Site icon Vistara News

Sedition Case: ಪಾಕ್‌ ಪರ ಘೋಷಣೆ ಖಂಡಿಸಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ; 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ವಶಕ್ಕೆ

BJP Protest in KPCC office

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಪ್ರಕರಣಕ್ಕೆ (Pro Pak Slogan) ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದಕ್ಕೆ ಸಂಬಂಧಿಸಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ (Sedition Case) ದಾಖಲಿಸಿಕೊಂಡಿದ್ದಾರೆ. ಇನ್ನು ಘಟನೆ ಖಂಡಿಸಿ ನಗರದ ಕೆಪಿಸಿಸಿ ಕಚೇರಿ ಎದುರು ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಕೆಪಿಸಿಸಿ ಕಚೇರಿಗೆ ನುಗ್ಗಲು ಯತ್ನಿಸಿದ್ದರಿಂದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನೆ ವೇಳೆ ಕೆಪಿಸಿಸಿ ಕಚೇರಿ ಎದುರಿನ ಹೂಕುಂಡಗಳನ್ನು ಹೊಡೆದು ಕಾರ್ಯಕರ್ತರು ಆಕ್ರೋಶ ಹೊರಹಾಕಿ, ಒಳ ನುಗ್ಗಲು ಯತ್ನಿಸಿದ್ದರಿಂದ, ಕಾರ್ಯಕರ್ತರನ್ನು ವಶಕ್ಕೆ ಪಡೆದು ಚಾಮರಾಜಪೇಟೆಯ ಸಿ.ಆರ್. ಹೆಡ್ ಕ್ವಾರ್ಟರ್ಸ್‌ಗೆ ವಾಹನದಲ್ಲಿ ಕರೆದೊಯ್ಯಲಾಯಿತು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ಕಾಂಗ್ರೆಸ್ ಕಚೇರಿ ಎದುರು ಬ್ಯಾರಿಕೇಡ್‌ ಅಳವಡಿಸಿ, ಭದ್ರತೆಗೆ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ | ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

ವಿಧಾನಸೌಧ ಠಾಣೆಯಲ್ಲಿ ಸುಮೋಟೊ ಪ್ರಕರಣ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ. 153b, 505(1)(b) ಅಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಬಿಜೆಪಿ ನಾಯಕರು ದೂರು ನೀಡುವ ಮುನ್ನ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

153b- ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಪೀಡಿತ ಆರೋಪಗಳು, ಸಮರ್ಥನೆಗಳು, 505(1)(b)- ಸಾರ್ವಜನಿಕ ಸ್ಥಳಗಳಲ್ಲಿ ಕಿಡಿಗೇಡಿ ತನದಿಂದ ಕೂಡಿದ ಹೇಳಿಕೆಗಳು ಆರೋಪದಲ್ಲಿ ಅಪರಿಚಿತ ವ್ಯಕ್ತಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನು ಓದಿ | Sedition Case: ಪಾಕ್‌ ಪರ ಘೋಷಣೆ; ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ ಎಂದು ಗುಡುಗಿದ ಬಿ.ವೈ. ವಿಜಯೇಂದ್ರ

ಎಫ್ಐಆರ್‌ನಲ್ಲಿರುವ ಅಂಶಗಳೇನು?

ಮಂಗಳವಾರ ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆ ನಂತರ ಡಾ. ನಾಸಿರ್ ಹುಸೇನ್ ಬೆಂಬಲಿಗರಿಂದ ವಿಜಯೋತ್ಸವ ನಡೆಯುತ್ತಿದ್ದ ವೇಳೆ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಪರ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ ಎಂಬ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಂಬಂಧವಾಗಿ ಲಭ್ಯವಿರುವ ಫುಟೇಜ್ ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಧಾನಸೌಧ ಭದ್ರತೆ ಎಎಸ್ಐ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಎಫ್‌ಐಅರ್‌ ದಾಖಲಿಸಲಾಗಿದೆ.

Exit mobile version