Site icon Vistara News

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Car Accident

ಬೆಳಗಾವಿ : ವೇಗವಾಗಿ ಚಲಿಸುತ್ತಿದ್ದ ಕಾರಿನ ಹಿಂಭಾಗದ ಟೈರ್​ ಬ್ಲಾಸ್ಟ್​​ ಆದ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗೊಂದಕ್ಕೆ ಗುದ್ದಿ ಪಲ್ಟಿಯಾದ (Car Accident) ಹಿನ್ನೆಲೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ಪಟ್ಟಣದ ರೈಲ್ವೆ ಬ್ರಿಡ್ಜ್ ಬಳಿಯ ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್​ ಬ್ಲಾಸ್ಟ್ ಆಗಿದ್ದರಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ.

ಅತಿ ವೇಗದಲ್ಲಿ ಕಾರು ಚಲಿಸುತ್ತಿದ್ದ ವೇಳೆ ಟೈರ್ ಬ್ಲಾಸ್ಟ್​ ಆಗಿದ್ದರಿಂದ ಕಾರಿನ ಚಾಲಕನ ನಿಯಂತ್ರಣ ತಪ್ಪಿದೆ. ಅದು ಬೈಕ್​ಗೆ ಗುದ್ದಿದ್ದು ಬೈಕ್ ಸವಾರು ಎಗರಿಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಅವರನ್ನು ರಾಯಬಾಗ ತಾಲೂಕಿನ ಬೆನ್ನಿವಾಡ ಗ್ರಾಮದ ರಮೇಶ ಪಾಟೀಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

ಕಾರಿನಲ್ಲಿ ಏಳು ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಉಳಿದವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾನಾಪೂರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version