ಬೆಂಗಳೂರು: ಐಡಿಬಿಐ ಬ್ಯಾಂಕ್ ಜ್ಯೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ (Job Alert) ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಫೆಬ್ರವರಿ 12 ರಂದು ಪ್ರಾರಂಭಿಸಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಫೆಬ್ರವರಿ 26ಕ್ಕೆ ಕೊನೆಗೊಳ್ಳಲಿದೆ. ಆಸಕ್ತ ಅಭ್ಯರ್ಥಿಗಳು www.idbibank.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಪರೀಕ್ಷೆಯ ತಾತ್ಕಾಲಿಕ ದಿನಾಂಕ ಮಾರ್ಚ್ 17 ಆಗಿದೆ.
ಅರ್ಹತೆ ಏನು?
ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಡಿಪ್ಲೊಮಾ ಕೋರ್ಸ್ಗಳನ್ನು ಪರಿಗಣಿಸುವುದಿಲ್ಲ.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ ಮತ್ತು ಪಿಡಬ್ಲ್ಯೂಡಿ ವರ್ಗದವರು 200 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇತರ ವರ್ಗದ ಅಭ್ಯರ್ಥಿಗಳು ₹ 1000 ಪಾವತಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್ ಸೈಟ್ ಗೆ ಹೋಗಿ www.idbibank.in
- ಮುಖಪುಟದಲ್ಲಿ, ಕೆರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಮುಂದೆ, ಕರೆಂಟ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
- “ಐಡಿಬಿಐ-ಪಿಜಿಡಿಬಿಎಫ್ ನೇಮಕಾತಿ 2024-25” ಮೇಲೆ ಕ್ಲಿಕ್ ಮಾಡಿ
- ನಂತರ, “ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ” ಆಯ್ಕೆ ಮಾಡಿ. ಮತ್ತು ನಿಮ್ಮ ಹೆಸರು, ಸಂಪರ್ಕ ವಿವರಗಳು ಮತ್ತು ಇಮೇಲ್-ಐಡಿಯನ್ನು ನಮೂದಿಸಿ
- ನೋಂದಾಯಿಸಿ ಮತ್ತು ಅರ್ಜಿ ಪ್ರಕ್ರಿಯೆಯೊಂದಿಗೆ ಮುಂದುವರಿಯಿರಿ
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ
- ಶುಲ್ಕವನ್ನು ಪಾವತಿಸಿ
- ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ ಲೋಡ್ ಮಾಡಿ
- ಅರ್ಜಿಯನ್ನು ಸಲ್ಲಿಸಿ
- ಭವಿಷ್ಯದ ದಾಖಲೆಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಪರೀಕ್ಷಾ ಅಕ್ರಮಕ್ಕೆ 10 ವರ್ಷ ಜೈಲು; ಏನಿದು ಕಾಯಿದೆ?
ನವದೆಹಲಿ: ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರ ವಿರುದ್ಧ ಇನ್ನು ಮುಂದೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ. ಈ ಬಗ್ಗೆ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ (Public Examination Bill). ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ವಿವಿಧ ಅಕ್ರಮಗಳಲ್ಲಿ ತೊಡಗಿಸುವವರಿಗೆ ಗರಿಷ್ಠ 10 ವರ್ಷ ಸಜೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲು ಅವಕಾಶವಿರುವಂತ ಕಾಯಿದೆ ರೂಪಿಸಲು ಕೇಂದ್ರ ಚಿಂತನೆ ನಡೆಸಿದೆ. ಈ ಸಂಬಂಧ ಇಂದು (ಜನವರಿ 5) ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿದೆ.
ಸಿಬ್ಬಂದಿ ಮತ್ತು ಆಡಳಿತದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ವಿಧೇಯಕ ಮಂಡಿಸಿದ್ದಾರೆ. ಈ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಪರೀಕ್ಷೆ ಅಕ್ರಮಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದರು. ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪ್ರತಿಕೆಗಳ ಸೋರಿಕೆ ಪ್ರಕರಣಗಳ ವಿರುದ್ಧ ಇತ್ತೀಚೆಗೆ ರಾಜಸ್ಥಾನ, ಗಯಜರಾತ್, ತೆಲಂಗಾಣ ಮತ್ತು ಮಧ್ಯಪ್ರದೇಶಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ನಕಲಿ ಅಭ್ಯರ್ಥಿಗಳ ಹಾಜರಿ, ಉತ್ತರ ಪತ್ರಿಕೆಗಳ ನಕಲು, ದಾಖಲೆಗಳನ್ನು ತಿರುಚುವುದು, ಮೆರಿಟ್ ಪಟ್ಟಿ ಸಿದ್ಧ ಪಡಿಸುವಲ್ಲಿನ ಅಕ್ರಮ, ಉದ್ದೇಶಪೂರ್ವಕ ಭದ್ರತಾ ವ್ಯವಸ್ಥೆ ಉಲ್ಲಂಘನೆ, ಪರೀಕ್ಷಾರ್ಥಿಗಳ ಸೀಟ್ ನಿಗದಿಪಡಿಸುವಲ್ಲಿ ಅಕ್ರಮ, ಉದ್ದೇಶಪೂರ್ವಕ ನಿಯಮ ಉಲ್ಲಂಘಸಿಸುವುದನ್ನು ಪರೀಕ್ಷಾ ಅಕ್ರಮವೆಂದು ಹೊಸ ಕಾಯಿದೆಯಡಿ ಪರಿಗಣಿಸಲಾಗುತ್ತದೆ.