ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ಭಾವಿಸುತ್ತೇನೆ” ಎಂದು ಲಾಬುಶೇನ್ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

ವಿಶ್ವ ಕಪ್​​ ಪಂದ್ಯಾವಳಿಯುದ್ದಕ್ಕೂ ಅದ್ಭುತ ಫಾರ್ಮ್ ನಲ್ಲಿದ್ದ ಭಾರತದ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರ ಅದ್ಭುತ ಬೌಲಿಂಗ್ ಸ್ಪೆಲ್ ಲಾಬುಶೇನ್​ಗೆ ತೊಂದರೆ ಮಾಡಿತು. ಆದಾಗ್ಯೂ ಅವರು ಎಲ್ಲವನ್ನೂ ಮೀರಿ ಗೆದ್ದರು. ಟ್ರಾವಿಸ್ ಹೆಡ್ ಮತ್ತೊಂದು ತುದಿಯಿಂದ ಭಾರತೀಯ ಬೌಲಿಂಗ್ ದಾಳಿಯನ್ನು ಪುಡಿ ಮಾಡಿದ್ದರಿಂದ ಲಾಬುಶೇನ್​ಗೆ ನೆರವಾಯಿತು. 15 ಬೌಂಡರಿ ಮತ್ತು 4 ಸಿಕ್ಸರ್ಗಳ ಸಹಾಯದಿಂದ 137 (120) ರನ್ ಹೆಡ್​ ಗೆಲುವಿನ ರೂವಾರಿ ಎನಿಸಿಕೊಂಡರು. ಲಾಬುಶೇನ್ ತಮ್ಮ 58 ರನ್ಗಳ ಇನಿಂಗ್ಸ್​ನಲ್ಲಿ ಕೇವಲ ನಾಲ್ಕು ಬೌಂಡರಿಗಳನ್ನು ಗಳಿಸಿದರು. 43 ಓವರ್​ಗಳಲ್ಲಿ 241 ರನ್​​ಗಳ ಗುರಿ ಬೆನ್ನಟ್ಟಲು ಈ ಜೋಡಿ ಆಸ್ಟ್ರೇಲಿಯಾಕ್ಕೆ ಸಹಾಯ ಮಾಡಿತು.

ಏಕದಿನ ವಿಶ್ವಕಪ್​​ನಲ್ಲಿ ಲಾಬುಶೇನ್ ಹತ್ತು ಇನ್ನಿಂಗ್ಸ್ಗಳಿಂದ 40.22 ಸರಾಸರಿಯಲ್ಲಿ 362 ರನ್ ಗಳಿಸಿದ್ದಾರೆ. ಮೂರು ಅರ್ಧಶತಕಗಳೊಂದಿಗೆ 70.70 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅವರು ಇಂಗ್ಲೆಂಡ್ ವಿರುದ್ಧ 71 (83) ರನ್ ಗಳಿಸಿ ಪಂದ್ಯಾವಳಿಯ ಗರಿಷ್ಠ ಸ್ಕೋರ್ ಆಗಿದೆ.

Continue Reading
Advertisement
Rent Agreement
ವಾಣಿಜ್ಯ6 mins ago

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

NIRF 2024 Rank
ಶಿಕ್ಷಣ24 mins ago

NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Rakshabandhan Shopping 2024
ಫ್ಯಾಷನ್31 mins ago

Rakshabandhan Shopping 2024: ವಾರಕ್ಕೆ ಮುನ್ನವೇ ಶುರುವಾಯ್ತು ರಕ್ಷಾ ಬಂಧನದ ಶಾಪಿಂಗ್‌!

Viral News
Latest34 mins ago

Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

Teachers Recruitment
ಕರ್ನಾಟಕ34 mins ago

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Hindenburg Report
ಪ್ರಮುಖ ಸುದ್ದಿ46 mins ago

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Independence Day 2024
ದೇಶ1 hour ago

Independence Day 2024: ಈ ಬಾರಿ ಆಚರಿಸುತ್ತಿರುವುದು ಎಷ್ಟನೇ ಸ್ವಾತಂತ್ರ್ಯೋತ್ಸವ? 77 or 78?

KSET updates
ಬೆಂಗಳೂರು1 hour ago

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

Indian Dessert 2024
Latest1 hour ago

Indian Dessert 2024: ವಿಶ್ವದ ಪ್ರಸಿದ್ಧ ʼಸಿಹಿತಿಂಡಿ ತಾಣʼಗಳ ಪಟ್ಟಿಯಲ್ಲಿ ಸ್ಥಾನ ಪಡೆದ 10 ಭಾರತೀಯ ಸ್ವೀಟ್‌ ಸ್ಟಾಲ್‌ಗಳಿವು

Teachers Protest
ಕರ್ನಾಟಕ1 hour ago

Teachers Protest: ಶಿಕ್ಷಕರ ಪ್ರತಿಭಟನೆ; ಬಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌