Site icon Vistara News

Bellary City Corporation: ಬಳ್ಳಾರಿ ಪಾಲಿಕೆ ಕಾಂಗ್ರೆಸ್‌ ತೆಕ್ಕೆಗೆ; ನೂತನ ಮೇಯರ್ ಆಗಿ ಮುಲ್ಲಂಗಿ ನಂದೀಶ್ ಆಯ್ಕೆ

Bellary City Corporation

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಆಯ್ಕೆಯಾಗಿದ್ದಾರೆ. ಮುಲ್ಲಂಗಿ ನಂದೀಶ್ ಪಾಲಿಕೆಯ 18ನೇ ವಾರ್ಡಿನ ಸದಸ್ಯ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರಾಗಿದ್ದಾರೆ. ಬಿಜೆಪಿಯ ಮೇಯರ್ ಅಭ್ಯರ್ಥಿ ಶ್ರೀನಿವಾಸ್ ಮೋತ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಮುಲ್ಲಂಗಿ ನಂದೀಶ್‌ಗೆ ಗೆಲುವು ಸಾಧಿಸಿದ್ದು, ಈ ಮೂಲಕ ಮೇಯರ್ ಚುನಾವಣೆಯಲ್ಲಿ (Bellary City Corporation) ಮಾಜಿ ಸಚಿವ ಬಿ. ನಾಗೇಂದ್ರ ಮೇಲುಗೈ ಸಾಧಿಸಿದ್ದಾರೆ.

ಇನ್ನು ಉಪ ಮೇಯರ್ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಡಿ. ಸುಕುಂ ಅವಿರೋಧ ಆಯ್ಕೆಯಾದರು. ಮೇಯರ್ ಸ್ಥಾನ ತಮ್ಮ ಬೆಂಬಲಿಗರಿಗೆ ಕೊಡಿಸಲು ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಭರತ್ ರೆಡ್ಡಿ ನಡುವೆ ಪೈಪೋಟಿ ಇತ್ತು. ಕೊನೆಗೆ ಹೈಕಮಾಂಡ್ ಮಧ್ಯಸ್ಥಿಕೆಯಿಂದ ನಂದೀಶ್ ಅವರಿಗೆ ಮೇಯರ್ ಸ್ಥಾನ ಒಲಿದಿದೆ.

ಇದನ್ನೂ ಓದಿ | Channapatna By Election: ಚನ್ನಪಟ್ಟಣದಿಂದ ಡಿಕೆಶಿ ಸ್ಪರ್ಧಿಸಲ್ಲ: ಅಚ್ಚರಿ ಹೇಳಿಕೆ ಕೊಟ್ಟ ಜಿ.ಟಿ. ದೇವೇಗೌಡ

ಪಾಲಿಕೆತಯಲ್ಲಿ ಮೇಯ‌ರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿದೆ. ಒಟ್ಟು 39 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 ಸ್ಥಾನ ಗೆದ್ದಿತ್ತು. ಇದರ ಜತೆಗೆ, ಪಕ್ಷೇತರರಾಗಿ ಗೆದ್ದಿದ್ದ ಐವರು ಸದಸ್ಯರು ಚುನಾವಣೆ ನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಒಟ್ಟು 26 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 13 ಸದಸ್ಯರನ್ನು ಹೊಂದಿದೆ. ಪಾಲಿಕೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್‌ನಿಂದ ಮೇಯರ್ ಸ್ಥಾನಕ್ಕೆ ನಾಲ್ವರು ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಮುಲ್ಲಂಗಿ ನಂದೀಶ್‌ಗೆ ಪಾಲಿಕೆಯ ಮೇಯರ್‌ ಪಟ್ಟ ಒಲಿದಿದೆ.

Exit mobile version