ಬೆಂಗಳೂರು: ದೈತ್ಯ ಉದ್ಯಮಿ ಮುಖೇಶ್ ಅಂಬಾನಿ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ವಿವಾಹ ಸಮಾರಂಭದ ಕುರಿತ ಹೊಸ ವಿಷಯವೊಂದು ಬಹಿರಂಗಗೊಂಡಿದೆ. ಫ್ರೆಂಚ್ ಕ್ರೂಸ್ನಲ್ಲಿ ತಮ್ಮ ವಿವಾಹ ಪೂರ್ವ ಎರಡಡನೇ ಪಾರ್ಟಿಯನ್ನು ಪ್ರಾರಂಭಿಸುತ್ತಿದ್ದಂತೆ ಎಲ್ಲರ ಕಣ್ಣುಗಳು ಅವರ ಮೇಲೆ ನೆಟ್ಟಿದ್ದವು. ಸಂತೋಷಕೂಟಕ್ಕಾಗಿ ಅಂಬಾನಿ ದಂಪತಿಗಳು (Ambani Couple) ಫ್ರಾನ್ಸ್ ಮತ್ತು ಇಟಲಿಯಾದ್ಯಂತ ಪ್ರಯಾಣಿಸಿದ್ದರು ಮತ್ತು ಐಷಾರಾಮಿ ಹಡಗಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು. ವಈ ಆಚರಣೆಗಳ ನಡುವೆ, ದಂಪತಿಗಳು ಜುಲೈನಲ್ಲಿ ಮದುವೆಯಾಗಲಿದ್ದಾರೆ ಎಂದು ಇತ್ತೀಚಿನ ವರದಿಯೊಂದು ಬಹಿರಂಗಪಡಿಸಿದೆ.
ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಮದುವೆ ನಡೆಯಲಿದೆ.
ಭಾರತೀಯ ಸಂಪ್ರದಾಯದ ಉಡುಪುಗಳು
ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್
ವಿವಾಹ ಪೂರ್ವ ಪಾರ್ಟಿಯಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್, ರಣವೀರ್ ಸಿಂಗ್, ಸಲ್ಮಾನ್ ಖಾನ್ ಮತ್ತು ಎಂಎಸ್ ಧೋನಿ ಭಾಗವಹಿಸುವ ನಿರೀಕ್ಷೆಯಿದೆ. ಬ್ಯಾಕ್ ಸ್ಟ್ರೀಟ್ ಬಾಯ್ಸ್ ಪಾರ್ಟಿಯಲ್ಲಿ ಪ್ರದರ್ಶನ ನೀಡುವ ದೃಶ್ಯಗಳು ಇತ್ತೀಚೆಗೆ ವೈರಲ್ ಆಗಿದ್ದವು. ಗುರು ರಾಂಧವ ಮತ್ತು ಪಿಟ್ಬುಲ್ ಕೂಡ ಈ ತಾರೆಗಳಿಂದ ಕೂಡಿದ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂಬ ವದಂತಿಗಳಿವೆ.