Site icon Vistara News

Ambedkar’s Portrait: ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ಸರ್ಕಾರ ಆದೇಶ

Ambedkar's portrait

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (ಆ.15) ಮತ್ತು ಸಂವಿಧಾನ ದಿನಾಚರಣೆ (ನ.6) ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರ್‌ (Dr BR Ambedkar) ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ (Ambedkar’s Portrait) ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ಮಾತ್ರವಲ್ಲದೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಬೇಕು.

ಅದೇ ರೀತಿ ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

OPS News

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿರುವ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2006ಕ್ಕೂ ಮುನ್ನ ನೇಮಕಾತಿಯಾದ ನೌಕರರನ್ನು ಹಳೆಯ ಡಿಫೈನ್ಡ್‌ ಪಿಂಚಣಿ ಯೋಜನೆಗೆ(ಒಪಿಎಸ್‌) ಒಳಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅರುಳ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ. ಅರ್ಹ ನೌಕರರನ್ನು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

2006ರ ಏಪ್ರಿಲ್‌ 1ಕ್ಕೂ ಮೊದಲು ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ, 006ರ ಏಪ್ರಿಲ್‌ 1ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ-ಎನ್‌ಪಿಎಸ್‌) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಯ(OPS) ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ಈ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ ಜೂನ್ 30‌ ಆಗಿತ್ತು. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ಜುಲೈ 31ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್‌ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ಆಗಸ್ಟ್‌ 31ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸಬೇಕು.

ಇದನ್ನೂ ಓದಿ | CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸು ಮಾಡದೇ, ಕ್ರೋಡೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, 2024ರ ಜ.1ರ ಆದೇಶದನ್ವಯ ಎನ್.ಪಿ.ಎಸ್.ನಿಂದ ಒಪಿಎಸ್‌ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಡೀಕೃತ ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ಆಗಸ್ಟ್‌ 31ರೊಳಗೆ ಸಲ್ಲಿಸುವಂತೆ ಕೋರಿದ್ದಾರೆ.

Exit mobile version