Aravind Kejriwal : ತಿಹಾರ್ ಜೈಲು ಸೇರಿದ ಕೇಜ್ರಿವಾಲ್​, ಕಂಬಿಯ ಹಿಂದೆ ಅವರ ದಿನಚರಿ ಹೀಗಿದೆ - Vistara News

ಪ್ರಮುಖ ಸುದ್ದಿ

Aravind Kejriwal : ತಿಹಾರ್ ಜೈಲು ಸೇರಿದ ಕೇಜ್ರಿವಾಲ್​, ಕಂಬಿಯ ಹಿಂದೆ ಅವರ ದಿನಚರಿ ಹೀಗಿದೆ

Aravind Kejriwal ಮದ್ಯ ನೀತಿ ಹಗರಣ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ತಿಹಾರ್​ಜೈಲು ಸೇರಿದ್ದಾರೆ. ಅವರನ್ನು ಜೈಲು ಸಂಖ್ಯೆ 2 ರಲ್ಲಿ ಇರಿಸಲು ನಿರ್ಧರಿಸಲಾಗಿದೆ. ಅಂದ ಹಾಗೆ ಇದೇ ಪ್ರಕರಣದ ಮತ್ತೊಬ್ಬ ಆರೋಪಿ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಜೈಲಿನ ಸಂಖ್ಯೆ 1 ರಲ್ಲಿ ಇರಿಸಲಾಗಿದೆ.

VISTARANEWS.COM


on

Tihar Jail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಹೀಗಾಗಿ ಅವರು ತಿಹಾರ್​ ಜೈಲಿಗೆ ಕಳುಹಿಸಲಾಗಿದೆ. ಲೋಕಸಭಾ ಚುನಾವಣೆಯ (Loksabha Election) ಮತದಾನ ಪ್ರಾರಂಭವಾಗಲು ಮೂರು ವಾರಗಳಿಗಿಂತ ಕಡಿಮೆ ಇರುವಾಗ ಈ ನಿರ್ಧಾರ ಪ್ರಕಟಗೊಂಡಿದೆ.

ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿ ಮುಗಿದ ನಂತರ ಕೇಜ್ರಿವಾಲ್ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿದ್ದು ನಂತರ ಅವರಿಗೆ ಹೆಚ್ಚುವರಿ ಕಸ್ಟಡಿ ಬೇಕಾಗಬಹುದು ಎಂದು ಹೇಳಿದೆ. ಅಂತೆಯೇ ಜೈಲು ಸೇರಿರುವ ಅವರ ದಿನಚರಿ ಹೇಗಿದೆ

ಜೈಲಿನಲ್ಲಿ ಕೇಜ್ರಿವಾಲ್ ವೇಳಾಪಟ್ಟಿ ಹೇಗಿದೆ?

ಇತರ ಕೈದಿಗಳಂತೆ, ಕೇಜ್ರಿವಾಲ್ ಪ್ರಸ್ತುತ ಬೆಳಿಗ್ಗೆ 6: 30 ರ ಸುಮಾರಿಗೆ ಸೂರ್ಯೋದಯಕ್ಕೆ ಮೊದಲೇ ಏಳಬೇಕು. ನಂತರ ಕೈದಿಗಳಿಗೆ ಬೆಳಿಗ್ಗೆ 6:40 ರ ಸುಮಾರಿಗೆ ಚಹಾ ಮತ್ತು ಬ್ರೆಡ್ ಉಪಾಹಾರವಾಗಿ ನೀಡಲಾಗುತ್ತದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಸ್ನಾನ ಮಾಡಿದ ನಂತರ, ಕೇಜ್ರಿವಾಲ್ ಅವರು ವಿಚಾರಣೆ ಇದ್ದರೆ ನ್ಯಾಯಾಲಯಕ್ಕೆ ಹೋಗುತ್ತಾರೆ ಅಥವಾ ತಮ್ಮ ವಕೀಲರನ್ನು ಭೇಟಿಯಾಗಬಹುದು.

ಬೆಳಿಗ್ಗೆ 11 ಗಂಟೆಗೆ ದಾಲ್, ಸಬ್ಜಿ, ರೊಟ್ಟಿ ಮತ್ತು ಅನ್ನವನ್ನು ಒಳಗೊಂಡ ಊಟ ನೀಡಲಾಗುತ್ತದೆ. ನಂತರ, ಕೈದಿಗಳು ಮಧ್ಯಾಹ್ನ 12 ರಿಂದ 3 ರವರೆಗೆ ತಮ್ಮ ಕೋಣೆಗಳಲ್ಲಿ ಇರಬೇಕಾಗುತ್ತದೆ.

ಇದನ್ನೂ ಓದಿ: Aravind Kejriwal : ತಿಹಾರ್ ಜೈಲು ಸೇರಿದ ಕೇಜ್ರಿವಾಲ್​, ಕಂಬಿಯ ಹಿಂದೆ ಅವರ ದಿನಚರಿ ಹೀಗಿದೆ 

ಇತರ ಕೈದಿಗಳಂತೆ ಎಎಪಿ ಸಂಚಾಲಕರಿಗೆ ಮಧ್ಯಾಹ್ನ 3:30 ಕ್ಕೆ ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಲಾಗುತ್ತದೆ. ಸಂಜೆ 4 ಗಂಟೆಗೆ ವಕೀಲರೊಂದಿಗೆ ಸಭೆ ನಡೆಸಬಹುದು ಎಂದು ಇಂಡಿಯನ್ ಎಕ್ಸ್​ಪ್ರೆಸ್​ ಹೇಳಿದೆ.

ನಂತರ ಸಂಜೆಯ ಊಟವನ್ನು ನೀಡಲಾಗುತ್ತದೆ, ಇದು ಮಧ್ಯಾಹ್ನದ ಊಟದಂತೆಯೇ ಭಕ್ಷ್ಯಗಳನ್ನು ಒಳಗೊಂಡಿರುತ್ತದೆ. ಕೈದಿಗಳನ್ನು ಅಂತಿಮವಾಗಿ ಸಂಜೆ 7 ಗಂಟೆ ಸುಮಾರಿಗೆ ತಮ್ಮ ಕೋಣೆಗಳಲ್ಲಿ ಬಂಧಿಸಲಾಗುತ್ತದೆ.

ಯಾವುದೇ ಜೈಲು ಚಟುವಟಿಕೆಗಳನ್ನು ನಿಗದಿಪಡಿಸದಿದ್ದಾಗ ಕೈದಿಗಳು ಬೆಳಿಗ್ಗೆ 5 ರಿಂದ ರಾತ್ರಿ 11 ರವರೆಗೆ ಟಿವಿ ವೀಕ್ಷಿಸಬಹುದು. ಸುದ್ದಿ, ಕ್ರೀಡೆ ಮತ್ತು ಮನರಂಜನೆಯ ಕೆಲವು ಚಾನೆಲ್​ಗಳು ಮಾತ್ರ ಲಭ್ಯವಿರುತ್ತದೆ.

24 ಗಂಟೆಯೂ ವೈದ್ಯಕೀಯ ಸಿಬ್ಬಂದಿ

ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಿಬ್ಬಂದಿ ದಿನದ 24 ಗಂಟೆಯೂ ಲಭ್ಯವಿರುತ್ತಾರೆ. ಮಧುಮೇಹದಿಂದ ಬಳಲುತ್ತಿರುವ ಕೇಜ್ರಿವಾಲ್ ಅವರು ಜೈಲಿನಲ್ಲಿದ್ದಾಗ ನಿಯಮಿತವಾಗಿ ತಪಾಸಣೆಗೆ ಒಳಗಾಗಲಿದ್ದಾರೆ. ಕೇಜ್ರಿವಾಲ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ವಕೀಲರು ಆಹಾರ ನಿರ್ಬಂಧಗಳನ್ನು ಹೇರುವಂತೆ ಒತ್ತಾಯಿಸಿದ್ದಾರೆ. ದೆಹಲಿ ಸಿಎಂ ವಾರಕ್ಕೆ ಎರಡು ಬಾರಿ ತಮ್ಮ ಕುಟುಂಬವನ್ನು ಭೇಟಿ ಮಾಡಬಹುದು. ಪೂರ್ವ-ಅನುಮೋದಿತ ಪಟ್ಟಿಯಲ್ಲಿ ಹೆಸರು ಇರುವ ಸದಸ್ಯರನ್ನು ಮಾತ್ರ ಭೇಟಿ ಮಾಡಬಹುದು.

ಪತ್ರಕರ್ತೆ ನೀರಜಾ ಚೌಧರಿ ಅವರ ‘ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್’ ಪುಸ್ತಕದ ಜೊತೆಗೆ ಹಿಂದೂ ಪುರಾಣ ಗ್ರಂಥಗಳಾದ ಭಗವದ್ಗೀತೆ ಮತ್ತು ರಾಮಾಯಣವನ್ನು ತೆಗೆದುಕೊಂಡು ಹೋಗಲು ಕೇಜ್ರಿವಾಲ್ ಅವರ ವಕೀಲರು ಅನುಮತಿ ಕೋರಿದ್ದಾರೆ.

ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿ ಎಲ್ಲಿ ಉಳಿಯುತ್ತಾರೆ?

ಕೇಜ್ರಿವಾಲ್ ಅವರನ್ನು ತಿಹಾರ್ ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗುವುದು ಎಂದು ಎಎನ್ಐ ವರದಿ ಮಾಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜೈಲು ಸಂಖ್ಯೆ 1 ರಲ್ಲಿ ಇರಿಸಲಾಗಿದೆ. ಮಾಜಿ ನಗರ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಜೈಲು ಸಂಖ್ಯೆ 7 ರಲ್ಲಿದ್ದಾರೆ ಮತ್ತು ಕೆಲವು ದಿನಗಳ ಹಿಂದೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಜೈಲು ಸಂಖ್ಯೆ 5 ಕ್ಕೆ ಸ್ಥಳಾಂತರಿಸಲಾಗಿದೆ.

ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್​) ನಾಯಕಿ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಪ್ರಸ್ತುತ ಮಹಿಳಾ ವಿಭಾಗದ ಜೈಲು ಸಂಖ್ಯೆ 6 ರಲ್ಲಿ ಇರಿಸಲಾಗಿದೆ.

ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲು

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ನ್ಯಾಯಾಲಯದ ಆದೇಶದ ಪ್ರಕಾರ 10 ದಿನಗಳ ಕಾಲ ಇಡಿ ವಶದಲ್ಲಿದ್ದರು. ಈ ಹಿಂದೆ, ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಕೇಜ್ರಿವಾಲ್ ನೇರ ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿತ್ತು.

ಭ್ರಷ್ಟಾಚಾರದ ಆರೋಪದ ಮೇಲೆ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡಿದ್ದು, ಭಾರತದಲ್ಲಿ ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದು ಇದೇ ಮೊದಲು. ಕೇಜ್ರಿವಾಲ್ ಅವರು ಇಡಿಯಿಂದ ಒಂಬತ್ತು ಸಮನ್ಸ್​ಗಳನ್ನು ತಪ್ಪಿಸಿಕೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣವು ದೆಹಲಿ ಅಬಕಾರಿ ನೀತಿ 2022 ರ ಅಭಿವೃದ್ಧಿ ಮತ್ತು ಅನುಷ್ಠಾನದ ಸಮಯದಲ್ಲಿ ಅಕ್ರಮಗಳು ನಡೆದಿವೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

PM Nanrendra Modi: ನಾಳೆ ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ.

VISTARANEWS.COM


on

pm narendra Modi Varanasi road show
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Nanrendra Modi) ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ (Varanasi) ಲೋಕಸಭೆ ಚುನಾವಣೆ (Lok Sabha Election 2024) ಬಿಜೆಪಿ (BJP) ಸ್ಪರ್ಧಿಯಾಗಿ ನಾಮಪತ್ರ (nomination) ಸಲ್ಲಿಸಲಿದ್ದಾರೆ. ಇದಕ್ಕೆ ಒಂದು ದಿನ ಮೊದಲು, ಅಂದರೆ ಇಂದು ಸಂಜೆ ಭವ್ಯವಾದ ರೋಡ್‌ ಶೋ ನಡೆಯಲಿದೆ.

ರೋಡ್ ಶೋ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಗೇಟ್‌ನಿಂದ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಅಲ್ಲಿ ಮೋದಿ ಅವರು ಬಿಎಚ್‌ಯು ಸಂಸ್ಥಾಪಕ ಮಹಾಮಾನ ಪಂ. ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ 4ರಲ್ಲಿ ರೋಡ್‌ ಶೋ ಮುಕ್ತಾಯಗೊಳ್ಳಲಿದೆ. ಮೋದಿ ರೋಡ್ ಶೋನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಜೊತೆಗೆ ಸಾಥ್ ನೀಡಲಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದ ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೆ ಇತರ ಪ್ರಮುಖರು ಭಾಗವಹಿಸಲಿದ್ದಾರೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪುಗಳು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಲಿವೆ. ಐದು ಕಿಲೋಮೀಟರ್ ಉದ್ದದ ರೋಡ್ ಶೋ ಮಿನಿ ಇಂಡಿಯಾ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಗಳ ಒಂದು ನೋಟವನ್ನು ನೀಡಲಿದೆ.

ಭಾರತ ರತ್ನ, ಶಹನಾಯ್‌ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಕುಟುಂಬ ಸದಸ್ಯರು ಮದನಪುರ ಬಳಿ ಶೆಹನಾಯಿ ಬಾರಿಸುವ ಮೂಲಕ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ರೋಡ್ ಶೋನಲ್ಲಿ 5,000ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಲಿದ್ದು, 100 ಕಡೆ ಪುಷ್ಪವೃಷ್ಟಿ ಮಾಡಲಾಗುವುದು. ಇದರೊಂದಿಗೆ ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಾರಣಾಸಿಯ ಕಲಾವಿದರು ಮೋದಿಯನ್ನು ಸ್ವಾಗತಿಸಲು ಜಾನಪದ ನೃತ್ಯ ಮತ್ತು ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಮುಸ್ಲಿಂ ಸಮುದಾಯದವರೂ ಸ್ವಾಗತಕ್ಕೆ ಮುಂದೆ ಬಂದಿದ್ದು, ಮದನಪುರದಲ್ಲಿಯೇ ಮಾಜಿ ಸಂಸದ ರಾಜೇಶ್ ಮಿಶ್ರಾ ನೇತೃತ್ವದಲ್ಲಿ ಮುಸ್ಲಿಮರು ಪುಷ್ಪಾರ್ಚನೆ ಮಾಡಲಿದ್ದಾರೆ. ಪ್ರಧಾನಿ ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸುವ ಚಿತ್ರವೂ ರೋಡ್ ಶೋನಲ್ಲಿ ಇರುತ್ತದೆ. ಕಾರ್ಯಕ್ರಮ ಮುಕ್ತಾಯವಾದ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಳೆ ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

Continue Reading

ಪ್ರಮುಖ ಸುದ್ದಿ

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

HD Revanna Jailed: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ವಕೀಲ ಸಿ.ವಿ.ನಾಗೇಶ್ ರೇವಣ್ಣ ಪರ ವಾದ ಮಂಡಿಸಿದ್ದರು. ರೇವಣ್ಣ ಅವರನ್ನು ಈಗಾಗಲೇ ಎಸ್.ಐ.ಟಿ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ಪ್ರಕರಣದಲ್ಲಿ ಎಲ್ಲೂ ನೇರವಾಗಿ ರೇವಣ್ಣರ ಪಾತ್ರವಿಲ್ಲ ಎಂದು ನಾಗೇಶ್‌ ವಾದ ಮಂಡಿಸಿದ್ದರು.

VISTARANEWS.COM


on

Prajwal Revanna Case HD Revanna jailed
Koo

ಬೆಂಗಳೂರು: ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ಇಂದು ಮತ್ತೆ ಜಾಮೀನು ಅರ್ಜಿ (Bail plea) ವಿಚಾರಣೆ ಎದುರಿಸಬೇಕಿದೆ. ಬೇಲ್ ಆಗುತ್ತಾ ಅಥವಾ ಮತ್ತೆ ಜೈಲಾ ಎಂಬ ಆತಂಕದಲ್ಲಿ ರೇವಣ್ಣ ಇದ್ದಾರೆ.

ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೇ 09ರಂದು ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ವಕೀಲ ಸಿ.ವಿ.ನಾಗೇಶ್ ರೇವಣ್ಣ ಪರ ವಾದ ಮಂಡಿಸಿದ್ದರು. ರೇವಣ್ಣ ಅವರನ್ನು ಈಗಾಗಲೇ ಎಸ್.ಐ.ಟಿ ವಿಚಾರಣೆ ನಡೆಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ಪ್ರಕರಣದಲ್ಲಿ ಎಲ್ಲೂ ನೇರವಾಗಿ ರೇವಣ್ಣರ ಪಾತ್ರವಿಲ್ಲ ಎಂದು ನಾಗೇಶ್‌ ವಾದ ಮಂಡಿಸಿದ್ದರು.

ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಎಸ್.ಐ.ಟಿ ಪರ ವಾದ ಮಂಡಿಸಿದ್ದ ಎಸ್.ಪಿ.ಪಿ ಜಯ್ನಾ ಕೊಠಾರಿ, ಈ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ ಎಂದು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಕಿಡ್ನಾಪ್ ಪ್ರಕರಣ ಮಾತ್ರವಲ್ಲ ಪ್ರಜ್ವಲ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೂ ಇದಕ್ಕೂ ಸಂಬಂಧವಿದೆ ಎಂದು ಕೊಠಾರಿ ವಾದಿಸಿದ್ದರು. ಪ್ರಜ್ವಲ್ ವಿರುದ್ಧದ ಲೈಂಗಿಕ ಪ್ರಕರಣ ಸಂಬಂಧ ಸಂತ್ರಸ್ತೆಯ ಅಪಹರಣವಾಗಿದೆ. ಆರೋಪಿ ಪ್ರಭಾವಿ ಆಗಿದ್ದು, ಜಾಮೀನು ನೀಡಿದರೆ ಸಾಕ್ಷಿ ನಾಶ ಮಾಡುವ ಸಂಭವವಿದೆ ಎಂದು ವಾದಿಸಿ, ಮತ್ತೆ ವಾದ ಮಾಡಲು ಇಂದಿಗೆ ಕಾಲಾವಕಾಶ ಕೇಳಿದ್ದರು.

ಎಸ್.ಐ.ಟಿ ಪರವಾಗಿ ಎಸ್.ಪಿ.ಪಿ ಅಶೋಕ್‌ ನಾಯ್ಕ್ ವಾದ ಮಂಡನೆಗೆ ಅವಕಾಶ ಕೇಳಿದ್ದರು. ಇಂದು ಎಸ್.ಐ.ಟಿ ಪರ ವಕೀಲ ಅಶೋಕ್ ನಾಯ್ಕ್‌ರ ವಾದ ಮಂಡನೆಗೆ ಅವಕಾಶ ನೀಡಿ ಕೋರ್ಟ್‌ ವಿಚಾರಣೆ ಮುಂದೂಡಿತ್ತು. ಇಂದು ಎಸ್.ಪಿ.ಪಿ ಅಶೋಕ್ ನಾಯ್ಕ್ ಅವರ ಎಸ್.ಐ.ಟಿ ಪರ ವಾದದ ಬಳಿಕ ರೇವಣ್ಣ ಪರ ವಾದ ಮಂಡಿಸಲಿದ್ದಾರೆ ಸಿ.ವಿ.ನಾಗೇಶ್. ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ಮಧ್ಯಾಹ್ನ ಅಥವಾ ನಾಳೆಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Continue Reading

ದೇಶ

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

Lok Sabha Election: 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜನ ಹಕ್ಕು ಚಲಾವಣೆ ಮಾಡಲಿದ್ದು, 1,717 ಅಭ್ಯರ್ಥಿಗಳ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ. ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯೂ ಸೋಮವಾರ ನಡೆಯಲಿದ್ದು, 175 ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಹೋರಾಟವಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election) ನಾಲ್ಕನೇ ಹಂತದ ಮತದಾನವು (Voting) ಸೋಮವಾರ (ಮೇ 12) ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಪ್ರೋತ್ಸಾಹಿಸಿ ಎಕ್ಸ್ ಪೋಸ್ಟ್‌ ಹಾಕಿದ್ದು, “ಮತ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿ” ಎಂದಿದ್ದಾರೆ. “ಲೋಕಸಭಾ ಚುನಾವಣೆಯ ಇಂದಿನ 4ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಯುಟಿಗಳಲ್ಲಿ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ; ಯುವ ಮತದಾರರು ಹಾಗೂ ಮಹಿಳಾ ಮತದಾರರು ಮತದಾನಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ, ನಾವೆಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ! ” ಎಂದು ಬರೆದಿದ್ದಾರೆ.

10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾನ ಮುಂಜಾನೆ 7 ಗಂಟೆಗೆ ಶಾಂತಿಯುತವಾಗಿ ಆರಂಭವಾಯಿತು. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜನ ಹಕ್ಕು ಚಲಾವಣೆ ಮಾಡಲಿದ್ದು, 1,717 ಅಭ್ಯರ್ಥಿಗಳ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ

ಆಂಧ್ರಪ್ರದೇಶದಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಸತತ ಎರಡನೇ ಬಾರಿಗೆ ಸಿಎಂ ಗಾದಿಗೇರಲು ವೈ.ಎಸ್.‌ ಜಗನ್‌ಮೋಹನ್‌ ರೆಡ್ಡಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಮತ್ತೆ ಅಧಿಕಾರಕ್ಕೇರಲು ಟಿಡಿಪಿಯೂ ಸಜ್ಜಾಗಿದ್ದು, ಚುನಾವಣೆ ರಣಕಣವು ತೀವ್ರ ಜಿದ್ದಾಜಿದ್ದಿನಿಂದ ಕೂಡಿದೆ.

Y S Jagan Mohan Reddy

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಮೊಹುವಾ ಮೊಯಿತ್ರಾ: ಕೃಷ್ಣನಗರ ಕ್ಷೇತ್ರ
ಪಶ್ಚಿಮ ಬಂಗಾಳದ ಕೃಷ್ಣನಗರದಿಂದ ಸ್ಪರ್ಧೆ. ಟಿಎಂಸಿ ಅಭ್ಯರ್ಥಿ. ಸಂಸತ್ ನಲ್ಲಿ ಪ್ರಶ್ನೆಗಾಗಿ ಹಣ ಆರೋಪ ಹೊತ್ತಿರುವ ಸಂಸದೆ.

ಅಮೃತ ರಾಯ್: ಕೃಷ್ಣನಗರ ಕ್ಷೇತ್ರ
ಪಶ್ಚಿಮಬಂಗಾಳದ ಕೃಷ್ಣನಗರದ ಬಿಜೆಪಿ ಅಭ್ಯರ್ಥಿ. ರಾಜ ವಂಶಸ್ಥೆ, ಮೊಹುವಾ ಮೊಯಿತ್ರಾ ವಿರುದ್ಧ ಸ್ಪರ್ಧೆ.

ಅಧಿರ್ ರಂಜನ್ ಚೌಧರಿ : ಬೆಹರಾಮಪುರ್ ಕ್ಷೇತ್ರ
ಪಶ್ಚಿಮ ಬಂಗಾಳದ ಬೆಹರಾಂಪುರ ಕ್ಷೇತ್ರದಿಂದ ಸ್ಪರ್ಧೆ. ಕಾಂಗ್ರೆಸ್ ಅಭ್ಯರ್ಥಿ

ಯೂಸುಫ್ ಪಠಾಣ್ : ಬೆಹರಾಮಪುರ್ ಕ್ಷೇತ್ರ
ಮಾಜಿ ಕ್ರಿಕೆಟಿಗ ಯೂಸುಫ್ ಬೆಹರಾಂಪುರ ಕ್ಷೇತ್ರದಿಂದ ಟಿ ಎಂ ಸಿ ಅಭ್ಯರ್ಥಿ. ಅಧಿರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧೆ

ಅಖಿಲೇಶ್ ಯಾದವ್: ಕನೌಜ್ ಕ್ಷೇತ್ರ
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಕನೌಜ್ ಕ್ಷೇತ್ರದಿಂದ ಸ್ಪರ್ಧೆ. ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಸುಬ್ರತಾ ಪಾಠಕ್ ಸಂಸದರಾಗಿದ್ದಾರೆ. 2019 ರ ಚುನಾವಣೆಯಲ್ಲಿ ಯಾದವ್, ಪತ್ನಿ ಡಿಂಪಲ್ ಅವರನ್ನು ಸೋಲಿಸುವ ಮೂಲಕ ಪಾಠಕ್ ಗೆಲುವು ಸಾಧಿಸಿದ್ದರು

ಗಿರಿರಾಜ್ ಸಿಂಗ್: ಬೇಗುಸರಾಯ್‌ ಕ್ಷೇತ್ರ
ಬಿಹಾರದ ಬೇಗುಸರಾಯ್‌ ಕ್ಷೇತ್ರದಿಂದ ಸ್ಪರ್ಧೆ. ಬಿಜೆಪಿಯ ಉಸ್ತುವಾರಿ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್. 2019ರ ಚುನಾವಣೆಯಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ವಿರುದ್ಧ ಸಿಂಗ್ ವಿಜಯಶಾಲಿಯಾಗಿದ್ದರು

ವೈ.ಎಸ್. ಶರ್ಮಿಳಾ: ಕಡಪ ಕ್ಷೇತ್ರ
ಆಂಧ್ರದ ಮಾಜಿ ಸಿಎಂ ವೈಎಸ್ಆರ್ ಅವರ ಪುತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ, ತಮ್ಮ ಸೋದರ ಸಂಬಂಧಿ, ಎರಡು ಬಾರಿ ಹಾಲಿ ಸಂಸದ ವೈಎಸ್ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶರ್ಮಿಳಾ ಸಹೋದರ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಅಸಾದುದ್ದೀನ್ ಓವೈಸಿ: ಹೈದರಾಬಾದ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಕ್ಷೇತ್ರದಿಂದ ಸ್ಪರ್ಧೆ

ಮಾಧವಿ ಲತಾ: ಹೈದರಾಬಾದ್
ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ. ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಖ್ಯಾತಿ ಪಡೆದಿರುವ ಮಾಧವಿ ಲತಾ‌

Madhavi Lata Kompella And Asaduddin Owaisi

ಅರ್ಜುನ್ ಮುಂಡ : ಖುಂತಿ ಕ್ಷೇತ್ರ
ಮೂರು ಬಾರಿ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಸಚಿವರಾಗಿ ಕಾರ್ಯ ನಿರ್ವಹಿಸಿತ್ತಿರುವ ಅರ್ಜುನ್ ಮುಂಡ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಬಂಡಿ ಸಂಜಯ್ ಕುಮಾರ್: ಕರೀಂನಗರ ಕ್ಷೇತ್ರ
ಮಾಜಿ ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಹಾಲಿ ಸಂಸದ ಬಂಡಿ ಸಂಜಯ್ ಕುಮಾರ್ ಕರೀಂನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಶತ್ರುಘ್ನ ಸಿನ್ಹಾ: ಅಸನ್ಸೋಲ್ ಕ್ಷೇತ್ರ
ಪಶ್ಚಿಮ ಬಂಗಾಳ ಅಸನ್ನೋಲ್ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರ್ ಬಾಬು ಎಂದೇ ಪ್ರಸಿದ್ದಿಯಾಗಿರುವ ಶತ್ರುಘ್ನ ಸಿನ್ಹಾ ಸ್ಪರ್ಧೆ. ಟಿ ಎಂ ಸಿ ಪಕ್ಷದ ಅಭ್ಯರ್ಥಿ

ಕಿಶನ್ ರೆಡ್ಡಿ : ಸಿಕಂದರಾಬಾದ್ ಕ್ಷೇತ್ರ
ಪ್ರಸ್ತುತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಸ್ಪರ್ಧೆಸುತ್ತಿರುವ ಕ್ಷೇತ್ರ.

ಇದನ್ನೂ ಓದಿ: Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Continue Reading

ಭವಿಷ್ಯ

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಸೋಮವಾರ ಬೆಳಗ್ಗೆ 06:36ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಚರ್ಚಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವೃಶ್ಚಿಕ ರಾಶಿಯವರು ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಷಷ್ಠಿ 26:49 ವಾರ: ಸೋಮವಾರ
ನಕ್ಷತ್ರ: ಪುನರ್ವಸು 11:22 ಯೋಗ: ಶೂಲ 07:39
ಕರಣ: ಕೌಲವ 14:20 ಅಮೃತ ಕಾಲ: ಬೆಳಗ್ಗೆ 08:54ರಿಂದ 10:34
ದಿನದ ವಿಶೇಷ: ಸಾಲಿಗ್ರಾಮ ಯೋಗನರಸಿಂಹ ರಥೋತ್ಸವ

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಬೆಳಗ್ಗೆ 07:30 ರಿಂದ 09:05
ಗುಳಿಕಕಾಲ: ಮಧ್ಯಾಹ್ನ 01:51
ರಿಂದ 03:27
ಯಮಗಂಡಕಾಲ: ಬೆಳಗ್ಗೆ 10:41 ರಿಂದ 12:16

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಚರ್ಚಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ಇಂದು ನೀವು ಇತರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು ತೊಂದರೆಗೆ ಕಾರಣವಾಗುತ್ತದೆ. ಆರೋಗ್ಯ ಪರಿಪೂರ್ಣವಾಗಿ ಇದ್ದರೂ, ದೈಹಿಕ ಶ್ರಮ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದುವ ಸಾಧ್ಯತೆ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭವಾಗಲಿ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳು ಆಗಮಿಸುವರು. ಸಕರಾತ್ಮಕ ಆಲೋಚನೆಗಳು ನಿಮ್ಮ ಉತ್ಸಾಹ ಇಮ್ಮಡಿಗೊಳಿಸಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಕಾರಾತ್ಮಕ ಆಲೋಚನೆಗಳು ತಲೆದೊರಲಿವೆ. ಆದಷ್ಟು ಯೋಗ ಧ್ಯಾನದ ಮೂಲಕ ನೆಮ್ಮದಿ ತಂದುಕೊಳ್ಳುವುದು ಉತ್ತಮ. ಸ್ನೇಹಿತರೊಂದಿಗೆ ಕಾಲಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ:ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಅನಾರೋಗ್ಯ ಕಾರಣಕ್ಕೆ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ:ಸ್ನೇಹಿತರೊಂದಿಗೆ ವಿರಾಮ ಭೋಜನದಲ್ಲಿ ತೊಡಗುವಿರಿ. ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಇಂದು ನಿಮಗೆ ಖರ್ಚಿನ ದಿನವಿದು. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ ಇರಲಿದೆ. ಸಮೃದ್ಧಿ ತುಂಬಿದ ದಿನವಿರಲಿದೆ. ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿರಿಕ್ಷಿತ ಲಾಭ ಸಿಗಲಿದೆ. ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣ ಇರಲಿದೆ. ಆರ್ಥಿಕವಾಗಿ ಸದೃಢ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Kannada New Movie meghashri starrer kuntebille goes on floor
ಸ್ಯಾಂಡಲ್ ವುಡ್6 mins ago

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Brinda Acharya Saavira Gungali Video Song Out
ಸ್ಯಾಂಡಲ್ ವುಡ್21 mins ago

Brinda Acharya: ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ಬೃಂದಾ ಆಚಾರ್ಯ-ಭರತ್ ಬೋಪಣ್ಣ!

pm narendra Modi Varanasi road show
Lok Sabha Election 202433 mins ago

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Food Tips Kannada adulterated food effect health
ಲೈಫ್‌ಸ್ಟೈಲ್33 mins ago

Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Jyoti Rai seeks divine blessings at tirupathi
ಕಿರುತೆರೆ48 mins ago

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Kochi Tour
ಪ್ರವಾಸ1 hour ago

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

Prajwal Revanna Case HD Revanna jailed
ಪ್ರಮುಖ ಸುದ್ದಿ1 hour ago

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

ICMR  Good Health Guidelines
ಆರೋಗ್ಯ1 hour ago

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

Lok Sabha Election
ದೇಶ2 hours ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

elephant attack charmadi ghat
ವೈರಲ್ ನ್ಯೂಸ್2 hours ago

Elephant Attack: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ; ಬೆಚ್ಚಿಬಿದ್ದ ಡ್ರೈವರ್‌ನಿಂದ ಅಪಘಾತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ3 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ4 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ15 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ15 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ16 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ21 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌