ನವದೆಹಲಿ: ದಿಲ್ಲಿ ಅಧಿಕಾರಿಗಳ ಸೇವೆಗಳ ಮೇಲೆ ಕೇಂದ್ರಕ್ಕೆ ನಿಯಂತ್ರಣ ಒದಗಿಸುವ ಸುಗ್ರೀವಾಜ್ಞೆಗೆ (Delhi Ordinance) ಬದಲಿಗೆ ವಿಧೇಯಕಕ್ಕೆ ಕೇಂದ್ರ ಸಚಿವ ಸಂಪುಟವು (Union Cabinet) ಒಪ್ಪಿಗೆಯನ್ನು ನೀಡಿದೆ. ದಿಲ್ಲಿಯಲ್ಲಿ ಗ್ರೂಪ್ ಎ ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆ ನಿಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ಮೇ 19ರಂದು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.
ಮೇ 11ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡುವ ಮೊದಲು, ದಿಲ್ಲಿ ಸರ್ಕಾರ ಸರ್ಕಾರದ ಎಲ್ಲಾ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳು ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯನಿರ್ವಾಹಕ ನಿಯಂತ್ರಣದಲ್ಲಿತ್ತು. ಆದರೆ, ಸುಪ್ರೀಂ ಕೋರ್ಟ್ ತೀರ್ಪು ನೀಡಿ, ಅಧಿಕಾರಗಲ ವರ್ಗಾವಣೆಯು ದಿಲ್ಲಿ ಸರ್ಕಾರದ ನಿಯಂತ್ರಣದಲ್ಲಿರಬೇಕೆಂದು ಹೇಳಿತ್ತು. ಆಗ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಂಡಿತ್ತು. ಕೇಂದ್ರದ ಈ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಆಪ್ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಈಗ ಕೇಂದ್ರದ ಮೇ 19 ರ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಮನವಿಯನ್ನು ಆಲಿಸಲಿದೆ.
ಈ ಸುದ್ದಿಯನ್ನೂ ಓದಿ: Opposition Meet: ಕೇಂದ್ರದ ‘ದಿಲ್ಲಿ ಸುಗ್ರೀವಾಜ್ಞೆ’ಗೆ ಕಾಂಗ್ರೆಸ್ ವಿರೋಧ; ಖುಷಿಯಾದ ಆಪ್!
ದಿಲ್ಲಿ ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಆಪ್‌ಗೆ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್ ಸೇರಿದ ಅನೇಕ ಪ್ರತಿಪಕ್ಷಗಳು ಬೆಂಬಲ ನೀಡಿವೆ. ದೆಹಲಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸಿ ರಾಜ್ಯಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿರುವುದಾಗಿ ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಭಾನುವಾರ ಹೇಳಿದ್ದಾರೆ. ದೆಹಲಿ ಸುಗ್ರೀವಾಜ್ಞೆಗೆ ಬದಲಿಯಾಗಿ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸುವುದು ಮೂರು ಪ್ರಮುಖ ಕಾರಣಗಳಿಗಾಗಿ ಅನುಮತಿ ನೀಡಬಾರದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.