ವಿಸ್ತಾರ ಸಂಪಾದಕೀಯ: ಡಿಜಿಟಲ್‌ ಇಂಡಿಯಾ ಬಗೆಗೆ ಬಿಲ್‌ ಗೇಟ್ಸ್‌ ಪ್ರಶಂಸೆ ಸ್ಫೂರ್ತಿದಾಯಕ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಡಿಜಿಟಲ್‌ ಇಂಡಿಯಾ ಬಗೆಗೆ ಬಿಲ್‌ ಗೇಟ್ಸ್‌ ಪ್ರಶಂಸೆ ಸ್ಫೂರ್ತಿದಾಯಕ

ʼಡಿಜಿಟಲ್ ಇಂಡಿಯಾʼದ ಮೂಲ ಉದ್ದೇಶಕ್ಕೆ ಚ್ಯುತಿ ಬರದಂತೆ ನಡೆಸಿಕೊಂಡು ಹೋದರೆ ಮುಂಬರುವ ದಿನಗಳಲ್ಲಿ ಜಗತ್ತಿನ ಇತರ ದೇಶಗಳಿಗೆ ಭಾರತ ಮಾದರಿ ದೇಶವಾಗಿ ನಿಲ್ಲಬಹುದು. ಆದರೆ ಇದರಲ್ಲಿರುವ ಕೆಲವು ಅನನುಕೂಲಗಳು ಮತ್ತು ವಂಚನೆಯ ಸಾಧ್ಯತೆಗಳೂ ಇದ್ದು, ಇವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಿದೆ.

VISTARANEWS.COM


on

Modi and billgates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತ ಭೇಟಿಯಲ್ಲಿರುವ ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್‌ ಗೇಟ್ಸ್‌ (Bill Gates) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಭಾರತದ ಅಭಿವೃದ್ಧಿ, ಕೃತಕ ಬುದ್ಧಿಮತ್ತೆಯ ಬಳಕೆ, ತಂತ್ರಜ್ಞಾನದ ಬಳಕೆ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದರು. ಈ ವೇಳೆ ಬಿಲ್‌ ಗೇಟ್ಸ್‌ ಅವರು ಭಾರತದ ಡಿಜಿಟಲ್‌ ತಂತ್ರಜ್ಞಾನದ ಅಳವಡಿಕೆ, ಜಾರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ, ಪ್ರಾಮುಖ್ಯತೆ ಕುರಿತು ನರೇಂದ್ರ ಮೋದಿ ಅವರು ಬಿಲ್‌ ಗೇಟ್ಸ್‌ ಅವರಿಗೆ ವಿವರಿಸಿದ್ದಾರೆ. “ಭಾರತವು ಡಿಜಿಟಲ್‌ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಮಹಿಳೆಯರು ಕೂಡ ಆನ್‌ಲೈನ್‌ ಪಾವತಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ. ತಂತ್ರಜ್ಞಾನದ ಅಳವಡಿಕೆಯಲ್ಲಿ ಭಾರತವು ಮುಂದಿದೆ” ಎಂದು ಬಿಲ್‌ ಗೇಟ್ಸ್‌ ಹೇಳಿದ್ದಾರೆ.

ʼಡಿಜಿಟಲ್‌ ಇಂಡಿಯಾʼ ಎಂಬುದು ಒಂದು ದೂರಗಾಮಿ ಕನಸು. ಡಿಜಿಟಲ್‌ ಪಾವತಿಯಲ್ಲಂತೂ ಭಾರತವೇ ಕಿಂಗ್.‌ 2022ರ ಅಂಕಿ ಅಂಶಗಳ ಪ್ರಕಾರ, ಡಿಜಿಟಲ್ ಪೇಮೆಂಟ್ಸ್‌ನಲ್ಲಿ ಭಾರತವು ನಾಲ್ಕು ರಾಷ್ಟ್ರಗಳನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. 2022ರಲ್ಲಿ 8.95 ಕೋಟಿ ಡಿಜಿಟಲ್ ಪಾವತಿಗಳಾಗಿವೆ. ಜಾಗತಿಕವಾಗಿ ನಡೆಯುವ ರಿಯಲ್‌ ಟೈಮ್ ಡಿಜಿಟಲ್ ಪೇಮೆಂಟ್‌ಗಳಿಗೆ ಭಾರತದ ಕೊಡುಗೆಯೇ ಶೇ.46ರಷ್ಟಾಗುತ್ತದೆ! ಭಾರತೀಯ ರಿಸರ್ವ್ ಬ್ಯಾಂಕಿನ ತಜ್ಞರ ಪ್ರಕಾರ, ಭಾರತದ ಡಿಜಿಟಲ್ ಪಾವತಿ ವಲಯವು ಮೌಲ್ಯ ಮತ್ತು ಪರಿಮಾಣ ಎರಡರಲ್ಲೂ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇದು ದೇಶದ ಪಾವತಿ ಪರಿಸರ ವ್ಯವಸ್ಥೆಯ ಶಕ್ತಿ ಮತ್ತು ವ್ಯಾಪಕವಾದ ಸ್ವೀಕಾರವನ್ನು ಎತ್ತಿ ತೋರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಡಿಜಿಟಲ್ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅದರ ಪರಿಣಾಮವೇ ಈಗ ಈ ಸಾಧನೆ ಮಾಡಲು ಸಾಧ್ಯವಾಗಿದೆ.

ಇದೇನೂ ಸುಲಭದ ನಡಿಗೆಯಾಗಿರಲಿಲ್ಲ. ಭಾರತದಲ್ಲಿ ಬಡವರು, ಅನಕ್ಷರಸ್ಥರೇ ಹೆಚ್ಚಿದ್ದಾರೆ. ಅವರೆಲ್ಲ ನೋಟು ಬಳಸದೆ ಡಿಜಿಟಲ್ ವ್ಯವಹಾರ ನಡೆಸಲು ಹೇಗೆ ಸಾಧ್ಯ ಎಂಬ ಬಗ್ಗೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ದೇಶದ ಸಾಮಾನ್ಯ ಜನರೇ ಹೆಚ್ಚಿನ ಪ್ರಮಾಣದಲ್ಲಿ ಡಿಜಿಟಲ್ ವಹಿವಾಟಿಗೆ ಇಳಿದರು. ಎಳನೀರು ಮಾರುವವರು, ಚಪ್ಪಲಿ ಹೊಲಿಯುವವರು, ರಸ್ತೆ ಬದಿ ತರಕಾರಿ ಮಾರುವವರೂ ಈಗ QR ಕೋಡ್ ಬಳಸಿ ಡಿಜಿಟಲ್ ಮೂಲಕವೇ ವ್ಯವಹರಿಸುತ್ತಿದ್ದಾರೆ. ಡಿಜಿಟಲ್‌ ಪಾವತಿಯಿಂದ ಅನುಕೂಲಗಳು ಸಾಕಷ್ಟಿವೆ. ಸರ್ಕಾರಿ ಯೋಜನೆಗಳು ಫಲಾನುಭವಿಗಳನ್ನು ನೇರವಾಗಿ ತಲುಪುತ್ತಿರುವುದು ಈ ಪಾವತಿ ಮೂಲಕವೇ ಆಗಿವೆ. ತೆರಿಗೆ ವಂಚನೆ ತಡೆಗಟ್ಟಲು ಸಾಧ್ಯವಾಗಿದೆ. ಭವಿಷ್ಯದಲ್ಲಿ ಎಲ್ಲ ಹಣದ ವಹಿವಾಟುಗಳೂ ಡಿಜಿಟಲ್‌ ಆಗಿಬಿಡುವ ಸಂಭವ ಇರುವುದರಿಂದ, ನಾವು ಆ ಹಾದಿಯಲ್ಲಿ ಶೀಘ್ರ ಹೆಜ್ಜೆ ಹಾಕುತ್ತಿದ್ದೇವೆ ಎಂದು ಹೆಮ್ಮೆ ಪಟ್ಟುಕೊಳ್ಳಬಹುದು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

ಆನ್‌ಲೈನ್ ಮೂಲಸೌಕರ್ಯ ಸುಧಾರಣೆ ಮತ್ತು ಇಂಟರ್ನೆಟ್ ಸಂಪರ್ಕವನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಸೇವೆಗಳನ್ನು ವಿದ್ಯುನ್ಮಾನವಾಗಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಭಾರತ ಸರ್ಕಾರ ಡಿಜಿಟಲ್ ಇಂಡಿಯಾ ಅಭಿಯಾನವನ್ನು ಪ್ರಾರಂಭಿಸಿತು. ತಂತ್ರಜ್ಞಾನದ ಡೊಮೇನ್‌ನಲ್ಲಿ ದೇಶವನ್ನು ಡಿಜಿಟಲ್ ಆಗಿ ಸಶಕ್ತಗೊಳಿಸುವ ಗುರಿಯನ್ನು ಹೊಂದಿರುವ ಇದನ್ನು ಪ್ರಧಾನಿ ಮೋದಿ 2015ರಲ್ಲಿ ಆರಂಭಿಸಿದ್ದರು. ಡಿಜಿಟಲ್ ಇಂಡಿಯಾ ಮಿಷನ್ ದೇಶದ ಗ್ರಾಮೀಣ ಪ್ರದೇಶಗಳನ್ನು ಹೈಸ್ಪೀಡ್ ಇಂಟರ್ನೆಟ್ ನೆಟ್‌ವರ್ಕ್‌ಗಳೊಂದಿಗೆ ಸಂಪರ್ಕಿಸುವ ಯೋಜನೆಗಳನ್ನು ಒಳಗೊಳ್ಳುವ ಒಂದು ಉಪಕ್ರಮ. ಡಿಜಿಟಲ್ ಅಳವಡಿಕೆಯ ವೇದಿಕೆಯಲ್ಲಿ ಜಾಗತಿಕವಾಗಿ ಅಗ್ರ 2 ದೇಶಗಳಲ್ಲಿ ಭಾರತ ಸ್ಥಾನ ಪಡೆದಿದೆ.

ಡಿಜಿಟಲ್ ಇಂಡಿಯಾ ಉಪಕ್ರಮದಿಂದ ಸಮಾಜದಲ್ಲಿ ಹಣದ ವಹಿವಾಟಿನಲ್ಲಿ ಪಾರದರ್ಶಕತೆ ಬರುತ್ತದೆ. ಸರ್ಕಾರಿ ಕೆಲಸಗಳು ಸೇರಿದಂತೆ ಹಲವು ಹತ್ತು ಕ್ಷೇತ್ರದಲ್ಲಿ ನಡೆಯುವ ಕೆಲಸಗಳು ಪಾರ್ದರ್ಶಕ ಹಾಗೂ ಚುರುಕಾಗುತ್ತವೆ. ಒಟ್ಟಾರೆಯಾಗಿ ಜನಜೀವನದ ಮಟ್ಟ ಸುಧಾರಿಸುತ್ತದೆ. ಗ್ಯಾಸ್ ಸಬ್ಸಿಡಿ, ಪಿಂಚಣಿ, ಆರೋಗ್ಯ ವಿಮೆ ಇತ್ಯಾದಿಗಳಲ್ಲಿ ಆಗುತ್ತಿದ್ದ ವಿಳಂಬ ಮತ್ತು ಹಣಕಾಸು ಏರುಪೇರುಗಳು ಇಲ್ಲವೆನ್ನುವಷ್ಟು ಕಡಿಮೆಯಾಗಿವೆ. ʼಡಿಜಿಟಲ್ ಇಂಡಿಯಾʼದ ಮೂಲ ಉದ್ದೇಶಕ್ಕೆ ಚ್ಯುತಿ ಬರದಂತೆ ನಡೆಸಿಕೊಂಡು ಹೋದರೆ ಮುಂಬರುವ ದಿನಗಳಲ್ಲಿ ಜಗತ್ತಿನ ಇತರ ದೇಶಗಳಿಗೆ ಭಾರತ ಮಾದರಿ ದೇಶವಾಗಿ ನಿಲ್ಲಬಹುದು. ಆದರೆ ಇದರಲ್ಲಿರುವ ಕೆಲವು ಅನನುಕೂಲಗಳು ಮತ್ತು ವಂಚನೆಯ ಸಾಧ್ಯತೆಗಳೂ ಇದ್ದು, ಇವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವೂ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವೃಷಭ ರಾಶಿಯವರು ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಆಪ್ತರ ಆರೋಗ್ಯ ವಿಚಾರಣೆ ಮಾಡುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಚೌತಿ 16:14 ವಾರ: ಸೋಮವಾರ
ನಕ್ಷತ್ರ: ಪುಷ್ಯ 21:38 ಯೋಗ: ಧ್ರುವ 16:46
ಕರಣ: ವಿಷ್ಟಿ (ಭದ್ರ) 16:14 ಅಮೃತ ಕಾಲ: ಮಧ್ಯಾಹ್ನ 02:54ರಿಂದ 04:36ರವರೆಗೆ
ದಿನದ ವಿಶೇಷ: ಉಮಾವತಾರ ವ್ರತ, ವಿನಾಯಕ ಚತುರ್ಥಿ

ಸೂರ್ಯೋದಯ : 05:53   ಸೂರ್ಯಾಸ್ತ : 06:46

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕವಿದೆ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಆಪ್ತರ ಆರೋಗ್ಯ ವಿಚಾರಣೆ ಮಾಡುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ:ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದ್ದು, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ : ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸ-ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯವನ್ನು ಕೋರುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಸಿಗಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

IND vs PAK : ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ind vs pak
Koo

ಬೆಂಗಳೂರು: ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವ ಕಪ್​ ಲೀಗ್​ ಪಂದ್ಯದಲ್ಲಿ ಭಾರತ ತಂಡ (IND vs PAK) ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡ ಹಾಲಿ ವಿಶ್ವ ಕಪ್​ನಲ್ಲಿ ಎರಡನೇ ವಿಜಯ ದಾಖಲಿದೆ. ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್​ ವಿರುದ್ಧ ಗೆಲುವು ದಾಖಲಿಸಿತ್ತು. ಇದೀಗ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಪಾಕ್​ ತಂಡವನ್ನು ಮಣಿಸಿದೆ. ಪ್ರಶಸ್ತಿ ಕಡೆಗೆ ಮುನ್ನುಗ್ಗುವ ಯೋಚನೆಯಲ್ಲಿರುವ ಭಾರತ ತಂಡಕ್ಕೆ ಈ ವಿಜಯದಿಂದ ಭಾರೀ ವಿಶ್ವಾಸ ದೊರಕಿದೆ. ಇದು ಭಾರತ ತಂಡಕ್ಕೆ ಟಿ20 ವಿಶ್ವ ಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ದೊರೆಯುತ್ತಿರುವ 8ನೇ ವಿಜಯ. ಒಂದೇ ಬಾರಿ ಪಾಕಿಸ್ತಾನ ಗೆಲುವು ದಾಖಲಿಸಿದೆ. ಅಲ್ಲದೆ 2023ರಲ್ಲಿ ಭಾರತದಲ್ಲಿ ನಡೆದಿದ್ದ ಏಕ ದಿನ ವಿಶ್ವ ಕಪ್​ನಲ್ಲಿಯೂ ಭಾರತ ತಂಡ ಪಾಕಿಸ್ತಾನ ತಂಡವನ್ನು ಸೋಲಿಸಿತ್ತು.

ಇಲ್ಲಿನ ನಸ್ಸೌ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಬೌಲಿಂಗ್​ಗೆ ನೆರವಾಗುತ್ತಿದ್ದ ಪಿಚ್​ನಲ್ಲಿ ಭಾರತೀಯ ಬೌಲರ್​ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದರು. ಬ್ಯಾಟರ್​ಗಳು ಪೇರಿಸಿದ್ದ 113 ರನ್​ಗಳ ಮೊತ್ತವನ್ನು ಕಾಪಾಡಿದರು.

2007ರ ಟಿ20 ವಿಶ್ವಕಪ್​ನ ನಂತರದಿಂದದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು
2007ರ ಟಿ20 ವಿಶ್ವಕಪ್​ನ ನಂತರದಿಮದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು.

ಹಿಂದಿನ ಬಾರಿ ಕೊಹ್ಲಿ ಗೆಲ್ಲಿಸಿದ್ದರು

ಕಳೆದ ವರ್ಷ ನಡೆದ ಟಿ20 ವಿಶ್ವಕಪ್​​ನಲ್ಲಿ ಟೀಮ್ ಇಂಡಿಯಾ, ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಪವರ್​​​ಪ್ಲೇನಲ್ಲಿ 32ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ರೋಚಕ ಗೆಲುವು ತಂದಿದ್ದರು. ಕೊಹ್ಲಿ 52 ಎಸೆತಗಳಲ್ಲಿ ಅಜೇಯ 82 ರನ್ ಚಚ್ಚಿ ಅವಿಸ್ಮರಣೀಯ ಇನಿಂಗ್ಸ್ ಆಡಿದ್ದರು.

ವಿಶ್ವ ಕಪ್​ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಐರ್ಲೆಂಡ್ ಎದುರಿನ ತನ್ನ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ. ಇದೀಗ ಪಾಕಿಸ್ತಾನ ವಿರುದ್ಧಗೂ ಗೆಲುವು ಸಾಧಿಸಿ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಿದೆ. ಸ್ಥಳೀಯ ಸಮಯ ಬೆಳಗ್ಗೆ 10 ಗಂಟೆಗೆ ಹಾಗೂ ಭಾರತದ ಸಮಯ ಸಂಜೆ 7.30ಕ್ಕೆ ನಡೆಯಬೇಕಾಗಿದ್ದ ಟಾಸ್​ ಮಳೆಯಿಂದಾಗಿ ತಡವಾಯಿತು. ಪಂದ್ಯ ಆರಂಭಗೊಂಡು ಒಂದು ಓವರ್​ ಆದ ಬಳಿಕ ಮತ್ತೆ ಮಳೆ ಸುರಿಯಿತು. ಕೊನೆಗೂ ಪಂದ್ಯ ನಡೆದು ಭಾರತಕ್ಕೆ ಜಯ ಸಿಕ್ಕಿತು.

Continue Reading

ಪ್ರಮುಖ ಸುದ್ದಿ

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Stabbing in Mangalore : ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ.

VISTARANEWS.COM


on

Stabbing in Mangalore:
Koo

ಮಂಗಳೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ (Stabbing in Mangalore) ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ಸಂಭವಿಸಿದೆ.

ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

Continue Reading

ದೇಶ

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

Modi 3.0 Cabinet:‌ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೇಂದ್ರದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರ ಸಂಪುಟಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ, ಮೂವರು ಹಾಲಿ ಸಂಪುಟ ದರ್ಜೆ ಸಚಿವರನ್ನು ನರೇಂದ್ರ ಮೋದಿ ಅವರು ಕೈಬಿಟ್ಟಿದ್ದಾರೆ. ಹಾಗಾದರೆ, ಯಾರಿಗೆಲ್ಲ ಕೊಕ್‌ ಕೊಡಲಾಗಿದೆ? ಮಾಹಿತಿ ಹೀಗಿದೆ…

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಜತೆಗೆ 72 ಸಂಸದರು ಕೂಡ ಸಚಿವರಾಗಿ (Modi 3.0 Cabinet) ಪ್ರಮಾಣವಚನ ಸ್ವೀಕರಿಸಿದ್ದಾರೆ. ಯುವ ಸಂಸದರು, ಮೈತ್ರಿ ಪಕ್ಷಗಳ ಸದಸ್ಯರು, ಅನುಭವಿಗಳು ಸೇರಿ ಹಲವು ಮಾನದಂಡಗಳನ್ನು ಅನುಸರಿಸಿ ಸಚಿವ ಸ್ಥಾನ ನೀಡಲಾಗಿದೆ. ಇನ್ನು, ಮೂವರು ಹಾಲಿ ಸಂಪುಟ ದರ್ಜೆ ಸಚಿವರಿಗೆ ನರೇಂದ್ರ ಮೋದಿ ಅವರು ಕೊಕ್‌ ನೀಡಿದ್ದಾರೆ. ಮೂವರು ಸಚಿವರಲ್ಲಿ ಸ್ಮೃತಿ ಇರಾನಿ (Smriti Irani) ಕೂಡ ಇದ್ದಾರೆ.

2019ರಲ್ಲಿ ರಾಹುಲ್‌ ಗಾಂಧಿ ವಿರುದ್ಧ ಗೆಲುವು ಸಾಧಿಸಿದ್ದ ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ನ ಕಿಶೋರಿ ಲಾಲ್‌ ಶರ್ಮಾ ಅವರ ವಿರುದ್ಧ ಸ್ಮೃತಿ ಇರಾನಿ ಅವರು 1.6 ಲಕ್ಷ ಮತಗಳಿಂದ ಸೋಲನುಭವಿಸಿದ್ದಾರೆ. ಇವರು ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿದ್ದರು. ಮತ್ತೊಂದೆಡೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿದ್ದ ಅನುರಾಗ್‌ ಠಾಕೂರ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಹಿಮಾಚಲ ಪ್ರದೇಶ ಹಮೀರ್‌ಪುರ ಕ್ಷೇತ್ರದಲ್ಲಿ ಅನುರಾಗ್‌ ಠಾಕೂರ್‌ ಅವರು ಗೆಲುವು ಸಾಧಿಸಿದರೂ ಕೈಬಿಡಲಾಗಿದೆ. ಹಿಮಾಚಲ ಪ್ರದೇಶ ಕೋಟಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ.

Anurag Thakur On Renaming India Name Row

ಮೋದಿ ಅವರ ಎರಡನೇ ಅವಧಿಯ ಸರ್ಕಾರದಲ್ಲಿ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಖಾತೆ ಸಚಿವರಾಗಿದ್ದ ನಾರಾಯಣ ರಾಣೆ ಅವರಿಗೆ ಕೊಕ್‌ ನೀಡಲಾಗಿದೆ. ಇವರು ಮಹಾರಾಷ್ಟ್ರದ ರತ್ನಗಿರಿ-ಸಿಂಧುದುರ್ಗ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಖಾತೆ ನೀಡಿಲ್ಲ. ಇನ್ನು, ಸಹಾಯಕ ಖಾತೆ ಸಚಿವರಾಗಿದ್ದ ರಾಜೀವ್‌ ಚಂದ್ರಶೇಖರ್‌ ಅವರ ಹೆಸರನ್ನೂ ಮೋದಿ ಕೈಬಿಟ್ಟಿದ್ದಾರೆ. ರಾಜೀವ್‌ ಚಂದ್ರಶೇಖರ್‌ ಅವರು ಕೇರಳದ ತಿರುವನಂತಪುರಂನಲ್ಲಿ ಕಾಂಗ್ರೆಸ್‌ನ ಶಶಿ ತರೂರ್‌ ಅವರಿಗೆ ತೀವ್ರ ಪೈಪೋಟಿ ನೀಡಿ ಸೋಲನುಭವಿಸಿದ್ದರು.

rajiv chandrashekhar

ಹಲವು ಹೊಸಬರಿಗೆ ಈ ಬಾರಿ ಮಣೆ ಹಾಕಲಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಅವರಿಗೆ ರಾಜ್ಯ ಖಾತೆಯ ಉಸ್ತುವಾರಿ ನೀಡಲಾಗಿದೆ. ಜೆಡಿಯು ಸಂಸದ, ನಿತೀಶ್‌ ಕುಮಾರ್‌ ಅವರ ನಿಕಟವರ್ತಿಯಾಗಿರುವ ಇವರಿಗೆ ನರೇಂದ್ರ ಮೋದಿ ಅವರು ಮಣೆ ಹಾಕಿದ್ದಾರೆ. ಕರ್ಪೂರಿ ಠಾಕೂರ್‌ ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಭಾರತರತ್ನ ಘೋಷಿಸಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೇಂದ್ರ ಸಂಪುಟ ದರ್ಜೆ ಸ್ಥಾನ ನೀಡಲಾಗಿದ್ದು, ಇವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎನ್ನಲಾಗುತ್ತದೆ. ಇನ್ನು, ಮಧ್ಯಪ್ರದೇಶ ಸಿಎಂ ಸ್ಥಾನ ತೊರೆದ ಶಿವರಾಜ್‌ ಸಿಂಗ್‌ ಚೌಹಾಣ್‌, ಹರಿಯಾಣ ಮಾಜಿ ಸಿಎಂ ಮನೋಹರ ಲಾಲ್‌ ಖಟ್ಟರ್‌, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ. ಕೇರಳ ತ್ರಿಶ್ಶೂರ್‌ ಸಂಸದ ಸುರೇಶ್‌ ಗೋಪಿ, ಕರ್ನಾಟಕದ ವಿ.ಸೋಮಣ್ಣ, ತೆಲಂಗಾಣದ ಬಂಡಿ ಸಂಜಯ್‌ ಕುಮಾರ್‌ ಸೇರಿ ಹಲವು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading
Advertisement
Dina Bhavishya
ಭವಿಷ್ಯ20 mins ago

Dina Bhavishya : ಈ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ!

ind vs pak
ಪ್ರಮುಖ ಸುದ್ದಿ4 hours ago

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

Stabbing in Mangalore:
ಪ್ರಮುಖ ಸುದ್ದಿ5 hours ago

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Modi 3.0 Cabinet
ದೇಶ6 hours ago

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

IND vs PAK:
ಪ್ರಮುಖ ಸುದ್ದಿ6 hours ago

IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

Veeraloka
Latest7 hours ago

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

IND vs PAK
ಪ್ರಮುಖ ಸುದ್ದಿ7 hours ago

IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

Modi 3.0 Cabinet
ದೇಶ8 hours ago

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet
ದೇಶ8 hours ago

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

V Somanna profile
ಪ್ರಮುಖ ಸುದ್ದಿ8 hours ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌