Site icon Vistara News

Women Suicide : ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಲೈವ್​ ವಿಡಿಯೊ ಮಾಡುತ್ತಾ ನೇಣು ಹಾಕಿಕೊಂಡು ಆತ್ಮಹತ್ಯೆ

Women Suicide

ಬೆಂಗಳೂರು: ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವವ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ (Women Suicide) ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ(25)ಆತ್ಮಹತ್ಯೆ ಮಾಡಿಕೊಂಡು ಮಹಿಳೆ.

ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್​ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್​ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಮಹಿಳೆಯೊಬ್ಬಳ ಕೊಲೆ (Murder case) ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ರಾಜ್ ಕುಮಾರ್ ಬಂಧಿತ ಆರೋಪಿ ಆಗಿದ್ದಾನೆ.

ಇದನ್ನೂ ಓದಿ: Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

ರಾಜ್‌ಕುಮಾರ್‌ ಊಟ ಕೊಡಿಸುವ ನೆಪದಲ್ಲಿ ಬಸ್ಸಮ್ಮ ಎಂಬಾಕೆಯನ್ನು ಕರೆದೊಯ್ದು ಕೊಲೆ ಮಾಡಿದ್ದ. ಕೊಲೆ ಬಳಿಕ ಪೆಟ್ರೋಲ್ ಹಾಕಿ ಸುಟ್ಟು ರಸ್ತೆ ಬದಿಯಲ್ಲಿ ಶವ ಹೂತಿಟ್ಟು ಎಸ್ಕೇಪ್ ಆಗಿದ್ದ. ಬಸ್ಸಮ್ಮ ಈ ರಾಜಕುಮಾರ್ ಬಳಿ ಚಿನ್ನಾಭರಣವನ್ನು ಅಡವಿಟ್ಟಿದ್ದಳು ಜತೆಗೆ ಹಣವನ್ನು ಕೊಟ್ಟಿದ್ದಳು. ಬಸ್ಸಮ್ಮ ಕೊಟ್ಟ ಚಿನ್ನವನ್ನು ರಾಜುಕುಮಾರ್‌ ಮತ್ತೊಬ್ಬರ ಬಳಿ ಅಡವಿಟ್ಟಿದ್ದ. ಕೆಲ ದಿನಗಳ ಬಳಿಕ ಬಸ್ಸಮ್ಮ, ರಾಜಕುಮಾರ್‌ಗೆ ಚಿನ್ನಾಭರಣ ಹಾಗೂ ಹಣವನ್ನು ನೀಡುವಂತೆ ಕೇಳಿದ್ದಳು.

ಆದರೆ ಬೇರೊಬ್ಬರ ಬಳಿ ಚಿನ್ನ ಅಡವಿಟ್ಟ ಕಾರಣಕ್ಕೆ ರಾಜಕುಮಾರ್‌, ಬಸ್ಸಮ್ಮಳನ್ನು ಕೊಂದು ಮುಗಿಸಲು ಸ್ಕೆಚ್‌ ಹಾಕಿದ್ದ. ಅದರಂತೆ ಜುಲೈ 14 ರಂದು ಮಾರ್ಕೆಟ್‌ನಿಂದ ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಗುರುತು ಸಿಗದಂತೆ ಸುಟ್ಟು ಹಾಕಿ ಎಸ್ಕೇಪ್ ಆಗಿದ್ದ.

ಜಮೀನಿನಲ್ಲಿ ಪತ್ತೆಯಾಗಿದ್ದ ಶವ

ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Found) ಪತ್ತೆಯಾಗಿತ್ತು. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Exit mobile version