Site icon Vistara News

Tejaswi Surya: ತೇಜಸ್ವಿ ಸೂರ್ಯ ಆಸ್ತಿ ಎಷ್ಟಿದೆ? ಷೇರು, ಮ್ಯೂಚುಯಲ್‌ ಫಂಡ್‌ಗಳಲ್ಲಿ ಕೋಟ್ಯಂತರ ರೂ. ಹೂಡಿಕೆ!

tejaswi surya

ಬೆಂಗಳೂರು: ಬೆಂಗಳೂರು ದಕ್ಷಿಣ (Bangalore South) ಲೋಕಸಭಾ (Lok Sabha Election 2024) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ (tejaswi surya) ಬಳಿ ಇಲ್ಲಿ ಯಾವುದೇ ಸ್ವಂತ ಮನೆ, ಕಾರು ಅಥವಾ ಬೈಕು ಇಲ್ಲ. ಇದನ್ನು ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ (Affidavit) ಘೋಷಿಸಿಕೊಂಡಿದ್ದಾರೆ.

ಕಳೆದ ಬಾರಿ 13.46 ರೂ. ಲಕ್ಷ ಮೌಲ್ಯದ ಆಸ್ತಿಯನ್ನು ತೇಜಸ್ವಿ ಸೂರ್ಯ ಘೋಷಿಸಿಕೊಂಡಿದ್ದರು. ಎರಡನೇ ಬಾರಿ ಆಸ್ತಿ ಮೌಲ್ಯದಲ್ಲಿ ಭಾರೀ ಹೆಚ್ಚಳವಾಗಿದೆ. ಈ ಬಾರಿ ಅವರು 4.10 ಕೋಟಿ ರೂ. ಮೌಲ್ಯದ ಆಸ್ತಿಯ ಒಡೆಯನಾಗಿದ್ದಾರೆ.

ಹೂಡಿಕೆಯಿಂದಲೇ ಕೋಟ್ಯಾಂತರ ರೂ. ಗಳಿಕೆ ಲೆಕ್ಕ ಕೊಟ್ಟಿದ್ದಾರೆ ತೇಜಸ್ವಿ ಸೂರ್ಯ. ಮ್ಯೂಚುವಲ್ ಫಂಡ್, ಈಕ್ವಿಟಿಗಳಲ್ಲಿ 1,99,44,863 ಕೋಟಿ ಹೂಡಿಕೆ ಮಾಡಿದ್ದಾರೆ. 1,79,31,750 ರೂ. ಮಾರುಕಟ್ಟೆ ಮೌಲ್ಯದ ಷೇರುಗಳನ್ನು ಹೊಂದಿದ್ದು, ವಿವಿಧ ವಿಮಾ ಕಂಪನಿಗಳಲ್ಲಿನ 25,28,446 ಲಕ್ಷ ವಿಮೆ ಮಾಡಿಸಿದ್ದಾರೆ. 80 ಸಾವಿರ ನಗದು ಹೊಂದಿದ್ದು, ವಿವಿಧ ಬ್ಯಾಂಕ್‌ಗಳ ಖಾತೆಯಲ್ಲಿ 5,45,430 ರೂ. ಠೇವಣಿ ಇಟ್ಟಿದ್ದಾರೆ.

ತೇಜಸ್ವಿ ಸೂರ್ಯ ವಿರುದ್ಧ ದೇಶಾದ್ಯಂತ ಕೇಸ್‌ಗಳೂ ದಾಖಲಾಗಿವೆ. ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಎರಡು ಕೇಸ್ ಇದ್ದು, ನವದೆಹಲಿಯ ಸಿವಿಲ್ ಲೈನ್ಸ್​​ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಧಾರ್ಮಿಕ ಭಾವನೆಗಳಿಗೆ ಅವಮಾನ, ನಂಬಿಕೆಗೆ ಚ್ಯುತಿ, ಕಾನೂನುಬಾಹಿರವಾಗಿ ಗುಂಪು ಜಮಾವಣೆ, ಸರ್ಕಾರಿ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಸ್ಥಳದಲ್ಲಿ ಗಲಾಟೆಗೆ ಸಂಬಂಧಿಸಿದ ಪ್ರಕರಣಗಳಿವೆ.‌

ಎಚ್‌ಡಿ ಕುಮಾರಸ್ವಾಮಿ ಬಳಿ ಆಸ್ತಿ ಎಷ್ಟಿದೆ ನೋಡಿ

ಮಂಡ್ಯ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದ ಮೊದಲ ಹಂತದ ಮತದಾನಕ್ಕೆ ಸಂಬಂಧಪಟ್ಟಂತೆ 14 ಕ್ಷೇತ್ರಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದೆ. ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಆಸ್ತಿಯನ್ನು ಘೋಷಿಸಿಕೊಂಡಿದ್ದು, 54.65 ಕೋಟಿ ರೂ. ಒಡೆಯರಾಗಿದ್ದಾರೆ. ಆದರೆ, ಅವರ ಪತ್ನಿ ಅನಿತಾ ಕುಮಾರಸ್ವಾಮಿ (Anita Kumaraswamy) ಪಾಲೂ ಸೇರಿದರೆ 217.21 ಕೋಟಿ ರೂಪಾಯಿ ಆಸ್ತಿ ಮೌಲ್ಯವನ್ನು ಎಚ್‌ಡಿಕೆ ಹೊಂದಿದ್ದಾರೆ.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿರುವ ಮಾಹಿತಿ ಪ್ರಕಾರ, HUF (ಹಿಂದೂ ಅವಿಭಜಿತ ಕುಟುಂಬ) ನಿಂದ ಅವರ ಹೆಸರಿನಲ್ಲಿ ಸುಮಾರು 8.17 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ಒಟ್ಟು ಆಸ್ತಿ ಮೌಲ್ಯ 54.65 ಕೋಟಿ ರೂ. ಆಗಿದೆ. ಆದರೆ, ಅವರ ಪತ್ನಿ ಅನಿತಾ ಹೆಸರಿನಲ್ಲಿ ಒಟ್ಟು 154.39 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವಿದ್ದು, ಇಬ್ಬರದ್ದೂ ಸೇರಿದರೆ ಒಟ್ಟು 217.21 ಕೋಟಿ ರೂಪಾಯಿ ಆಗುತ್ತದೆ.

65 ವರ್ಷ ವಯಸ್ಸಿನ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಎಸ್ಸಿ ಪದವೀಧರರು, ಸಮಾಜ ಸೇವಕ, ರಾಜಕಾರಣಿ ಮತ್ತು ಕೃಷಿಕ ಎಂದು ಘೋಷಿಸಿಕೊಂಡಿದ್ದಾರೆ. ಅನಿತಾ ಅವರು ವ್ಯಾಪಾರ ಮತ್ತು ಬಾಡಿಗೆ ಆದಾಯವನ್ನು ಹೊಂದಿದ್ದಾರೆ. ನಿಖಿಲ್ ಮತ್ತು ಕೋ ಪೆಟ್ರೋಲ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಪಾರದಲ್ಲಿ ತೊಡಗಿರುವುದಾಗಿ ಘೋಷಣೆ ಮಾಡಲಾಗಿದೆ. ಅಲ್ಲದೆ, ಉದ್ಯಮಿಯಾಗಿದ್ದು, ಕಸ್ತೂರಿ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಅವರ ಬಳಿ ಯಾವುದೇ ಕಾರು ಇಲ್ಲ. ಆದರೆ, 12.55 ಲಕ್ಷ ಮೌಲ್ಯದ ಟ್ರ್ಯಾಕ್ಟರ್ ಹೊಂದಿದ್ದಾರೆ. ಅನಿತಾ ಅವರು ನಿಖಿಲ್ ಮತ್ತು ಕಂಪನಿಯಿಂದ 11.15 ಲಕ್ಷ ರೂ. ಮೌಲ್ಯದ ಕಾರನ್ನು ಹೊಂದಿದ್ದಾರೆ. ಕುಮಾರಸ್ವಾಮಿ ಬಳಿ 47.06 ಲಕ್ಷ ಮೌಲ್ಯದ ಚಿನ್ನ ಮತ್ತು 2.60 ಲಕ್ಷ ಮೌಲ್ಯದ ವಜ್ರ ಹಾಗೂ ಅನಿತಾ ಬಳಿ 2.41 ಕೋಟಿ ಮೌಲ್ಯದ ಚಿನ್ನ ಮತ್ತು 33.09 ಲಕ್ಷ ರೂ.ಮೌಲ್ಯದ ವಜ್ರವಿದೆ. 37.48 ಕೋಟಿ ರೂ. ಮೌಲ್ಯದ ಕೃಷಿ ಭೂಮಿ ಮತ್ತು ಜೆಪಿ ನಗರ ಮೂರನೇ ಹಂತದಲ್ಲಿ 6.46 ಕೋಟಿ ರೂ.ಮೌಲ್ಯದ ನಿವಾಸವನ್ನು ಹೊಂದಲಾಗಿದೆ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿ ಯಾವ್ಯಾವ ಕಂಪನಿಗಳ ಶೇರು ಖರೀದಿಸಿದ್ದಾರೆ ನೋಡಿ!

Exit mobile version