MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು - Vistara News

ಪ್ರಮುಖ ಸುದ್ದಿ

MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ (KIADB site allotment) ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ ಪ್ರಾಸಿಕ್ಯೂ‌ಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ‌ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

VISTARANEWS.COM


on

Minister MB Patil statement in janandolana programme by congress party at ramanagara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕದ ಬಳಿಕ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೆ ಸಂಕಷ್ಟ ತಗುಲಿಕೊಂಡಿದೆ. ಎಂಬಿ ಪಾಟೀಲ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ (Governor Thawar Chand Gehlot) ದೂರು ಸಲ್ಲಿಸಲಾಗಿದೆ.

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ (KIADB site allotment) ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂ‌ಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ‌ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ದಿನೇಶ್‌ ಕಲ್ಲಹಳ್ಳಿ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ಇತ್ತೀಚೆಗೆ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಎಂಬವರು ಮನವಿ ಮಾಡಿದ್ದರು. ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದೀಗ ಈ ಕೇಸು ಹೈಕೋರ್ಟ್‌ನಲ್ಲಿದೆ.

ಸಿದ್ದರಾಮಯ್ಯ ತಡೆಯಾಜ್ಞೆ ಕೋರಿದ ಅರ್ಜಿ ವಿಚಾರಣೆ 29ಕ್ಕೆ

ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಹಾಗೂ ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನು ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದ್ದಾರೆ. ಎಲ್ಲಾ ವಾದವನ್ನು ಕೋರ್ಟ್‌ ಆಲಿಸಿದ್ದು,
ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು (Viral Video) ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
Koo


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Prajwal Revanna Case: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು, 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 137 ಸಾಕ್ಷಿಗಳ ಹೇಳಿಕೆ ಸೇರಿದಂತೆ 2144 ಪುಟಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Student Missing: ಓದಿಲ್ಲ ಎಂದು ಬೈದದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ನಾಲ್ಕನೇ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಇದಕ್ಕೂ ಮೊದಲು ಮೂರು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿತ್ತು. ಇದರಲ್ಲಿ ಒಂದು ಜಾಮೀನು ಅರ್ಜಿ, ಎರಡು ನಿರೀಕ್ಷಣಾ ಜಾಮೀನು ಅರ್ಜಿ ಸೇರಿವೆ. ಅದೇ ರೀತಿ ಜುಲೈ 24ರಂದು ಮೂರನೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿತ್ತು. ಇದರಿಂದ ನಾಲ್ಕನೇ ಕೇಸ್‌ನಲ್ಲಿಯೂ ಪ್ರಜ್ವಲ್‌ಗೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಹಾಸನ ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್‌ ಅವರು ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದರು.

ಸಂಸದರಾಗಿ ಶ್ರೇಯಸ್‌ ಎಂ.ಪಟೇಲ್‌ ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಆ ಕುರಿತು ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಹಾಗಾಗಿ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ ಹಾಗೂ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ಕೋರಿದ್ದಾರೆ. ಅರ್ಜಿ ಸಂಬಂಧ ಶ್ರೇಯಸ್‌ ಪಟೇಲ್‌ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

Continue Reading

ಪ್ರಮುಖ ಸುದ್ದಿ

Sexual assault: ಶಾಲೆಗಳಲ್ಲಿ ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಅತ್ಯಾಚಾರ; ಪ್ರಮುಖ ಆರೋಪಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Sexual assault: ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಶಿವರಾಮನ್‌ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ದಾಖಲಾಗಿತ್ತು. ದೂರಿನಾಧಾರದಲ್ಲಿ ಆತನನ್ನು ಅರೆಸ್ಟ್‌ ಮಾಡಲು ಮುಂದಾಗಿದ್ದರು. ಈವೇಳೆ ಆತ ತಪ್ಪಿಸಿಕೊಂಡು ಹೋಗಲೂ ಯತ್ನಿಸಿದ್ದ. ಆದರೆ ಆ.19ರಂದು ಪೊಲೀಸರು ಅರೆಸ್ಟ್‌ ಮಾಡಿದ್ದರು. ಆದರೆ ಅದಕ್ಕೂ ಮುನ್ನ ಆತ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಅತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇಂದು ಆತ ಕೊನೆಯುಸಿರೆಳೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11ಜನರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Sexual assault
Koo

ಚೆನ್ನೈ: ತಮಿಳುನಾಡಿನಲ್ಲಿ ನಕಲಿ ಎನ್‌ಸಿಸಿ ಕ್ಯಾಂಪ್‌(Fake NCC camp) ಆಯೋಜಿಸಿ ಬಾಲಕಿ ಮೇಲೆ ಅತ್ಯಾಚಾರ(Sexual assault) ಮತ್ತು ಇತರ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಎಸಗುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡಿನ ಬಾರ್ಗರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಿವರಾಮನ್‌ ಎಂಬಾತ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನು ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಶಿವರಾಮನ್‌ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ದಾಖಲಾಗಿತ್ತು. ದೂರಿನಾಧಾರದಲ್ಲಿ ಆತನನ್ನು ಅರೆಸ್ಟ್‌ ಮಾಡಲು ಮುಂದಾಗಿದ್ದರು. ಈವೇಳೆ ಆತ ತಪ್ಪಿಸಿಕೊಂಡು ಹೋಗಲೂ ಯತ್ನಿಸಿದ್ದ. ಆದರೆ ಆ.19ರಂದು ಪೊಲೀಸರು ಅರೆಸ್ಟ್‌ ಮಾಡಿದ್ದರು. ಆದರೆ ಅದಕ್ಕೂ ಮುನ್ನ ಆತ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಅತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇಂದು ಆತ ಕೊನೆಯುಸಿರೆಳೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11ಜನರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಏನಿದು ಘಟನೆ?

ಕೃಷ್ಣಗಿರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿ ಶಿವರಾಮನ್‌ ಖಾಸಗಿ ಶಾಲೆಯೊಂದಕ್ಕೆ ಭೇಟಿ ಕೊಟ್ಟು ಎನ್‌ಸಿಸಿ ಕ್ಯಾಂಪ್‌ ಆಯೋಜಿಸುವ ಬಗ್ಗೆ ಚರ್ಚೆ ನಡೆಸಿದ್ದಾನೆ. ಆತನೇ ಸ್ವಯಂ ಆಸಕ್ತಿಯಿಂದ ಎನ್‌ಸಿಸಿ ಕ್ಯಾಂಪ್‌ ಆಯೋಜಿಸಿದ್ದ. ಆತನ ಜೊತೆಗಿದ್ದ ತಂಡವನ್ನು ಮತ್ತು ಆತನ ಹಿನ್ನೆಲೆ ಬಗ್ಗೆ ಸರಿಯಾಗಿ ಪರಿಶೀಲನೆ ನಡೆಸದೇ ಶಾಲಾ ಪ್ರಾಂಶುಪಾಲರು ಇದಕ್ಕೆ ಒಪ್ಪಿದರು.

ಶಿಬಿರವು ಆಗಸ್ಟ್ 5 ರಿಂದ ಆಗಸ್ಟ್ 9 ರವರೆಗೆ ನಡೆದಿದ್ದು, 17 ಹುಡುಗಿಯರು ಸೇರಿದಂತೆ 41 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಸಮಯದಲ್ಲಿ, ಹುಡುಗರನ್ನು ನೆಲ ಮಹಡಿಯಲ್ಲಿ ಮತ್ತು ಹುಡುಗಿಯರನ್ನು ಮೇಲಿನ ಮಹಡಿಯಲ್ಲಿ ಇರಿಸಲಾಗಿತ್ತು. ಅಲ್ಲಿ ಮಿಲಿಟರಿ ತರಹದ ತರಬೇತಿ ನೀಡಲಾಗಿತ್ತು. ಅಲ್ಲದೇ ರಾತ್ರಿಯಲ್ಲಿ ನಾಲ್ಕು ಗಂಟೆಗಳ ಪಾಳಿಗಳವರೆಗೆ ಶಾಲೆಯ ಕಾಂಪೌಂಡ್ ಅನ್ನು ಕಾವಲು ಕಾಯಲು ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ನಿಯೋಜಿಸಲಾಯಿತು. ಈ ರಾತ್ರಿ ಪಾಳಿಯಲ್ಲಿ ಶಿವರಾಮನ್ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಸಂತ್ರಸ್ತೆ ಶಾಲೆಯ ಪ್ರಾಂಶುಪಾಲರಾದ ಸತೀಶ್ ಕುಮಾರ್ ಅವರಿಗೆ ಈ ಹೀನ ಕೃತ್ಯದ ಬಗ್ಗೆ ದೂರು ನೀಡಿದ್ದಳು. ಆದರೆ ಕ್ರಮ ತೆಗೆದುಕೊಳ್ಳುವ ಬದಲು, ಪ್ರಾಂಶುಪಾಲರು, ಶಾಲೆಯ ಇಬ್ಬರು ಶಿಕ್ಷಕರೊಂದಿಗೆ ಸೇರಿ ಈ ಕೃತ್ಯವನ್ನು ಮುಚ್ಚಿಡಲು ನಿರ್ಧರಿಸಿದರು. ಹುಡುಗಿ ಅಂತಿಮವಾಗಿ ತನ್ನ ತಾಯಿಗೆ ತಿಳಿಸಿದಳು, ಆಕೆಯ ತಂದೆ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿಯನ್ನು ಹೊರತುಪಡಿಸಿ, ಕನಿಷ್ಠ ನಾಲ್ವರು ವಿದ್ಯಾರ್ಥಿನಿಯರಿಗೆ ಶಿವರಾಮನ್ ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವರಾಮನ್ ಮತ್ತು ಆತನ ಸಹಚರರು ಕೃಷ್ಣಗಿರಿಯ ಇತರ ಮೂರು ಶಾಲೆಗಳಲ್ಲಿ ಇದೇ ರೀತಿಯ ಅನಧಿಕೃತ ಎನ್‌ಸಿಸಿ ಕ್ಯಾಂಪ್‌ ನಡೆಸಿದೆ ಎನ್ನಲಾಗಿದೆ. ಅವರು ಈ ಹಿಂದಿನ ಅವಧಿಗಳ ಫೋಟೋಗಳು ಮತ್ತು ವೀಡಿಯೊಗಳನ್ನು ತೋರಿಸುವ ಮೂಲಕ ಪ್ರಸ್ತುತ ಶಾಲೆಯ ಆಡಳಿತವನ್ನು ಮನವೊಲಿಸಿದರು.

ಇದನ್ನೂ ಓದಿ: Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

Continue Reading

ವಿದೇಶ

PM Modi Ukraine Visit: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ- ಝೆಲೆನ್ಸ್ಕಿಗೆ ಆತ್ಮೀಯ ಅಪ್ಪುಗೆ

PM Modi Ukraine Visit: ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ.

VISTARANEWS.COM


on

PM Modi Ukraine Visit
Koo

ನವದೆಹಲಿ: ಪೋಲೆಂಡ್‌ ಪ್ರವಾಸ(PM Modi Poland Visit)ದ ಬಳಿಕ ಇದೀಗ ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಅಧ್ಯಕ್ಷ ವ್ಲಾಡಮಿರ್‌ ಝೆಲೆನ್ಸ್ಕಿ(Volodymyr Zelensky) ಅವರನ್ನು ಭೇಟಿ(PM Modi Ukraine Visit)ಯಾದರು. ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಭೇಟಿ ಬಹಳ ಮಹತ್ವವನ್ನು ಪಡೆದುಕೊಂಡಿದೆ. ಈ ವೇಳೆ ರಾಜತಾಂತ್ರಿಕ ಪರಿಹಾರಕ್ಕಾಗಿ ಮೋದಿ ಸಲಹೆ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಪೋಲೆಂಡ್‌ ಪ್ರವಾಸ(PM Modi Poland Visit)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್‌(Russia-Ukraine War) ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

2022 ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಸುಂದರವಾದ ನಗರವಾದ ವಾರ್ಸಾದಲ್ಲಿ ನನಗೆ ಆತ್ಮೀಯ ಸ್ವಾಗತ ನೀಡಿದ ಪಿಎಂ ಟಸ್ಕ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೀರ್ಘಕಾಲದವರೆಗೆ ಭಾರತದ ಸ್ನೇಹಿತರಾಗಿದ್ದೀರಿ ಮತ್ತು ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧವನ್ನು ಹೆಚ್ಚಿಸಲು ನೀವು ದೊಡ್ಡ ಕೊಡುಗೆ ನೀಡಿದ್ದೀರಿ ಎಂದು ಅವರು ಹೇಳಿದರು.

ಇದನ್ನೂ ಓದಿ: PM Modi Ukraine Visit: ಜಗತ್ತಿಗೆ ಶಾಂತಿ ಸಂದೇಶ ಸಾರಲು ಭಾರತ ಬದ್ಧ; ಉಕ್ರೇನ್‌ ಭೇಟಿ ಮೂಲಕ ನಿಲುವು ಸ್ಪಷ್ಟಪಡಿಸಿದ ಮೋದಿ

Continue Reading
Advertisement
Bomb threat to Wonderla Amusement Park in Urdu
ರಾಮನಗರ2 mins ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ3 mins ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು12 mins ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest16 mins ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್20 mins ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada New Movie
ಬೆಂಗಳೂರು27 mins ago

Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌

Prajwal Revanna Case
ಕರ್ನಾಟಕ28 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Here are 4 ideas for krishna janmashtami photoshoot
ಶ್ರೀ ಕೃಷ್ಣ ಜನ್ಮಾಷ್ಟಮಿ29 mins ago

Krishna janmastami: ಕೃಷ್ಣ ಜನ್ಮಾಷ್ಟಮಿಯ ಫೋಟೋಶೂಟ್‌‌ಗೆ ಇಲ್ಲಿದೆ 4 ಐಡಿಯಾ

Air India
ದೇಶ38 mins ago

Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

Viral Video
Latest38 mins ago

Viral Video: ಬೇಟೆಯಾಡಲು ಗೋಡೆ ಹತ್ತಿದ ದೈತ್ಯ ಹೆಬ್ಬಾವು; ಗಾಬರಿಗೊಳಿಸುವ ವಿಡಿಯೊ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌