Site icon Vistara News

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

BS Yediyurappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆ. ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು. ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಆರೋಪ ದುರುದ್ದೇಶಪೂರಿತ ಎಂದು ಹೇಳಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; ಕೆಕೆಆರ್‌ಟಿಸಿ ಬಸ್‌ ಅಪ್ಪಳಿಸಿ 3 ಬೈಕ್‌ ಸವಾರರು ಬಲಿ

ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

deep fake

ಬೆಂಗಳೂರು: ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

ಇದನ್ನೂ ಓದಿ | physical Abuse : ಮಗನ ಕಾಮಚೇಷ್ಠೆಗೆ ತಾಯಿ ಸಾಥ್‌; ಬೆತ್ತಲೆ ಫೋಟೊ ತೋರಿ ಬೆದರಿಸುತ್ತಿದ್ದ ಕಾಮುಕರಿಬ್ಬರು ಅರೆಸ್ಟ್‌

ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

Exit mobile version