Site icon Vistara News

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Bomb Threat

ದೇವನಹಳ್ಳಿ: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ (Bomb Threat) ಸಂದೇಶ ಬಂದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅನಾಮಿಕ ವ್ಯಕ್ತಿಯೊಬ್ಬ ಏರ್‌ಪೋರ್ಟ್‌ನ ಬಾತ್ ರೂಮ್‌ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ತಕ್ಷಣ ಶ್ವಾನದಳ, ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಸಂದೇಶ ಅಂತ ಗೊತ್ತಾಗಿ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚೆಗೆ ಪದೇಪದೆ ಕೆಲ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸುತ್ತಿರುವುದು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ | Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಬಂದ ಬಳಿಕ ಏನೇನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

Exit mobile version