Site icon Vistara News

Stabbing Case : ಪಾರ್ಕಿಂಗ್ ವಿಚಾರದಲ್ಲಿ ಜಗಳ; ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದ ನಟಿ ಅನುಷ್ಕಾ ಶೆಟ್ಟಿಯ ಮಾವ

stabbing Case

ಪುತ್ತೂರು (ದಕ್ಷಿಣ ಕನ್ನಡ): ಇಲ್ಲಿನ ಕೋರ್ಟ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಿಚಾರದಲ್ಲಿ ನಡೆದ ಗಲಾಟೆ ತಾರಕ್ಕೇರಿದ ಹಿನ್ನೆಲೆಯಲ್ಲಿ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಮಾವ ಉರಮಾಲು ಗುಣಶೇಖ‌ರ್ ಶೆಟ್ಟಿ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (Stabbing Case) ಇರಿದಿದ್ದಾರೆ. ಅವರೊಂದಿಗೆ ಗಲಾಟೆ ಮಾಡಿರುವ ಸದಾಶಿವ ಪೈ ಎಂಬುವರ ಕೈಗೆ ಗಾಯವಾಗಿದೆ.

ಘಟನೆಯಲ್ಲಿ ಸದಾಶಿವ ಪೈ ಅವರ ಕೈ ಗೆ ಗಾಯವಾಗಿದ್ದು ಅವರು ಪುತ್ತೂರಿನ ಸರಕಾರಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರು ಗುಣಶೇಖರ್ ಅವರ ತಲೆಗೂ ಹೊಡೆದಿದ್ದಾರೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ.

ಕೋರ್ಟ್ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿರುವ ವಿಚಾದಲ್ಲಿ ಗಲಾಟೆ ಆರಂಭವಾಗಿತ್ತು. ಕಾರಿಗೆ ಇನ್ನೊಂದು ಕಾರು ಅಡ್ಡಲಾಗಿ ನಿಲ್ಲಿಸಲಾಗಿದೆ ಎಂಬುವ ವಿಚಾರದಲ್ಲಿ ಗುಣಶೇಖರ್ ಮತ್ತು ಸದಾಶಿವ ಪೈ ನಡುವೆ ಗಲಾಟೆ ಆರಂಭಗೊಂಡಿದೆ. ಈ ವೇಳೆ ಕೈಕೈ ಮಿಲಾಯಿಸಿದ್ದು ಗುಣಶೇಖರ್ ಅವರು ಚಾಕು ತೆಗೆದು ಇರಿದಿದ್ದಾರೆ. ಗಾಯಗೊಂಡ ಸದಾಶಿವ ಪೈ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದಾರೆ. ಗುಣಶೇಖರ್ ಅವರೂ ಪ್ರತಿದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Wild Elephant : ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚರಿಸುವವರಿಗೆ ಎಚ್ಚರಿಕೆ; ಆಗಾಗ ಕಾಣಿಸಿಕೊಳ್ಳುತ್ತಿದೆ ಒಂಟಿ ಸಲಗ

ಕಿರಿದಾಗಿರುವ ಕೋರ್ಟ್‌ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ಇದೆ. ಈ ರಸ್ತೆಯಲ್ಲಿನ ಅಂಗಡಿಯೊಂದರ ಮುಂದೆ ಈ ಇಬ್ಬರ ನಡುವೆ ವಾಹನ ಪಾರ್ಕ್ ಮಾಡಿದ ವಿಚಾರವಾಗಿ ಗಲಾಟೆ ಆಗಿದೆ. ಈ ವೇಳೆ ಗುಣಶೇಖರ್ ಸದಾಶಿವ ಪೈ ಅವರಿಗೆ ಚೂರಿಯಿಂದ ಇರಿದಿದ್ದಾರೆ. ಚೂರಿ ಇರಿತದಿಂದ ತಪ್ಪಿಸಿಕೊಳ್ಳಲು ಕೈ ಅಡ್ಡ ಹಿಡಿದಿದ್ದ ಸದಾಶಿವ ಪೈ ಕೈಗೆ ಗಾಯವಾಗಿದೆ. ಸದಾಶಿವ ಪೈ ಪುತ್ತೂರಿನ ದರ್ಬೆ ನಿವಾಸಿಯಾಗಿದ್ದು, ಪುತ್ತೂರಿನ ಮುಕ್ರಂಪಾಡಿಯ ಆನಂದಾಶ್ರಮದಲ್ಲಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಗುಣಶೇಖರ್ ಶೆಟ್ಟಿ ಉರಮಾಲ್ ನಿವಾಸಿ. ಇಬ್ಬರೂ ಕೂಡಾ 60ರ ಆಸುಪಾಸಿನಲ್ಲಿ ಇರುವ ವ್ಯಕ್ತಿಗಳಾಗಿದ್ದು, ಪಾರ್ಕಿಂಗ್ ವಿಚಾರದಲ್ಲಿ ಕೈ ಕೈ ಮಿಲಾಯಿಸಿದ್ದು ಅಚ್ಚರಿ ಮೂಡಿಸಿದೆ.

14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

ಜಾರ್ಖಂಡ್: ಅತ್ಯಾಚಾರ ಪ್ರಕರಣ ದೇಶದಲ್ಲಿ ಹೆಚ್ಚಾಗುತ್ತಿದೆ. ನಿತ್ಯ ಒಂದಿಲ್ಲೊಂದು ಕಡೆ ಅತ್ಯಾಚಾರ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ಕೆಲವೊಂದು ಪ್ರಕರಣಗಳು ಬೆಳಕಿಗೆ ಬರುತ್ತವೆ. ಇನ್ನು ಕೆಲವು ಹಾಗೆಯೇ ಮುಚ್ಚಿ ಹೋಗುತ್ತದೆ. ಅದರಲ್ಲೂ ಅಪರಿಚಿತರಿಂದ ಹುಡುಗಿಯರು ಅತ್ಯಾಚಾರಕ್ಕೆ (Rape Case ) ಒಳಗಾಗುವುದಕ್ಕಿಂತ ಹೆಚ್ಚು ತಮ್ಮವರಿಂದಲೇ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅಂತಹದೊಂದು ಘಟನೆ ಇದೀಗ ಜಾರ್ಖಂಡ್‌ನಲ್ಲಿ ನಡೆದಿದೆ.

14 ವರ್ಷದ ಬಾಲಕಿಯನ್ನು ಆಕೆಯ ಅಪ್ರಾಪ್ತ ಗೆಳೆಯ ಮತ್ತು ಆತನ ಆರು ಮಂದಿ ಗೆಳೆಯರು ಸೇರಿ 2 ದಿನಗಳ ಕಾಲ ಅತ್ಯಾಚಾರ ಎಸಗಿ, ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ ಘಟನೆ ಜಾರ್ಖಂಡ್‌ನ ಧನ್ಬಾದ್ ಜಿಲ್ಲಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಗೆಳೆಯ ಇಬ್ಬರೂ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಭಾನುವಾರ ಸಂಜೆ ಅವಳನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾನೆ. ಅಲ್ಲಿ ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯನ್ನು ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಮರುದಿನ ಸಂಜೆ ಆತನ ಗೆಳೆಯನ ಐದು ಮಂದಿ ಸ್ನೇಹಿತರು ಬಂದು ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ಲೈಂಗಿಕ ದೌರ್ಜನ್ಯದ ಕೃತ್ಯವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಬಾಲಕಿ ಸಹಾಯಕ್ಕಾಗಿ ಕಿರುಚಿದಾಗ ಆಕೆಯ ಕೂಗಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಧನ್ಸಾರ್ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲ ಅವರಲ್ಲಿ ಒಬ್ಬ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ಅಪರಾಧ ಸ್ಥಳದಲ್ಲಿದ್ದ ಆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಆರೋಪಿಯ ಮನೆ ಮೇಲೆ ದಾಳಿ ಮಾಡಿದಾಗ ಅಲ್ಲಿ ಯಾರೂ ಇರಲಿಲ್ಲ. ಹಾಗೇ ಸಂತ್ರಸ್ತೆಯ ಕುಟುಂಬದವರನ್ನು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಧನ್ಸಾರ್ ಪೊಲೀಸರು ತಿಳಿಸಿದ್ದಾರೆ.

Exit mobile version