ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಸ್ಫೋಟ (Blast in Bangalore) ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ ಬಳಿಕ, ತಲೆಮರೆಸಿಕೊಂಡಿರುವ ಇತರ ಇಬ್ಬರು ಆರೋಪಿಗಳ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡುವವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಘೋಷಿಸಿದೆ. ಪತ್ತೆ ಮಾಡುವ ಉದ್ದೇಶಕ್ಕಾಗಿ ಎನ್ಐಎ ಇಬ್ಬರೂ ಶಂಕಿತರ ಮೂಲ ವಿವರಗಳನ್ನು ನೀಡಿದೆ ಮತ್ತು ಆರೋಪಿಗಳನ್ನು ಬಂಧಿಸಲು ಸಾರ್ವಜನಿಕರ ನೆರವು ಕೋರಿದೆ.
Request for Information, Identity of the Informer will be kept Secret. pic.twitter.com/PBXPRH3DtB
— NIA India (@NIA_India) March 29, 2024
ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ಆತನ ಚಲನವಲನಗಳು ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಎನ್ಐಎ ಪ್ರಕಾರ, ಆತ ಸುಮಾರು 6 ಅಡಿ 2 ಇಂಚು ಎತ್ತರವಿರುವ 30 ವರ್ಷದ ವ್ಯಕ್ತಿ. ಬಾಲಕರ ಹಾಸ್ಟೆಲ್, ಪಿಜಿ ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್ಗಳಲ್ಲಿ ವಾಸಿಸುತ್ತಿದ್ದಾನೆ. ಮೊಹಮ್ಮದ್ ಜುನೇದ್ ಸಯೀದ್ ಹೆಸರಿನಲ್ಲಿ ನಕಲಿ ಚಾಲನಾ ಪರವಾನಗಿ ಬಳಸುತ್ತಿದ್ದಾನೆ ಎಂದೂ ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿ ತನ್ನ ಮೂಲ ಗುರುತನ್ನು ಮರೆಮಾಚಲು ಮುಖಗವಸು, ನಕಲಿ ಗಡ್ಡ ಅಥವಾ ವಿಗ್ ಧರಿಸುತ್ತಾನೆ ಎಂದು ಹೇಳಿದೆ.
ಇದನ್ನೂ ಓದಿ: Juice Jacking: ಸಾರ್ವಜನಿಕ ಸ್ಥಳಗಳ ಮೊಬೈಲ್ ಚಾರ್ಜರ್ ಬಳಸುವಾಗ ಎಚ್ಚರಿಕೆ; ಸೈಬರ್ ಕಳ್ಳರಿದ್ದಾರೆ!
ಸ್ಫೋಟದ ಇನ್ನೋರ್ವ ಆರೋಪಿ ಅಬ್ದುಲ್ ಮತೀನ್ ಅಹ್ಮದ್ ತಾಹಾ, ಸ್ಫೋಟ ನಡೆಸಲು ಮುಸ್ಸಾವಿರ್ಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದ್ದು, ಆತನಿಗೂ ಹುಡುಕಾಟ ನಡೆಯುತ್ತಿದೆ. ಈತ ತನ್ನ ಮೂಲ ಗುರುತನ್ನು ಮರೆಮಾಚಲು ವಿಘ್ನೇಶ್ ಡಿ ಮತ್ತು ಸುಮಿತ್ ಎಂಬ ಹಿಂದೂ ಹೆಸರನ್ನೂ ಬಳಸುತ್ತಿದ್ದಾನೆ ಎಂದು ಎನ್ಐಎ ಹೇಳಿದೆ. ಆತ ಬಹುಶಃ ಹುಡುಗರ ಹಾಸ್ಟೆಲ್ ಗಳು, ಪಿಜಿಗಳು ಅಥವಾ ಯಾವುದೇ ಕಡಿಮೆ ಬಜೆಟ್ ಹೋಟೆಲ್ ಗಳಲ್ಲಿ ವಾಸಿಸುತ್ತಿದ್ದಾನೆ ಎಂದು ಹೇಳಿದ್ದಾರೆ. ಇಬ್ಬರೂ ಆರೋಪಿಗಳು ತೀರ್ಥಹಳ್ಳಿ ಮೂಲದವರು.
Request for Information, Identity of the Informer will be kept Secret. pic.twitter.com/JkMUWay23m
— NIA India (@NIA_India) March 29, 2024
ಪ್ರಕರಣದ ಆರೋಪಿಗಳ ಬಗ್ಗೆ ವಿವರಗಳನ್ನು ನೀಡುವವರಿಗೆ ಎನ್ಐಎ ಈ ಹಿಂದೆಯೂ 10 ಲಕ್ಷ ರೂ.ಗಳ ಬಹುಮಾನ ಘೋಷಿಸಿತ್ತು. ಶಂಕಿತರ ರೇಖಾಚಿತ್ರಗಳನ್ನು ಈ ಹಿಂದೆ ಬಿಡುಗಡೆ ಮಾಡಿತ್ತು. ಮಾರ್ಚ್ 1 ರಂದು ರೆಸ್ಟೋರೆಂಟ್ನಲ್ಲಿ ಸಂಭವಿಸಿದ ಐಇಡಿ ಸ್ಫೋಟದ ಸಹ ಸಂಚುಕೋರ ಮುಜಮ್ಮಿಲ್ ಶರೀಪ್ನನ್ನು ಎನ್ಐಎ ಗುರುವಾರ ಬಂಧಿಸಿದೆ. ಸ್ಫೋಟ ಸಂಭವಿಸಿದ ನಂತರ ಕಳೆದ ತಿಂಗಳಲ್ಲಿ ಎನ್ಐಎ ನಡೆಸಿದ ಮೊದಲ ಬಂಧನ ಇದಾಗಿದೆ.