Site icon Vistara News

Lok Sabha Election : ಟಿಡಿಪಿ ಮತ್ತು ಜೆಎಸ್​ಪಿ ಜೊತೆ ಬಿಜೆಪಿಯ ಆಂಧ್ರ ಚುನಾವಣಾ ಸೀಟು ಹಂಚಿಕೆ ಅಂತಿಮ

BJP Andhra list

ನವದೆಹಲಿ: ಮುಂಬರುವ ಲೋಕಸಭಾ (Lok Sabha Election) ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ, ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಸೋಮವಾರ ಸಂಜೆ ಸ್ಥಾನ ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿವೆ. ಬಿಜೆಪಿ 6 ಲೋಕಸಭಾ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ, ಟಿಡಿಪಿ 17 ಲೋಕಸಭಾ ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಜನಸೇನಾ ಎರಡು ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳನ್ನು ಪಡೆದಿದೆ. ಆಂಧ್ರಪ್ರದೇಶದಲ್ಲಿ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭಾ ಸ್ಥಾನಗಳಿವೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸೋಮವಾರ ಚಂದ್ರಬಾಬು ನಾಯ್ಡು ಮತ್ತು ಪವನ್​ ಕಲ್ಯಾಣ್ ಅವರೊಂದಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾರ್ಚ್ 9 ರಂದು ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಜೊತೆ ತಮ್ಮ ಪಕ್ಷದ ಮೈತ್ರಿಯನ್ನು ಘೋಷಿಸಿದ್ದರು. ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕ್ರಿಯಾತ್ಮಕ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ), ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷ (ಜೆಎಸ್ಪಿ) ಮತ್ತು ದೇಶದ ಪ್ರಗತಿ ಮತ್ತು ರಾಜ್ಯ ಮತ್ತು ಆಂಧ್ರಪ್ರದೇಶದ ಜನರ ಉನ್ನತಿಗೆ ಬದ್ಧವಾಗಿವೆ. ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿತ್ತು.

2018 ರವರೆಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿದ್ದ ಟಿಡಿಪಿ 2019ರಲ್ಲಿ ಪ್ರತ್ಯೇಕವಾಗಿತ್ತು. ಆ ಚುನಾವಣೆಯಲ್ಲಿ ಹೀನಾಯ ಸೋಲನ್ನು ಅನುಭವಿದ್ದ ನಂತರ ಮೈತ್ರಿಯನ್ನು ಪುನರುಜ್ಜೀವನಗೊಳಿಸುವ ಆಸಕ್ತಿಯನ್ನು ವ್ಯಕ್ತಪಡಿಸಿತ್ತು. ಆಂಧ್ರಪ್ರದೇಶಕ್ಕೆ ಆರ್ಥಿಕ ನೆರವು ನೀಡುವ ವಿಚಾರದಲ್ಲಿ ನಾಯ್ಡು ಅವರ ಪಕ್ಷ ಎನ್​​ಡಿಎಯಿಂದ ಹೊರನಡಿದ್ದರು.

ಇದನ್ನೂ ಓದಿ : Congress candidate list : ಮಧ್ಯಪ್ರದೇಶದಲ್ಲಿ ಕಮಲ್​ನಾಥ್​ ಪುತ್ರ ನಕುಲ್​ಗೆ ಸಿಕ್ಕಿತು ಟಿಕೆಟ್​

. “ನಾನು ಈ ನಿರ್ಧಾರವನ್ನು ಸ್ವಾರ್ಥಕ್ಕಾಗಿ ತೆಗೆದುಕೊಂಡಿಲ್ಲ, ಆದರೆ ಆಂಧ್ರಪ್ರದೇಶದ ಹಿತಾಸಕ್ತಿಗಾಗಿ ತೆಗೆದುಕೊಂಡಿದ್ದೇನೆ. ನಾಲ್ಕು ವರ್ಷಗಳ ಕಾಲ ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ, 29 ಬಾರಿ ದೆಹಲಿಗೆ ಹೋದೆ, ಅನೇಕ ಬಾರಿ ಕೇಳಿದೆ. ಇದು ಕೇಂದ್ರದ ಕೊನೆಯ ಬಜೆಟ್ ಮತ್ತು ಆಂಧ್ರಪ್ರದೇಶದ ಬಗ್ಗೆ ಯಾವುದೇ ಉಲ್ಲೇಖವಿಲ್ಲ” ಎಂದು ನಾಯ್ಡು ತಮ್ಮ ನಿರ್ಧಾರವನ್ನು ನಾಯ್ಡು ಹೇಳಿದ್ದರು.

Exit mobile version