ನವದೆಹಲಿ: ದೇಶಾದ್ಯಂತ ಬುಧವಾರ(ಆಗಸ್ಟ್ 21)ರಂದು ಭಾರತ್ ಬಂದ್(Bharat Bandh Today)ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ (Supreme Court SC ST Quota, SC ST Sub- Classifications) ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ (Supreme Court) ನೀಡಿತ್ತು. ಇದನ್ನು ವಿರೋಧಿಸಿ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಈ ಭಾರತ್ ಬಂದ್‌ಗೆ ಕರೆ ನೀಡಿದೆ. ಆ ಮೂಲಕ ಕೋರ್ಟ್ ಆದೇಶ ಹಿಂಪಡೆದು, ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ.
ಬಂದ್‌ಗೆ ಕಾರಣ ಏನು?
ಪರಿಶಿಷ್ಟ ಜಾತಿ(SC) ಮತ್ತು ಪರಿಶಿಷ್ಟ ಪಂಗಡ(ST)ಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಅವಶ್ಯಕತೆ ಇದ್ದರವರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟು ಮೀಸಲಾತಿ ನೀಡಬೇಕೆಂದು ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವಾದವಾಗಿದೆ.
Effect of #BharatBand in sambalpur
— YUVRAJ DUMALA (@mryuvimeena) August 21, 2024
Protestors stopped 2 trains at chetrajpur station
Picketing and rioting in Balangir town
Blockade by agitators of binika college street #BharatBand #sambalpur #Odisha #bhimarmy #21_अगस्त_सम्पूर्ण_भारत_बंद pic.twitter.com/xMblCabTN1
ಇಂದು ಶಾಲೆಗಳು ಇವೆಯೇ?
ಮಾಧ್ಯಮ ವರದಿಗಳ ಪ್ರಕಾರ, ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಶಾಲೆಗಳು, ಕಾಲೇಜುಗಳು ಮತ್ತು ಪೆಟ್ರೋಲ್ ಬಂಕ್‌ಗಳು ಬಂದ್‌ಗೆ ಕರೆ ನೀಡಿದ ಹೊರತಾಗಿಯೂ ತೆರೆದಿರುತ್ತವೆ.
ಯಾವೆಲ್ಲಾ ಸೇವೆ ಲಭ್ಯ?
ಇನ್ನು ಬಂದ್ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ. ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದಾಗ್ಯೂ, ಸಾರ್ವಜನಿಕ ಸಾರಿಗೆಯನ್ನು, ಖಾಸಗಿ ಕಚೇರಿಗಳು, ಅಂಗಡಿ ಮುಗ್ಗಟ್ಟು ಬಂದ್ ಆಗಲಿವೆ. ಇನ್ನು ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಇದನ್ನೂ ಓದಿ: Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ
ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ಎಲ್ಲಾ ರಾಜ್ಯದ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ಖಡಕ್ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಕೆಲ ಸ್ಥಳಗಳನ್ನು ಗುರುತಿಸಿ ಭದ್ರತೆ ಹೆಚ್ಚಿಸಲು ಸೂಚಿಸಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶ ಸೇರಿದಂತೆ ಕೆಲ ಉತ್ತರ ರಾಜ್ಯಗಳಲ್ಲಿ ಈ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ತೀವ್ರ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಕೋರ್ಟ್ ಹೇಳಿದ್ದೇನು?
ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಉಪ-ವರ್ಗೀಕರಣವನ್ನು ನೀಡುವಾಗ, ರಾಜ್ಯವು ಉಪ-ವರ್ಗಕ್ಕೆ 100% ಮೀಸಲಾತಿಯನ್ನು ಮೀಸಲಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಉಪ-ವರ್ಗೀಕರಣದ ಪ್ರಾತಿನಿದ್ಯ ನೀಡಬಹುದಾಗಿದೆ. ಹೆಚ್ಚು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ರಾಜ್ಯದ ಕರ್ತವ್ಯ ಎಂದಿದೆ. SC/ST ವರ್ಗದ ಕೆಲವೇ ಜನರು ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ಈ ವಿಚಾರವನ್ನು ಅಲ್ಲಗಳೆಯುವಂತಿಲ್ಲ. SC/ST ಗಳಲ್ಲಿ ಶತಮಾನಗಳಿಂದ ಹೆಚ್ಚು ದಬ್ಬಾಳಿಕೆಯನ್ನು ಎದುರಿಸುತ್ತಿರುವ ಇನ್ನೂ ಹಿಂದುಳಿದ ವರ್ಗಗಳಿವೆ ಎಂದು ಕೋರ್ಟ್ ಹೇಳಿದೆ