Site icon Vistara News

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Arvind Kejriwal

ನವದೆಹಲಿ: ಮದ್ಯ ನೀತಿ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಮಂಗಳವಾರ ತಿಹಾರ್ ಜೈಲಿನಿಂದ ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಒಂದು ದಿನ ಮೊದಲು ಈ ಬೆಳವಣಿಗೆ ನಡೆದಿದೆ.

ಸೋಮವಾರ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ಪರೀಕ್ಷಿಸಿತ್ತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅವರ ಹೇಳಿಕೆ ದಾಖಲಿಸಿತ್ತು. ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ನಾಳೆ ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

ಸುದ್ದಿ ಸಂಸ್ಥೆಗಳ ಜತೆ ಮಾತನಾಡಿದ ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ “ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್​​ನಿಂದ ಜಾಮೀನು ಸಿಗುವ ನೂರಕ್ಕೆ ನೂರರಷ್ಟು ಸಾಧ್ಯತೆ ಇರುವ ಸಮಯದಲ್ಲಿ ದೆಹಲಿ ಸಿಬಿಐ ಮೂಲಕ ಕೇಂದ್ರ ಪಿತೂರಿ ನಡೆಸುತ್ತಿದೆ ಎಂದು ಮೂಲಗಳು ನನಗೆ ತಿಳಿಸಿವೆ. ಇಡೀ ದೇಶ ಇದನ್ನು ನೋಡುತ್ತಿದೆ. ಅರವಿಂದ್ ಕೇಜ್ರಿವಾಲ್ ಅವರ ಪರವಾಗಿ ಒಗ್ಗಟ್ಟಾಗಿ ನಿಂತಿದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

ಅಕ್ರಮನ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿತ್ತು. ಆದೇಶವನ್ನು ಪ್ರಕಟಿಸುವಾಗ, ದೆಹಲಿ ಹೈಕೋರ್ಟ್, “ವಿಚಾರಣಾ ನ್ಯಾಯಾಲಯವು ಹೈಕೋರ್ಟ್​​ನ ತೀರ್ಮಾನಕ್ಕೆ ವಿರುದ್ಧವಾದ ಯಾವುದೇ ತೀರ್ಪು ನೀಡಬಾರದಿತ್ತು. ದಾಖಲೆಗಳು ಮತ್ತು ವಾದಗಳನ್ನು ಸರಿಯಾಗಿ ಮಾಡಿಲ್ಲ ಎಂದು ಹೇಳಿದ್ದರು.

Exit mobile version