Site icon Vistara News

Basavaraj Bommai: ದಲಿತ ಸಮುದಾಯಕ್ಕೆ ಮೋಸ ಮಾಡುತ್ತಿರುವ ರಾಜ್ಯ ಸರಕಾರ: ಬೊಮ್ಮಾಯಿ

Basavaraj Bommai

ಹಾವೇರಿ: ರಾಜ್ಯ ಸರಕಾರ (Karnataka Govt) ದಿವಾಳಿ ಆಗಿರುವುದು ಪ್ರತಿಯೊಂದು ಹೆಜ್ಜೆಯಲ್ಲಿ ಪ್ರದರ್ಶನ ಮಾಡುತ್ತಿದೆ. ಇದೀಗ ದಲಿತ ಸಮುದಾಯಕ್ಕೆ ಮೀಸಲಿಡಬೇಕಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ (Guarantee Schemes) ವೆಚ್ಚ ಮಾಡಿದ್ದು, ಆ ಮೂಲಕ ಎಸ್‌ಸಿ/ಎಸ್‌ಟಿ (SC/ST) ಜನಾಂಗಕ್ಕೆ ಮೋಸ ಮಾಡಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹರಿಹಾಯ್ದಿದ್ದಾರೆ.

ಶಿಂಗ್ಗಾವಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಈ ಬಗೆಗೆ ಹೇಳಿಕೆ ನೀಡಿದರು. ಎಸ್ಸಿ ಎಸ್ಟಿಯವರ ಹಣ 14 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಎಸ್ಸಿ ಎಸ್ಟಿ ಜನಾಂಗಕ್ಕೆ ಸರಕಾರ ಮೋಸ ಮಾಡುತ್ತಿದೆ. ಈ ಹಣ ದಲಿತ ಜನಾಂಗದ ಅಭಿವೃದ್ಧಿಗೆ ಬಳಕೆ ಆಗಬೇಕಿತ್ತು. ಆ ಎಲ್ಲಾ ಹಣ ಗ್ಯಾರಂಟಿಗೆ ಹೋಗುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದರು.

ಹಿಂದುಳಿದ ವರ್ಗಗಳ ಚಾಂಪಿಯನ್ ಅಂತ ಹೇಳುತ್ತಾರೆ. ಹಿಂದುಳಿದ ವರ್ಗಗಳಿಗೆ ಕಡಿಮೆ ಹಣ ಇಟ್ಟಿದ್ದಾರೆ. ಎಸ್ಸಿ ಎಸ್ಟಿ ಹಣ ಬಳಕೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ. ರಾಜಕಾರಣಕ್ಕಾಗಿ, ವೋಟಿಗಾಗಿ ಎಸ್ಸಿ ಎಸ್ಟಿ ಹಣ ದುರ್ಬಳಕೆ ಆಗುತ್ತಿದೆ. ಖಜಾನೆ ಸುಭದ್ರವಾಗಿದೆ ಅಂತಾರೆ, ಹಾಗಾದ್ರೆ ಎಸ್ಸಿ ಎಸ್ಟಿಯವರ ಜೇಬಿಗೆ ಯಾಕೆ ಕೈ ಹಾಕಿದ್ದೀರಿ? ಎಂದು ಬೊಮ್ಮಾಯಿ ಪ್ರಶ್ನಿಸಿದರು.

ಡೆಂಗ್ಯು ಜ್ವರ ಪ್ರಕರಣದಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಳ್ತಿಲ್ಲ. ಮಂತ್ರಿಗಳು ಕೇವಲ ಸಭೆ ಮಾಡುತ್ತಿದ್ದಾರೆ. ಚಿಕಿತ್ಸೆ ಸಿಗದಿದ್ದರೆ ಸಾವು ನೋವುಗಳಾಗುತ್ತದೆ, ಜನ ಪರದಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ, ಡಿಹೆಚ್‌ಓ ವರ್ಗಾವಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಶೋಕ‌ ಅವರ ನೇತೃತ್ವದಲ್ಲಿ ಶಿಗ್ಗಾಂವಿ ಉಪಚುನಾವಣೆ ವಿಚಾರ ಸಮಿತಿ ಮಾಡಿದ್ದೇವೆ. ಧನ್ಯವಾದ ಯಾತ್ರೆ ಶಿಗ್ಗಾವಿಯಲ್ಲಿ ಮಾಡುತ್ತೇನೆ. ಜುಲೈ 12ರಿಂದ ಯಾತ್ರೆ ಆರಂಭ ಮಾಡುತ್ತೇನೆ. ಒಂದುವರೆ ತಿಂಗಳುಗಳ‌ ಕಾಲ ಕ್ಷೇತ್ರದಲ್ಲಿ ಯಾತ್ರೆ ನಡೆಯಲಿದೆ. ಶಿಗ್ಗಾವಿಯಲ್ಲಿ ಪೋಸ್ಟರ್ ಭರಾಟೆ ನಡೆಯುವುದಿಲ್ಲ ಎಂದರು.

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾಮೋಹನ್‌ ದಾಸ್‌ ಅಗರ್ವಾಲ್

ಬೆಂಗಳೂರು: ರಾಜ್ಯ ಬಿಜೆಪಿಗೆ (BJP Karnataka) ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Exit mobile version