Celebrity Cricket League : ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ; ಯಾರೆಲ್ಲಾ ಭಾಗಿ? - Vistara News

ಪ್ರಮುಖ ಸುದ್ದಿ

Celebrity Cricket League : ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ; ಯಾರೆಲ್ಲಾ ಭಾಗಿ?

Celebrity Cricket League : ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​ ಸೇರಿದಂತೆ 8 ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ.

VISTARANEWS.COM


on

Celebrity Cricket League
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಾಣುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Celebrity Cricket League) ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಅದರ ಭಾಗವಾಗಿ ಫೆಬ್ರವರಿ 2ರಂದು ದುಬೈನಲ್ಲಿ ಪ್ರೋಮೋ ಬಿಡುಗಡೆಯಾಯಿತು. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳು ಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬಿಡುವಿಲ್ಲದ ಸಮಯದ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.

ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫಾದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

ಫೆಬ್ರವರಿ 23ರಿಂದ ಆರಂಭವಾಗುವ ಸಿಸಿಎಲ್​​ನ 10ನೇ ಸೀಸನ್ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಲೀಗ್ ಸುತ್ತು ಮಾರ್ಚ್ 10ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ಸ್​ನ (United Arab Emirates) ಶಾರ್ಜಾದಲ್ಲಿ ನಡೆಯಲ್ಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇದು ಏಕ ಮಾತ್ರ ಕ್ರಿಕೆಟ್​ ಲೀಗ್​

ಭಾರತದ ಜನಪ್ರಿಯ ಒಟಿಟಿ ವೇದಿಕೆಯಾಗಿರುವ ಜಿಯೊಸಿನಿಮಾ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಜೊತೆಗೆ ಸಹಭಾಗಿತ್ವವನ್ನು ಘೋಷಿಸಿದೆ. ಇದರ ಭಾಗವಾಗಿ, ಸೆಲೆಬ್ರಿಟಿ ಕ್ರಿಕೆಟ್ ಲೀಗ್​​ನ ಹತ್ತನೇ ಸೀಸನ್ ಅನ್ನು ಜಿಯೊಸಿನಿಮಾ ಎಕ್ಸ್ಕ್ಲ್ಯೂಸಿವ್ ಆಗಿ ನೇರಪ್ರಸಾರ ಮಾಡಲಿದೆ. ಕ್ರೀಡೆ ಮತ್ತು ಮನರಂಜನೆಗಳನ್ನು ಒಂದುಗೂಡಿಸಿ ಭಾರತದಲ್ಲಿ ರೂಪಿಸಿರುವ ಏಕಮಾತ್ರ ಪ್ರಯತ್ನ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದಾಗಿದೆ.

ಇದನ್ನೂ ಓದಿ: Celebrity Cricket League : ಬಿಗ್​ಬಾಸ್​ ಮುಗಿಸಿ ಕ್ರಿಕೆಟ್​ ಆಡಲು ಹೊರಟ ಕಿಚ್ಚ ಸುದೀಪ್​

ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್​ಸ್ಟಾರ್​ಗಳನ್ನು ಒಳಗೊಂಡಿರುವ ಒಟ್ಟು 8 ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಮೇಲೆ ಯುಎಇಯ ಶಾರ್ಜಾದಲ್ಲಿ ಲೀಗ್​ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್​ನಲ್ಲಿ ಉಳಿದ ಪಂದ್ಯಗಳು ನಡೆಯಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.

ತಂಡಗಳು ಯಾವುವು?

• ಮುಂಬೈ ಹೀರೋಸ್
• ಕೇರಳ ಸ್ಟ್ರೈಕರ್ಸ್
• ತೆಲುಗು ವಾರಿಯರ್ಸ್
• ಭೋಜ್​​ಪುರಿ ದಬಾಂಗ್ಸ್
• ಕರ್ನಾಟಕ ಬುಲ್ಡೋಜರ್ಸ್
• ಬೆಂಗಾಲ್ ಟೈಗರ್ಸ್
• ಚೆನ್ನೈ ರೈನೋಸ್
• ಪಂಜಾಬ್ ದಿ ಶೇರ್

‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್’ ಟೀಮ್ಗೆ ವೆಂಕಟೇಶ್ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್’ ಟೀಮ್ಗೆ ಕಿಚ್ಚ ಸುದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್ಲಾಲ್ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್’ ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್’ ಟೀಮ್ಗೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು ‘ಪಂಜಾಬ್ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್’ ಟೀಮ್ಗೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ಇಬ್ಬರ ಸಾವು, ಹಲವರಿಗೆ ಗಾಯ

Train Accident : ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Train Accident
Koo

ನವದೆಹಲಿ: ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೆ ಒಳಗಾಗಿ ಒಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಎಕ್ಸ್​ಪ್ರೆಸ್​​ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.

ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.

ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

Continue Reading

ಕ್ರೈಂ

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

Valmiki Corporation Scam: ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಇವತ್ತು ಸೇರಿ ಜುಲೈ 22 ರವರೆಗೂ ಇಡಿ ವಶಕ್ಕೆ ನೀಡಿ 82ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

VISTARANEWS.COM


on

b nagendra valmiki corporation scam 2
Koo

ಬೆಂಗಳೂರು: ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (Enforcement Directorate) ಬಂಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರಿಗೆ ಮತ್ತೆ 5 ದಿನಗಳ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಇಂದು ನಾಗೇಂದ್ರ ಅವರ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಇಡಿ ಹಾಜರ್ ಪಡಿಸಿತ್ತು. ತನಿಖೆ ಇನ್ನಷ್ಟು ನಡೆಯಬೇಕಿರುವ ಹಿನ್ನೆಲೆಯಲ್ಲಿ ಮತ್ತೆ ಕಸ್ಟಡಿಗೆ ಕೇಳಿತ್ತು. ಇವತ್ತು ಸೇರಿ ಜುಲೈ 22 ರವರೆಗೂ ಇಡಿ ವಶಕ್ಕೆ ನೀಡಿ 82ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

ಮಾಚಿ ಸಚಿವ ನಾಗೇಂದ್ರ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದರು. ನಾಗೇಂದ್ರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸರ್ಚಿಂಗ್ ಮುಗಿದಿದೆ. ಸೀಜಿಂಗ್ ಕಾರ್ಯ ಮುಗಿದಿದೆ. ಆರೋಪಿಯ ವಿಚಾರಣೆಯೂ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆಯುವ ಅವಶ್ಯಕತೆ ಇಲ್ಲ. ಇಡಿ ಅಧಿಕಾರಿಗಳು ಪೊಲೀಸರಲ್ಲ. ಅವರನ್ನು ಕಸ್ಟಡಿಗೆ ಪಡೆದ ಉದ್ದೇಶ ಮುಗಿದಿದೆ. ಮತ್ತೆ ಕಸ್ಟಡಿಗೆ ಪಡೆದು ವಿಚಾರಣೆ ಮಾಡೋದೇನಿದೆ? ಎಂದು ಪ್ರಶ್ನಿಸಿದ ನಾಗೇಂದ್ರ ಪರ ವಕೀಲ ಶ್ಯಾಮ್ ಸುಂದರ್‌, ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲೇಖಿಸಿದರು.

ಇಡಿ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಹಾಜರಾದರು. ದಾಳಿ ವೇಳೆ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿದೆ. ಕಂತೆ ಕಂತೆ ಹಣ ಪತ್ತೆಯಾಗಿದೆ. ಆರೋಪಿ ಎಲ್ಲವೂ ಗೊತ್ತಿದ್ದು ಅಪರಾಧ ಕೃತ್ಯ ಎಸಗಿದ್ದಾರೆ. ಆರೋಪಿ ತನ್ನ ಸಹಚರರಿಗೆ ಸೂಚನೆ ನೀಡಿದ್ದಾರೆ. ಅವರ ಸೂಚನೆ ಮೇರೆಗೆ ನಿಗಮದಲ್ಲಿ ಕೋಟಿ ಕೋಟಿ ಹಗರಣ ನಡೆದಿದೆ. ಈಗಾಗಲೇ ಕೆಲವು ಆರೋಪಿಗಳ‌ ಮೊಬೈಲ್ ಪರಿಶೀಲನೆ ಮಾಡಲಾಗುತ್ತಿದೆ. ಆರೋಪಿ ನಾಗೇಂದ್ರ ಪತ್ನಿಯನ್ನು ವಿಚಾರಣೆ ನಡೆಸಿ ‌ಆಕೆಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇನ್ನಷ್ಟು ಮಾಹಿತಿ ಬೇಕಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಮನವಿ ಮಾಡಿದರು. ಇಲ್ಲಿಯವರೆಗೆ ನಡೆದ ತನಿಖಾ ಮಾಹಿತಿ ದಾಖಲೆಗಳನ್ನೊಳಗೊಂಡ ಕಡತಗಳನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಸಿದರು.

ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ತೆಗೆದುಕೊಂಡು ಇಡಿ ವಿಚಾರಣೆ ಮಾಡಿತ್ತು. ಅಧಿಕಾರಿಗಳು 7ರಿಂದ 8 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ಮಾಡಿದ್ದರು. ಸಾಕಷ್ಟು ವಿಚಾರಗಳನ್ನು ಹೊರ ತೆಗೆದಿದ್ದಾರೆ. ಪತಿ ಪತ್ನಿಯನ್ನು ಮುಖಾಮುಖಿ ಕೂರಿಸಿ ಪ್ರಶ್ನೆ ಮಾಡಲಾಗಿದೆ. ಹಣದ ಅವ್ಯವಹಾರದಲ್ಲಿ ನಾಗೇಂದ್ರ ಪತ್ನಿಯ ಅಕೌಂಟ್‌ನಲ್ಲಿ ಕೂಡ ಅನಧಿಕೃತ ಹಣ ಕಂಡುಬಂದಿದ್ದು, ಈ ಬಗ್ಗೆ ಪ್ರಶ್ನಿಸಲಾಗಿದೆ.

ಕಳೆದೊಂದು ವಾರದಿಂದ ನಾಗೇಂದ್ರ ಇಡಿ ವಶದಲ್ಲಿದ್ದಾರೆ. ಅವರ ಮನೆ ಸೇರಿ 23 ಕಡೆಗಳಲ್ಲಿ ಇಡಿ ಏಕಕಾಲಕ್ಕೆ ದಾಳಿ ಮಾಡಿತ್ತು. 6 ದಿನಗಳ ಕಾಲದ ಇಡಿ ವಿಚಾರಣೆ ವಿಚಾರಣೆಯಲ್ಲಿ ನಾಗೇಂದ್ರ ಸಮರ್ಪಕವಾಗಿ ಉತ್ತರ ನೀಡಿಲ್ಲ. ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ಕೂಡ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿಗೆ ಬೇಕಾಗಿದ್ದಾರೆ. ಈಗಾಗಲೇ ಬಂಧಿತ ಆರೋಪಿಗಳನ್ನು ಪ್ರಶ್ನಿಸಿದಾಗ ದದ್ದಲ್‌ ಪಿಎಯ ಕೈವಾಡ ಕೂಡ ಇದರಲ್ಲಿ ಕಂಡುಬಂದಿದೆ.

ಆದರೆ ಮನೆಗೆ ಇಡಿ ದಾಳಿಯ ಬಳಿಕ ಇಡಿ ಬಂಧನ ತಪ್ಪಿಸಿಕೊಳ್ಳಲು ದದ್ದಲ್‌ ಎಸ್‌ಐಟಿ ಮುಂದೆ ಹಾಜರಾಗಿ ಇಡೀ ದಿನ ಕೂತಿದ್ದರು. ನಂತರ ಅಲ್ಲಿಂದ ಹೊರಬಿದ್ದು ಮೂರು ದಿವಸ ಕಣ್ಮರೆಯಾಗಿದ್ದ ದದ್ದಲ್‌, ನಾಲ್ಕನೇ ದಿವಸ ವಿಧಾನಮಂಡಲ ಅಧಿವೇಶನ ಶುರುವಾದಾಗ ವಿಧಾನಸಭೆಯಲ್ಲಿ ಕಾಣಿಸಿಕೊಂಡಿದ್ದರು. ವಿಚಾರಣೆಗೆ ಬರುವಂತೆ ದದ್ದಲ್‌ ಅವರಿಗೆ ಇಡಿ ನೋಟೀಸ್‌ ನೀಡಿದೆ ಎನ್ನಲಾಗಿದೆ. ಆದರೆ ನನಗೆ ಯಾವುದೇ ನೋಟೀಸ್‌ ಬಂದಿಲ್ಲ ಎಂದಿದ್ದಾರೆ ದದ್ದಲ್.‌ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವಾಗ ಸ್ಪೀಕರ್‌ ಅನುಮತಿ ಇಲ್ಲದೆ ಶಾಸಕರನ್ನು ಇಡಿ ಬಂಧಿಸುವಂತಿಲ್ಲ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Continue Reading

ಪ್ರಮುಖ ಸುದ್ದಿ

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

GT World Mall: ಜಿಟಿ ಮಾಲ್‌ಗೆ ಬೀಗ ಹಾಕುವುದಾದರೆ ಯಾವ ಅಂಶದ ಆಧಾರದಲ್ಲಿ ಬೀಗ ಹಾಕಬೇಕೆನ್ನುವ ಗೊಂದಲಕ್ಕೆ ಬಿಬಿಎಂಪಿ ಅಧಿಕಾರಿಗಳು ಸಿಲುಕಿದ್ದಾರೆ. ನೋಟೀಸ್ ನೀಡದೆ ಏಕಾಏಕಿ ಮಾಲ್‌ಗೆ ಬೀಗ ಹಾಕುವಂತಿಲ್ಲ. ಕೆಎಂಸಿ ಆಕ್ಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿದೆ.

VISTARANEWS.COM


on

gt world mall assembly live
Koo

ಬೆಂಗಳೂರು: ಪಂಚೆ ಧರಿಸಿ ಬಂದ ರೈತರಿಗೆ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಅನ್ನು ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಅವರು ಸದನದಲ್ಲಿ ಗುಡುಗಿದ್ದರು. ಆದರೆ ಮಾಲ್‌ ಅನ್ನು ಮುಚ್ಚಿಸಲು ಯಾವುದೇ ಕಾರಣ ಸಿಗದೆ ಬಿಬಿಎಂಪಿ ಅಧಿಕಾರಿಗಳು (BBMP Officers) ಕಂಗಾಲಾಗಿದ್ದಾರೆ. ಹೀಗಾಗಿ, ಸುಮ್ಮನೇ ಬಾಯಿಮಾತಿಗಾಗಿ ಸಚಿವರು ಹೀಗೆ ಹೇಳಿದ್ರಾ ಎಂಬ ಪ್ರಶ್ನೆ ಉದ್ಭವವಾಗಿದೆ.

ಇಂದು ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಅಧಿಕಾರಿಗಳು ಮಾಲ್‌ ಅನ್ನು ಸಮಗ್ರವಾಗಿ ಪರಿಶೀಲಿಸಿದರು. ಆದರೆ ಯಾವುದೇ ಅವ್ಯವಸ್ಥೆ ಅವರಿಗೆ ಕಂಡುಬಂದಿಲ್ಲ. ಆದರೆ, ಮಾಲೀಕರು ಒಂದೂವರೆ ಕೋಟಿ ರೂ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಮಾಲ್‌ಗೆ ನೋಟೀಸ್‌ ನೀಡಬಹುದು ಅಷ್ಟೆ. ಆದರೆ ಮುಚ್ಚುವಂತಿಲ್ಲ.

ಜಿಟಿ ಮಾಲ್‌ಗೆ ಬೀಗ ಹಾಕುವುದಾದರೆ ಯಾವ ಅಂಶದ ಆಧಾರದಲ್ಲಿ ಬೀಗ ಹಾಕಬೇಕೆನ್ನುವ ಗೊಂದಲಕ್ಕೆ ಬಿಬಿಎಂಪಿ ಅಧಿಕಾರಿಗಳು ಸಿಲುಕಿದ್ದಾರೆ. ನೋಟೀಸ್ ನೀಡದೆ ಏಕಾಏಕಿ ಮಾಲ್‌ಗೆ ಬೀಗ ಹಾಕುವಂತಿಲ್ಲ. ಕೆಎಂಸಿ ಆಕ್ಟ್‌ನಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಮೂರು ಬಾರಿ ನೋಟೀಸ್ ನೀಡಿದ ಮೇಲೆಯೇ ಬೀಗ ಹಾಕುವ ಅವಕಾಶ ಬಿಬಿಎಂಪಿಗೆ ಇದೆ. ಮೂರು ನೋಟೀಸ್‌ಗಳಿಗೆ ವಿವರಣೆ ನೀಡಲು ಅವಕಾಶ ಕೂಡ ನೀಡಬೇಕು‌.
.
ಈ ಪ್ರಕರಣದಲ್ಲಿ ನೊಟೀಸ್ ನೀಡುವ ಪ್ರಕ್ರಿಯೆಯೇ ನಡೆದಿಲ್ಲ. ಹೀಗಿರುವಾಗ ಏಕಾಏಕಿ ಮಾಲ್ ಮುಚ್ಚಲು ಸಾಧ್ಯವಿಲ್ಲ. ನಿಯಮ ಮೀರಿ ನೋಟೀಸ್ ನೀಡಿದರೆ ಮಾಲ್ ಆಡಳಿತದಿಂದ ಮಾನನಷ್ಟ ಮೊಕದ್ದಮೆ ಹೂಡುವ ಸಾಧ್ಯತೆಯೂ ಇದೆ. ಇದರಿಂದ ಬಿಬಿಎಂಪಿ ಅಧಿಕಾರಿಗಳೇ ನಾಳೆ ಕೋರ್ಟ್ ಕಟಕಟೆಯಲ್ಲಿ ನಿಲ್ಲುವ ಆತಂಕ‌ ಇದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲು ಬಿಬಿಎಂಪಿ ಅಧಿಕಾರಿಗಳು‌ ಮುಂದಾಗಿಲ್ಲ.

ಆದರೆ ಸಚಿವರ ಆದೇಶ ಪಾಲಿಸಬೇಕಿದ್ದು, ಕಾನೂನಾತ್ಮಕ ಕುಣಿಕೆಯಿಂದ ಹೇಗೆ ಪಾರಾಗಬೇಕು ಎಂಬ ಗೊಂದಲದಲ್ಲಿ ಅಧಿಕಾರಿಗಳಿದ್ದಾರೆ. ಇದುವರೆಗೆ ಸರ್ಕಾರದಿಂದ ಮಾಲ್‌ ಮುಚ್ಚಲು ಯಾವುದೇ ಲಿಖಿತ ಆದೇಶ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಅಧಿಕಾರಿಗಳು ಕೇವಲ ಅಂಗಡಿಗಳಿಗೆ ನೋಟೀಸ್ ನೀಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಸ್ವಚ್ಛತೆ, ಬೆಂಕಿ ಸುರಕ್ಷತೆ ಮೊದಲಾದ ಕೆಲವು ಅನುಬಂಧಗಳ ಅಡಿಯಲ್ಲಿ ನೋಟೀಸ್‌ ನೀಡಬಹುದು.

7 ದಿನ ಮುಚ್ಚಲು ಸೂಚನೆ

ಇಂದು ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

Continue Reading

Latest

Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

Bike Stunt Video: ಉತ್ತರ ಪ್ರದೇಶದ ಸೀತಾಪುರದಲ್ಲಿ ಯುವಕನೊಬ್ಬ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಮಗುವಿನೊಂದಿಗೆ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬೈಕ್ ರೈಡ್ ಮಾಡುತ್ತಾ ಅಪಾಯಕಾರಿ ಸ್ಟಂಟ್‌ಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಯುವಕನು ಅಪಾಯಕಾರಿ ಸ್ಟಂಟ್ ಮಾಡುತ್ತಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

VISTARANEWS.COM


on

Dangerous Bike Stunt
Koo

ಕೆಲವು ಹುಡುಗರು ಬೈಕ್‍ನಲ್ಲಿ ಹೋಗುವಾಗ ವಿವಿಧ ರೀತಿಯ (Bike Stunt Video) ಸ್ಟಂಟ್‍ಗಳನ್ನು ಮಾಡುತ್ತಾರೆ. ಅದರಲ್ಲೂ ಕೆಲವರು ಬೈಕ್‌ನಲ್ಲಿ ಹೋಗುವಾಗ ರಸ್ತೆಯಲ್ಲಿ ಹುಡುಗಿಯರನ್ನು ಕಂಡರೆ ಸಾಕು, ಅವರ ಮುಂದೆ ಶೋ ಮಾಡಲು ಅಪಾಯಕಾರಿ ಸ್ಟಂಟ್‍ಗಳನ್ನು ಮಾಡಲು ಮುಂದಾಗುತ್ತಾರೆ. ಆದರೆ ಇದರಿಂದ ಎಷ್ಟೋ ಹುಡುಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೆ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದೇರೀತಿ ಇದೀಗ ವ್ಯಕ್ತಿಯೊಬ್ಬ ಗೂಳಿಯಿಂದ ತಪ್ಪಿಸಿಕೊಳ್ಳಲು ಮಗುವಿನೊಂದಿಗೆ ಬೈಕ್‍ನಲ್ಲಿ ಹೋಗುವಾಗ ಸ್ಟಂಟ್‌ ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಸೀತಾಪುರದಲ್ಲಿ ವ್ಯಕ್ತಿಯೊಬ್ಬ ಸ್ಪೆಂಡ್ಲರ್‌ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಮಗುವಿನೊಂದಿಗೆ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ಬೈಕ್ ರೈಡ್ ಮಾಡುತ್ತಾ ಅಪಾಯಕಾರಿ ಸ್ಟಂಟ್‍ಗಳನ್ನು ಮಾಡುತ್ತಿರುವುದು ಕಂಡು ಬಂದಿದೆ. ವ್ಯಕ್ತಿಯು ಅಪಾಯಕಾರಿ ಸ್ಟಂಟ್ ಮಾಡುತ್ತಿರುವುದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ವಿಡಿಯೊದಲ್ಲಿ ವ್ಯಕ್ತಿಯು ಹೆದ್ದಾರಿಯಲ್ಲಿ ಜಿಗ್ಜಾಗ್ ಮಾದರಿಯಲ್ಲಿ ಬೈಕ್ ಓಡಿಸುತ್ತಿದ್ದ ಮತ್ತು ಹಾಗೆ ಮಾಡುವಾಗ ಬೈಕಿನ ಮೇಲೆ ನಿಂತಿರುವುದನ್ನು ಕಾಣಬಹುದು. ಅವನು ಹಲವು ಬಾರಿ ಬೈಕಿನಲ್ಲಿ ಕುಳಿತು ಮತ್ತೊಮ್ಮೆ ನಿಂತಿರುವುದನ್ನು ಕಾಣಬಹುದು. ಮತ್ತು ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಒಂದು ಸಣ್ಣ ಮಗು ಕೂಡ ಕುಳಿತಿದೆ. ಬೈಕಿನಲ್ಲಿ ಕುಳಿತಿದ್ದ ಆ ಮುಗ್ಧ ಮಗುವಿನ ಜೀವದ ಬಗ್ಗೆ ಆತನಿಗೆ ಸ್ವಲ್ಪವೂ ಕಾಳಜಿ ಇಲ್ಲದಿರುವುದು ಇದರಿಂದ ತಿಳಿಯುತ್ತದೆ.

ಅಲ್ಲದೇ ಆತ ಅಪಾಯಕಾರಿ ಸ್ಟಂಟ್ ಮಾಡುತ್ತಿರುವಾಗ, ಇತರ ಕಾರುಗಳು ಮತ್ತು ಬೈಕುಗಳು ಸಹ ಅಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ಅಷ್ಟೇಅಲ್ಲದೇ ದಾರಿತಪ್ಪಿದ ಗೂಳಿಯೊಂದು ರಸ್ತೆ ದಾಟುವುದನ್ನು ಕಾಣಬಹುದು. ಆದರೆ ಗೂಳಿಯನ್ನು ನೋಡಿದರೂ ಆತ ಸ್ಟಂಟ್ ಮಾಡುವುದನ್ನು ನಿಲ್ಲಿಸಲಿಲ್ಲ. ಆ ವ್ಯಕ್ತಿ ಗೂಳಿಯಿಂದ ತಪ್ಪಿಸಿಕೊಂಡು ಮತ್ತೆ ತನ್ನ ಸ್ಟಂಟನ್ನು ಮುಂದುವರಿಸಿದ್ದಾನೆ.

ಹೆದ್ದಾರಿಯಲ್ಲಿ ಈತನ ಬೈಕ್ ಅನ್ನು ಹಿಂಬಾಲಿಸುತ್ತಿದ್ದ ಇನ್ನೊಬ್ಬ ಪ್ರಯಾಣಿಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. “ಮುಗ್ಧ ಮಗುವನ್ನು ಬೈಕ್ ಮೇಲೆ ಕೂರಿಸುವ ಮೂಲಕ ಅಪಾಯಕಾರಿ ಸ್ಟಂಟ್ ಮಾಡಿದ ಈ ಹಠಮಾರಿ ವ್ಯಕ್ತಿಗೆ ದಯವಿಟ್ಟು ಬೇಗ ಪಾಠ ಕಲಿಸಿ” ಎಂದು ಬರೆದಿದ್ದಾರೆ. ವೈರಲ್ ವಿಡಿಯೊದಲ್ಲಿ ಕಂಡುಬರುವ ಬೈಕಿನ ಸಂಖ್ಯೆ ಸೀತಾಪುರದಿಂದ ಬಂದಿದೆ ಎಂಬುದಾಗಿ ತಿಳಿದುಬಂದಿದೆ. ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

ಯುಪಿ ಪೊಲೀಸರು ಈ ವಿಡಿಯೊವನ್ನು ಸೀತಾಪುರ ಪೊಲೀಸರನ್ನು ಟ್ಯಾಗ್ ಮಾಡಿದ್ದು, ಇದಕ್ಕೆ ಉತ್ತರಿಸಿದ ಸೀತಾಪುರ ಪೊಲೀಸರು, ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಟ್ರಾಫಿಕ್ ಇನ್ಸ್ ಪೆಕ್ಟರ್‌ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇಂಥ ಪುಂಡರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

Continue Reading
Advertisement
Money Guide
ಮನಿ-ಗೈಡ್5 mins ago

Money Guide: ಇಎಂಐ ಮೂಲಕ ಮೊಬೈಲ್‌ ಖರೀದಿಸುವ ಯೋಚನೆಯಲ್ಲಿದ್ದೀರಾ? ಈ ಅಂಶ ನಿಮಗೆ ತಿಳಿದಿರಲೇ ಬೇಕು

Babar Azam
ಕ್ರೀಡೆ16 mins ago

Babar Azam: 18 ವರ್ಷದ ನೆಟ್​ ಬೌಲರ್​ ಮುಂದೆ ಪರದಾಡಿದ ಪಾಕ್​ ನಾಯಕ ಬಾಬರ್​ ಅಜಂ; ವಿಡಿಯೊ ವೈರಲ್​

Train Accident
ಪ್ರಮುಖ ಸುದ್ದಿ37 mins ago

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ಇಬ್ಬರ ಸಾವು, ಹಲವರಿಗೆ ಗಾಯ

Uttar pradesh Politics
ದೇಶ39 mins ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಯಾದಗಿರಿ1 hour ago

Murder case : ಪತ್ನಿ, ಅತ್ತೆ ಹಾಗೂ ಮಾವನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು, ಚಾಕುವಿನಿಂದ ಇರಿದು ಕೊಂದ

b nagendra valmiki corporation scam 2
ಕ್ರೈಂ1 hour ago

Valmiki Corporation Scam: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತೆ 5 ದಿನ ಇಡಿ ಕಸ್ಟಡಿಗೆ

INDW vs PAKW
ಕ್ರೀಡೆ1 hour ago

INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

gt world mall assembly live
ಪ್ರಮುಖ ಸುದ್ದಿ1 hour ago

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ ಬೀಗ ಹಾಕಲು ಸಾಧ್ಯವಿಲ್ಲ! ಸಚಿವರ ಮಾತಿಗೆ ಬೆಲೆ ಇಲ್ವಾ?

Actor Darshan Judicial Custody Extended Till Aug 1
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

Raghaveshwarashree Chaturmasya at Ashoke from 21st July
ಉತ್ತರ ಕನ್ನಡ2 hours ago

Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Uttara Kannada Landslide
ಮಳೆ2 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

ಟ್ರೆಂಡಿಂಗ್‌