Lokayukta Raid: ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ, ಬೊಮ್ಮಾಯಿಗೆ ಟೆನ್ಶನ್‌, ಎಡಿಜಿಪಿಯಿಂದ ಮಾಹಿತಿ ಪಡೆದ ಸಿಎಂ - Vistara News

ಪ್ರಮುಖ ಸುದ್ದಿ

Lokayukta Raid: ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಬಲೆಗೆ, ಬೊಮ್ಮಾಯಿಗೆ ಟೆನ್ಶನ್‌, ಎಡಿಜಿಪಿಯಿಂದ ಮಾಹಿತಿ ಪಡೆದ ಸಿಎಂ

Lokayukta Raid: ಚುನಾವಣೆ ಹೊಸ್ತಿಲಲ್ಲಿಯೇ ಬಿಜೆಪಿ ಶಾಸಕನ ಪುತ್ರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಕಾರಣ ಬಸವರಾಜ ಬೊಮ್ಮಾಯಿ ಅವರಿಗೆ ಟೆನ್ಶನ್‌ ಆಗಿದೆ. ದಾಳಿ ಕುರಿತು ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್‌ ಅವರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Basavaraj Bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಅವರು ಲೋಕಾಯುಕ್ತ ಬಲೆಗೆ ಬಿದ್ದಿರುವ (Lokayukta Raid) ಪ್ರಕರಣವೀಗ ಬಸವರಾಜ ಬೊಮ್ಮಾಯಿ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ 40 ಪರ್ಸೆಂಟ್‌ ಸರ್ಕಾರ ಎಂಬ ಬಿರುದು ಬಿಜೆಪಿ ಸರ್ಕಾರವನ್ನು ಬಾಧಿಸುತ್ತಿದೆ. ಇದರ ಬೆನ್ನಲ್ಲೇ, ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ ಹಾಂಡ್ ಆಗಿ ಸಿಕ್ಕಿಬಿದ್ದಿರುವುದು ಮುಜುಗರ ತಂದಿದೆ. ಹಾಗಾಗಿಯೇ, ಬಸವರಾಜ ಬೊಮ್ಮಾಯಿ ಅವರು ಗುಪ್ತಚರ ಇಲಾಖೆಗಳ ಅಧಿಕಾರಿಗಳಿಂದ ಲೋಕಾಯುಕ್ತ ದಾಳಿ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲಾ ಪ್ರವಾಸ ಮುಗಿಸಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್.ಟಿ. ನಗರದ ನಿವಾಸಕ್ಕೆ ಆಗಮಿಸುತ್ತಲೇ, ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್‌ ಅವರು ಬೊಮ್ಮಾಯಿ ನಿವಾಸಕ್ಕೆ ತೆರಳಿದ್ದಾರೆ. ಇದೇ ವೇಳೆ, ಲೋಕಾಯುಕ್ತ ಅಧಿಕಾರಿಗಳ ದಾಳಿ, ಅಲ್ಲಿ ಸಿಕ್ಕಿರುವ ಹಣ, ಮುಂದಿನ ಪ್ರಕ್ರಿಯೆಗಳ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್‌ ಶಾ ಭೇಟಿ ಹಿನ್ನೆಲೆ ಸೂದ್‌ ಜತೆ ಚರ್ಚೆ

ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸುವುದು ಸೇರಿ ಹಲವು ವಿಚಾರಗಳ ಕುರಿತು ಬಸವರಾಜ ಬೊಮ್ಮಾಯಿ ಅವರು ಡಿಜಿಪಿ ಪ್ರವೀಣ್‌ ಸೂದ್‌ ಅವರೊಂದಿಗೂ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿದ್ದಾರೆ.

ಪ್ರಶಾಂತ್‌ ಸೇರಿ ಒಟ್ಟು ಐವರ ಬಂಧನ

ಲೋಕಾಯುಕ್ತ ಅಧಿಕಾರಿಗಳು ದಾಳಿ ವೇಳೆ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಮಾತ್ರವಲ್ಲ, ಒಟ್ಟು ಐದು ಜನರನ್ನು ಬಂಧಿಸಿದ್ದಾರೆ. ಪ್ರಶಾಂತ್‌, ಅವರ ಅಕೌಂಟೆಂಟ್‌ ಹಾಗೂ ಟೆಂಡರ್‌ ಪಡೆಯಲು ಲಕ್ಷಾಂತರ ರೂ. ಜತೆ ಬಂದಿದ್ದ ಮೂರು ಕಂಪನಿಯವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಮೂವರನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ. ಮಾಡಾಳ್‌ ವಿರೂಪಾಕ್ಷಪ್ಪ ಒಡೆತನದ ಕೆಎಂವಿ ಮ್ಯಾನ್ಶನ್‌ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Lokayukta raid :‌ ಬಿಜೆಪಿ ನಾಯಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ, ಕಾಂಗ್ರೆಸ್‌ ಕೈಗೆ ಮತ್ತೊಂದು ಕಮಿಷನ್‌ ಅಸ್ತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Paris Olympics: ಜಾಗತಿಕ ಮಟ್ಟದ ಸ್ಪರ್ಧೆಗಳಲ್ಲಿ ಈಗಾಗಲೇ ಹಲವು ಪದಕ ಗೆದ್ದಿರುವ, 2 ಬಾರಿಯ ಚಾಂಪಿಯನ್​ ಹಾಗೂ ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿರುವ ವಿಕ್ಟರ್‌ ಅಕ್ಸೆಲ್ಸೆನ್‌ ಮತ್ತು ಲಕ್ಷ್ಯ ಸೇನ್‌ ಇದುವರೆಗೂ ಒಟ್ಟು 8 ಬಾರಿ ವಿವಿಧ ಟೂರ್ನಿಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಗರಿಷ್ಠ 7 ಪಂದ್ಯಗಳನ್ನು ಅಕ್ಸೆಲ್ಸೆನ್‌ ಗೆದ್ದು ಬೀಗಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಇದೇ ಮೊದಲ ಸಲ ಒಲಿಂಪಿಕ್ಸ್‌ನಲ್ಲಿ(Paris Olympics) ಸ್ಪರ್ಧಿಸುತ್ತಿರುವ ಲಕ್ಷ್ಯ ಸೇನ್‌(Lakshya Sen) ಅವರು ಇಂದು ನಡೆಯುವ ಪುರುಷರ ವಿಭಾಗದ ಬ್ಯಾಡ್ಮಿಂಟನ್‌ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಬ್ಯಾಡ್ಮಿಂಟನ್‌ನಲ್ಲಿ ಭಾರತದ ಕೊನೆಯ ಭರವಸೆಯಾಗಿ ಉಳಿದಿರುವ ಅವರು ಇಂದು ಖ್ಯಾತ ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸೆನ್‌ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಒಲಿಂಪಿಕ್ ಕೂಟದ ಬ್ಯಾಡ್ಮಿಂಟನ್‌ನಲ್ಲಿ ಪುರುಷರ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತದ ಮೊದಲ ಶಟ್ಲರ್​ ಎನಿಸಿಕೊಂಡಿರುವ ಲಕ್ಷ್ಯ ಸೇನ್ ಅವರು ಈ ಬಾರಿ ಗೆದ್ದು ಬಂದ ಹಾದಿಯನ್ನು ಮತ್ತು ಅವರ ಉತ್ಕೃಷ್ಟಮಟ್ಟದ ಆಟವನ್ನು ನೋಡುವಾಗ ಈ ಪಂದ್ಯವನ್ನು ಗೆಲ್ಲುವ ನಿರೀಕ್ಷೆ ಮಾಡಬಹುದು. ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್​ ಪಡುಕೋಣೆ ಮತ್ತು ವಿಮಲ್‌ಕುಮಾರ್ ಗರಡಿಯಲ್ಲಿ ಪಳಗಿದ ಈ 22 ವರ್ಷದ ಲಕ್ಷ್ಯ ಸೇನ್​ ಕಳೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಚೈನೀಸ್‌ ತೈಪೆಯ ಚೌ ತೀನ್‌ ಚೆನ್‌ ಅವರೆದುರು ಮೊದಲ ಗೇಮ್‌ ಕಳೆದುಕೊಂಡೂ ಆ ಬಳಿಕ ಗೆದ್ದು ಬಂದ ರೀತಿ ಅಮೋಘವಾಗಿತ್ತು. ಇದೇ ರೀತಿ ಇಂದು ಕೂಡ ಗೆಲುವು ಸಾಧಿಸಿಲಿ ಎನ್ನುವುದು ಭಾರತೀಯ ಕ್ರೀಡಾಭಿಮಾನಿಗಳ ಹಾರೈಕೆ.

ಮುಖಾಮುಖಿ


ಜಾಗತಿಕ ಮಟ್ಟದ ಸ್ಪರ್ಧೆಗಳಲ್ಲಿ ಈಗಾಗಲೇ ಹಲವು ಪದಕ ಗೆದ್ದಿರುವ, 2 ಬಾರಿಯ ಚಾಂಪಿಯನ್​ ಹಾಗೂ ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿರುವ ವಿಕ್ಟರ್‌ ಅಕ್ಸೆಲ್ಸೆನ್‌ ಮತ್ತು ಲಕ್ಷ್ಯ ಸೇನ್‌ ಇದುವರೆಗೂ ಒಟ್ಟು 8 ಬಾರಿ ವಿವಿಧ ಟೂರ್ನಿಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಗರಿಷ್ಠ 7 ಪಂದ್ಯಗಳನ್ನು ಅಕ್ಸೆಲ್ಸೆನ್‌ ಗೆದ್ದು ಬೀಗಿದ್ದಾರೆ. ಸೇನ್​ ಕೇವಲ ಒಂದು ಬಾರಿ ಮಾತ್ರ ಗೆಲುವು ಕಂಡಿದ್ದಾರೆ. ಈ ಗೆಲುವು 2022ರ ಜರ್ಮನ್‌ ಓಪನ್‌ ಪಂದ್ಯಾವಳಿಯಲ್ಲಿ ಒಲಿದಿತ್ತು. ಈ ಅಂಕಿ ಅಂಶಗಳನ್ನು ನೋಡುವಾಗ ಅಕ್ಸೆಲ್ಸೆನ್‌ ಅವರೇ ಗೆಲ್ಲುವ ಫೇವರಿಟ್​ ಆಗಿ ಗೋಚರಿಸಿದರೂ ಕೂಡ ಸೇನ್​ ಈ ಬಾರಿ ಅಷ್ಟು ಸುಲಭದಲ್ಲಿ ಶರಣಾಗುವ ಸಾಧ್ಯತೆ ಕಡಿಮೆ. ಒಟ್ಟಾರೆ ಈ ಪಂದ್ಯ ರೋಚಕವಾಗಿ ಸಾಗುವುದರಲ್ಲಿ ಯಾವುದೇ ಅನುಮಾನ ಬೇಡ. ಸೋತರೆ ಕಂಚಿನ ಪದಕಕ್ಕಾಗಿ ಪ್ಲೇ ಆಫ್ ಸ್ಪರ್ಧೆಯಲ್ಲಿ ಆಡಬೇಕು. ಗೆದ್ದರೆ ಬೆಳ್ಳಿ ಅಥವಾ ಚಿನ್ನ ಖಚಿತ.

ಗ್ರೇಟ್​ ಬ್ರಿಟನ್ ಮಣಿಸಿ ಸೆಮಿಫೈನಲ್​ ಪ್ರವೇಶಿಸಲಿ ಭಾರತ ಹಾಕಿ ತಂಡ


ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಫುಲ್​ ಜೋಶ್​ನಲ್ಲಿರುವ ಭಾರತ(Hockey India) ಪುರುಷರ ಹಾಕಿ ತಂಡ ಇಂದು ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ(Paris Olympics) ಗ್ರೇಟ್​ ಬ್ರಿಟನ್(hockey india vs great britain)​ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಕೂಡ ಗೆದ್ದು ಸೆಮಿಫೈನಲ್​ ಪ್ರವೇಶಿಸುವುದು ಹರ್ಮನ್‌ಪ್ರೀತ್ ಸಿಂಗ್ ಪಡೆಯ ಯೋಜನೆಯಾಗಿದೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

ಸ್ಯಾರಸ್ಯವೆಂದರೆ ಕಳೆದ ಟೋಕಿಯೊ ಒಲಿಂಪಿಕ್ಸ್​ ಕ್ವಾರ್ಟರ್‌ ಫೈನಲ್​ನಲ್ಲೂ ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಭಾರತ 3-1 ಗೋಲ್​ಗಳ ಅಂತರದಿಂದ ಗೆದ್ದು ಸೆಮಿಪೈನಲ್‌ ಪ್ರವೇಶಿಸಿತ್ತು. ಈ ಬಾರಿಯೂ ಇದೇ ರೀತಿಯ ಫಲಿತಾಂಶ ಮರುಕಳಿಸಿ ಭಾರತ ಸೆಮಿ ಟಿಕೆಟ್​ ಪಡೆಯಲಿ ಎನ್ನುವುದು ಭಾರತೀಯರ ಹಾರೈಕೆ.

ಭಾರತದ ಪ್ರದರ್ಶನ ನೋಡುವಾಗ ಈ ಬಾರಿಯೂ ಪದಕವೊಂದನ್ನು ಗೆಲ್ಲುವುದು ಖಚಿತ ಎನ್ನಬಹುದು. ಕೊನೆಯ ಒಲಿಂಪಿಕ್ಸ್​ ಆಡುತ್ತಿರುವ ಗೋಲ್​ ಕೀಪರ್​ ಪಿ.ಆರ್ ಶ್ರೀಜೇಶ್ ಅವರಂತು ತಮ್ಮ ಎಲ್ಲ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ತಡೆಗೋಡೆಯಂತೆ ನಿಂತು ಗೋಲ್​ಗಳನ್ನು ತಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅದರಲ್ಲೂ 52 ವರ್ಷಗಳ ನಂತರ ಆಸ್ಟ್ರೇಲಿಯಾವನ್ನು ಮಣಿಸಿದ್ದು ಭಾರತಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದೆ. ಹರ್ಮನ್‌ಪ್ರೀತ್ ಸಿಕ್ಕ ಪೆನಾಲ್ಟಿ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡರೆ ಉತ್ತಮ. ರಕ್ಷಣಾ ವಿಭಾಗದಲ್ಲಿ ಅಮಿತ್ ರೋಹಿದಾಸ್‌ ಮತ್ತು ಜರ್ಮನ್‌ಪ್ರೀತ್‌ ಉತ್ತಮ ಫಾರ್ಮ್​ನಲ್ಲಿದ್ದಾರೆ.

Continue Reading

Latest

Shravan 2024: ನಾಳೆಯಿಂದ ಶ್ರಾವಣ ಮಾಸ ಆರಂಭ; ಶುಭ ಕಾರ್ಯಗಳನ್ನು ಮಾಡಲು ಈ ತಿಂಗಳು ಸೂಕ್ತ ಏಕೆ?

Shravan 2024: ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Shravan 2024
Koo


ಬೆಂಗಳೂರು: ಹಿಂದೂ ಪಂಚಾಂಗದಲ್ಲಿ ಬರುವ 12 ಮಾಸಗಳಲ್ಲಿ ಶ್ರಾವಣ ಮಾಸ (Shravan 2024) ಐದನೇ ಮಾಸವಾಗಿದೆ. ಎಲ್ಲಾ ಮಾಸಗಳು ಹುಣ್ಣಿಮೆಯ ದಿನ ಪ್ರಾರಂಭವಾಗುತ್ತದೆ ಮತ್ತು ಆ ದಿನ ಬರುವ ನಕ್ಷತ್ರದ ಹೆಸರಿನಿಂದ ಆ ಮಾಸವನ್ನು ಕರೆಯಲಾಗುತ್ತದೆ. ಅದರಂತೆ ಈ ಮಾಸ ಪ್ರಾರಂಭವಾಗುವ ಹುಣ್ಣಿಮೆಯ ದಿನ ಶ್ರವಣ ನಕ್ಷತ್ರ ಬಂದ ಕಾರಣ ಈ ಮಾಸಕ್ಕೆ ಶ್ರಾವಣ ಮಾಸ ಎಂದು ಕರೆಯುತ್ತಾರೆ. ಈ ಮಾಸ ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ. ಹಾಗೇ ಮದುವೆ, ಮುಂಜಿಯಂತಹ ಶುಭ ಕಾರ್ಯಗಳನ್ನು ಈ ಮಾಸದಲ್ಲಿ ಮಾಡಲಾಗುತ್ತದೆ. ಹಿಂದೂ ಕ್ಯಾಲೆಂಡರ್‌ನಲ್ಲಿ 2024ರಲ್ಲಿ ಶ್ರಾವಣ ಮಾಸ ಆಗಸ್ಟ್ 5ರ ಸೋಮವಾರದಂದು ಪ್ರಾರಂಭವಾಗಿ ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಕೊನೆಗೊಳ್ಳುತ್ತದೆ. ಹಾಗಾಗಿ ಈ ಮಾಸದ ವಿಶೇಷತೆ ಏನು ಮತ್ತು ಶುಭ ಕಾರ್ಯಗಳನ್ನು ಮಾಡಲು ಈ ಮಾಸ ಸೂಕ್ತ ಏಕೆ ಎಂಬುದನ್ನು ತಿಳಿಯೋಣ.

Shravanmasa 2024
Shravanmasa 2024

ಶ್ರಾವಣ ಮಾಸದ ವಿಶೇಷತೆ:

ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ.

ಶ್ರಾವಣ ಮಾಸದಲ್ಲಿ ಹಬ್ಬ ಹರಿದಿನಗಳು ಒಂದರ ನಂತರ ಒಂದು ಸಾಲು ಸಾಲಾಗಿ ಬರುತ್ತದೆ. ಶ್ರಾವಣ ಮಾಸದ ಪ್ರತಿದಿನವೂ ಹಬ್ಬವೇ ಇರುತ್ತದೆ. ಹಾಗಾಗಿ ಶ್ರಾವಣ ಮಾಸದ ಎಲ್ಲಾ ದಿನಗಳು ಬಹಳ ಶುಭವೇ ಆಗಿರುತ್ತದೆ. ಆದಕಾರಣ ಈ ಶುಭ ದಿನಗಳಲ್ಲಿ ಶುಭ ಕಾರ್ಯ ಮಾಡಿದರೆ ಅದಕ್ಕೆ ಬಹಳ ಉತ್ತಮವಾದ ಫಲ ಶೀಘ್ರದಲ್ಲಿಯೇ ಸಿಗುತ್ತದೆ ಎಂಬ ನಂಬಿಕೆ ಇದೆ.

ಅಲ್ಲದೇ ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆಯಂತೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರಂತೆ. ಹಾಗಾಗಿ ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಿದರೂ ದೇವರು ಬಹಳ ಬೇಗನೇ ಪ್ರಸನ್ನರಾಗಿ ಅನುಗ್ರಹ ನೀಡುತ್ತಾರೆ ಎನ್ನಲಾಗುತ್ತದೆ.

Shravanmasa 2024
Shravanmasa 2024

ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳು :

  • ಉಪಕರ್ಮ:
  • ಶ್ರಾವಣ ಮಾಸ ಹುಣ್ಣಿಮೆ ಜ್ಞಾನಕ್ಕೆ ಕಾರಣವಾಗಿದ್ದರಿಂದ ಈ ದಿನ ಜನೀವಾರ ಹಬ್ಬ ಅಥವಾ ಉಪಕರ್ಮ ಅಥವಾ ನೂಲು ಹುಣ್ಣಿಮೆಯನ್ನು ಆಚರಿಸುತ್ತಾರೆ.
  • ರಕ್ಷಾಬಂಧನ :
  • ಶ್ರಾವಣ ಹುಣ್ಣಿಮೆಯಂದು ಸಹೋದರ ಪ್ರೇಮಕ್ಕೆ ಹೆಚ್ಚು ಮಹತ್ವವಿರುವುದರಿಂದ ರಕ್ಷಾಬಂಧನವನ್ನು ಆಚರಿಸುವ ಮೂಲಕ ಸಹೋದರಿ ಸಹೋದರನಿಗೆ ರಾಖಿ ಕಟ್ಟುತ್ತಾರೆ.
  • ಹಯಗ್ರೀವ ಜಯಂತಿ :
  • ಮಕ್ಕಳಿಗೆ ವಿದ್ಯೆ ಬುದ್ಧಿ ಕರುಣಿಸಲಿ ಎಂದು ವಿದ್ಯೆಯನ್ನು ಅನುಗ್ರಹಿಸುವ ಹಯಗ್ರೀವನನ್ನು ಪೂಜಿಸಿ ಪ್ರಾರ್ಥಿಸುತ್ತಾರೆ.
  • ಸಂಕಷ್ಟ ಚತುರ್ಥಿ :
  • ಅಪಘಾತ, ಆರೋಗ್ಯ ಸಮಸ್ಯೆ, ಸಂಕಷ್ಟಗಳು ಜೀವನದಲ್ಲಿ ಬರಬಾರದೆಂದು ಸಂಕಷ್ಟಹರ ಚತುರ್ಥಿಯನ್ನು ಮಾಡುತ್ತಾರೆ.
  • ಕೃಷ್ಣಾಷ್ಟಮಿ :
  • ದುಷ್ಟ ಸಂಹಾರಕ್ಕಾಗಿ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಶ್ರೀಕೃಷ್ಣ ಜನ್ಮ ತಾಳಿದ ಕಾರಣ ಈ ಮಾಸದಲ್ಲಿ ಕೃಷ್ಣಾಷ್ಟಮಿಯನ್ನು ಆಚರಿಸುವ ಮೂಲಕ ಕೃಷ್ಣನನ್ನು ಪೂಜಿಸುತ್ತಾರೆ.
  • ಶ್ರಾವಣ ಸೋಮವಾರ:
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಸೋಮವಾರದಂದು ಶಿವನ ಆರಾಧನೆ ಮಾಡಲಾಗುತ್ತದೆ. ಇದರಿಂದ ಶಿವನು ಬೇಗನೆ ಪ್ರಸನ್ನನಾಗಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ.
  • ಕಾಮನ ಏಕಾದಶಿ:
  • ನಿಮ್ಮ ಕೋರಿಕೆಗಳು ಈಡೇರಲು ಶ್ರಾವಣ ಮಾಸದಲ್ಲಿ ಕಾಮನ ಏಕಾದಶಿಯನ್ನು ಆಚರಿಸುವ ಮೂಲಕ ವಿಷ್ಣುವಿನ ಪೂಜೆ ಮಾಡಲಾಗುತ್ತದೆ.
  • ಪುತ್ರ ಏಕಾದಶಿ :
  • ಸಂತಾನ ಭಾಗ್ಯ ಬಯಸುವವರು ಶ್ರಾವಣ ಮಾಸದಲ್ಲಿ ಬರುವ ಪುತ್ರ ಏಕಾದಶಿಯನ್ನು ಆಚರಿಸುತ್ತಾರೆ.
  • ಶ್ರಾವಣ ಮಂಗಳವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಮಂಗಳವಾರದಂದು ಮಂಗಳಗೌರಿ ವ್ರತವನ್ನು ಮಾಡಲಾಗುತ್ತದೆ. ಇದು ಮದುವೆಯಾದ ಹೆಣ್ಣುಮಕ್ಕಳು ಮಾಡಿದರೆ ಅವರ ವೈವಾಹಿಕ ಜೀವನ ಸುಖಕರವಾಗಿರುತ್ತದೆಯಂತೆ.
  • ವರಮಹಾಲಕ್ಷ್ಮಿ ವ್ರತ:
  • ಈ ದಿನ ಮಹಿಳೆಯರು ಲಕ್ಷ್ಮಿದೇವಿಯನ್ನು ಕಳಸದ ಮೇಲೆ ಪ್ರತಿಷ್ಠಾಪನೆ ಮಾಡಿ ಜರಿ ಸೀರೆ ಉಡಿಸಿ, ಧನ, ಚಿನ್ನದ ಆಭರಣಗಳಿಂದ ದೇವಿಯನ್ನು ಅಲಂಕರಿಸಿ ಪೂಜೆ ಮಾಡಿ ವರವನ್ನು ಬೇಡಿಕೊಳ್ಳುತ್ತಾರೆ.
  • ಶ್ರಾವಣ ಶುಕ್ರವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಂದು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿದೇವಿಯನ್ನು ಪೂಜಿಸುವ ಮೂಲಕ ಸಂಪತ್ ಗೌರಿ ವ್ರತವನ್ನು ಆಚರಿಸುತ್ತಾರೆ.
  • ನಾಗರಪಂಚಮಿ :
  • ಶ್ರಾವಣ ಮಾಸದ ಪ್ರಾರಂಭವಾದ 5ನೇ ದಿನದಂದು ಬರುವ ನಾಗರ ಪಂಚಮಿ ಹಬ್ಬದಂದು ಮಹಿಳೆಯರು ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
  • ದೂರ್ವಾ ಗಣಪತಿ ವ್ರತ :
  • ಶ್ರಾವಣ ಮಾಸದಲ್ಲಿ ಬರುವ ಈ ವ್ರತದಂದು ಗಣಪತಿಗೆ ಪ್ರಿಯವಾದ ದೂರ್ವಾ ಅಥವಾ ಗರಿಕೆಯನ್ನು ಅರ್ಪಿಸಿ ಪೂಜಿಸಲಾಗುತ್ತದೆ.
  • ಶ್ರಾವಣ ಶನಿವಾರ:
  • ಶ್ರಾವಣ ಮಾಸದ ಪ್ರತಿ ಶನಿವಾರ ಶ್ರಾವಣ ಶನಿವಾರವೆಂದು ಕರೆಯುತ್ತಾರೆ. ಈ ದಿನ ಲಕ್ಷ್ಮಿ ಮತ್ತು ವೆಂಕಟೇಶ್ವರನನ್ನು ಆರಾಧಿಸುತ್ತಾರೆ. ಹಾಗೇ ಕೆಲವರು ಶ್ರಾವಣ ಶನಿವಾರದಂದು ಉಪವಾಸ ವ್ರತವನ್ನು ಆಚರಿಸುತ್ತಾರೆ. ಹಾಗೇ ಈ ದಿನ ಆಂಜನೇಯ ಸ್ವಾಮಿಯ ಪೂಜೆ ಹಾಗೂ ಶನಿ ಶಾಂತಿ ಪೂಜೆಗೆ ಬಹಳ ಉತ್ತಮ ಎನ್ನಲಾಗಿದೆ.

ಇದನ್ನೂ ಓದಿ:ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!
ಒಟ್ಟಾರೆ ಈ ಎಲ್ಲಾ ಶುಭ ದಿನಗಳು ಮತ್ತು ಹಬ್ಬಗಳಿಂದ ಶ್ರಾವಣ ಮಾಸ ತುಂಬಾ ವಿಶೇಷವಾದ ಹಾಗೂ ಪವಿತ್ರವಾದ ಮಾಸವಾಗಿದೆ. ಹಾಗಾಗಿ ಇಂತಹ ಶುಭಕರವಾದ ಶ್ರಾವಣ ಮಾಸವನ್ನು ಎಲ್ಲರೂ ಸಂತೋಷದಿಂದ ಸ್ವಾಗತಿಸಿ. ಹಾಗೇ ಈ ಮಾಸದಲ್ಲಿ ಎಲ್ಲರೂ ಶ್ರದ್ಧೆ, ಭಕ್ತಿಯಿಂದ ದೇವರ ಆರಾಧನೆ ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಿ.

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Paris Olympics 2024: ಪುರುಷರ ತಂಡವು ಕ್ವಾರ್ಟರ್ ಫೈನಲ್​ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ಹೀಗಾಗಿ ಹಾಕಿಯಲ್ಲಿ ಭಾರತಕ್ಕೆ ಮತ್ತೊಂದು ಪ್ರಮುಖ ಪಂದ್ಯವಾಗಿದೆ. ಶೂಟಿಂಗ್​ನಲ್ಲಿ ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಪುರುಷರ 25 ಮೀಟರ್ ರ್ಯಾಪಿಡ್​ ಫೈರ್ ಪಿಸ್ತೂಲ್​​ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಾರೆ. ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ ಮಹಿಳಾ ಸ್ಕೀಟ್ ಅರ್ಹತಾ 2 ನೇ ದಿನಕ್ಕೆ ಮರಳಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ಕ್ರೀಡಾಕೂಟದ 9ನೇ ದಿನದ ಸ್ಪರ್ಧೆಗಳು ಭಾನುವಾರ ನಡೆಯಲಿವೆ. ಟೋಕಿಯೊ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ಭಾರತದ ನಾಲ್ಕನೇ ಪದಕವನ್ನು ಗಳಿಸಲು ಆಗಸ್ಟ್ 4ರಂದು ಕ್ವಾರ್ಟರ್ ಫೈನಲ್​​ನಲ್ಲಿ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ. ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ನಲ್ಲಿ ಸೆಮಿಫೈನಲ್ ನಲ್ಲಿ ವಿಕ್ಟರ್ ಅಕ್ಸೆಲ್ಸೆನ್ ಅವರನ್ನು ಎದುರಿಸುವ ಮೂಲಕ ಪದಕ ಗಳಿಸುವ ಗುರಿ ಹೊಂದಿದ್ದಾರೆ ಭಾರತದ ಯಾವುದೇ ಪುರುಷ ಶಟ್ಲರ್ ಇದುವರೆಗೆ ಫೈನಲ್ ತಲುಪಿಲ್ಲ ಎಂಬುದು ಇಲ್ಲಿ ಗಮನಾರ್ಹ.

ಪುರುಷರ ತಂಡವು ಕ್ವಾರ್ಟರ್ ಫೈನಲ್​ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ. ಹೀಗಾಗಿ ಹಾಕಿಯಲ್ಲಿ ಭಾರತಕ್ಕೆ ಮತ್ತೊಂದು ಪ್ರಮುಖ ಪಂದ್ಯವಾಗಿದೆ. ಶೂಟಿಂಗ್​ನಲ್ಲಿ ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ ಅರ್ಹತಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಪುರುಷರ 25 ಮೀಟರ್ ರ್ಯಾಪಿಡ್​ ಫೈರ್ ಪಿಸ್ತೂಲ್​​ಗೆ ಅರ್ಹತೆ ಪಡೆಯಲು ಪ್ರಯತ್ನಿಸುತ್ತಾರೆ. ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ ಮಹಿಳಾ ಸ್ಕೀಟ್ ಅರ್ಹತಾ 2 ನೇ ದಿನಕ್ಕೆ ಮರಳಲಿದ್ದಾರೆ.

ಅಥ್ಲೆಟಿಕ್ಸ್​​ನಲ್ಲಿ ಪಾರುಲ್ ಚೌಧರಿ ಮಹಿಳೆಯರ 3,000 ಮೀಟರ್ ಸ್ಟೀಪಲ್ಚೇಸ್ ರೌಂಡ್ 1 ರಲ್ಲಿ ಭಾಗವಹಿಸಿದರೆ, ಜೆಸ್ವಿನ್ ಆಲ್ಡ್ರಿನ್ ಪುರುಷರ ಲಾಂಗ್ ಜಂಪ್ ಅರ್ಹತೆಯಲ್ಲಿ ಸ್ಪರ್ಧಿಸಲಿದ್ದಾರೆ. ವಿಷ್ಣು ಸರವಣನ್ ಮತ್ತು ನೇತ್ರಾ ಕುಮನನ್ ತಮ್ಮ ತಮ್ಮ ಸೇಯ್ಲಿಂಗ್​ ಸ್ಪರ್ಧೆಗಳಲ್ಲಿ ಇನ್ನೂ ಎರಡು ರೇಸ್ ಗಳಿಗೆ ಮರಳಲಿದ್ದಾರೆ.

ಇದನ್ನೂ ಓದಿ: Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

ಆಗಸ್ಟ್ 4 ರಂದು ) ಭಾರತದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಶೂಟಿಂಗ್: 25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಪುರುಷರ ಅರ್ಹತಾ ಹಂತ 1: ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ – ಮಧ್ಯಾಹ್ನ 12.30ಕ್ಕೆ

25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಪುರುಷರ ಅರ್ಹತಾ ಹಂತ 2: ವಿಜಯ್​ವೀರ್​ ಸಿಧು ಮತ್ತು ಅನೀಶ್ ಭನ್ವಾಲಾ – ಸಂಜೆ 4.30ಕ್ಕೆ

ಮಹಿಳಾ ಸ್ಕೀಟ್ ಅರ್ಹತಾ (ದಿನ 2): ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ – ಮಧ್ಯಾಹ್ನ 1 ಗಂಟೆಗೆ

ಮಹಿಳಾ ಸ್ಕೀಟ್ ಫೈನಲ್ (ಅರ್ಹತೆ ಪಡೆದರೆ): ಮಹೇಶ್ವರಿ ಚೌಹಾಣ್ ಮತ್ತು ರೈಜಾ ಧಿಲ್ಲಾನ್ – ಸಂಜೆ 7 ಗಂಟೆಗೆ

ಗಾಲ್ಫ್: ಪುರುಷರ ವೈಯಕ್ತಿಕ ಸ್ಟ್ರೋಕ್ ಪ್ಲೇ (ರೌಂಡ್ 4): ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ – ಮಧ್ಯಾಹ್ನ 12.30ಕ್ಕೆ

ಹಾಕಿ: ಪುರುಷರ ಕ್ವಾರ್ಟರ್ ಫೈನಲ್: ಭಾರತ ವಿರುದ್ಧ ಗ್ರೇಟ್ ಬ್ರಿಟನ್ – ಮಧ್ಯಾಹ್ನ 1:30ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ರೌಂಡ್ 1: ಪಾರುಲ್ ಚೌಧರಿ – ಮಧ್ಯಾಹ್ನ 1:35ಕ್ಕೆ

ಪುರುಷರ ಲಾಂಗ್ ಜಂಪ್ ಅರ್ಹತೆ: ಜೆಸ್ವಿನ್ ಆಲ್ಡ್ರಿನ್ – ಮಧ್ಯಾಹ್ನ 2:30ಕ್ಕೆ

ಬಾಕ್ಸಿಂಗ್: ಮಹಿಳೆಯರ 75 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್: ಚೀನಾ ಸ್ಪರ್ಧಿ ವಿರುದ್ಧ ಲೊವ್ಲಿನಾ ಬೊರ್ಗೊಹೈನ್ 3:02ಕ್ಕೆ

ಬ್ಯಾಡ್ಮಿಂಟನ್: ಪುರುಷರ ಸಿಂಗಲ್ಸ್ ಸೆಮಿಫೈನಲ್: ಲಕ್ಷ್ಯ ಸೇನ್ ವಿರುದ್ಧ ವಿಕ್ಟರ್ ಅಕ್ಸೆಲ್ಸನ್ (ಡೆನ್ಮಾರ್ಕ್) – ಮಧ್ಯಾಹ್ನ 3:30ಕ್ಕೆ

ಸೇಯ್ಲಿಂಗ್​: ಪುರುಷರ ಡಿಂಗಿ ರೇಸ್ 7 ಮತ್ತು 8: ವಿಷ್ಣು ಸರವಣನ್ – ಮಧ್ಯಾಹ್ನ 3:35ಕ್ಕೆ

ಮಹಿಳಾ ಡಿಂಗಿ ರೇಸ್ 7 ಮತ್ತು 8: ನೇತ್ರಾ ಕುಮನನ್ – ಸಂಜೆ 6:05.ಕ್ಕೆ

Continue Reading

ಭವಿಷ್ಯ

Dina Bhavishya : ಕೌಟುಂಬಿಕ ಕಲಹಗಳಿಗೆ ಧ್ವನಿ ಆಗ್ಬೇಡಿ; ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಲ್ಲೆ ನೆಲಸಲಿದ್ದು, ಇದರಿಂದಾಗಿ ವೃಶ್ಚಿಕ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಸಿಂಹ ರಾಶಿಯವರು ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ ಇರಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕನ್ಯಾ ರಾಶಿಯವರು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶವಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (04-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ಅಮಾವಾಸ್ಯೆ 16:41 ವಾರ: ಭಾನುವಾರ
ನಕ್ಷತ್ರ: ಪುಷ್ಯ 13:25 ಯೋಗ: ಸಿದ್ಧಿ 10:36
ಕರಣ: ನಾಗವ 16:41 ಅಮೃತಕಾಲ: ಬೆಳಗ್ಗೆ 06:39 ರಿಂದ 08:21
ದಿನದ ವಿಶೇಷ: ಭೀಮನ ಅಮಾವಾಸ್ಯೆ, ಜ್ಯೋತಿ ರ್ಭೀಮೇಶ್ವರ ವ್ರತ, ಸಾಗರ ಅಮಾವಾಸ್ಯೆ

ಸೂರ್ಯೋದಯ : 06:06   ಸೂರ್ಯಾಸ್ತ : 06:45

ರಾಹುಕಾಲ: ಸಂಜೆ 4.30 ರಿಂದ 6.00
ಗುಳಿಕಕಾಲ: ಸಂಜೆ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರುವುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ ಇರಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ. ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಬೆಳೆಸುವಿರಿ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶವಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹರಟೆಯಿಂದ ಕಾಲಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಸಕರಾತ್ಮಕ ಆಲೋಚನೆ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ತಮ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ, ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ ಸಿಗಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
IND vs SL
ಕ್ರೀಡೆ9 mins ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ15 mins ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು28 mins ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು51 mins ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Rashami Desai Homeless Rashami Desai lived in an Audi
ಕಿರುತೆರೆ52 mins ago

Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ!

Paris Olympics
ಕ್ರೀಡೆ1 hour ago

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Gold Rate Today
ವಾಣಿಜ್ಯ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Murder Case
ಕ್ರೈಂ2 hours ago

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Ram Gopal Varma calls The Kerala Story one of the best films
ಟಾಲಿವುಡ್2 hours ago

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Rashid Khan
ಕ್ರಿಕೆಟ್2 hours ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ23 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌